AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಕ್ವೆಲಿನ್ ಫರ್ನಾಂಡಿಸ್​ಗೆ ಮುಜುಗರ ತಂದ ವಿಡಿಯೋ ಸಾಂಗ್; ಬ್ಲರ್ ಮಾಡಿದ ತಂಡ

ಹೊಸ ಮ್ಯೂಸಿಕ್ ವಿಡಿಯೋದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರ ಬಟ್ಟೆಯ ಮುಜುಗರದ ಕ್ಷಣವೊಂದು ಸೆರೆಯಾಗಿದೆ ಎಂದು ನೆಟ್ಟಿಗರು ಆರೋಪಿಸಿದ್ದು, ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದೆ. ಸದ್ಯ ಯೂಟ್ಯೂಬ್‌ನಲ್ಲಿ ಆ ಭಾಗವನ್ನು ಬ್ಲರ್ ಮಾಡಲಾಗಿದ್ದು, ಇತ್ತ ನಟಿ ಸುಕೇಶ್ ಚಂದ್ರಶೇಖರ್ ಪ್ರಕರಣದ ಹಿನ್ನೆಲೆಯಲ್ಲೂ ಸುದ್ದಿಯಲ್ಲಿದ್ದಾರೆ.

ಜಾಕ್ವೆಲಿನ್ ಫರ್ನಾಂಡಿಸ್​ಗೆ ಮುಜುಗರ ತಂದ ವಿಡಿಯೋ ಸಾಂಗ್; ಬ್ಲರ್ ಮಾಡಿದ ತಂಡ
ಜಾಕ್ವೆಲಿನ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Jul 19, 2026 | 6:30 AM

Share

ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರ ಹೊಸ ಮ್ಯೂಸಿಕ್ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸೋನು ತುಕ್ರಾಲ್ ಮತ್ತು ಬಿ ಪ್ರಾಕ್ ಧ್ವನಿಯಲ್ಲಿ ಮೂಡಿಬಂದಿರುವ ಈ ಹಾಡು ಜುಲೈ 15 ರಂದು ಬಿಡುಗಡೆಯಾಗಿದೆ. ಹಾಡು ಬಿಡುಗಡೆಯಾದ ಬೆನ್ನಲ್ಲೇ, ನಟಿಯ ಬಟ್ಟೆಯ ಮುಜುಗರದ ಕ್ಷಣದ ಕುರಿತು ನೆಟ್ಟಿಗರು ಮಾತನಾಡಿಕೊಳ್ಳುತ್ತಿದ್ದಾರೆ. ಇದರಿಂದ ನಟಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಹಾಡಿನ ಒಂದು ಸಣ್ಣ ಭಾಗದಲ್ಲಿ ಜಾಕ್ವೆಲಿನ್ ಅವರ ಮುಜುಗರದ ಕ್ಷಣ ಸೆರೆಯಾಗಿದೆ ಎಂದು ನೆಟ್ಟಿಗರು ಆರೋಪಿಸಿದ್ದು, ಇದಕ್ಕೆ ಸಂಬಂಧಿಸಿದ ಕ್ಲಿಪ್ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಆದರೆ, ವಿವಾದ ಬೆಳೆಯುತ್ತಿದ್ದಂತೆ ಯೂಟ್ಯೂಬ್‌ನಲ್ಲಿ ಆ ನಿರ್ದಿಷ್ಟ ಭಾಗವನ್ನು ಬ್ಲರ್ ಮಾಡಲಾಗಿದೆ. ಇದು ಅಭಿಮಾನಿಗಳ ಗಮನಕ್ಕೆ ಬಂದಿದೆ.

ವಿಡಿಯೋ ವೈರಲ್ ಆದ ನಂತರ ಚಿತ್ರತಂಡ ಈ ತಪ್ಪು ತಿದ್ದಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಈ ಇಡೀ ಘಟನೆಯ ಬಗ್ಗೆ ಜಾಕ್ವೆಲಿನ್ ಫರ್ನಾಂಡಿಸ್ ಆಗಲಿ ಅಥವಾ ವಿಡಿಯೋ ನಿರ್ಮಾಪಕರಾಗಲಿ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.

ಇನ್ನು ಸಿನಿಮಾಗಳ ವಿಷಯಕ್ಕೆ ಬಂದರೆ, ಜಾಕ್ವೆಲಿನ್ ಫರ್ನಾಂಡಿಸ್ ಇತ್ತೀಚೆಗಷ್ಟೇ ಅಕ್ಷಯ್ ಕುಮಾರ್ ನಟನೆಯ ‘ವೆಲ್‌ಕಮ್ ಟು ದಿ ಜಂಗಲ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಇದು ದೊಡ್ಡ ತಾರಾಗಣದ ಸಿನಿಮಾವಾಗಿದ್ದು, ಸುನಿಲ್ ಶೆಟ್ಟಿ, ದಿಶಾ ಪಟಾನಿ, ಅರ್ಷದ್ ವಾರ್ಸಿ, ರವೀನಾ ಟಂಡನ್ ಮತ್ತು ಪರೇಶ್ ರಾವಲ್ ಸೇರಿದಂತೆ ಬಾಲಿವುಡ್‌ನ ಪ್ರಮುಖ ನಟರು ಈ ಚಿತ್ರದಲ್ಲಿದ್ದಾರೆ.

ಇದನ್ನೂ ಓದಿ:  ಸುಕೇಶ್ ಚಂದ್ರಶೇಖರ್ ಕೇಸ್: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ಹಿಂಪಡೆದ ನಟಿ ಜಾಕ್ವೆಲಿನ್ ಫರ್ನಾಂಡಿಸ್

ಇನ್ನು 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಸಿಲುಕಿಕೊಂಡಿದ್ದಾರೆ. ಈ ಪ್ರಕರಣ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈ ಪ್ರಕರಣದ ಆರೋಪಿ ಸುಕೇಶ್ ಚಂದ್ರಶೇಖರ್ ಜೊತೆ ಜಾಕ್ವೆಲಿನ್ ಡೇಟಿಂಗ್ ಮಾಡುತ್ತಾ ಇದ್ದಿದ್ದೇ ಅವರಿಗೆ ಸಮಸ್ಯೆ ತಂದೊಡ್ಡಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್