ನಿರ್ದೇಶಕನ ತಾಯಿಗೆ ಗೌರವದಿಂದ ನಮಸ್ಕರಿಸಿದ ಶಾರುಖ್​ ಖಾನ್​; ವಿಡಿಯೋ ವೈರಲ್​

ಚೆನ್ನೈನಲ್ಲಿ ‘ಜವಾನ್​’ ಸಿನಿಮಾದ ಪ್ರೀ-ರಿಲೀಸ್​ ಇವೆಂಟ್​ ನಡೆಯಿತು. ಈ ಕಾರ್ಯಕ್ರಮದಲ್ಲಿ ಇಡೀ ತಂಡ ಭಾಗಿ ಆಗಿತ್ತು. ನಿರ್ದೇಶಕ ಅಟ್ಲಿ ಅವರು ತಮ್ಮ ತಾಯಿಯನ್ನು ವೇದಿಕೆಗೆ ಕರೆದುಕೊಂಡು ಬಂದು ಶಾರುಖ್​ ಖಾನ್​ಗೆ ಪರಿಚಯ ಮಾಡಿಕೊಟ್ಟರು. ಆಗ ಶಾರುಖ್​ ಖಾನ್ ಅವರು ಬಗ್ಗಿ ನಮಸ್ಕರಿಸಿದರು ಮತ್ತು ಪ್ರೀತಿಯಿಂದ ತಬ್ಬಿಕೊಂಡರು.

ನಿರ್ದೇಶಕನ ತಾಯಿಗೆ ಗೌರವದಿಂದ ನಮಸ್ಕರಿಸಿದ ಶಾರುಖ್​ ಖಾನ್​; ವಿಡಿಯೋ ವೈರಲ್​
ನಿರ್ದೇಶಕನ ತಾಯಿಗೆ ನಮಸ್ಕರಿಸಿದ ಶಾರುಖ್​ ಖಾನ್​

Updated on: Sep 05, 2023 | 11:00 AM

ನಟ ಶಾರುಖ್​ ಖಾನ್ (Shah Rukh Khan)​ ಅವರ ವ್ಯಕ್ತಿತ್ವ ಏನು ಎಂಬುದು ಹತ್ತಿರದಿಂದ ಒಡನಾಡಿದವರಿಗೆ ಚೆನ್ನಾಗಿ ತಿಳಿದಿದೆ. ಆ ಬಗ್ಗೆ ಅನೇಕ ಸೆಲೆಬ್ರಿಟಿಗಳು ಹೇಳಿಕೊಂಡಿದ್ದುಂಟು. ತಮ್ಮ ಮನೆಗೆ ಬರುವ ಅತಿಥಿಗಳನ್ನು ಶಾರುಖ್​ ಖಾನ್​ ಬಹಳ ಪ್ರೀತಿಯಿಂದ ಉಪಚರಿಸುತ್ತಾರೆ. ಅಲ್ಲದೇ, ತಮ್ಮ ಜೊತೆ ಕೆಲಸ ಮಾಡುವ ವ್ಯಕ್ತಿಗಳಿಗೆ ಮತ್ತು ಅವರ ಕುಟುಂಬದವರಿಗೂ ಶಾರುಖ್​ ಗೌರವ ನೀಡುತ್ತಾರೆ. ಅದಕ್ಕೆ ಲೇಟೆಸ್ಟ್​ ಉದಾಹರಣೆ ಎಂಬಂತೆ ಒಂದು ವಿಡಿಯೋ ವೈರಲ್​ ಆಗಿದೆ. ‘ಜವಾನ್​’ (Jawan) ಸಿನಿಮಾದ ನಿರ್ದೇಶಕ ಅಟ್ಲಿ (Atlee) ಅವರ ತಾಯಿಗೆ ಶಾರುಖ್​ ಖಾನ್​ ಅವರು ಬಹಳ ವಿನಯದಿಂದ ನಮಸ್ಕರಿಸಿದ್ದಾರೆ. ಅದನ್ನು ನೋಡಿ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಶಾರುಖ್​ ಖಾನ್​ ಅವರ ಫ್ಯಾನ್ಸ್​ ಸೋಶಿಯಲ್​ ಮೀಡಿಯಾದಲ್ಲಿ ಈ ವಿಡಿಯೋ ವೈರಲ್​ ಆಗಿದೆ.

ಆಗಸ್ಟ್​ 30ರಂದು ಚೆನ್ನೈನಲ್ಲಿ ‘ಜವಾನ್​’ ಸಿನಿಮಾದ ಪ್ರೀ-ರಿಲೀಸ್​ ಇವೆಂಟ್​ ನಡೆಯಿತು. ಈ ಕಾರ್ಯಕ್ರಮದಲ್ಲಿ ಇಡೀ ತಂಡ ಭಾಗಿ ಆಗಿತ್ತು. ನಿರ್ದೇಶಕ ಅಟ್ಲಿ ಅವರು ತಮ್ಮ ತಾಯಿಯನ್ನು ವೇದಿಕೆಗೆ ಕರೆದುಕೊಂಡು ಬಂದು ಶಾರುಖ್​ ಖಾನ್​ಗೆ ಪರಿಚಯ ಮಾಡಿಕೊಟ್ಟರು. ಆಗ ಶಾರುಖ್​ ಖಾನ್ ಅವರು ಬಗ್ಗಿ ನಮಸ್ಕರಿಸಿದರು ಮತ್ತು ಪ್ರೀತಿಯಿಂದ ತಬ್ಬಿಕೊಂಡರು. ಶಾರುಖ್​ ಖಾನ್​ ನಡೆದುಕೊಂಡ ರೀತಿಗೆ ಎಲ್ಲರೂ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಎಲ್ಲರಿಗೂ ಅವರು ಗೌರವ ನೀಡುವ ಪರಿಗೆ ಶ್ಲಾಘನೆ ವ್ಯಕ್ತವಾಗಿದೆ.

ಶಾರುಖ್​ ಖಾನ್​ ವೈರಲ್​ ವಿಡಿಯೋ:

ಸೆಪ್ಟೆಂಬರ್​ 7ರಂದು ‘ಜವಾನ್​’ ಸಿನಿಮಾ ಬಿಡುಗಡೆ ಆಗಲಿದೆ. ಶಾರುಖ್​ ಖಾನ್​ ಅವರ ‘ರೆಡ್​ ಚಿಲ್ಲೀಸ್​ ಎಂಟರ್​ಟೇನ್ಮೆಂಟ್​’ ಬ್ಯಾನರ್​ ಮೂಲಕ ಈ ಚಿತ್ರ ಅದ್ದೂರಿಯಾಗಿ ನಿರ್ಮಾಣ ಆಗಿದೆ. ಹಿಂದಿ, ತೆಲುಗು, ತಮಿಳು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ಈಗಾಗಲೇ ರಿಲೀಸ್​ ಆಗಿರುವ ಟ್ರೇಲರ್​ ಮತ್ತು ಸಾಂಗ್ ನೋಡಿ ಅಭಿಮಾನಿಗಳು ವಾವ್​ ಎನ್ನುತ್ತಿದ್ದಾರೆ. ಈ ಸಿನಿಮಾವನ್ನು ಅದ್ದೂರಿಯಾಗಿ ಸ್ವಾಗತಿಸಲು ಫ್ಯಾನ್ಸ್​ ಸಿದ್ಧತೆ ಮಾಡಿಕೊಂಡಿದ್ದಾರೆ. ಹಾಗಾಗಿ ಮೊದಲ ದಿನ ಈ ಚಿತ್ರಕ್ಕೆ ಭರ್ಜರಿ ಓಪನಿಂಗ್​ ಸಿಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ‘ಜವಾನ್​’ ಚಿತ್ರವನ್ನು ಗೆಲ್ಲಿಸಲೇಬೇಕು ಅಂತ ಪಣತೊಟ್ಟ ಶಾರುಖ್​ ಖಾನ್​ ಅಭಿಮಾನಿಗಳು; ಇಲ್ಲಿದೆ ದೊಡ್ಡ ಪ್ಲ್ಯಾನ್​

ಶಾರುಖ್​ ಖಾನ್​ ಅವರು ಇದೇ ಮೊದಲ ಬಾರಿಗೆ ನಿರ್ದೇಶಕ ಅಟ್ಲಿ ಜೊತೆ ಕೈ ಜೋಡಿಸಿದ್ದಾರೆ. ಘಟಾನುಘಟಿ ತಂತ್ರಜ್ಞರು ‘ಜವಾನ್​’ ಸಿನಿಮಾದ ತೆರೆಹಿಂದೆ ಕೆಲಸ ಮಾಡಿದ್ದಾರೆ. ಹಾಲಿವುಡ್​ನ ಸಾಹಸ ನಿರ್ದೇಶಕರು ಈ ಸಿನಿಮಾ ಫೈಟಿಂಗ್​ ದೃಶ್ಯಗಳನ್ನು ಕಟ್ಟಿಕೊಟ್ಟಿದ್ದಾರೆ. ಅದರ ಝಲಕ್​ ಈಗಾಗಲೇ ಟ್ರೇಲರ್​ ಮತ್ತು ಪ್ರಿವ್ಯೂ ವಿಡಿಯೋದಲ್ಲಿ ಕಾಣಿಸಿದೆ. ನಯನತಾರಾ, ದೀಪಿಕಾ ಪಡುಕೋಣೆ, ವಿಜಯ್​ ಸೇತುಪತಿ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ಶಾರುಖ್​ ಖಾನ್​ ಜೊತೆ ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us