ಶಿಖರ್ ಪಹಾರಿಯಾ ಜೊತೆ ಗುಟ್ಟಾಗಿ ಎಂಗೇಜ್​ಮೆಂಟ್ ಮಾಡಿಕೊಂಡ ಜಾನ್ವಿ ಕಪೂರ್? ವೈರಲ್ ಆಯ್ತು ವಿಡಿಯೋ

ಜಾನ್ವಿ ಕಪೂರ್ ಅವರು ಶಿಖಾರ್ ಪಹಾರಿಯಾ ಜೊತೆ ಆಗಾಗ ಕಾಣಿಸಿಕೊಳ್ಳುತ್ತಾರೆ. ಇವರಿಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಮೊದಲಿನಿಂದಲೂ ಇದೆ. ಆದರೆ, ಇದನ್ನು ಈ ಜೋಡಿ ಒಪ್ಪಿಕೊಂಡಿಲ್ಲ. ಈ ಬಗ್ಗೆ ಅವರು ಮಾಧ್ಯಮಗಳಿಗೂ ಸ್ಪಷ್ಟನೆ ಕೊಟ್ಟಿಲ್ಲ. ಈಗ ಜಾನ್ವಿ ಕಪೂರ್ ಗುಟ್ಟಾಗಿ ಎಂಗೇಜ್​ಮೆಂಟ್ ಮಾಡಿಕೊಂಡರಾ ಎನ್ನುವ ಪ್ರಶ್ನೆ ಮೂಡಿದೆ.

ಶಿಖರ್ ಪಹಾರಿಯಾ ಜೊತೆ ಗುಟ್ಟಾಗಿ ಎಂಗೇಜ್​ಮೆಂಟ್ ಮಾಡಿಕೊಂಡ ಜಾನ್ವಿ ಕಪೂರ್? ವೈರಲ್ ಆಯ್ತು ವಿಡಿಯೋ
ಜಾನ್ವಿ ಕಪೂರ್

Updated on: Aug 31, 2023 | 7:06 AM

ನಟಿ ಜಾನ್ವಿ ಕಪೂರ್ (Janhvi Kapoor) ಅವರು ನಾನಾ ಕಾರಣಕ್ಕೆ ಸುದ್ದಿಯಲ್ಲಿರುತ್ತಾರೆ. ಸ್ಟಾರ್ ಕುಡಿ ಎನ್ನುವ ಕಾರಣಕ್ಕೆ ಅವರಿಗೆ ಬೇಡಿಕೆ ಇದೆ. ಆದರೆ, ಅವರ ಸಿನಿಮಾಗಳು ಅಂದುಕೊಂಡ ಮಟ್ಟಿಗೆ ಬಿಸ್ನೆಸ್ ಮಾಡುತ್ತಿಲ್ಲ ಎನ್ನುವ ಬೇಸರವೂ ಇದೆ. ಈಗ ಜಾನ್ವಿ ಕಪೂರ್ ಗುಟ್ಟಾಗಿ ಎಂಗೇಜ್​ಮೆಂಟ್ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದೆ. ಈ ಬಗ್ಗೆ ನಟಿಯ ಆಪ್ತರು ಸ್ಪಷ್ಟನೆ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ. ಜಾನ್ವಿ ಕೈಯಲ್ಲಿ ಡೈಮಂಡ್ ರಿಂಗ್ ಕಾಣಿಸಿದ್ದೇ ಇದಕ್ಕೆಲ್ಲ ಕಾರಣ.

ಜಾನ್ವಿ ಕಪೂರ್ ಅವರು ಶಿಖಾರ್ ಪಹಾರಿಯಾ ಜೊತೆ ಆಗಾಗ ಕಾಣಿಸಿಕೊಳ್ಳುತ್ತಾರೆ. ಇವರಿಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಮೊದಲಿನಿಂದಲೂ ಇದೆ. ಆದರೆ, ಇದನ್ನು ಈ ಜೋಡಿ ಒಪ್ಪಿಕೊಂಡಿಲ್ಲ. ಈ ಬಗ್ಗೆ ಅವರು ಮಾಧ್ಯಮಗಳಿಗೂ ಸ್ಪಷ್ಟನೆ ಕೊಟ್ಟಿಲ್ಲ. ಈಗ ಜಾನ್ವಿ ಕಪೂರ್ ಗುಟ್ಟಾಗಿ ಎಂಗೇಜ್​ಮೆಂಟ್ ಮಾಡಿಕೊಂಡರಾ ಎನ್ನುವ ಪ್ರಶ್ನೆ ಮೂಡಿದೆ.

ಜಾನ್ವಿ ಕಪೂರ್ ಅವರು ಇತ್ತೀಚೆಗೆ ತಿರುಪತಿಗೆ ಭೇಟಿ ನೀಡಿದ್ದರು. ಆಗ ಅವರು ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದರು. ಶಿಖರ್ ಬಿಳಿ ಪಂಚೆ ಉಟ್ಟು ಹೆಗಲಿಗೆ ಶಾಲು ಹೊದ್ದುಕೊಂಡಿದ್ದರು. ಇನ್ನು ಜಾನ್ವಿ ಕೈಯಲ್ಲಿ ಉಂಗುರ ಕೂಡ ಕಾಣಿಸಿದೆ. ಇದು ಸಾಕಷ್ಟು ಅನುಮಾನ ಹುಟ್ಟುಹಾಕಿದೆ. ‘ಜಾನ್ವಿ ಗುಟ್ಟಾಗಿ ಎಂಗೇಜ್​ಮೆಂಟ್ ಮಾಡಿಕೊಂಡಿದ್ದಾರೆ’ ಎಂಬಿತ್ಯಾದಿ ಕಮೆಂಟ್​ಗಳು ಬಂದಿವೆ.

ಇದನ್ನೂ ಓದಿ:  ಸೀರೆ ಉಟ್ಟು ತಿರುಪತಿಗೆ ಭೇಟಿ ಕೊಟ್ಟ ನಟಿ ಜಾನ್ವಿ ಕಪೂರ್; ‘ದೇವರ’ ಶೂಟಿಂಗ್​ ಮುನ್ನ ದೇವರ ದರ್ಶನ

ಆದರೆ, ಇದು ನಿಜ ಅಲ್ಲ ಎನ್ನುತ್ತಿವೆ ಜಾನ್ವಿ ಕಪೂರ್ ಅವರ ಆಪ್ತ ಬಳಗ. ‘ದೇವರಿಗೆ ಪೂಜೆ ಸಲ್ಲಿಸಲು ಅವರು ಅಲ್ಲಿಗೆ ತೆರಳಿದ್ದರು. ಯಾವುದೇ ನಿಶ್ಚಿತಾರ್ಥ ನಡೆದಿಲ್ಲ’ ಎಂಬ ಸ್ಪಷ್ಟನೆ ಸಿಕ್ಕಿರುವುದಾಗಿ ವರದಿ ಆಗಿದೆ. ಜಾನ್ವಿ ಕಪೂರ್ ಸ್ಟಾರ್ ಕುಡಿ. ಹೀಗಾಗಿ, ಗುಟ್ಟಾಗಿ ನಿಶ್ಚಿತಾರ್ಥ ನಡೆಸಿದರೂ ಒಂದಲ್ಲಾ ಒಂದು ರೀತಿಯಲ್ಲಿ ಆ ವಿಚಾರ ಹೊರ ಬಂದೇ ಬರುತ್ತದೆ. ಹೀಗಾಗಿ, ಗುಟ್ಟಾಗಿ ಎಂಗೇಜ್​ಮೆಂಟ್ ಮಾಡುವ ಯಾವುದೇ ಅವಶ್ಯಕತೆ ಇಲ್ಲ.

ಜಾನ್ವಿ ಕಪೂರ್​ ‘ಧಡಕ್’ ಸಿನಿಮಾದಿಂದ ಬಣ್ಣದ ಬದುಕು ಆರಂಭಿಸಿದರು. ಆ ಬಳಿಕ ಹಲವು ಸಿನಿಮಾಗಳಲ್ಲಿ ಅವರು ನಟಿಸಿದರು. ಸದ್ಯ ಒಂದೆರಡು ಸಿನಿಮಾ ಒಪ್ಪಿಕೊಂಡು ಅವರು ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us