AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jawan Prevue: ಮತ್ತೊಂದು ಮಾಸ್​ ಎಂಟರ್​ಟೇನ್​ಗೆ ರೆಡಿ ಆಗಿ; ‘ಜವಾನ್’ ಮೂಲಕ ಧೂಳೆಬ್ಬಿಸಲು ರೆಡಿ ಆದ ಶಾರುಖ್

Jawan Trailer: ಅಟ್ಲಿ ಅವರು ತಮಿಳು ಚಿತ್ರರಂಗದಲ್ಲಿ ಹೆಚ್ಚು ಗುರುತಿಸಿಕೊಂಡವರು. ಅವರು ‘ಜವಾನ್’ ಸಿನಿಮಾ ಮೂಲಕ ಬಾಲಿವುಡ್​ಗೆ ಕಾಲಿಡುತ್ತಿದ್ದಾರೆ. ಬಾಲಿವುಡ್​ನಲ್ಲಿ ಅವರ ಎಂಟ್ರಿ ಜೋರಾಗಿದೆ ಎಂಬುದಕ್ಕೆ ‘ಜವಾನ್’ಪ್ರಿವ್ಯೂ ಒಂದು ಒಳ್ಳೆಯ ಸ್ಯಾಂಪಲ್.

Jawan Prevue: ಮತ್ತೊಂದು ಮಾಸ್​ ಎಂಟರ್​ಟೇನ್​ಗೆ ರೆಡಿ ಆಗಿ; ‘ಜವಾನ್’ ಮೂಲಕ ಧೂಳೆಬ್ಬಿಸಲು ರೆಡಿ ಆದ ಶಾರುಖ್
ಶಾರುಖ್ ಖಾನ್
ರಾಜೇಶ್ ದುಗ್ಗುಮನೆ
|

Updated on: Jul 10, 2023 | 11:29 AM

Share

ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾ (Pathaan Movie) ಸೂಪರ್ ಹಿಟ್ ಆಯಿತು. ಈ ಚಿತ್ರವನ್ನು ಮೀರಿಸುವ ರೀತಿಯಲ್ಲಿ ‘ಜವಾನ್​’ (Jawaan Movie) ಸಿದ್ಧಗೊಳ್ಳುತ್ತಿದೆ. ಇದನ್ನು ನಾವು ಹೇಳುತ್ತಿಲ್ಲ. ‘ಜವಾನ್​’ ಪ್ರಿವ್ಯೂ ವಿಡಿಯೋ ನೋಡಿದ ಅನೇಕರು ಈ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಂದು (ಜುಲೈ 10) ‘ಜವಾನ್’ ಪ್ರಿವ್ಯೂ ರಿಲೀಸ್ ಆಗಿದೆ. ಮಾಸ್ ಎಂಟರ್​ಟೇನರ್ ಆಗಿ ಶಾರುಖ್ ಖಾನ್ ಮಿಂಚಿದ್ದಾರೆ. ನಟಿ ನಯನತಾರಾ ಕೂಡ ಟೀಸರ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅನಿರುದ್ಧ ರವಿಚಂದರ್ ಅವರ ಹಿನ್ನೆಲೆ ಸಂಗೀತ ಹೆಚ್ಚು ಅಂಕ ಗಿಟ್ಟಿಸಿಕೊಂಡಿದೆ.

ಅಟ್ಲಿ ಅವರು ತಮಿಳು ಚಿತ್ರರಂಗದಲ್ಲಿ ಹೆಚ್ಚು ಗುರುತಿಸಿಕೊಂಡವರು. ಅವರು ‘ಜವಾನ್’ ಸಿನಿಮಾ ಮೂಲಕ ಬಾಲಿವುಡ್​ಗೆ ಕಾಲಿಡುತ್ತಿದ್ದಾರೆ. ಬಾಲಿವುಡ್​ನಲ್ಲಿ ಅವರ ಎಂಟ್ರಿ ಜೋರಾಗಿದೆ ಎಂಬುದಕ್ಕೆ ‘ಜವಾನ್’ಪ್ರಿವ್ಯೂ ಒಂದು ಒಳ್ಳೆಯ ಸ್ಯಾಂಪಲ್. ಹಿಂದಿ, ತಮಿಳು, ತೆಲುಗು ಭಾಷೆಯಲ್ಲಿ ಈ ವಿಡಿಯೋ ಮೂಡಿಬಂದಿದೆ. ಶಾರುಖ್ ಖಾನ್ ಅವರನ್ನು ನೋಡಿ ಫ್ಯಾನ್ಸ್ ಮೆಚ್ಚಿಕೊಂಡಿದ್ದಾರೆ.

‘ನಾಮ್ ತೋ ಸುನಾ ಹೋಗಾ’ ಎಂಬ ಡೈಲಾಗ್​ನೊಂದಿಗೆ ಶಾರುಖ್ ಖಾನ್ ಅವರು ಎಂಟ್ರಿ ಕೊಟ್ಟಿದ್ದಾರೆ. ‘ಇದು ಆರಂಭ ಮಾತ್ರ’ ಎಂದು ಹೇಳುವ ಮೂಲಕ ಶಾರುಖ್ ಎಲ್ಲರ ಗಮನ ಸೆಳೆದಿದ್ದಾರೆ. ಸಿನಿಮಾ ಉದ್ದಕ್ಕೂ ಸಖತ್ ಆ್ಯಕ್ಷನ್ ಇರಲಿದೆ ಎಂಬುಕ್ಕೆ ‘ಜವಾನ್​’ ಪ್ರಿವ್ಯೂನಲ್ಲಿ ಸಾಕ್ಷಿ ಸಿಕ್ಕಿದೆ. ‘ನಾನು ವಿಲನ್ ಆದಾಗ ನನ್ನ ಎದುರು ಯಾವ ಹೀರೋಗಳು ಕಾಣೋಕೆ ಸಾಧ್ಯವಿಲ್ಲ’ ಎಂದು ಶಾರುಖ್ ಖಾನ್ ಹೇಳುವ ಡೈಲಾಗ್ ಗಮನ ಸೆಳೆದಿದೆ.

‘ಜವಾನ್’ ಸಿನಿಮಾದ ಟೈಟಲ್ ಹೇಳುವಂತೆ ಇದೊಂದು ಯೋಧನ ಕಥೆ. ದೇಶಕ್ಕಾಗಿ ಹೋರಾಡುವ ಸೈನಿಕನಾಗಿ ಶಾರುಖ್ ಖಾನ್ ಕಾಣಿಸಿಕೊಂಡಿದ್ದಾರೆ. ನಯನತಾರಾ ಕೂಡ ಇದೇ ರೀತಿಯ ಪಾತ್ರ ಮಾಡಿದ್ದಾರೆ ಎನ್ನಲಾಗುತ್ತಿದೆ. ಮತ್ತೊಂದು ಮಾಸ್ ಹಿಟ್ ಕೊಡೋಕೆ ಶಾರುಖ್ ಖಾನ್ ಅವರು ಸಿದ್ಧರಾದಂತಿದೆ. ಅಟ್ಲಿ ಅವರ ನಿರ್ದೇಶನದ ಮೇಲೂ ಭರವಸೆ ಮೂಡಿದೆ.

ಇದನ್ನೂ ಓದಿ: ಶಾರುಖ್ ಖಾನ್ ನಟನೆಯ ಜವಾನ್ ಸಿನಿಮಾದ ಟೀಸರ್ ಬಿಡುಗಡೆ ದಿನಾಂಕ ಘೋಷಣೆ

‘ಪಠಾಣ್’ ಸಿನಿಮಾ ಜನವರಿ ತಿಂಗಳಲ್ಲಿ ರಿಲೀಸ್ ಆಗಿ ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿತು. ಈ ಬಿಸ್ನೆಸ್​ ದಾಖಲೆಯನ್ನು ‘ಜವಾನ್’ ಮುರಿದರೂ ಅಚ್ಚರಿ ಏನಿಲ್ಲ ಎಂಬ ಮಾತು ವ್ಯಕ್ತವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಸದ್ಯ ‘jawanprevue’ ಹ್ಯಾಶ್​ಟ್ಯಾಗ್ ಟ್ರೆಂಡ್ ಆಗುತ್ತಿದೆ. ಸೆಪ್ಟೆಂಬರ್ 7ರಂದು ಸಿನಿಮಾ ತೆರೆಗೆ ಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ