AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಮಿಕ್ರಾನ್​ ಹಾವಳಿ ಹೆಚ್ಚಳ; ಜನರ ಉದ್ಯೋಗ, ಆರ್ಥಿಕ ಸ್ಥಿತಿ ಬಗ್ಗೆ ಜಾನ್ವಿ ಕಪೂರ್ ಕಳವಳ

Omicron: ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಜಾನ್ವಿ ಕಪೂರ್​ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಒಮಿಕ್ರಾನ್​ ಪ್ರಕರಣಗಳ ಸಂಖ್ಯೆ ಹೆಚ್ಚಾದರೆ ಜನರ ಪರಿಸ್ಥಿತಿ ಏನಾಗಬಹುದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಒಮಿಕ್ರಾನ್​ ಹಾವಳಿ ಹೆಚ್ಚಳ; ಜನರ ಉದ್ಯೋಗ, ಆರ್ಥಿಕ ಸ್ಥಿತಿ ಬಗ್ಗೆ ಜಾನ್ವಿ ಕಪೂರ್ ಕಳವಳ
ಜಾನ್ವಿ ಕಪೂರ್
TV9 Web
| Updated By: ಮದನ್​ ಕುಮಾರ್​|

Updated on: Jan 06, 2022 | 8:57 AM

Share

ದೇಶದಲ್ಲಿ ಒಮಿಕ್ರಾನ್​ ಪ್ರಕರಣಗಳ ಸಂಖ್ಯೆ (Omicron Cases in India) ಹೆಚ್ಚಳ ಆಗುತ್ತಿರುವುದು ಆತಂಕಕ್ಕೆ ಕಾರಣ ಆಗಿದೆ. ಹೊಸ ಹೊಸ ರೂಪದಲ್ಲಿ ಕೊರೊನಾ ವೈರಲ್​ ಕಾಟ ಕೊಡುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರಗಳು ಕಠಿಣ ನಿಯಮಗಳನ್ನು ಜಾರಿ ಮಾಡಿವೆ. ಇದರಿಂದ ಅನೇಕ ಉದ್ಯಮಗಳ ಮೇಲೆ ಪರಿಣಾಮ ಬೀರುತ್ತಿದೆ. ಚಿತ್ರರಂಗ ಕೂಡ ಇದರಿಂದ ತತ್ತರಿಸುತ್ತಿದೆ. ಕೋಟ್ಯಂತರ ರೂಪಾಯಿ ವಹಿವಾಟು ನಡೆಸುವ ಚಿತ್ರೋದ್ಯಮಕ್ಕೆ ಈಗಾಗಲೇ ಎರಡು ಲಾಕ್​ಡೌನ್​ನಿಂದ ನಷ್ಟ ಆಗಿದೆ. ಮೂರನೆ ಅಲೆಯಲ್ಲಿ ಜನರ ಪರಿಸ್ಥಿತಿ ಏನಾಗಲಿದೆಯೋ ಎಂದು ನಟಿ ಜಾನ್ವಿ ಕಪೂರ್ (Janhvi Kapoor)​ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಬಾಲಿವುಡ್​ನಲ್ಲಿ ಜಾನ್ವಿ ಕಪೂರ್ ಅವರು ನಿಧಾನಕ್ಕೆ ನೆಲೆ ಕಂಡುಕೊಳ್ಳುತ್ತಿದ್ದಾರೆ. ಶ್ರೀದೇವಿ ಪುತ್ರಿ ಎಂಬ ಕಾರಣಕ್ಕೆ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿದೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ಗೆಲುವು ಪಡೆಯುವುದು ಇನ್ನೂ ಬಾಕಿ ಇದೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಜಾನ್ವಿ ಕಪೂರ್​ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಒಮಿಕ್ರಾನ್​ ಪ್ರಕರಣಗಳ ಸಂಖ್ಯೆ ಹೆಚ್ಚಾದರೆ ಜನರ ಪರಿಸ್ಥಿತಿ ಏನಾಗಬಹುದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಒಮಿಕ್ರಾನ್​ ಹರಡುವುದನ್ನು ತಪ್ಪಿಸಲು ಹಲವು ರಾಜ್ಯಗಳಲ್ಲಿ ವೀಕೆಂಡ್​ ಕರ್ಫ್ಯೂ ಜಾರಿ ಮಾಡಲಾಗಿದೆ. ನೈಟ್​ ಕರ್ಫ್ಯೂ ಸಹ ಜಾರಿಯಲ್ಲಿದೆ. ಕೆಲವು ಕಡೆಗಳಲ್ಲಿ ಶಾಲೆಗಳನ್ನು ಬಂದ್​ ಮಾಡಲಾಗಿದೆ. ಇದರಿಂದ ಕೋಟ್ಯಂತರ ಜನರ ಉದ್ಯೋಗಕ್ಕೆ ತೊಂದರೆ ಆಗಿದೆ. ಆರ್ಥಿಕ ಪರಿಸ್ಥಿತಿ ಕಷ್ಟ ಆಗುತ್ತಿದೆ. ಮುಂದೇನಪ್ಪಾ ಗತಿ ಎಂದು ಜಾನ್ವಿ ಕಪೂರ್​ ಆತಂಕ ಹೊರಹಾಕಿದ್ದಾರೆ.

ಸದ್ಯ ಜಾನ್ವಿ ಕಪೂರ್​ ಕೈಯಲ್ಲಿ ಅನೇಕ ಆಫರ್​ಗಳಿವೆ. ಇದೇ ಮೊದಲ ಬಾರಿಗೆ ಅವರು ತಮ್ಮ ತಂದೆ ಬೋನಿ ಕಪೂರ್​ ನಿರ್ಮಾಣ ಮಾಡಲಿರುವ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆ ಚಿತ್ರಕ್ಕೆ ‘ಮಿಲಿ’ ಎಂದು ಹೆಸರು ಇಡಲಾಗಿದೆ. ಅಪ್ಪನ ಜತೆ ಕೆಲಸ ಮಾಡಲು ಅವಕಾಶ ಸಿಕ್ಕಿರುವುದಕ್ಕೆ ಅವರು ಖುಷಿ ವ್ಯಕ್ತಪಡಿಸಿದ್ದಾರೆ. ಬಾಲಿವುಡ್​ನಲ್ಲಿ ಬೇರೂರಿರುವ ನೆಪೋಟಿಸಂ ಚರ್ಚೆಯಲ್ಲೂ ಜಾನ್ವಿ ಕಪೂರ್​ ಹೆಸರು ಪದೇಪದೇ ಕೇಳಿಬರುತ್ತದೆ. ಫಿಲ್ಮಿ ಕುಟುಂಬದ ಹಿನ್ನೆಲೆಯಿಂದ ಬಂದಿರುವುದರಿಂದ ಅವರಿಗೆ ಸುಲಭವಾಗಿ ಅವಕಾಶಗಳು ಸಿಗುತ್ತಿವೆ.

ಇದನ್ನೂ ಓದಿ:

‘ಏಕ್​ ಲವ್​ ಯಾ’ ಚಿತ್ರ ನೋಡಲು ಕಾದಿದ್ದ ಪ್ರೇಕ್ಷಕರಿಗೆ ಬೇಸರ; ರಿಲೀಸ್​ ದಿನಾಂಕ ಮುಂದೂಡಿಕೆ​

‘ರಾಧೆ ಶ್ಯಾಮ್​’ ರಿಲೀಸ್​ ದಿನಾಂಕ ಮುಂದಕ್ಕೆ; ಸಂಕ್ರಾಂತಿ ರೇಸ್​ನಿಂದ ಹಿಂದೆ ಸರಿದ ಪ್ರಭಾಸ್ ಸಿನಿಮಾ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ