AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕಷ್ಟ ಪರಿಹಾರಕ್ಕೆ ಕೋರಿ ದೇವರ ಮೊರೆ ಹೋದ ನಟಿ ಜಾಕ್ವೆಲಿನ್ ಫರ್ನಾಂಡಿಸ್

ಜಾಕ್ವೆಲಿನ್ ಅವರು ಸಾಂಪ್ರದಾಯಿಕ ಉಡುಗೆ ತೊಟ್ಟು ದೇವಾಲಯಕ್ಕೆ ಬಂದಿದ್ದರು. ಅವರನ್ನು ನೋಡಲು ಅಭಿಮಾನಿಗಳು ಕೂಡ ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದರು. ಪೊಲೀಸ್ ಭದ್ರತೆ ಕೂಡ ಒದಗಿಸಲಾಗಿತ್ತು.

ಸಂಕಷ್ಟ ಪರಿಹಾರಕ್ಕೆ ಕೋರಿ ದೇವರ ಮೊರೆ ಹೋದ ನಟಿ ಜಾಕ್ವೆಲಿನ್ ಫರ್ನಾಂಡಿಸ್
ಜಾಕ್ವೆಲಿನ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 23, 2022 | 3:50 PM

Share

ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಅವರಿಗೆ ಸಂಕಷ್ಟ ಎದುರಾಗಿದೆ. 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್ ಅವರ ಹೆಸರು ತಳುಕು ಹಾಕಿಕೊಂಡಿದೆ. ಈ ಪ್ರಕರಣದಲ್ಲಿ ಜಾಕ್ವೆಲಿನ್ ಅವರನ್ನು ಆರೋಪಿ ಎಂದು ಜಾರಿ ನಿರ್ದೇಶನಾಲಯ (ED) ಹೆಸರಿಸಿದೆ. ತಮಗೆ ಎದುರಾದ ಸಂಕಷ್ಟವನ್ನು ಪರಿಹಾರ ಮಾಡುವಂತೆ ಮುಂಬೈನ ಜುಹುನಲ್ಲಿರುವ ಮುಕ್ತೇಶ್ವರ ದೇವಸ್ಥಾನಕ್ಕೆ ಅವರು ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಪಾಪರಾಜಿಗಳು ಮುತ್ತಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳು ವೈರಲ್ ಆಗಿವೆ.

ಜಾಕ್ವೆಲಿನ್ ಅವರು ಸಾಂಪ್ರದಾಯಿಕ ಉಡುಗೆ ತೊಟ್ಟು ದೇವಾಲಯಕ್ಕೆ ಬಂದಿದ್ದರು. ಅವರನ್ನು ನೋಡಲು ಅಭಿಮಾನಿಗಳು ಕೂಡ ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದರು. ಪೊಲೀಸ್ ಭದ್ರತೆ ಕೂಡ ಒದಗಿಸಲಾಗಿತ್ತು. ಜಾಕ್ವೆಲಿನ್ ದೇವಸ್ಥಾನಕ್ಕೆ ಎಂಟ್ರಿ ಕೊಟ್ಟ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ತಮಗೆ ಎದುರಾದ ಸಂಕಷ್ಟ ದೂರ ಮಾಡುವಂತೆ ಅವರು ದೇವರ ಬಳಿ ಪ್ರಾರ್ಥಿಸಿದ್ದಾರೆ ಎನ್ನಲಾಗುತ್ತಿದೆ.

ಸುಕೇಶ್ ಚಂದ್ರಶೇಖರ್ ಎಂಬಾತ ಅನೇಕ ಉದ್ಯಮಿಗಳಿಗೆ 200 ಕೋಟಿ ರೂಪಾಯಿ ವಂಚನೆ ಮಾಡಿದ್ದಾನೆ. ಈತನನ್ನು ಅರೆಸ್ಟ್ ಮಾಡಿ ವಿಚಾರಣೆ ಮಾಡಿದಾಗ ಜಾಕ್ವೆಲಿನ ಫರ್ನಾಂಡಿಸ್ ಹೆಸರನ್ನು ತೆಗೆದುಕೊಂಡಿದ್ದ. ಕೆಲ ಸಮಯ ಸುಕೇಶ್ ಜತೆ ಜಾಕ್ವೆಲಿನ್ ರಿಲೇಶನ್​ಶಿಪ್​ನಲ್ಲಿ ಇದ್ದರು. ಇಬ್ಬರೂ ಆಪ್ತವಾಗಿದ್ದ ಫೋಟೋಗಳನ್ನು ಲೀಕ್ ಮಾಡಲಾಗಿತ್ತು. ಜಾಕ್ವೆಲಿನ್ ದುಬಾರಿ ಉಡುಗೊರೆಯನ್ನು ಸುಕೇಶ್​ನಿಂದ ಸ್ವೀಕರಿಸಿದ್ದರು. ಈ ಎಲ್ಲಾ ಕಾರಣಕ್ಕೆ ಜಾಕ್ವೆಲಿನ್ ಹೆಸರು ಈ ಪ್ರಕರಣದಲ್ಲಿ ಹೈಲೈಟ್ ಆಗಿದೆ.

ಇದನ್ನೂ ಓದಿ
Image
‘ವಿಕ್ರಾಂತ್​ ರೋಣ’ ಪ್ರೀ-ರಿಲೀಸ್​ ಇವೆಂಟ್​ನಲ್ಲಿ ಕತ್ರಿನಾ ಜಪ ಮಾಡಿದ ಸಲ್ಮಾನ್​ ಖಾನ್​; ಕಾರಣ ಏನು?
Image
Salman Khan: ‘ವಿಕ್ರಾಂತ್​ ರೋಣ’ ವೇದಿಕೆಯಲ್ಲಿ ಸುದೀಪ್​-ಸಲ್ಮಾನ್​​; ಕಿಚ್ಚನ ಜತೆಗಿನ ಬಾಂಧವ್ಯದ ಬಗ್ಗೆ ಸಲ್ಲು ಮಾತು
Image
Kichcha Sudeep: ಮುಂಬೈ, ಚೆನ್ನೈನಿಂದಲೂ ಸುದೀಪ್​ ಕಟೌಟ್​ಗೆ ಬಂತು ಬೇಡಿಕೆ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಕ್ರೇಜ್​
Image
Kichcha Sudeep: ಕೆಲವೇ ಗಂಟೆಗಳಲ್ಲಿ ಕೋಟ್ಯಂತರ ಬಾರಿ ವೀಕ್ಷಣೆ ಕಂಡ ‘ವಿಕ್ರಾಂತ್​ ರೋಣ’ ಟ್ರೇಲರ್​

ಈ ಪ್ರಕರಣದಲ್ಲಿ ಕಳೆದ ವಾರ ಜಾರಿ ನಿರ್ದೇಶನಾಲಯವು ಜಾಕ್ವೆಲಿನ್ ಅವರನ್ನು ಆರೋಪಿ ಎಂದು ಹೆಸರಿಸಿದೆ. ಆದರೆ, ಈ ಸಂಬಂಧ ಜಾಕ್ವೆಲಿನ್ ಅವರಿಗೆ ಯಾವುದೇ ನೋಟೀಸ್ ಬಂದಿಲ್ಲ. ಈ ವಿಚಾರವನ್ನು ಜಾಕ್ವೆಲಿನ್ ಪರ ವಕೀಲರು ಹೇಳಿಕೊಂಡಿದ್ದರರು. ಆದಾಗ್ಯೂ ಜಾಕ್ವೆಲಿನ್ ದೇವಸ್ಥಾನಕ್ಕೆ ತೆರಳಿದ್ದು ಏಕೆ ಎಂಬ ಪ್ರಶ್ನೆ ಅನೇಕರಲ್ಲಿ ಮೂಡಿದೆ.

ಇದನ್ನೂ ಓದಿ: ‘ವಿಕ್ರಾಂತ್ ರೋಣ’ ಸಿನಿಮಾ ಪ್ರಚಾರದ ಮಧ್ಯೆ ಇಡಿ ವಿಚಾರಣೆ ಎದುರಿಸಿದ ನಟಿ ಜಾಕ್ವೆಲಿನ್ ಫರ್ನಾಂಡಿಸ್​

‘ವಿಕ್ರಾಂತ್ ರೋಣ’ ಸಿನಿಮಾದಲ್ಲಿ ಜಾಕ್ವೆಲಿನ್ ಒಂದೆರಡು ದೃಶ್ಯ ಹಾಗೂ ಒಂದು ವಿಶೇಷ ಹಾಡಿನಲ್ಲಿ ಕಾಣಿಸಿಕೊಂಡಿದ್ದರು. ಸುದೀಪ್ ನಟನೆಯ ಈ ಚಿತ್ರದಲ್ಲಿ ನಟಿಸುವ ಮೂಲಕ ಅವರು ಕನ್ನಡಕ್ಕೂ ಕಾಲಿಟ್ಟರು. ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿದೆ. ಹೀಗಾಗಿ, ಹಿಂದಿಯಲ್ಲಿ ಹೈಪ್ ಹೆಚ್ಚಲು ಜಾಕ್ವೆಲಿನ್ ಕೂಡ ಕಾರಣರಾಗಿದ್ದರು.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ