7 ದಿನಕ್ಕೆ ಭಾರತದ ಬಾಕ್ಸ್​ ಆಫೀಸ್​ನಲ್ಲಿ 368 ಕೋಟಿ ರೂಪಾಯಿ ಗಳಿಸಿದ ‘ಜವಾನ್​’ ಚಿತ್ರ

‘ಜವಾನ್​’ ಸಿನಿಮಾದಲ್ಲಿ ಶಾರುಖ್​ ಖಾನ್​ ಅವರು ಆ್ಯಕ್ಷನ್​ ಹೀರೋ ಆಗಿ ಅಭಿಮಾನಿಗಳನ್ನು ರಂಜಿಸಿದ್ದಾರೆ. ಅವರ ಮಾಡಿರುವ ದ್ವಿಪಾತ್ರಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ಸಿಕ್ಕಿದೆ. ಅವರ ಜೊತೆ ನಟಿಸಿರುವ ದೀಪಿಕಾ ಪಡುಕೋಣೆ, ವಿಜಯ್​ ಸೇತುಪತಿ, ನಯನತಾರಾ, ಸಾನ್ಯಾ ಮಲ್ಹೋತ್ರಾ, ಪ್ರಿಯಾಮಣಿ ಮುಂತಾದವರ ಪಾತ್ರಗಳು ಕೂಡ ಹೈಲೈಟ್​ ಆಗಿವೆ.

7 ದಿನಕ್ಕೆ ಭಾರತದ ಬಾಕ್ಸ್​ ಆಫೀಸ್​ನಲ್ಲಿ 368 ಕೋಟಿ ರೂಪಾಯಿ ಗಳಿಸಿದ ‘ಜವಾನ್​’ ಚಿತ್ರ
ಶಾರುಖ್​ ಖಾನ್​
Follow us
ಮದನ್​ ಕುಮಾರ್​
|

Updated on: Sep 14, 2023 | 11:16 AM

ನಟ ಶಾರುಖ್​ ಖಾನ್​ (Shah Rukh Khan) ಅವರು ಸೂಪರ್​ ಸಕ್ಸಸ್​ ಕಂಡಿದ್ದಾರೆ. ‘ಪಠಾಣ್​’ ಸಿನಿಮಾದಿಂದ ಭರ್ಜರಿಯಾಗಿ ಕಮ್​ಬ್ಯಾಕ್​ ಮಾಡಿದ್ದ ಅವರು ಈಗ ಮತ್ತೊಮ್ಮೆ ‘ಜವಾನ್​’ (Jawan Movie) ಚಿತ್ರದಿಂದ ಯಶಸ್ಸು ಕಂಡಿದ್ದಾರೆ. ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ ಅಬ್ಬರಿಸುತ್ತಿದೆ. ಪ್ರತಿ ದಿನವೂ ಬಹುಕೋಟಿ ರೂಪಾಯಿ ಕಲೆಕ್ಷನ್​ ಮಾಡುತ್ತ ಮುನ್ನುಗ್ಗುತ್ತಿದೆ. ‘ಜವಾನ್​’ ತೆರೆಕಂಡು ಒಂದು ವಾರ ಕಳೆದಿದೆ. 7 ದಿನದಲ್ಲಿ ಭಾರತದ ಮಾರುಕಟ್ಟೆಯಲ್ಲಿ ಈ ಸಿನಿಮಾಗೆ ಬರೋಬ್ಬರಿ 386 ಕೋಟಿ ರೂಪಾಯಿ ಗಳಿಕೆ (Jawan Movie Collection) ಆಗಿದೆ. ಇದರಿಂದ ಶಾರುಖ್​ ಖಾನ್​ ಮುಖದಲ್ಲಿ ನಗು ಮೂಡಿದೆ. ಅವರ ಮುಂಬರುವ ಸಿನಿಮಾಗಳ ಮೇಲೆ ಜನರು ದೊಡ್ಡ ನಿರೀಕ್ಷೆ ಇಟ್ಟುಕೊಳ್ಳುವಂತಾಗಿದೆ. ನಿರ್ದೇಶಕ ಅಟ್ಲಿ ಅವರಿಗೆ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬೇಡಿಕೆ ಹೆಚ್ಚಾಗಿದೆ.

‘ಜವಾನ್​’ ಸಿನಿಮಾದಲ್ಲಿ ಶಾರುಖ್​ ಖಾನ್​ ಅವರು ಆ್ಯಕ್ಷನ್​ ಹೀರೋ ಆಗಿ ಅಭಿಮಾನಿಗಳನ್ನು ರಂಜಿಸಿದ್ದಾರೆ. ಅವರ ಮಾಡಿರುವ ದ್ವಿಪಾತ್ರಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ಸಿಕ್ಕಿದೆ. ಅವರ ಜೊತೆ ನಟಿಸಿರುವ ದೀಪಿಕಾ ಪಡುಕೋಣೆ, ವಿಜಯ್​ ಸೇತುಪತಿ, ನಯನತಾರಾ, ಸಾನ್ಯಾ ಮಲ್ಹೋತ್ರಾ, ಪ್ರಿಯಾಮಣಿ ಮುಂತಾದವರ ಪಾತ್ರಗಳು ಕೂಡ ಹೈಲೈಟ್​ ಆಗಿವೆ. ಹಿಂದಿ ಪ್ರೇಕ್ಷಕರಿಗೆ ಈ ಸಿನಿಮಾ ತುಂಬ ಇಷ್ಟ ಆಗಿದೆ. ಮೊದಲ ದಿನ ಭರ್ಜರಿ ಓಪನಿಂಗ್ ಪಡೆದುಕೊಂಡ ‘ಜವಾನ್​’ ಸಿನಿಮಾ ನೂರಾರು ಕೋಟಿ ರೂಪಾಯಿ ಕಲೆಕ್ಷನ್​ ಮಾಡುತ್ತಿದೆ.

ಇದನ್ನೂ ಓದಿ: ‘ಜವಾನ್​’ ಸಿನಿಮಾದಲ್ಲಿ ಶಾರುಖ್​ ಜೊತೆ ಆ್ಯಕ್ಷನ್​ ಮೆರೆದ ಪ್ರಿಯಾಮಣಿ

ಎರಡನೇ ವೀಕೆಂಡ್​ನಲ್ಲಿ ‘ಜವಾನ್​’ ಸಿನಿಮಾ ಭಾರಿ ಕಲೆಕ್ಷನ್​ ಮಾಡುವ ಸಾಧ್ಯತೆ ದಟ್ಟವಾಗಿದೆ. ಅಲ್ಲದೇ, ಗಣೇಶ ಚತುರ್ಥಿ ಪ್ರಯುಕ್ತ ರಜೆ ಇರುವುದರಿಂದ ಅಂದು ಕೂಡ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರು ಚಿತ್ರಮಂದಿರಕ್ಕೆ ಕಾಲಿಡಲಿದ್ದಾರೆ. ಆಗ ಕಲೆಕ್ಷನ್​ ಇನ್ನಷ್ಟು ಹೆಚ್ಚಲಿದೆ. ಅಂತಿಮವಾಗಿ ಈ ಸಿನಿಮಾಗೆ ಎಷ್ಟು ಕಮಾಯಿ ಆಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಸೆ.28ರಂದು ‘ದಿ ವ್ಯಾಕ್ಸಿನ್ ವಾರ್​’, ‘ಚಂದ್ರಮುಖಿ 2’ ಮುಂತಾದ ಸಿನಿಮಾಗಳು ಬಿಡುಗಡೆ ಆಗಲಿವೆ. ಆ ಚಿತ್ರಗಳಿಗೆ ‘ಜವಾನ್​’ ಪೈಪೋಟಿ ನೀಡಬೇಕಿದೆ.

ಇದನ್ನೂ ಓದಿ: ‘ಜವಾನ್​ 2’ ಬಗ್ಗೆ ಈಗಲೇ ಶುರುವಾಗಿದೆ ಚರ್ಚೆ; ನಟಿ ಸಾನ್ಯಾ ಮಲ್ಹೋತ್ರಾ ಹೇಳೋದೇನು?

ಭಾರತದಲ್ಲಿ ಮಾತ್ರವಲ್ಲದೇ ವಿದೇಶದಲ್ಲೂ ಶಾರುಖ್​ ಖಾನ್​ ಅವರಿಗೆ ಅಭಿಮಾನಿಗಳು ಇದ್ದಾರೆ. ಹಾಗಾಗಿ ವಿಶ್ವ ಬಾಕ್ಸ್​ ಆಫೀಸ್​ನಲ್ಲೂ ಈ ಸಿನಿಮಾ ಭರ್ಜರಿಯಾಗಿ ಕಮಾಯಿ ಮಾಡುತ್ತಿದೆ. ವಿಶ್ವಾದ್ಯಂತ 7 ದಿನದಲ್ಲಿ ಈ ಸಿನಿಮಾದ ಕಲೆಕ್ಷನ್​ 650 ಕೋಟಿ ರೂಪಾಯಿ ದಾಟಿದೆ. ಶೀಘ್ರದಲ್ಲೇ ಈ ಚಿತ್ರ ಸಾವಿರ ಕೋಟಿ ರೂಪಾಯಿ ಗಳಿಸಲಿದೆ. ಈ ಗೆಲುವಿನಿಂದಾಗಿ ಶಾರುಖ್​ ಖಾನ್​ ಅವರ ಮೈಲೇಜ್​ ಹೆಚ್ಚಾಗಿದೆ. ತಾವು ಬಾಲಿವುಡ್​ ಬಾಕ್ಸ್​ ಆಫೀಸ್​ನ ಕಿಂಗ್​ ಎಂಬುದನ್ನು ಅವರು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು