AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಕೇಶ್ ಚಂದ್ರಶೇಖರ್ ಕೇಸ್: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ಹಿಂಪಡೆದ ನಟಿ ಜಾಕ್ವೆಲಿನ್ ಫರ್ನಾಂಡಿಸ್

ಸುಕೇಶ್ ಚಂದ್ರಶೇಖರ್ ತಾನು ಮಾಡಿದ ವಂಚನೆಯ ಹಣದಿಂದ ಜಾಕ್ವೆಲಿನ್‌ ಫರ್ನಾಂಡಿಸ್ ಅವರಿಗೆ ಸುಮಾರು 7 ಕೋಟಿ ರೂಪಾಯಿ ಮೌಲ್ಯದ ಐಷಾರಾಮಿ ಉಡುಗೊರೆಗಳನ್ನು ನೀಡಿದ್ದಾಗಿ ಇಡಿ ಹೇಳಿದೆ. ಆದರೆ ಜಾಕ್ವೆಲಿನ್, ತಮಗೆ ಸುಕೇಶ್‌ನ ಕ್ರಿಮಿನಲ್ ಹಿನ್ನೆಲೆಯಾಗಲಿ ಅಥವಾ ಆ ಹಣದ ಮೂಲವಾಗಲಿ ತಿಳಿದಿರಲಿಲ್ಲ ಎಂದು ವಾದಿಸುತ್ತಿದ್ದಾರೆ. ಈ ಪ್ರಕರಣದ ವಿಚಾರಣೆ ಜಾರಿಯಲ್ಲಿದೆ.

ಸುಕೇಶ್ ಚಂದ್ರಶೇಖರ್ ಕೇಸ್: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ಹಿಂಪಡೆದ ನಟಿ ಜಾಕ್ವೆಲಿನ್ ಫರ್ನಾಂಡಿಸ್
Jacqueline Fernandez
ಮದನ್​ ಕುಮಾರ್​
|

Updated on: Jun 26, 2026 | 10:48 PM

Share

ಮುಖ್ಯಾಂಶಗಳು

  • ಸುಕೇಶ್ ಚಂದ್ರಶೇಖರ್ ಪ್ರಕರಣದಲ್ಲಿ ಇಡಿ ತನಿಖೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ನಟಿ ಜಾಕ್ವೆಲಿನ್ ಹಿಂಪಡೆದಿದ್ದಾರೆ.
  • ಸುಪ್ರೀಂ ಕೋರ್ಟ್‌ನಿಂದ ಅರ್ಜಿ ಹಿಂಪಡೆದ ಕಾರಣ ಜಾಕ್ವೆಲಿನ್ ವಿರುದ್ಧ ಕೆಳ ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರಿಯಲಿದೆ.
  • ಸುಕೇಶ್‌ನಿಂದ ಜಾಕ್ವೆಲಿನ್ 7 ಕೋಟಿ ರೂಪಾಯಿ ಮೌಲ್ಯದ ಐಷಾರಾಮಿ ಉಡುಗೊರೆ ಪಡೆದಿದ್ದಾರೆ ಎಂದು ಇಡಿ ದೂಷಿಸಿದೆ.

200 ಕೋಟಿ ರೂಪಾಯಿ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ (Money Laundering) ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಜಾರಿ ನಿರ್ದೇಶನಾಲಯ (ED) ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ವಜಾಗೊಳಿಸುವಂತೆ ಕೋರಿ ಸಲ್ಲಿಸಿದ್ದ ವಿಶೇಷ ಅರ್ಜಿಯನ್ನು ಜಾಕ್ವೆಲಿನ್ ಗುರುವಾರ ಹಿಂಪಡೆದಿದ್ದಾರೆ. ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಜಾಯ್‌ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಅರ್ಜಿ ಹಿಂಪಡೆಯಲು ನಟಿಗೆ ಅನುಮತಿ ನೀಡಿದೆ.

ಇಡಿ ದಾಖಲಿಸಿದ್ದ ದೋಷಾರೋಪ ಪಟ್ಟಿ ಹಾಗೂ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಲು ದೆಹಲಿ ಹೈಕೋರ್ಟ್ ನಿರಾಕರಿಸಿದ ನಂತರ ಜಾಕ್ವೆಲಿನ್ ಫರ್ನಾಂಡಿಸ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈಗ ಅರ್ಜಿ ಹಿಂಪಡೆದಿರುವುದರಿಂದ ಅವರ ವಿರುದ್ಧದ ಕಾನೂನು ಪ್ರಕ್ರಿಯೆಗಳು ಕೆಳಹಂತದ ವಿಚಾರಣಾ ನ್ಯಾಯಾಲಯದಲ್ಲಿ ಮುಂದುವರಿಯಲಿವೆ.

ಈ ಹಿಂದೆ ಜೂನ್ 11ರಂದು ಈ ಅರ್ಜಿಯು ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಅತುಲ್ ಎಸ್. ಚಂದೂರ್ಕರ್ ಅವರ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಆದರೆ, ನ್ಯಾಯಮೂರ್ತಿ ಮಿಶ್ರಾ ಅವರು ಈ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದ ಮತ್ತೊಂದು ಕೇಸ್‌ನಲ್ಲಿ ತಮ್ಮ ಮಗ ಸರ್ಕಾರದ ಪರವಾಗಿ ಹಾಜರಾಗಿದ್ದರಿಂದ, ನೈತಿಕತೆಯ ಆಧಾರದ ಮೇಲೆ ತಾವು ವಿಚಾರಣೆ ನಡೆಸುವುದಿಲ್ಲ ಎಂದು ಅವರು ತಿಳಿಸಿದ್ದರು. ಆ ಬಳಿಕ ಪ್ರಕರಣವನ್ನು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರ ಪೀಠಕ್ಕೆ ವರ್ಗಾಯಿಸಲಾಯಿತು.

ಇದೇ ತಿಂಗಳ ಆರಂಭದಲ್ಲಿ ಪಟಿಯಾಲ ಹೌಸ್ ಕೋರ್ಟ್‌ಗೆ ಹಾಜರಾಗಿದ್ದ ಜಾಕ್ವೆಲಿನ್ ಫರ್ನಾಂಡಿಸ್, ಪಿಎಂಎಲ್‌ಎ (PMLA) ಅಡಿ ತಮ್ಮ ವಿರುದ್ಧ ಹೊರಿಸಲಾದ ಆರೋಪಗಳು ಸುಳ್ಳು ಮತ್ತು ತಾವು ನಿರಪರಾಧಿ ಎಂದು ಹೇಳಿದ್ದರು. ಅಲ್ಲದೆ, ನ್ಯಾಯಾಲಯದಲ್ಲಿ ಕಾನೂನು ಹೋರಾಟ ಮುಂದುವರಿಸುವುದಾಗಿ ತಿಳಿಸಿದ್ದರು. ಈ ಪ್ರಕರಣದಲ್ಲಿ ಮುಖ್ಯ ಆರೋಪಿ ಸುಕೇಶ್ ಚಂದ್ರಶೇಖರ್, ಆತನ ಪತ್ನಿ ಲೀನಾ ಮರಿಯಾ ಪಾಲ್ ಸೇರಿದಂತೆ 14 ಜನರ ವಿರುದ್ಧ ಆರೋಪ ನಿಗದಿಪಡಿಸಲಾಗಿದ್ದು, ವಿಚಾರಣೆಯನ್ನು ಜುಲೈ 16ಕ್ಕೆ ಮುಂದೂಡಲಾಗಿದೆ.

ಇದನ್ನೂ ಓದಿ: ಬಾಡಿಗಾರ್ಡ್ ವರ್ತನೆಗೆ ನೆಟ್ಟಿಗರ ಆಕ್ರೋಶ: ಜಾಕ್ವೆಲಿನ್ ಕೈ ಹಿಡಿದು ಎಳೆದ ಭದ್ರತಾ ಸಿಬ್ಬಂದಿ

ಕೆಲವು ವಾರಗಳ ಹಿಂದಷ್ಟೇ ಜಾಕ್ವೆಲಿನ್ ಈ ಪ್ರಕರಣದಲ್ಲಿ ತಾವು ಅಪ್ರೂವರ್ ಆಗಲು ಸಲ್ಲಿಸಿದ್ದ ಅರ್ಜಿಯನ್ನೂ ಹಿಂಪಡೆದಿದ್ದರು. ಇಡಿ ಅವರ ಮನವಿಗೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ತನಿಖೆಯ ಸಮಯದಲ್ಲಿ ಜಾಕ್ವೆಲಿನ್ ಅವರ ನಡವಳಿಕೆ ಸರಿಯಾಗಿರಲಿಲ್ಲ ಮತ್ತು ಅವರು ಪೂರ್ಣ ಸತ್ಯವನ್ನು ಮರೆಮಾಚಿದ್ದಾರೆ ಎಂದು ಇಡಿ ಆರೋಪಿಸಿದೆ. ಸುಕೇಶ್ ಚಂದ್ರಶೇಖರ್ ಅಪರಾಧ ಹಿನ್ನೆಲೆ ತಿಳಿದಿದ್ದರೂ ಜಾಕ್ವೆಲಿನ್ ಆತನೊಂದಿಗೆ ಸಂಪರ್ಕದಲ್ಲಿದ್ದರು ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ