ಸುಕೇಶ್​ ಚಂದ್ರಶೇಖರ್​ ವಿರುದ್ಧವೇ ತಿರುಗಿಬಿದ್ದ ಜಾಕ್ವೆಲಿನ್​ ಫರ್ನಾಂಡಿಸ್​; ದೂರು ದಾಖಲು

ಈ ಮೊದಲು ಜಾಕ್ವೆಲಿನ್​ ಫರ್ನಾಂಡಿಸ್​ಗೆ ಸುಕೇಶ್​ ಚಂದ್ರಶೇಖರ್​ ಕೇವಲ ಪ್ರೇಮಪತ್ರ ಬರೆಯುತ್ತಿದ್ದ. ಹಾಗಾಗಿ ಆತನ ವಿರುದ್ಧ ಜಾಕ್ವೆಲಿನ್​ ಫರ್ನಾಂಡಿಸ್​ ಸಿಟ್ಟಾಗಿದ್ದರು. ನಂತರ ಸುಕೇಶ್​ ಚಂದ್ರಶೇಖರ್​ಗೂ ಕೋಪ ಬಂತು. ಈವರೆಗೂ ಮುಚ್ಚಿಟ್ಟಿದ್ದ ಸತ್ಯವನ್ನು ಬಹಿರಂಗ ಮಾಡುವುದಾಗಿ ಆತ ಎಚ್ಚರಿಕೆ ನೀಡಿದ್ದ. ಆತನಿಂದ ನಟಿಗೆ ಕಿರಿಕಿರಿ ಆಗುತ್ತಿದೆ. ಹಾಗಾಗಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಸುಕೇಶ್​ ಚಂದ್ರಶೇಖರ್​ ವಿರುದ್ಧವೇ ತಿರುಗಿಬಿದ್ದ ಜಾಕ್ವೆಲಿನ್​ ಫರ್ನಾಂಡಿಸ್​; ದೂರು ದಾಖಲು
ಜಾಕ್ವೆಲಿನ್​ ಫರ್ನಾಂಡಿಸ್​, ಸುಕೇಶ್​ ಚಂದ್ರಶೇಖರ್​
Follow us
ಮದನ್​ ಕುಮಾರ್​
|

Updated on: Feb 13, 2024 | 11:16 AM

ಬಾಲಿವುಡ್​ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ (Jacqueline Fernandez) ಅವರು ಸುಕೇಶ್​ ಚಂದ್ರಶೇಖರ್​ ಜೊತೆ ಸ್ನೇಹ ಬೆಳೆಸಿದ ಕಾರಣದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ನೂರಾರು ಕೋಟಿ ರೂಪಾಯಿ ವಂಚನೆ ಕೇಸ್​ನಲ್ಲಿ ಸುಕೇಶ್​ ಜೈಲು ಪಾಲಾಗಿದ್ದಾನೆ. ಅಲ್ಲಿಂದಲೇ ಆತ ಪತ್ರಗಳನ್ನು ಬರೆಯುವ ಮೂಲಕ ಜಾಕ್ವೆಲಿನ್​ ಫರ್ನಾಂಡಿಸ್​ಗೆ ಕಾಟ ಕೊಡುತ್ತಿದ್ದಾನೆ. ಆತನ ವರ್ತನೆಯಿಂದ ಜಾಕ್ವೆಲಿನ್​ ಫರ್ನಾಂಡಿಸ್​ ಬೇಸತ್ತಿದ್ದಾರೆ. ಸುಕೇಶ್​ (Sukesh Chandrasekhar) ವಿರುದ್ಧ ಅವರೀಗ ಗರಂ ಆಗಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ. ಸುಕೇಶ್​ನಿಂದ ತಮಗೆ ಬೆದರಿಕೆ ಇದೆ. ಹಾಗಾಗಿ ರಕ್ಷಣೆ ನೀಡಬೇಕು ಎಂದು ಜಾಕ್ವೆಲಿನ್​ ಫರ್ನಾಂಡಿಸ್​ ಅವರು ದೆಹಲಿ ಪೊಲೀಸ್​ ಕಮಿಷನರ್​ಗೆ ಮನವಿ ಸಲ್ಲಿಸಿದ್ದಾರೆ.

ಕ್ರೈಂ ಬ್ರ್ಯಾಂಚ್​​ನ ಸ್ಪೆಷಲ್​ ಪೊಲೀಸ್​ ಕಮಿಷನರ್​ಗೂ ಜಾಕ್ವೆಲಿನ್​ ಅವರು ಪತ್ರ ಬರೆದಿದ್ದಾರೆ. ತಮ್ಮ ಸುರಕ್ಷತೆಗೆ ಅಪಾಯ ಎದುರಾಗಿದೆ. ಆದ್ದರಿಂದ ಪೊಲೀಸರು ಕೂಡಲೇ ಈ ವಿಚಾರದ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ವಿಶೇಷ ತಂಡ ರಚಿಸಿ, ವಿಚಾರಣೆ ನಡೆಸುವಂತೆ ಸೂಚಿಸಲಾಗಿದೆ ಎಂದು ವರದಿ ಆಗಿದೆ.

ಇದನ್ನೂ ಓದಿ: 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ತಮ್ಮ ಹೆಸರು ಕೈ ಬಿಡುವಂತೆ ಕೋರಿ ಕೋರ್ಟ್​ಗೆ ಜಾಕ್ವೆಲಿನ್ ಅರ್ಜಿ

ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಸುಕೇಶ್​ ಚಂದ್ರಶೇಖರ್​ನಿಂದ ಅನೇಕ ದುಬಾರಿ ಉಡುಗೊರೆಗಳನ್ನು ಸ್ವೀಕರಿಸಿದ್ದರು ಎಂಬ ಆರೋಪ ಇದೆ. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎಂದು ಕೂಡ ಹೇಳಲಾಗಿದೆ. ಅದಕ್ಕೆ ಸಾಕ್ಷಿ ಎಂಬಂತೆ ಜಾಕ್ವೆಲಿನ್​ ಫರ್ನಾಂಡಿಸ್​ ಮತ್ತು ಸುಕೇಶ್​ ಚಂದ್ರಶೇಖರ್​ ಬಹಳ ಆಪ್ತವಾಗಿರುವ ಫೋಟೋಗಳು ವೈರಲ್​ ಆಗಿವೆ. ಅಕ್ರಮ ಹಣ ವರ್ಗಾವಣೆ ಕೇಸ್​ನ ಚಾರ್ಜ್​​ಶೀಟ್​ನಲ್ಲಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರ ಹೆಸರು ಸಹ ಸೇರಿದೆ. ಆದರೆ ತಮ್ಮ ಹೆಸರನ್ನು ಕೈ ಬಿಡುವಂತೆ ಅವರು ಈಗಾಗಲೇ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಜೈಲಿನಿಂದ ಮತ್ತೆ ಜಾಕ್ವೆಲಿನ್​ಗೆ ಲವ್ ಲೆಟರ್ ಬರೆದ ಸುಕೇಶ್ ಚಂದ್ರಶೇಖರ್

ಮೊದಲೆಲ್ಲ ಜಾಕ್ವೆಲಿನ್​ ಫರ್ನಾಂಡಿಸ್​ಗೆ ಸುಕೇಶ್​ ಚಂದ್ರಶೇಖರ್​ ಪ್ರೇಮ ಪತ್ರ ಬರೆಯುತ್ತಿದ್ದ. ಅದಕ್ಕೆ ಜಾಕ್ವೆಲಿನ್​ ಸಿಟ್ಟಾಗಿದ್ದರು. ಆ ಬಳಿಕ ಸುಕೇಶ್​ ಚಂದ್ರಶೇಖರ್​ಗೂ ಕೋಪ ಬಂತು. ಇಷ್ಟು ದಿನ ಮುಚ್ಚಿಟ್ಟಿದ್ದ ಎಲ್ಲ ಸತ್ಯವನ್ನು ಬಹಿರಂಗಪಡಿಸುವುದಾಗಿ ಆತ ಪತ್ರದ ಮೂಲಕ ಎಚ್ಚರಿಕೆ ನೀಡಿದ. ಒಟ್ಟಿನಲ್ಲಿ ಆತನಿಂದ ಜಾಕ್ವೆಲಿನ್​ ಫರ್ನಾಂಡಿಸ್​ ಅವರಿಗೆ ಕಿರಿಕಿರಿ ಆಗುತ್ತಿದೆ. ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿರುವ ಅವರು ಈ ಕಿರಿಕ್​ಗಳನ್ನು ಕೂಡ ನಿಭಾಯಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್