AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kisi Ka Bhai Kisi Ki Jaan: ‘ವಯಸ್ಸಾದವರ ಮೇಲೆ ಸಲ್ಮಾನ್​ ಖಾನ್​ ಕೈ ಎತ್ತಲ್ಲ’: ಜಗಪತಿ ಬಾಬು

ಜಗಪತಿ ಬಾಬು ಅವರಿಗೆ ಈಗ 61 ವರ್ಷ ವಯಸ್ಸು. ವಿಲನ್​ ಪಾತ್ರ ಮಾಡಬೇಕೋ ಬೇಡವೋ ಎಂಬ ಬಗ್ಗೆ ಅವರಿಗೆ ಯಾವುದೇ ಗೊಂದಲ ಇಲ್ಲ.

Kisi Ka Bhai Kisi Ki Jaan: ‘ವಯಸ್ಸಾದವರ ಮೇಲೆ ಸಲ್ಮಾನ್​ ಖಾನ್​ ಕೈ ಎತ್ತಲ್ಲ’: ಜಗಪತಿ ಬಾಬು
ಸಲ್ಮಾನ್ ಖಾನ್, ಜಗಪತಿ ಬಾಬು
ಮದನ್​ ಕುಮಾರ್​
|

Updated on:Apr 20, 2023 | 12:19 PM

Share

ಭಾರತೀಯ ಚಿತ್ರರಂಗದಲ್ಲಿ ಸಲ್ಮಾನ್​ ಖಾನ್​ (Salman Khan) ಅವರು ಸೂಪರ್​ ಸ್ಟಾರ್​ ಆಗಿ ಮಿಂಚುತ್ತಿದ್ದಾರೆ. ದೂರದಿಂದ ನೋಡುವವರಿಗೆ ಸಲ್ಲು ವ್ಯಕ್ತಿತ್ವ ಯಾವ ರೀತಿ ಎಂಬುದು ತಿಳಿಯುವುದು ಕಷ್ಟ. ಆದರೆ ಹತ್ತಿರದಿಂದ ಒಡನಾಡಿದವರಿಗೆ ಅವರ ಸ್ವಭಾವದ ಪರಿಚಯ ಇರುತ್ತದೆ. ಬಹುಭಾಷಾ ನಟ ಜಗಪತಿ ಬಾಬು (Jagapathi Babu) ಅವರು ಈಗ ಸಲ್ಮಾನ್​ ಖಾನ್​ ಬಗ್ಗೆ ಮಾತನಾಡಿದ್ದಾರೆ. ಶೂಟಿಂಗ್​ ಸಂದರ್ಭದಲ್ಲಿ ಸಲ್ಲು ಹೇಗಿರುತ್ತಾರೆ ಎಂಬುದನ್ನು ಅವರು ವಿವರಿಸಿದ್ದಾರೆ. ‘ಹಿಂದುಸ್ತಾನ್​ ಟೈಮ್ಸ್​’ಗೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ (Kisi Ka Bhai Kisi Ki Jaan) ಸಿನಿಮಾದಲ್ಲಿ ಸಲ್ಮಾನ್​ ಖಾನ್​ ಮತ್ತು ಜಗಪತಿ ಬಾಬು ಅವರು ಜೊತೆಯಾಗಿ ನಟಿಸಿದ್ದಾರೆ. ಈ ಚಿತ್ರಕ್ಕೆ ಪೂಜಾ ಹೆಗ್ಡೆ ನಾಯಕಿ.

ಏಪ್ರಿಲ್​ 21ರಂದು ರಂಜಾನ್​ ಪ್ರಯುಕ್ತ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಸಿನಿಮಾದಲ್ಲಿ ಜಗಪತಿ ಬಾಬು ಅವರು ವಿಲನ್​ ಪಾತ್ರ ಮಾಡಿದ್ದಾರೆ. ‘ಸಲ್ಮಾನ್​ ಖಾನ್​ ತುಂಬ ಸಿಂಪಲ್​ ಆಗಿ ನಡೆದುಕೊಳ್ಳುತ್ತಾರೆ. ಅವರಿದ್ದಲ್ಲಿ ನಿಮಗೆ ಭಯ ಆಗಲ್ಲ. ನಾವು ಒಂದು ಫೈಟಿಂಗ್​ ದೃಶ್ಯದಲ್ಲಿ ನಟಿಸಬೇಕಿತ್ತು. ಆದರೆ ಕೊವಿಡ್​ ಮತ್ತು ಡೆಂಗ್ಯು ಕಾರಣದಿಂದ ಸಾಧ್ಯವಾಗಲಿಲ್ಲ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Salman Khan: ಈದ್​ಗೆ ಸಲ್ಮಾನ್​ ಖಾನ್​ ಕಡೆಯಿಂದ ಮನರಂಜನೆಯ ರಸದೌತಣ; ಇಲ್ಲಿದೆ ನೋಡಿ ಸ್ಯಾಂಪಲ್​

ಇದನ್ನೂ ಓದಿ
Image
ಸೆಟ್​​ನಲ್ಲಿ ಸಲ್ಲುನ ಭೇಟಿ ಮಾಡೋಕೆ ಬಂದ ರಾಮ್​ ಚರಣ್​ಗೆ ಸಿಕ್ತು ಹಿಂದಿ ಸಿನಿಮಾ ಆಫರ್
Image
ತಂಗಿ ಗಂಡನ ಜೊತೆಗೆ ಸಲ್ಮಾನ್​ ಖಾನ್​ ಕಿರಿಕ್​; ಭಾವನ ಸಿನಿಮಾದಿಂದಲೇ ಹೊರನಡೆದ ಆಯುಷ್​ ಶರ್ಮಾ?
Image
ಬಹಿರಂಗ ವೇದಿಕೆಯಲ್ಲಿ ಸಲ್ಲು ಇದೆಂಥಾ ಕೆಲಸ; ಪೂಜಾ ಹೆಗ್ಡೆ ವಿಚಾರದಲ್ಲಿ ಸಿಕ್ಕಾಪಟ್ಟೆ ಮುಜುಗರ
Image
ಸಲ್ಮಾನ್​ ಖಾನ್ ಫಾರ್ಮ್​ಹೌಸ್​ ಬೆಲೆ 80 ಕೋಟಿ ರೂ.! ಸಲ್ಲು ಮೆಚ್ಚಿನ ಈ ಸ್ಥಳದಲ್ಲಿ ಏನೆಲ್ಲ ಇದೆ?

ಜಗಪತಿ ಬಾಬು ಅವರಿಗೆ ಈಗ 61 ವರ್ಷ ವಯಸ್ಸು. ವಿಲನ್​ ಪಾತ್ರ ಮಾಡಬೇಕೋ ಬೇಡವೋ ಎಂಬ ಬಗ್ಗೆ ಅವರಿಗೆ ಯಾವುದೇ ಗೊಂದಲ ಇಲ್ಲ. ‘ನಾನು ಕೂದಲಿಗೆ ಬಣ್ಣ ಹಾಕಿಕೊಂಡು ಯಂಗ್​ ಆಗಿ ಕಾಣಿಸಲಿ ಎಂದು ಸಲ್ಮಾನ್​ ಖಾನ್​ ಬಯಸಿದ್ದರು. ಯಾಕೆಂದರೆ, ತಮಗಿಂತ ಹೆಚ್ಚು ವಯಸ್ಸಾದ ವ್ಯಕ್ತಿಗೆ ಹೊಡೆಯೋಕೆ ಆಗಲ್ಲ ಅಂತ ಅವರು ನನಗೆ ತಿಳಿಸಿದ್ದರು’ ಎಂದಿದ್ದಾರೆ ಜಗಪತಿ ಬಾಬು.

ಇದನ್ನೂ ಓದಿ: ಸಲ್ಮಾನ್​ ಖಾನ್​ ಪಂಚೆ ಧರಿಸಿ ಕುಣಿದಿದ್ದಕ್ಕೆ ಎದುರಾಯ್ತು ಕಿರಿಕ್​; ಸಿನಿಮಾ ಬ್ಯಾನ್​ ಮಾಡಲು ಒತ್ತಾಯ

ಪೂಜಾ ಹೆಗ್ಡೆ ಮತ್ತು ಜಗಪತಿ ಬಾಬು ನಡುವೆ ಉತ್ತಮ ಒಡನಾಟ ಇದೆ. ಪೂಜಾ ಹೆಗ್ಡೆ ಕಾರಣದಿಂದಲೇ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ಸಿನಿಮಾದಲ್ಲಿ ನಟಿಸುವ ಅವಕಾಶ ಜಗಪತಿ ಬಾಬು ಅವರಿಗೆ ಸಿಕ್ಕಿರಬಹುದೇ? ಈ ಪ್ರಶ್ನೆಗೂ ಅವರು ಉತ್ತರಿಸಿದ್ದಾರೆ. ‘ಪೂಜಾ ನನ್ನನ್ನು ರಾಕ್​ ಸ್ಟಾರ್​ ಎಂದು ಕರೆಯುತ್ತಾರೆ. ಅವರು ನನ್ನ ಹೆಸರು ಹೇಳಿರಬಹುದು. ಆದರೆ ಅವರು ಶಿಫಾರಸ್ಸು ಮಾಡಿದ್ದಾರೋ ಇಲ್ಲವೋ ಗೊತ್ತಿಲ್ಲ. ನಾನು ಅವರ ಬಳಿ ಕೇಳಿಲ್ಲ. ಅವರು ಕೂಡ ಹೇಳಿಲ್ಲ’ ಎಂದು ಜಗಪತಿ ಬಾಬು ಹೇಳಿದ್ದಾರೆ. ಈ ಹಿಂದೆ ‘ರಾಧೆ ಶ್ಯಾಮ್​’ ಸಿನಿಮಾದಲ್ಲೂ ಜಗಪತಿ ಬಾಬು ಮತ್ತು ಪೂಜಾ ಹೆಗ್ಡೆ ಅವರು ನಟಿಸಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:19 pm, Thu, 20 April 23

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ