ಶನಿವಾರ ಬಂಗಾರದ ಬೆಳೆ ತೆಗೆದ ‘ಜವಾನ್’; ಎರಡನೇ ವಾರವೂ ಮುಂದುವರಿದ ಸಿನಿಮಾ ಅಬ್ಬರ

|

Updated on: Sep 17, 2023 | 1:06 PM

‘ಜವಾನ್’ ಸಿನಿಮಾ ಸೆಪ್ಟೆಂಬರ್ 7ರಂದು ರಿಲೀಸ್ ಆಯಿತು. ಈ ಚಿತ್ರ ಇನ್ನು ಕೆಲವೇ ದಿನಗಳಲ್ಲಿ 500 ಕೋಟಿ ರೂಪಾಯಿ ಕ್ಲಬ್ ಸೇರಲಿದೆ. ಈ ಚಿತ್ರ ಹಿಂದಿ ಮಾತ್ರವಲ್ಲದೆ ತಮಿಳು ಹಾಗೂ ತೆಲುಗು ಭಾಷೆಗೂ ಡಬ್ ಆಗಿ ರಿಲೀಸ್ ಆಗಿರುವುದರಿಂದ ಚಿತ್ರಕ್ಕೆ ದಕ್ಷಿಣ ಭಾರತದಲ್ಲೂ ಹೆಚ್ಚಿನ ಕಲೆಕ್ಷನ್ ಆಗುತ್ತಿದೆ.

ಶನಿವಾರ ಬಂಗಾರದ ಬೆಳೆ ತೆಗೆದ ‘ಜವಾನ್’; ಎರಡನೇ ವಾರವೂ ಮುಂದುವರಿದ ಸಿನಿಮಾ ಅಬ್ಬರ
ಶಾರುಖ್ ಖಾನ್​
Follow us on

ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ (Jawan Movie) ಯಾರೂ ಊಹಿಸದ ರೀತಿಯಲ್ಲಿ ಗಳಿಕೆ ಮಾಡುತ್ತಿದೆ. ಸಿನಿಮಾ ರಿಲೀಸ್ ಆದ ಮೊದಲ ದಿನ ಚಿತ್ರಕ್ಕೆ ಭರ್ಜರಿ ಪ್ರತಿಕ್ರಿಯೆ ದೊರೆಯಿತು. ಮೊದಲ ವಾರದಲ್ಲಿ ಅಬ್ಬರಿಸಿದ್ದ ಈ ಸಿನಿಮಾ ಎರಡನೇ ವಾರವೂ ಒಳ್ಳೆಯ ರೀತಿಯಲ್ಲಿ ಪ್ರದರ್ಶನ ಕಾಣುತ್ತಿದೆ. ಶನಿವಾರ (ಸೆಪ್ಟೆಂಬರ್ 16) ಈ ಚಿತ್ರ ಭಾರತದ ಬಾಕ್ಸ್ ಆಫೀಸ್​ನಲ್ಲಿ 31 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಚಿತ್ರದ ಭಾರತದ ಗಳಿಕೆ 440 ಕೋಟಿ ರೂಪಾಯಿ ಆಗಿದೆ.

‘ಜವಾನ್’ ಸಿನಿಮಾ ಸೆಪ್ಟೆಂಬರ್ 7ರಂದು ರಿಲೀಸ್ ಆಯಿತು. ಈ ಚಿತ್ರ ಇನ್ನು ಕೆಲವೇ ದಿನಗಳಲ್ಲಿ 500 ಕೋಟಿ ರೂಪಾಯಿ ಕ್ಲಬ್ ಸೇರಲಿದೆ. ಈ ಚಿತ್ರ ಹಿಂದಿ ಮಾತ್ರವಲ್ಲದೆ ತಮಿಳು ಹಾಗೂ ತೆಲುಗು ಭಾಷೆಗೂ ಡಬ್ ಆಗಿ ರಿಲೀಸ್ ಆಗಿರುವುದರಿಂದ ಚಿತ್ರಕ್ಕೆ ದಕ್ಷಿಣ ಭಾರತದಲ್ಲೂ ಹೆಚ್ಚಿನ ಕಲೆಕ್ಷನ್ ಆಗುತ್ತಿದೆ. ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಸಿನಿಮಾ 730+ ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು ರೆಡ್​ ಚಿಲ್ಲೀಸ್ ಎಂಟರ್​ಟೇನ್​ಮೆಂಟ್ ಮಾಹಿತಿ ನೀಡಿದೆ.

ಇತ್ತೀಚಿನ ವರ್ಷಗಳಲ್ಲಿ ಶಾರುಖ್ ಖಾನ್ ಅವರು ಸಾಲು ಸಾಲು ಫ್ಲಾಪ್ ಕಂಡರು. ಆ ಬಳಿಕ ಅವರು ಒಂದು ಬ್ರೇಕ್ ಪಡೆದರು. ಈ ಸಂದರ್ಭದಲ್ಲಿ ಅವರು ಹೆಚ್ಚು ಕಾಳಜಿಯಿಂದ ಸ್ಕ್ರಿಪ್ಟ್ ಆಯ್ಕೆ ಮಾಡಿಕೊಂಡರು. ಪರಿಣಾಮ ‘ಪಠಾಣ್’ ಸಿನಿಮಾ ಸೂಪರ್ ಹಿಟ್ ಆಗಿದೆ. ಅದೇ ರೀತಿ ‘ಜವಾನ್’ ಚಿತ್ರ ಕೂಡ ಒಳ್ಳೆಯ ಗಳಿಕೆ ಮಾಡುತ್ತಿದೆ. ಈ ಸಿನಿಮಾ ಅನಾಯಾಸವಾಗಿ ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರಲಿದೆ.


ಇದನ್ನೂ ಓದಿ: ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದ ಬಗ್ಗೆ ಪವನ್ ಕಲ್ಯಾಣ್ ಮಾತು

ಇಂದು (ಸೆಪ್ಟೆಂಬರ್ 17) ಸಹಜವಾಗಿಯೇ ಸಿನಿಮಾ 30+ ಕೋಟಿ ರೂಪಾಯಿ ಗಳಿಕೆ ಮಾಡಲಿದೆ. ಇನ್ನು, ಗಣೇಶ ಚತುರ್ಥಿ ಪ್ರಯುಕ್ತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಿನಿಮಾ ನೋಡುತ್ತಾರೆ. ಈ ಮೂಲಕ ಚಿತ್ರದ ಒಟ್ಟಾರೆ ಗಳಿಕೆಯಲ್ಲಿ ಭಾರೀ ಏರಿಕೆ ಆಗಲಿದೆ. ಈ ಚಿತ್ರದಿಂದ ಶಾರುಖ್ ಖಾನ್ ಅವರು ಭರ್ಜರಿ ಲಾಭ ಕಾಣುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

Published On - 12:56 pm, Sun, 17 September 23