ಜಾಕ್ವೆಲಿನ್ ಫರ್ನಾಂಡಿಸ್​ಗೆ ಶಾಕ್; 7 ಕೋಟಿ ರೂಪಾಯಿ ಆಸ್ತಿ ಮುಟ್ಟುಗೋಲು ಹಾಕಿದ ಜಾರಿ ನಿರ್ದೇಶನಾಲಯ

| Updated By: ರಾಜೇಶ್ ದುಗ್ಗುಮನೆ

Updated on: Apr 30, 2022 | 6:07 PM

ಸುಕೇಶ್​ ಚಂದ್ರಶೇಖರ್​ ಮತ್ತು ಜಾಕ್ವೆಲಿನ್​​ ಫರ್ನಾಂಡಿಸ್​ ಅವರು ಹಲವು ಬಾರಿ ದೂರವಾಣಿ ಮೂಲಕ ಮಾತನಾಡಿರುವುದು ಅಧಿಕಾರಿಗಳಿಗೆ ತಿಳಿದುಬಂದಿದೆ. ಇಬ್ಬರ ನಡುವಿನ ವ್ಯವಹಾರ ಯಾವ ರೀತಿ ಇತ್ತು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ಜಾಕ್ವೆಲಿನ್ ಫರ್ನಾಂಡಿಸ್​ಗೆ ಶಾಕ್; 7 ಕೋಟಿ ರೂಪಾಯಿ ಆಸ್ತಿ ಮುಟ್ಟುಗೋಲು ಹಾಕಿದ ಜಾರಿ ನಿರ್ದೇಶನಾಲಯ
ಜಾಕ್ವೆಲಿನ್
Follow us on

ನಟಿ ಜಾಕ್ವೆಲಿನ್​ ಫರ್ನಾಂಡಿಸ್​ಗೆ (Jacqueline Fernandez) ಸಾಕಷ್ಟು ಸಂಕಷ್ಟ ಎದುರಾಗುತ್ತಿದೆ. ಅವರ ವರ್ಚಸ್ಸಿಗೆ ಹಾನಿ ಆಗುವಂತಹ ಘಟನೆ ನಡೆಯುತ್ತಿದೆ. ಉದ್ಯಮಿಗಳಿಗೆ 200 ಕೋಟಿ ರೂಪಾಯಿ ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದ ಕಿಂಗ್​ಪಿನ್​ ಸುಕೇಶ್​ ಚಂದ್ರಶೇಖರ್ (Sukesh Chandrashekhar)​ ಜತೆ ಜಾಕ್ವೆಲಿನ್​ಗೆ ನಂಟು ಇದೆ ಎನ್ನಲಾಗುತ್ತಿದೆ. ಈ ಪ್ರಕರಣವನ್ನು ಜಾರಿ ನಿರ್ದೇಶನಾಲಯ (Enforcement Directorate) ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಪ್ರಕರಣದಲ್ಲಿ ತನಿಖೆ ಪ್ರಗತಿಯಲ್ಲಿದ್ದು, ಜಾಕ್ವೆಲಿನ್​ಗೆ ಸಂಬಂಧಿಸಿದ 7.27 ಕೋಟಿ ಮೌಲ್ಯದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ಇದರಲ್ಲಿ ಎಫ್​ಡಿ ಹಣ ಕೂಡ ಸೇರಿದೆ.

‘ಅಕ್ರಮವಾಗಿ ಗಳಿಸಿದ ಹಣದಿಂದ ವಿವಿಧ ಉಡುಗೊರೆಗಳನ್ನು ಸುಕೇಶ್ ಚಂದ್ರಶೇಖರ್ ಅವರು ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ನೀಡಿರುವುದು ತನಿಖೆಯ ವೇಳೆ ಬಹಿರಂಗವಾಗಿದೆ. ಇದರ ಮೌಲ್ಯ 5.71 ಕೋಟಿ ರೂಪಾಯಿ ಆಗಿದೆ. ಸುಕೇಶ್ ಚಂದ್ರಶೇಖರ್ ಅವರು ತಮ್ಮ ಸಹವರ್ತಿ ಮತ್ತು ಈ ಪ್ರಕರಣದ ಆರೋಪಿ ಪಿಂಕಿ ಇರಾನಿ ಮೂಲಕ ಉಡುಗರೆಗಳನ್ನು ಜಾಕ್ವೆಲಿನ್​ಗೆ ತಲುಪಿಸಿದ್ದರು. ಈ ಉಡುಗೊರೆಗಳ ಜೊತೆಗೆ, ಸುಕೇಶ್ ಚಂದ್ರಶೇಖರ್ 1.32 ಕೋಟಿ (1,72,913 ಡಾಲರ್) ಹಾಗೂ 14 ಲಕ್ಷ  ರೂಪಾಯಿಯನ್ನು ಜಾಕ್ವೆಲಿನ್ ಅವರ ಕುಟುಂಬ ಸದಸ್ಯರಿಗೆ ಹವಾಲ ಮೂಲಕ ತಲುಪಿಸಿದ್ದರು’ ಎಂದು ಇಡಿ ಸ್ಟೇಟ್​ಮೆಂಟ್​ನಲ್ಲಿ ತಿಳಿಸಿದೆ.

‘ವೆಬ್-ಸರಣಿ ಪ್ರಾಜೆಕ್ಟ್‌ನ ಸ್ಕ್ರಿಪ್ಟ್ ಬರೆಯಲು ಜಾಕ್ವೆಲಿನ್ ಫರ್ನಾಂಡೀಸ್ ಪರವಾಗಿ ಸ್ಕ್ರಿಪ್ಟ್ ರೈಟರ್‌ಗೆ ಸುಕೇಶ್ ಚಂದ್ರಶೇಖರ್ ಮುಂಗಡವಾಗಿ 15 ಲಕ್ಷ ರೂಪಾಯಿಗಳ ಹಣವನ್ನು ತಲುಪಿಸಿದ್ದರು. ಈ ಹಣವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ’ ಎಂದು ಇಡಿ ತಿಳಿಸಿದೆ.

ಸುಕೇಶ್​ ಚಂದ್ರಶೇಖರ್​ ಮತ್ತು ಜಾಕ್ವೆಲಿನ್​​ ಫರ್ನಾಂಡಿಸ್​ ಅವರು ಹಲವು ಬಾರಿ ದೂರವಾಣಿ ಮೂಲಕ ಮಾತನಾಡಿರುವುದು ಅಧಿಕಾರಿಗಳಿಗೆ ತಿಳಿದುಬಂದಿದೆ. ಇಬ್ಬರ ನಡುವಿನ ವ್ಯವಹಾರ ಯಾವ ರೀತಿ ಇತ್ತು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಸುಕೇಶ್​ ಚಂದ್ರಶೇಖರ್ ಒಡೆತನದಲ್ಲಿ ಇದ್ದ ಚೆನ್ನೈನ ಬಂಗಲೆ, 82 ಲಕ್ಷ ರೂ. ಹಣ ಹಾಗೂ 10ಕ್ಕೂ ಹೆಚ್ಚು ಐಷಾರಾಮಿ ಕಾರುಗಳನ್ನು ಇಡಿ ಅಧಿಕಾರಿಗಳು ಈ ಮೊದಲೇ ಮುಟ್ಟುಗೋಲು ಹಾಕಿಕೊಂಡಿದ್ದರು.

ಇದನ್ನೂ ಓದಿ: ‘ಜಾಕ್ವೆಲಿನ್​ ಜತೆ ಸಂಬಂಧ ಇದ್ದಿದ್ದು ನಿಜ; ಆದರೆ ನಾನು ವಂಚಕ ಅಲ್ಲ’: ಸುಕೇಶ್​ ಚಂದ್ರಶೇಖರ್​ ಹೊಸ ಪುರಾಣ

ಸುಕೇಶ್​ ಚಂದ್ರಶೇಖರ್ ಜತೆಗಿನ ಜಾಕ್ವೆಲಿನ್ ಹೊಸ ಫೋಟೋ ವೈರಲ್​; ಕತ್ತಿನ ಮೇಲಿರುವ ಅಚ್ಚೇನು?