ಶನಿವಾರ ಬಂಗಾರದ ಬೆಳೆ ತೆಗೆದ ‘ಜವಾನ್’; ಎರಡನೇ ವಾರವೂ ಮುಂದುವರಿದ ಸಿನಿಮಾ ಅಬ್ಬರ
‘ಜವಾನ್’ ಸಿನಿಮಾ ಸೆಪ್ಟೆಂಬರ್ 7ರಂದು ರಿಲೀಸ್ ಆಯಿತು. ಈ ಚಿತ್ರ ಇನ್ನು ಕೆಲವೇ ದಿನಗಳಲ್ಲಿ 500 ಕೋಟಿ ರೂಪಾಯಿ ಕ್ಲಬ್ ಸೇರಲಿದೆ. ಈ ಚಿತ್ರ ಹಿಂದಿ ಮಾತ್ರವಲ್ಲದೆ ತಮಿಳು ಹಾಗೂ ತೆಲುಗು ಭಾಷೆಗೂ ಡಬ್ ಆಗಿ ರಿಲೀಸ್ ಆಗಿರುವುದರಿಂದ ಚಿತ್ರಕ್ಕೆ ದಕ್ಷಿಣ ಭಾರತದಲ್ಲೂ ಹೆಚ್ಚಿನ ಕಲೆಕ್ಷನ್ ಆಗುತ್ತಿದೆ.
ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ (Jawan Movie) ಯಾರೂ ಊಹಿಸದ ರೀತಿಯಲ್ಲಿ ಗಳಿಕೆ ಮಾಡುತ್ತಿದೆ. ಸಿನಿಮಾ ರಿಲೀಸ್ ಆದ ಮೊದಲ ದಿನ ಚಿತ್ರಕ್ಕೆ ಭರ್ಜರಿ ಪ್ರತಿಕ್ರಿಯೆ ದೊರೆಯಿತು. ಮೊದಲ ವಾರದಲ್ಲಿ ಅಬ್ಬರಿಸಿದ್ದ ಈ ಸಿನಿಮಾ ಎರಡನೇ ವಾರವೂ ಒಳ್ಳೆಯ ರೀತಿಯಲ್ಲಿ ಪ್ರದರ್ಶನ ಕಾಣುತ್ತಿದೆ. ಶನಿವಾರ (ಸೆಪ್ಟೆಂಬರ್ 16) ಈ ಚಿತ್ರ ಭಾರತದ ಬಾಕ್ಸ್ ಆಫೀಸ್ನಲ್ಲಿ 31 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಚಿತ್ರದ ಭಾರತದ ಗಳಿಕೆ 440 ಕೋಟಿ ರೂಪಾಯಿ ಆಗಿದೆ.
‘ಜವಾನ್’ ಸಿನಿಮಾ ಸೆಪ್ಟೆಂಬರ್ 7ರಂದು ರಿಲೀಸ್ ಆಯಿತು. ಈ ಚಿತ್ರ ಇನ್ನು ಕೆಲವೇ ದಿನಗಳಲ್ಲಿ 500 ಕೋಟಿ ರೂಪಾಯಿ ಕ್ಲಬ್ ಸೇರಲಿದೆ. ಈ ಚಿತ್ರ ಹಿಂದಿ ಮಾತ್ರವಲ್ಲದೆ ತಮಿಳು ಹಾಗೂ ತೆಲುಗು ಭಾಷೆಗೂ ಡಬ್ ಆಗಿ ರಿಲೀಸ್ ಆಗಿರುವುದರಿಂದ ಚಿತ್ರಕ್ಕೆ ದಕ್ಷಿಣ ಭಾರತದಲ್ಲೂ ಹೆಚ್ಚಿನ ಕಲೆಕ್ಷನ್ ಆಗುತ್ತಿದೆ. ವಿಶ್ವ ಬಾಕ್ಸ್ ಆಫೀಸ್ನಲ್ಲಿ ಸಿನಿಮಾ 730+ ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು ರೆಡ್ ಚಿಲ್ಲೀಸ್ ಎಂಟರ್ಟೇನ್ಮೆಂಟ್ ಮಾಹಿತಿ ನೀಡಿದೆ.
ಇತ್ತೀಚಿನ ವರ್ಷಗಳಲ್ಲಿ ಶಾರುಖ್ ಖಾನ್ ಅವರು ಸಾಲು ಸಾಲು ಫ್ಲಾಪ್ ಕಂಡರು. ಆ ಬಳಿಕ ಅವರು ಒಂದು ಬ್ರೇಕ್ ಪಡೆದರು. ಈ ಸಂದರ್ಭದಲ್ಲಿ ಅವರು ಹೆಚ್ಚು ಕಾಳಜಿಯಿಂದ ಸ್ಕ್ರಿಪ್ಟ್ ಆಯ್ಕೆ ಮಾಡಿಕೊಂಡರು. ಪರಿಣಾಮ ‘ಪಠಾಣ್’ ಸಿನಿಮಾ ಸೂಪರ್ ಹಿಟ್ ಆಗಿದೆ. ಅದೇ ರೀತಿ ‘ಜವಾನ್’ ಚಿತ್ರ ಕೂಡ ಒಳ್ಳೆಯ ಗಳಿಕೆ ಮಾಡುತ್ತಿದೆ. ಈ ಸಿನಿಮಾ ಅನಾಯಾಸವಾಗಿ ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರಲಿದೆ.
Jab woh villain banta hai na toh uske saamne koi bhi hero tik nahin sakta… and, the rest is history! 🔥
Book your tickets now: https://t.co/B5xelUahHO
Watch #Jawan in cinemas – in Hindi, Tamil & Telugu. pic.twitter.com/L58pAMNcoQ
— Red Chillies Entertainment (@RedChilliesEnt) September 16, 2023
ಇದನ್ನೂ ಓದಿ: ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದ ಬಗ್ಗೆ ಪವನ್ ಕಲ್ಯಾಣ್ ಮಾತು
ಇಂದು (ಸೆಪ್ಟೆಂಬರ್ 17) ಸಹಜವಾಗಿಯೇ ಸಿನಿಮಾ 30+ ಕೋಟಿ ರೂಪಾಯಿ ಗಳಿಕೆ ಮಾಡಲಿದೆ. ಇನ್ನು, ಗಣೇಶ ಚತುರ್ಥಿ ಪ್ರಯುಕ್ತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಿನಿಮಾ ನೋಡುತ್ತಾರೆ. ಈ ಮೂಲಕ ಚಿತ್ರದ ಒಟ್ಟಾರೆ ಗಳಿಕೆಯಲ್ಲಿ ಭಾರೀ ಏರಿಕೆ ಆಗಲಿದೆ. ಈ ಚಿತ್ರದಿಂದ ಶಾರುಖ್ ಖಾನ್ ಅವರು ಭರ್ಜರಿ ಲಾಭ ಕಾಣುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:56 pm, Sun, 17 September 23