ಬಾಲಿವುಡ್​ಗೆ ಕಾಲಿಡೋಕೆ ರೆಡಿ ಆದ ಸೂರ್ಯ; ಜೊತೆಯಾಗಲಿದ್ದಾರೆ ಜಾನ್ವಿ ಕಪೂರ್?

ರಾಕೇಶ್ ಓಂಪ್ರಕಾಶ್ ಮೆಹ್ರಾ ಅವರು ಹಿಂದಿಯಲ್ಲಿ ಸಿನಿಮಾ ಒಂದನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಸೂರ್ಯ ಅವರು ಹೀರೋ ಆಗಿ ನಟಿಸಲಿದ್ದಾರೆ. ಈ ಚಿತ್ರದಲ್ಲಿ ನಾಯಕಿಯಾಗಿ ಜಾನ್ವಿ ಕಪೂರ್ ಅವರನ್ನು ಆಯ್ಕೆ ಮಾಡಿಕೊಳ್ಳಲು ಪ್ಲಾನ್ ನಡೆದಿದೆ ಎನ್ನಲಾಗುತ್ತಿದೆ.

ಬಾಲಿವುಡ್​ಗೆ ಕಾಲಿಡೋಕೆ ರೆಡಿ ಆದ ಸೂರ್ಯ; ಜೊತೆಯಾಗಲಿದ್ದಾರೆ ಜಾನ್ವಿ ಕಪೂರ್?
ಜಾನ್ವಿ-ಸೂರ್ಯ
Follow us
ರಾಜೇಶ್ ದುಗ್ಗುಮನೆ
|

Updated on: Jan 17, 2024 | 3:16 PM

ನಟ ಸೂರ್ಯ ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಸದ್ಯ ಅವರು ‘ಕಂಗುವ’ ಸಿನಿಮಾ (Kanguva Movie) ಶೂಟ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾದಲ್ಲಿ ಅವರು ಹಲವು ಅವತಾರ ತಾಳಲಿದ್ದಾರೆ. ಈ ಸಿನಿಮಾ ಪೂರ್ಣಗೊಂಡ ಬಳಿಕ ಅವರು ಬಾಲಿವುಡ್​ನತ್ತ (Bollywood News) ಮುಖ ಮಾಡಲಿದ್ದಾರೆ ಎನ್ನಲಾಗಿದೆ. ಈ ಚಿತ್ರದ ಬಗ್ಗೆ ಹೊಸ ಹೊಸ ಅಪ್​​ಡೇಟ್ ಕೇಳಿ ಬರುತ್ತಿದೆ. ಈಗ ಕೇಳಿ ಬರುತ್ತಿರುವ ಮಾಹಿತಿ ಪ್ರಕಾರ ಸೂರ್ಯ ಅವರಿಗೆ ಜೊತೆಯಾಗಿ ಜಾನ್ವಿ ಕಪೂರ್ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ರಾಕೇಶ್ ಓಂಪ್ರಕಾಶ್ ಮೆಹ್ರಾ ಅವರು ಹಿಂದಿಯಲ್ಲಿ ಸಿನಿಮಾ ಒಂದನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಸೂರ್ಯ ಅವರು ಹೀರೋ ಆಗಿ ನಟಿಸಲಿದ್ದಾರೆ. ಈ ಚಿತ್ರದಲ್ಲಿ ನಾಯಕಿಯಾಗಿ ಜಾನ್ವಿ ಕಪೂರ್ ಅವರನ್ನು ಆಯ್ಕೆ ಮಾಡಿಕೊಳ್ಳಲು ಪ್ಲಾನ್ ನಡೆದಿದೆ ಎನ್ನಲಾಗುತ್ತಿದೆ. ಈ ಪಾತ್ರಕ್ಕೆ ಅವರು ಸೂಕ್ತ ಎನ್ನುವ ಆಲೋಚನೆ ರಾಕೇಶ್ ಅವರದ್ದು.

ಸೂರ್ಯ ಹಾಗೂ ರಾಕೇಶ್ ಒಟ್ಟಾಗಿ ಕೆಲಸ ಮಾಡುತ್ತಿರುವ ಸಿನಿಮಾ ಬಜೆಟ್ 500 ಕೋಟಿ ರೂಪಾಯಿಗೂ ಅಧಿಕವಾಗಿದೆ. ಈ ಸಿನಿಮಾ ಮೂಲಕ ಸೂರ್ಯ ಅವರು ಹಿಂದಿ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಕೆಲವು ಮೂಲಗಳ ಪ್ರಕಾರ ಇದು ‘ಮಹಾಭಾರತ’ವನ್ನು ಆಧರಿಸಿ ಸಿದ್ಧಗೊಳ್ಳುತ್ತಿರುವ ಸಿನಿಮಾ ಎನ್ನಲಾಗಿದೆ. ಇದರಲ್ಲಿ ಸೂರ್ಯ ಅವರು ಕರ್ಣನಾಗಿ ನಟಿಸುತ್ತಿದ್ದಾರಂತೆ.

ಇದನ್ನೂ ಓದಿ: ಹುಡುಗರು ಜಾನ್ವಿನ ​ನೋಡಿದಾಕ್ಷಣ ಮೊದಲು ಗಮನಿಸೋದೇನು? ಮುಚ್ಚುಮರೆ ಇಲ್ಲದೆ ಉತ್ತರಿಸಿದ ನಟಿ  

ಸದ್ಯ ಸೂರ್ಯ ನಟನೆಯ ‘ಕಂಗುವ’ ಸಾಕಷ್ಟು ಸದ್ದು ಮಾಡುತ್ತಿದೆ. ಈ ಚಿತ್ರದ ಟೀಸರ್ ಗಮನ ಸೆಳೆದಿದೆ. ಸೂರ್ಯ ಅವರು ಕಂಗುವಾ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅವರು ಹಲವು ಗೆಟಪ್​ಗಳಲ್ಲಿ ಬರಲಿದ್ದಾರೆ. ದಿಶಾ ಪಟಾಣಿ, ಬಾಬಿ ಡಿಯೋಲ್, ಜಗಪತಿ ಬಾಬು ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.  ಈ ಚಿತ್ರವನ್ನು ಶಿವ ನಿರ್ದೇಶನ ಮಾಡುತ್ತಿದ್ದಾರೆ. ಕಂಗುವಾ ಸಿನಿಮಾ 350 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್