AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್ ಚರಣ್ ವ್ಯಕ್ತಿತ್ವವನ್ನು ಕೊಂಡಾಡಿದ ನಟಿ ಜಾನ್ಹವಿ, ಹೇಳಿದ್ದೇನು?

Janhvi Kapoor-Ram Charan: ಜಾನ್ಹವಿ ಕಪೂರ್ ಬಾಲಿವುಡ್​​ನ ಸ್ಟಾರ್ ನಟಿ. ಇತ್ತೀಚೆಗೆ ದಕ್ಷಿಣ ಭಾರತದ ಸಿನಿಮಾಗಳಲ್ಲಿಯೂ ಅವಕಾಶ ಪಡೆದುಕೊಳ್ಳುತ್ತಿದ್ದಾರೆ. ರಾಮ್ ಚರಣ್ ಜೊತೆಗೆ ‘ಪೆದ್ದಿ’ ಸಿನಿಮಾನಲ್ಲಿ ಜಾನ್ಹವಿ ಕಪೂರ್ ನಟಿಸಿದ್ದು, ಬಾಲಿವುಡ್​ ಸಿನಿಮಾದ ಪ್ರಚಾರದ ವೇಳೆ ಅವರು ‘ಪೆದ್ದಿ’ ಸಿನಿಮಾ ಬಗ್ಗೆ, ರಾಮ್ ಚರಣ್ ಬಗ್ಗೆ ಮಾತನಾಡಿದ್ದಾರೆ.

ರಾಮ್ ಚರಣ್ ವ್ಯಕ್ತಿತ್ವವನ್ನು ಕೊಂಡಾಡಿದ ನಟಿ ಜಾನ್ಹವಿ, ಹೇಳಿದ್ದೇನು?
Janhvi Kapoor Ram Charan
ಮಂಜುನಾಥ ಸಿ.
|

Updated on:Oct 01, 2025 | 12:02 PM

Share

ಬಾಲಿವುಡ್ ಯುವ ನಟಿ ಜಾನ್ಹವಿ ಕಪೂರ್, ಜಾನ್ಹವಿಗೆ ಈ ವರೆಗೆ ಭಾರಿ ದೊಡ್ಡ ಯಶಸ್ಸು ದೊರೆತಿಲ್ಲ ಹಾಗೆಂದು ಅವರ ಬೇಡಿಕೆ ತುಸುವೂ ಕಡಿಮೆ ಆಗಿಲ್ಲ. ಬಾಲಿವುಡ್​​ನಲ್ಲಿ ಒಂದರ ಹಿಂದೊಂದು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ ಜಾನ್ಹವಿ. ಇತ್ತೀಚೆಗೆ ದಕ್ಷಿಣ ಭಾರತದ ಸಿನಿಮಾಗಳಲ್ಲಿಯೂ ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ. ಜೂ ಎನ್​​ಟಿಆರ್ ನಟನೆಯ ‘ದೇವರ’ ಸಿನಿಮಾ ಮೂಲಕ ದಕ್ಷಿಣ ಭಾರತ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಜಾನ್ಹವಿ ಕಪೂರ್, ಇದೀಗ ರಾಮ್ ಚರಣ್ ಜೊತೆಗೆ ‘ಪೆದ್ದಿ’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗಿನ ಸಂದರ್ಶನದಲ್ಲಿ ‘ಪೆದ್ದಿ’ ಸಿನಿಮಾ ಮತ್ತು ರಾಮ್ ಚರಣ್ ಅವರ ವ್ಯಕ್ತಿತ್ವ ಕುರಿತು ಮಾತನಾಡಿದ್ದಾರೆ.

‘ಪೆದ್ದಿ’ ಸಿನಿಮಾನಲ್ಲಿ ನನ್ನದು ಬಹಳ ವಿಭಿನ್ನವಾದ ಪಾತ್ರ. ಅದು ಸಾಮಾನ್ಯ ನಾಯಕಿಯ ರೀತಿಯ ಪಾತ್ರವಲ್ಲ. ನಿರ್ದೇಶಕ ಬುಚ್ಚಿ ಬಾಬು ಸನಾ ಅವರು ಸಾಕಷ್ಟು ದೂರದೃಷ್ಟಿ ಇರುವ ನಿರ್ದೇಶಕ, ನನ್ನ ಪಾತ್ರವನ್ನು ಬಹಳ ವಿಭಿನ್ನವಾಗಿ, ಪ್ರತ್ಯೇಕತೆಯಿಂದ ಕೂಡಿರುವಂತೆ ವಿನ್ಯಾಸ ಮಾಡಿದ್ದಾರೆ. ಸಿನಿಮಾದ ಚಿತ್ರೀಕರಣದ ವೇಳೆ ನಾನು ಸಾಕಷ್ಟು ಎಂಜಾಯ್ ಮಾಡುತ್ತಿದ್ದೇನೆ. ನನಗೆ ‘ಪೆದ್ದಿ’ ಸಿನಿಮಾದ ನನ್ನ ಪಾತ್ರದ ಮೇಲೆ ಸಾಕಷ್ಟು ವಿಶ್ವಾಸ ಇದೆ’ ಎಂದಿದ್ದಾರೆ ಜಾನ್ಹವಿ ಕಪೂರ್.

ಸಹ ನಟ ರಾಮ್ ಚರಣ್ ಬಗ್ಗೆ ಮಾತನಾಡಿರುವ ಜಾನ್ಹವಿ ಕಪೂರ್, ‘ಪೆದ್ದಿ’ ಸಿನಿಮಾದ ಭಾಗ ಆಗಿರುವುದಕ್ಕೆ ನನಗೆ ಬಹಳ ಖುಷಿಯಾಗಿದೆ. ರಾಮ್ ಚರಣ್ ಅದ್ಭುತವಾದ ಸಹ ನಟ, ಅವರಲ್ಲಿ ಅದ್ಭುತವಾದ ಎನರ್ಜಿ ಇದೆ, ನಿಜವಾದ ಜಂಟಲ್​​ಮ್ಯಾನ್ ವ್ಯಕ್ತಿತ್ವ ಅವರದ್ದು. ಅಷ್ಟು ದೊಡ್ಡ ಸ್ಟಾರ್ ಆಗಿದ್ದರೂ ಸಹ ಬಹಳ ವಿನಯದಿಂದ ನಡೆದುಕೊಳ್ಳುತ್ತಾರೆ. ವಿಧೇಯರಾಗಿ ಸೆಟ್​​ನಲ್ಲಿರುತ್ತಾರೆ, ಒಬ್ಬ ವಿದ್ಯಾರ್ಥಿಯ ರೀತಿ ಅವರು ಸೆಟ್​​ಗೆ ಬರುತ್ತಾರೆ’ ಎಂದಿದ್ದಾರೆ ಜಾನ್ಹವಿ.

ಇದನ್ನೂ ಓದಿ: ಮದುವೆ ಬಗ್ಗೆ ಮಾತನಾಡಿದ ಜಾನ್ಹವಿ ಕಪೂರ್, ನಟಿ ಹೇಳಿದ್ದೇನು?

‘ಪೆದ್ದಿ’ ಸಿನಿಮಾ ಅನ್ನು ಬುಚ್ಚಿ ಬಾಬು ಸನಾ ನಿರ್ದೇಶನ ಮಾಡುತ್ತಿದ್ದು, ರಾಮ್ ಚರಣ್, ಜಾನ್ಹವಿ ಹಾಗೂ ಕನ್ನಡದ ಸ್ಟಾರ್ ನಟ ಶಿವರಾಜ್ ಕುಮಾರ್ ಸಹ ಈ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಸಿನಿಮಾದ ಬಹು ಭಾಗ ಮೈಸೂರಿನಲ್ಲಿ ಚಿತ್ರೀಕರಣಗೊಂಡಿರುವುದು ವಿಶೇಷ. ಸಿನಿಮಾನಲ್ಲಿ ರಾಮ್ ಚರಣ್ ಹಳ್ಳಿ ಯುವಕನ ಪಾತ್ರದಲ್ಲಿ ನಟಿಸಿದ್ದು, ಕ್ರಿಕೆಟ್ ಆಟದ ಕತೆಯನ್ನು ಈ ಸಿನಿಮಾ ಒಳಗೊಂಡಿದೆ.

ಜಾನ್ಹವಿ ಕಪೂರ್ ಪ್ರಸ್ತುತ ಹಿಂದಿಯ ‘ಸನ್ನಿ ಸಂಸ್ಕಾರಿ ಕಿ ತುಲ್ಸಿ ಕುಮಾರಿ’ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾನಲ್ಲಿ ವರುಣ್ ಧವನ್, ಸಾನ್ಯಾ ಮಲ್ಹೋತ್ರಾ, ರೋಹಿತ್ ಸರಫ್, ಮನೀಶ್ ಮಲ್ಹೋತ್ರಾ ಇನ್ನೂ ಕೆಲವರು ನಟಿಸಿದ್ದಾರೆ. ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಿದ್ದು, ಚಿತ್ರತಂಡ ಪ್ರಚಾರದಲ್ಲಿ ಬ್ಯುಸಿಯಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:01 pm, Wed, 1 October 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್