Janhvi Kapoor: ‘ಅವಕಾಶ ಇದೆ ಆದರೆ ಗೌರವ ಮಾತ್ರ ಸಿಗುತ್ತಿಲ್ಲ’; ನಟಿ ಜಾನ್ವಿ ಕಪೂರ್ ಬೇಸರದ ನುಡಿ

ನನ್ನ ಸಾಮರ್ಥ್ಯದ ಬಗ್ಗೆ ನನಗೆ ತಿಳಿದಿದೆ. ನನ್ನನ್ನು ಸಾಬೀತುಪಡಿಸಿಕೊಳ್ಳಲು ಹಾಗೂ ಹೊಸ ಚಾಲೆಂಜ್​ಗಳನ್ನು ತೆಗೆದುಕೊಳ್ಳಲು ನಾನು ಬಯಸುತ್ತೇನೆ ಎಂದಿದ್ದಾರೆ ಜಾನ್ವಿ.

Janhvi Kapoor: ‘ಅವಕಾಶ ಇದೆ ಆದರೆ ಗೌರವ ಮಾತ್ರ ಸಿಗುತ್ತಿಲ್ಲ’; ನಟಿ ಜಾನ್ವಿ ಕಪೂರ್ ಬೇಸರದ ನುಡಿ
ಜಾನ್ವಿ
Follow us
ರಾಜೇಶ್ ದುಗ್ಗುಮನೆ
|

Updated on:Mar 06, 2023 | 8:56 AM

ನಟಿ ಜಾನ್ವಿ ಕಪೂರ್ (Janhvi Kapoor) ಅವರು ಖ್ಯಾತ ನಿರ್ಮಾಪಕ ಬೋನಿ ಕಪೂರ್ ಹಾಗೂ ನಟಿ ಶ್ರೀದೇವಿ ಮಗಳು. ಸ್ಟಾರ್ ಕಿಡ್ ಎಂಬುದು ಅವರಿಗೆ ವರ ಹಾಗೂ ಶಾಪ ಎರಡೂ ಹೌದು. ಸ್ಟಾರ್ ನಟಿ ಎನ್ನುವ ಕಾರಣಕ್ಕೆ ಅವರಿಗೆ ಆಫರ್ ಸಿಗುತ್ತಿದೆ ನಿಜ. ಆದರೆ, ಪ್ರೇಕ್ಷಕರಿಂದ ಗೌರವ ಸಿಗುತ್ತಿಲ್ಲ. ಈ ವಿಚಾರದಲ್ಲಿ ಅವರಿಗೆ ಬೇಸರ ಇದೆ. ಗೌರವ ಗಳಿಸುವ ನಿಟ್ಟಿನಲ್ಲಿ ಜಾನ್ವಿ ಕೆಲಸ ಮಾಡುತ್ತಿದ್ದಾರೆ. ಈ ಬಗ್ಗೆ ಜಾನ್ವಿ ಅವರು ಮಾತನಾಡಿದ್ದಾರೆ.

ಮಹಿಳಾ ಆಯೋಗದ ಕಾರ್ಯಕ್ರಮದಲ್ಲಿ ಬರ್ಖಾ ದತ್ ಜೊತೆ ಮಾತನಾಡಿರುವ ಜಾನ್ವಿ ಕಪೂರ್ ಈ ವಿಚಾರ ಹೇಳಿಕೊಂಡಿದ್ದಾರೆ. ‘ನೀವು ಸ್ಕ್ರಿಪ್ಟ್ ಆಯ್ಕೆ ಮಾಡುವಾಗ ಗಮನಿಸುವ ಅಂಶಗಳು ಯಾವವು’ ಎಂದು ಜಾನ್ವಿಗೆ ಪ್ರಶ್ನೆ ಮಾಡಲಾಯಿತು. ಇದಕ್ಕೆ ಜಾನ್ವಿ ಉತ್ತರಿಸಿದ್ದಾರೆ. ‘ನನ್ನ ಸಾಮರ್ಥ್ಯದ ಬಗ್ಗೆ ನನಗೆ ತಿಳಿದಿದೆ. ನನ್ನನ್ನು ಸಾಬೀತುಪಡಿಸಿಕೊಳ್ಳಲು ಹಾಗೂ ಹೊಸ ಚಾಲೆಂಜ್​ಗಳನ್ನು ತೆಗೆದುಕೊಳ್ಳಲು ನಾನು ಬಯಸುತ್ತೇನೆ. ನನಗೆ ಸಾಕಷ್ಟು ಅವಕಾಶಗಳು ಸಿಕ್ಕಿವೆ. ಆದರೆ, ನಾನು ಇನ್ನೂ ಜನರಿಂದ ಗೌರವವನ್ನು ಗಳಿಸಲು ಸಾಧ್ಯವಾಗಿಲ್ಲ. ನಾನು ಅದಕ್ಕಾಗಿಯೇ ಕೆಲಸ ಮಾಡುತ್ತಿದ್ದೇನೆ ಅನ್ನೋದು ನನ್ನ ಅಭಿಪ್ರಾಯ. ಒಂದು ವ್ಯಕ್ತಿಯ ಮೇಲೆ ಅಭಿಪ್ರಾಯ ಮೂಡುವುದು ಮತ್ತು ಆ ಅಭಿಪ್ರಾಯವನ್ನು ಬದಲಿಸುವುದಕ್ಕೆ ಸಾಕಷ್ಟು ಸಮಯ ಬೇಕಾಗುತ್ತದೆ’ ಎಂದಿದ್ದಾರೆ ಅವರು.

 ಜಾನ್ವಿ ವೃತ್ತಿ ಬದುಕು

ಜಾನ್ವಿ ಚಿತ್ರರಂಗಕ್ಕೆ ಕಾಲಿಟ್ಟು ಐದು ವರ್ಷಗಳು ಕಳೆದಿವೆ. ‘ಧಡಕ್​’ ಅವರ ನಟನೆಯ ಮೊದಲ ಸಿನಿಮಾ. ಕರಣ್ ಜೋಹರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದರು. ಈ ಚಿತ್ರ ಸಾಧಾರಣ ಯಶಸ್ಸು ಕಂಡಿತ್ತು. ಆದರೆ ನಂತರ ಬಂದ ಚಿತ್ರಗಳು ಯಾವುದೂ ಯಶಸ್ಸು ಕಾಣಲೇ ಇಲ್ಲ. 2022ರಲ್ಲಿ ‘ಗುಡ್​ ಲಕ್ ಜೆರ್ರಿ’ ಹಾಗೂ ‘ಮಿಲಿ’ ಚಿತ್ರಗಳು ರಿಲೀಸ್ ಆಗಿ ಒಳ್ಳೆಯ ವಿಮರ್ಶೆ ಪಡೆಯುವಲ್ಲಿ ಸೋತವು.

ಇದನ್ನೂ ಓದಿ: ವ್ಯಕ್ತಿಯ ಬಾಯಿಗೆ ಟೇಪ್ ಹಾಕಿ ಕಾರಿನ ಡಿಕ್ಕಿಯಲ್ಲಿ ತುಂಬಿದ ರಾಣಾ-ಜಾನ್ವಿ; ಲೀಕ್ ಆಯ್ತು ಸ್ಪೈ ವಿಡಿಯೋ

ಸದ್ಯ ಎರಡು ಚಿತ್ರಗಳ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ. ‘ಬವಾಲ್​’ ಹಾಗೂ ‘ಮಿಸ್ಟರ್ ಆ್ಯಂಡ್ ಮಿಸಸ್​ ಮಾಹಿ’ ಚಿತ್ರದ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ. ‘ಮಿಸ್ಟರ್ ಆ್ಯಂಡ್ ಮಿಸಸ್​ ಮಾಹಿ’ ಇದು ಕ್ರೀಡಾಧಾರಿತ ಚಿತ್ರ ಆಗಿದ್ದು, ಇದಕ್ಕಾಗಿ ಜಾನ್ವಿ ಕ್ರಿಕೆಟ್ ತರಬೇತಿ ಪಡೆದುಕೊಳ್ಳುತ್ತಿದ್ದಾರೆ. ಈ ಫೋಟೋಗಳು ವೈರಲ್ ಆಗಿದ್ದವು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:51 am, Mon, 6 March 23

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು