AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜವಾನ್’ ಸಿನಿಮಾದ ನಾಯಕಿ ನಯನತಾರಾ, ವಿಲನ್ ವಿಜಯ್ ಸೇತುಪತಿ ಸಂಭಾವನೆ ಎಷ್ಟು?

Jawan: ಶಾರುಖ್ ಖಾನ್ ನಟನೆಯ 'ಜವಾನ್' ಸಿನಿಮಾ ಇಂದು (ಸೆಪ್ಟೆಂಬರ್ 7) ಬಿಡುಗಡೆ ಆಗಿದ್ದು, ಪ್ರೇಕ್ಷಕರಿಂದ ಭರ್ಜರಿ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಸಿನಿಮಾದಲ್ಲಿ ನಟಿಸಿದ ನಟರಿಗೆ ಸಿಕ್ಕ ಸಂಭಾವನೆ ಎಷ್ಟು?

'ಜವಾನ್' ಸಿನಿಮಾದ ನಾಯಕಿ ನಯನತಾರಾ, ವಿಲನ್ ವಿಜಯ್ ಸೇತುಪತಿ ಸಂಭಾವನೆ ಎಷ್ಟು?
ಜವಾನ್
ಮಂಜುನಾಥ ಸಿ.
|

Updated on: Sep 07, 2023 | 5:21 PM

Share

ಶಾರುಖ್ ಖಾನ್ (Shah Rukh Khan) ನಟನೆಯ ‘ಜವಾನ್‘ (Jawan) ಸಿನಿಮಾ ಇಂದು ಬಿಡುಗಡೆ ಆಗಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಸಿನಿಮಾ ಬಿಡುಗಡೆಗೆ ಮುನ್ನವೇ 50 ಕೋಟಿಗೂ ಹೆಚ್ಚು ಮೊತ್ತದ ಅಡ್ವಾನ್ಸ್ ಬುಕಿಂಗ್ ಆಗಿತ್ತು, ಬಿಡುಗಡೆ ಆದ ದಿನ ಚಿತ್ರಮಂದಿರಗಳಲ್ಲಿ ಹಬ್ಬವೇ ಆಗಿದೆ. ಬೆಂಗಳೂರು ಸೇರಿದಂತೆ ದೇಶದ ಹಲವು ಪ್ರಮುಖ ನಗರಗಳಲ್ಲಿ ಶಾರುಖ್ ಖಾನ್ ಸಿನಿಮಾಕ್ಕೆ ಭರ್ಜರಿ ಸ್ವಾಗತ ದೊರೆತಿದೆ. ಸಿನಿಮಾದಲ್ಲಿ ಬಹುತೇಕ ಮಂದಿ ದಕ್ಷಿಣ ಭಾರತದ ನಟರು, ತಂತ್ರಜ್ಞರು ಕೆಲಸ ಮಾಡಿದ್ದಾರೆ. ಎಲ್ಲರಿಗೂ ಭರಪೂರ ಸಂಭಾವನೆಯನ್ನೇ ಶಾರುಖ್ ನೀಡಿದ್ದಾರೆ ಎನ್ನಲಾಗುತ್ತಿದೆ.

ಸಿನಿಮಾದಲ್ಲಿ ನಯನತಾರಾ, ಶಾರುಖ್ ಖಾನ್ ಎದುರು ನಾಯಕಿಯಾಗಿ ಮಿಂಚಿದ್ದಾರೆ. ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಸೇರಿದಂತೆ ಇನ್ನು ಕೆಲವು ನಟಿಯರಿದ್ದಾದೆ. ಆದರೆ ನಯನತಾರಾ ಸಿನಿಮಾದ ನಾಯಕಿ ಎಂದೇ ಪರಿಗಣಿತವಾಗಿದ್ದಾರೆ. ಶಾರುಖ್ ಖಾನ್ ಜೊತೆ ಕೆಲವು ರೊಮ್ಯಾಂಟಿಕ್ ದೃಶ್ಯಗಳು, ರೊಮ್ಯಾಂಟಿಕ್ ಹಾಡಿನಲ್ಲಿ ನಯನತಾರಾ ಕಾಣಿಸಿಕೊಂಡಿದ್ದಾರೆ. ಮೊದಲ ಬಾರಿಗೆ ಶಾರುಖ್ ಖಾನ್ ಜೊತೆ ನಟಿಸಿರುವ ನಯನತಾರಾಗೆ 10 ಕೋಟಿ ಸಂಭಾವನೆಯನ್ನು ಶಾರುಖ್ ಖಾನ್​ರ ರೆಡ್ ಚಿಲ್ಲೀಸ್ ಸಂಸ್ಥೆ ನೀಡಿದೆ ಎನ್ನಲಾಗುತ್ತಿದೆ.

ಇನ್ನು ಸಿನಿಮಾದಲ್ಲಿ ವಿಜಯ್ ಸೇತುಪತಿ, ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಿಜಯ್​ಗೂ ಸಹ ಇದು ಅವರೊಟ್ಟಿಗೆ ಮೊದಲ ಸಿನಿಮಾ. ಸ್ವತಃ ವಿಜಯ್ ಸೇತುಪತಿ ಅವರೇ ಶಾರುಖ್ ಖಾನ್ ಬಳಿ ಕೇಳಿ ಈ ಪಾತ್ರವನ್ನು ಪಡೆದುಕೊಂಡರಂತೆ. ವಿಜಯ್ ಸೇತುಪತಿ ಎರಡು ಶೇಡ್​ನಲ್ಲಿ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದು, ಸಿನಿಮಾದಲ್ಲಿ ಅವರ ಪಾತ್ರದ ಹೆಸರು ಕಾಲಿ ಗಾಯಕ್​ವಾಡ್. ವಿಜಯ್ ಸೇತುಪತಿಗೆ ಶಾರುಖ್ ಖಾನ್ 23 ಕೋಟಿ ಸಂಭಾವನೆ ನೀಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ತಿರುಪತಿಗೆ ಭೇಟಿ ನೀಡಲು ರೆಡಿ ಆದ ಶಾರುಖ್ ಖಾನ್; ವ್ಯಕ್ತವಾಗುತ್ತಿದೆ ಭಾರೀ ವಿರೋಧ

ಇನ್ನು ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಸಹ ಇದ್ದಾರೆ. ಆದರೆ ಅವರದ್ದು ಅತಿಥಿ ಪಾತ್ರವಷ್ಟೆ. ಹಾಗಿದ್ದರೂ ಸಹ ದೀಪಿಕಾ ಪಡುಕೋಣೆಗೆ ಐದು ಕೋಟಿ ಸಂಭಾವನೆಯನ್ನು ಶಾರುಖ್ ಖಾನ್ ನೀಡಿದ್ದಾರೆ ಎನ್ನಲಾಗುತ್ತಿದೆ. ಇನ್ನು ನಟಿ ಪ್ರಿಯಾ ಮಣಿ, ಸಾನ್ಯಾ ಮಲ್ಹೋತ್ರಾ, ರಿಧಿ ದೋಗ್ರಾ, ಸಂಗೀತ ಭಟ್ಟಾಚಾರ್ಯ ಅವರುಗಳು ಸಹ ಸಿನಿಮಾದಲ್ಲಿದ್ದು ಪ್ರಿಯಾಮಣಿ, ಸಾನ್ಯಾಗೆ 3 ಕೋಟಿ, ರಿಧಿ ದೋಗ್ರಾ, ಸಂಗೀತಾಗೆ ತಲಾ ಒಂದು ಕೋಟಿ ಸಂಭಾವನೆ ದೊರೆತಿದೆಯಂತೆ. ಇನ್ನು ಹಾಸ್ಯನಟರಾದ ಯೋಗಿ ಬಾಬು ಹಾಗೂ ಸುನಿಲ್ ಗ್ರೋವರ್ ಅವರುಗಳಿಗೆ ತಲಾ ಎರಡು ಕೋಟಿ ಸಂಭಾವನೆ ನೀಡಲಾಗಿದೆ ಎನ್ನಲಾಗುತ್ತಿದೆ.

‘ಜವಾನ್’ ಸಿನಿಮಾದಲ್ಲಿ ಶಾರುಖ್ ಖಾನ್ ಹಲವು ಶೇಡ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಸೈನ್ಯಾಧಿಕಾರಿ, ಪೊಲೀಸ್ ಅಧಿಕಾರಿ, ಪ್ರಯಾಣಿಕರನ್ನು ಒತ್ತೆಯಿಟ್ಟುಕೊಂಡಿರುವ ಅಪಹರಣಕಾರ, ಜನರಿಗಾಗಿ ಕೆಲಸ ಮಾಡುವ ರಾಬಿನ್ ಹುಡ್ ಮಾದರಿಯಲ್ಲಿಯೂ ಶಾರುಖ್ ಖಾನ್ ಕಾಣಿಸಿಕೊಂಡಿದ್ದಾರೆ. ಸಿನಿಮಾ ನೋಡಿದವರು ಫೈಟ್​ಗಳು, ಹಾಡು, ಹಿನ್ನೆಲೆ ಸಂಗೀತಕ್ಕೆ ಮಾರು ಹೋಗಿದ್ದಾರೆ. ಸಿನಿಮಾವನ್ನು ತಮಿಳಿನ ಜನಪ್ರಿಯ ನಿರ್ದೇಶಕ ಅಟ್ಲಿ ನಿರ್ದೇಶನ ಮಾಡಿದ್ದಾರೆ. ಸಂಗೀತ ನೀಡಿರುವುದು ಅನಿರುದ್ಧ್ ರವಿಚಂದ್ರನ್.

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?