ಉದ್ಯಮಿಗಳಿಗೆ 200 ಕೋಟಿ ರೂಪಾಯಿ ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಕರಣದ ಕಿಂಗ್ಪಿನ್ ಸುಕೇಶ್ ಚಂದ್ರಶೇಖರ್ ಜತೆ ಅವರು ಲಿಂಕ್ ಹೊಂದಿದ್ದರು ಎನ್ನಲಾಗಿದೆ. ಉದ್ಯಮಿಗಳಿಗೆ 200 ಕೋಟಿ ರೂ. ವಂಚಿಸಿದ ಆರೋಪದಲ್ಲಿ ಸುಕೇಶ್ ಚಂದ್ರಶೇಖರ್ ವಿಚಾರಣೆ ಎದುರಿಸುತ್ತಿದ್ದಾರೆ. ಅವರ ಜೊತೆ ಸಂಪರ್ಕದಲ್ಲಿ ಇದ್ದರು ಎಂಬ ಕಾರಣಕ್ಕೆ ಜಾಕ್ವೆಲಿನ್ ಫರ್ನಾಂಡಿಸ್ ಮೇಲೂ ಅನುಮಾನ ಮೂಡಿದೆ. ಇತ್ತೀಚೆಗೆ ಇಬ್ಬರೂ ಆಪ್ತವಾಗಿದ್ದ ಫೋಟೋ ವೈರಲ್ ಆಗಿತ್ತು. ಈಗ ಮತ್ತೊಂದು ಹೊಸ ಫೋಟೋ ಹೊರಬಿದ್ದಿದೆ.
ಮುಖ್ಯ ಆರೋಪಿ ಸುಕೇಶ್ ಚಂದ್ರಶೇಖರ್ ಜತೆ ಜಾಕ್ವೆಲಿನ್ ಫರ್ನಾಂಡಿಸ್ ಹಲವು ಬಾರಿ ದೂರವಾಣಿ ಮೂಲಕ ಮಾತನಾಡಿರುವುದು ಅಧಿಕಾರಿಗಳಿಗೆ ತಿಳಿದುಬಂದಿದೆ. ಇಬ್ಬರ ನಡುವಿನ ವ್ಯವಹಾರ ಯಾವ ರೀತಿ ಇತ್ತು? 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್ ಕೈವಾಡ ಇದೆಯೋ ಇಲ್ಲವೋ ಎಂಬುದನ್ನು ಅಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ. ಇದಕ್ಕೆ ಸಂಬಂಧಿಸಿ ಅವರು ಹಲವು ಬಾರಿ ವಿಚಾರಣೆ ಎದುರಿಸಿದ್ದಾರೆ.
ಜಾಕ್ವೆಲಿನ್ ಫರ್ನಾಂಡಿಸ್ ಮತ್ತು ಸುಕೇಶ್ ಚಂದ್ರಶೇಖರ್ ಇಬ್ಬರ ನಡುವಿನ ಹೊಸ ರೊಮ್ಯಾಂಟಿಕ್ ಪೋಟೋ ಬಿಡುಗಡೆ ಆಗಿದೆ. ಜಾಕ್ವೆಲಿನ್ಗೆ ಸುಕೇಶ್ ಕಿಸ್ ಮಾಡುತ್ತಿದ್ದಾರೆ. ಜಾಕ್ವೆಲಿನ್ ಕತ್ತಿನಲ್ಲಿ ಒಂದು ಕಲೆ ಕಂಡಿದೆ. ಸುಕೇಶ್ ಅವರೇ ಈ ಕಲೆ ಮಾಡಿದ್ದಾರೆ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಕೆಲ ತಿಂಗಳ ಹಿಂದಷ್ಟೇ ಈ ಫೋಟೋ ತೆಗೆಯಲಾಗಿದೆ ಎನ್ನಲಾಗಿದೆ.
ದೆಹಲಿ ಜೈಲಿನಲ್ಲಿ ಸುಕೇಶ್ ಚಂದ್ರಶೇಖರ್ ಇದ್ದಾರೆ. ಈತ ದೆಹಲಿ ಜೈಲಿನಲ್ಲಿ ಇದ್ದುಕೊಂಡೇ ಉದ್ಯಮಿಗಳ ಪತ್ನಿಯರಿಗೆ ಕಾಲ್ ಮಾಡಿ ಹಣ ವಸೂಲಿ ಮಾಡುತ್ತಿದ್ದರು ಎಂದು ವರದಿ ಆಗಿದೆ. ಈ ಮೊದಲು ತಮಿಳುನಾಡಿನ ಟಿಟಿವಿ ದಿನಕರನ್ಗೆ ಎಐಎಡಿಎಂಕೆ ಪಕ್ಷದ ಚಿಹ್ನೆ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚನೆ ಮಾಡಿದ್ದ ಬಗ್ಗೆ ದೂರು ದಾಖಲಾಗಿದೆ. ಇವರ ಒಡೆತನದಲ್ಲಿ ಇದ್ದ ಚೆನ್ನೈನ ಬಂಗಲೆ, 82 ಲಕ್ಷ ರೂ. ಹಣ ಹಾಗೂ 10ಕ್ಕೂ ಹೆಚ್ಚು ಐಷಾರಾಮಿ ಕಾರುಗಳನ್ನು ಇಡಿ ಅಧಿಕಾರಿಗಳು ವಶಪಡಿಸಿಕೊಂಡಿದ್ದರು.
ಇದನ್ನೂ ಓದಿ: ಜಾಕ್ವೆಲಿನ್ಗೆ ನೀಡಿದ ಉಡುಗೊರೆ ಲಿಸ್ಟ್ ತೆಗೆದಿಟ್ಟ ಸುಕೇಶ್ ಚಂದ್ರಶೇಖರ್; ಅಬ್ಬಬ್ಬಾ ಇಷ್ಟೊಂದಾ?
‘ಜಾಕ್ವೆಲಿನ್ ಜತೆ ಸಂಬಂಧ ಇದ್ದಿದ್ದು ನಿಜ; ಆದರೆ ನಾನು ವಂಚಕ ಅಲ್ಲ’: ಸುಕೇಶ್ ಚಂದ್ರಶೇಖರ್ ಹೊಸ ಪುರಾಣ