Jacqueline Fernandez: ನಟಿ ಜಾಕ್ವೆಲಿನ್​ ತಾಯಿ ಕಿಮ್ ಫೆರ್ನಾಂಡಿಸ್​ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು

Kim Fernandez: ಬಾಲಿವುಡ್ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಇತ್ತೀಚೆಗೆ ವೈಯಕ್ತಿಕ ಕಾರಣಗಳಿಗಾಗಿ ಹೆಚ್ಚು ಸುದ್ದಿಯಲ್ಲಿದ್ದಾರೆ. ಈ ಘಟನೆಗಳ ಬೆನ್ನಲ್ಲೇ ನಟಿಗೆ ಮತ್ತೊಂದು ಆಘಾತ ಎದುರಾಗಿದ್ದು, ಅವರ ತಾಯಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Jacqueline Fernandez: ನಟಿ ಜಾಕ್ವೆಲಿನ್​ ತಾಯಿ ಕಿಮ್ ಫೆರ್ನಾಂಡಿಸ್​ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು
ಜಾಕ್ವೆಲಿನ್ ಫೆರ್ನಾಂಡಿಸ್ ತಮ್ಮ ತಾಯಿ ಕಿಮ್ ಫೆರ್ನಾಂಡಿಸ್ ಅವರೊಂದಿಗೆ
Follow us
TV9 Web
| Updated By: shivaprasad.hs

Updated on:Jan 04, 2022 | 3:49 PM

ಬಾಲಿವುಡ್ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ (Jacqueline Fernandez) ಇತ್ತೀಚೆಗೆ ವೈಯಕ್ತಿಕ ಜೀವನದ ಹಲವು ಘಟನೆಗಳಿಂದ ಆಘಾತ ಎದುರಿಸಿದ್ದಾರೆ. ಇದೀಗ ಜಾಕ್ವೆಲಿನ್​ಗೆ ಮತ್ತೊಂದು ಆಘಾತ ಎದುರಾಗಿದೆ. ನಟಿಯ ತಾಯಿ ಕಿಮ್ ಫೆರ್ನಾಂಡಿಸ್ (Kim Fernandez) ಅವರಿಗೆ ಹೃದಯಾಘಾತವಾಗಿದೆ. ಖಾಸಗಿ ಮಾಧ್ಯಮವು ನಟಿಯ ಆಪ್ತಮೂಲಗಳನ್ನು ಉಲ್ಲೇಖಿಸಿ ಜಾಕ್ವೆಲಿನ್ ತಾಯಿಯ ಆರೋಗ್ಯದ ಕುರಿತು ಮಾಹಿತಿ ನೀಡಿದೆ. ಕಿಮ್ ಅವರು ಬಹ್ರೈನ್​ನಲ್ಲಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಕಳೆದ ಕೆಲವು ಸಮಯದಿಂದ ಜೆಕ್ವೆಲಿನ್ ಫೆರ್ನಾಂಡಿಸ್ ಪೋಷಕರು ಬಹ್ರೈನ್​ನಲ್ಲಿ ನೆಲೆಸಿದ್ದಾರೆ. ಪ್ರಸ್ತುತ ಕಿಮ್ ಅವರಿಗೆ ಹೃದಯಾಘಾತವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ ಕೆಲವು ಸಮಯದಿಂದ ಸುದ್ದಿಯಲ್ಲಿರುವ ವಿಕ್ರಾಂತ್ ರೋಣ ಬೆಡಗಿ ಜಾಕ್ವೆಲಿನ್: ಜಾಕ್ವೆಲಿನ್ ಬಾಲಿವುಡ್​ನಲ್ಲಿ ಹಲವು ಹಿಟ್ ಚಿತ್ರಗಳನ್ನು ಕೊಟ್ಟವರು. ಇತ್ತೀಚೆಗೆ ಅವರು ‘ವಿಕ್ರಾಂತ್ ರೋಣ’ದ ಮೂಲಕ ಸ್ಯಾಂಡಲ್​ವುಡ್​ಗೂ ಕಾಲಿಟ್ಟಿದ್ದರು. ಗಡಂಗ್ ರಕ್ಕಮ್ಮನಾಗಿ ಕಾಣಿಸಿಕೊಂಡಿದ್ದ ಅವರ ಚಿತ್ರಗಳು ವೈರಲ್ ಆಗಿದ್ದವು. ಅಭಿಮಾನಿಗಳು ಅವರ ವಿಭಿನ್ನ ಪಾತ್ರವನ್ನು ಕಣ್ತುಂಬಿಕೊಳ್ಳಲು ಎದುರು ನೋಡುತ್ತಿದ್ದರು. ಬಾಲಿವುಡ್​ನಲ್ಲೂ ಬ್ಯುಸಿಯಿದ್ದ ಜಾಕ್ವೆಲಿನ್ ಅವರ ‘ಭೂತ್ ಪೊಲೀಸ್ 2’ ಇತ್ತೀಚೆಗೆ ತೆರೆಕಂಡಿತ್ತು.

ಆದರೆ ಈಗ ನಟಿಯ ಹೆಸರು ವಂಚಕ ಸುಕೇಶ್ ಚಂದ್ರಶೇಖರ್ ಜತೆ ಕೇಳಿಬಂದ ನಂತರ ಸಿನಿಮಾ ಹೊರತಾದ ವಿಚಾರಗಳಿಗೆ ಸುದ್ದಿಯಲ್ಲಿದ್ದಾರೆ. ಸುಕೇಶ್ ನೀಡಿದ್ದ ಉಡುಗೊರೆಗಳು, ವಿವಿಧ ಪ್ರಾಣಿಗಳು, ಐಷಾರಾಮಿ ಕಾರುಗಳು ಸೇರಿದಂತೆ ಒಂದೊಂದೇ ವಿಚಾರ ಹೊರಬಂದಂತೆ ಜಾಕ್ವೆಲಿನ್​ಗೆ ಸಂಕಷ್ಟ ಜೋರಾಗಿತ್ತು. ಈ ಕುರಿತು ‘ಇಡಿ’ ಕೂಡ ತನ್ನ ವರದಿಯಲ್ಲಿ ಜಾಕ್ವೆಲಿನ್ ಹೇಳಿಕೆಗಳನ್ನು ಉಲ್ಲೇಖಿಸಿತ್ತು.

ಇದನ್ನೂ ಓದಿ:

Rashmika Mandanna: ನಟಿ ರಶ್ಮಿಕಾ ಮಂದಣ್ಣಗೆ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ

GGVV: ರಾಜ್​ ಶೆಟ್ಟಿಗೆ ಶಿವಣ್ಣ ಸರ್ಪ್ರೈಸ್ ಫೋನ್ ಕಾಲ್; ಶಿವ- ಶಿವ ಮಾತುಕತೆಯಲ್ಲಿ ಹೊರಬಿತ್ತು ಸಂತಸದ ವಿಚಾರ!

Published On - 3:46 pm, Tue, 4 January 22

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?