AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗನ ಮೇಲೆ ಕೈ ಇಡೋ ಮುನ್ನ: ‘ಜವಾನ್’ ಎಚ್ಚರಿಕೆಗೆ ಸಮೀರ್ ಪರೋಕ್ಷ ಟಾಂಗ್

Jawan Traier: ಶಾರುಖ್ ಖಾನ್​ರ 'ಜವಾನ್' ಸಿನಿಮಾ ಟ್ರೈಲರ್​ನಲ್ಲಿ ಮಗನ ಬಗ್ಗೆ ಹೇಳಿರುವ ಡೈಲಾಗ್, ಶಾರುಕ್​ರ ಪುತ್ರ ಆರ್ಯನ್ ಅನ್ನು ಬಂಧಿಸಿದ್ದ ಸಮೀರ್ ವಾಂಖೆಡೆಗೆ ಹೇಳಲಾಗಿದೆ ಎನ್ನಲಾಗುತ್ತಿದೆ. ಸಮೀರ್ ವಾಂಖಡೆ ಸಹ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ಮಗನ ಮೇಲೆ ಕೈ ಇಡೋ ಮುನ್ನ: 'ಜವಾನ್' ಎಚ್ಚರಿಕೆಗೆ ಸಮೀರ್ ಪರೋಕ್ಷ ಟಾಂಗ್
ಸಮೀರ್-ಶಾರುಖ್
ಮಂಜುನಾಥ ಸಿ.
|

Updated on:Sep 01, 2023 | 4:41 PM

Share

ಶಾರುಖ್ ಖಾನ್ (Shah Rukh Khan) ನಟನೆಯ ‘ಜವಾನ್‘ (Jawan) ಸಿನಿಮಾ ಕೆಲವೇ ದಿನಗಳಲ್ಲಿ ತೆರೆಗೆ ಬರಲಿದ್ದು, ನಿನ್ನೆಯಷ್ಟೆ (ಆಗಸ್ಟ್ 31) ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದೆ. ಟ್ರೈಲರ್ ಸಖತ್ ಮಾಸ್ ಆಗಿದ್ದು, ಶಾರುಖ್ ಖಾನ್ ಹಿಂದೆಂದೂ ಕಾಣದಷ್ಟು ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಆಕ್ಷನ್ ದೃಶ್ಯಗಳು, ಬೃಹ್ ಸೆಟ್​ಗಳು ಇವೆಲ್ಲದರ ಜೊತೆಗೆ ಟ್ರೈಲರ್​ನಲ್ಲಿ ಕೇಳಿ ಬರುವ ಸಣ್ಣ ಸಂಭಾಷಣೆಯೊಂದು ಬಹುವಾಗಿ ಗಮನ ಸೆಳೆದಿದೆ. ಆ ಡೈಲಾಗ್ ಅನ್ನು ಮಾಜಿ ಎನ್​ಸಿಬಿ ಅಧಿಕಾರಿ ಸಮೀರ್ ವಾಂಖೆಡೆಗೆ ನೀಡಿರುವ ಪರೋಕ್ಷ ಎಚ್ಚರಿಕೆ ಎಂದು ಶಾರುಖ್ ಅಭಿಮಾನಿಗಳು ಹೇಳುತ್ತಿದ್ದಾರೆ.

ಟ್ರೈಲರ್​ನಲ್ಲಿ, ‘ನನ್ನ ಮಗನ ಮೇಲೆ ಕೈ ಇಡೋ ಮುನ್ನ ಅಪ್ಪನೊಂದಿಗೆ ಮಾತನಾಡು’ ಎಂಬ ಡೈಲಾಗ್ ಇದೆ. ಈ ಡೈಲಾಗ್ ಶಾರುಖ್ ಖಾನ್ ಧ್ವನಿಯಲ್ಲಿದ್ದು, ಈ ಸಂಭಾಷಣೆ ಎನ್​ಸಿಬಿ ಅಧಿಕಾರಿ ಸಮೀರ್ ವಾಂಖೆಡೆಗೆ ಪರೋಕ್ಷವಾಗಿ ಶಾರುಖ್ ಖಾನ್ ನೀಡಿರುವ ಟಾಂಗ್ ಎಂದೇ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಚರ್ಚಿಸುತ್ತಿದ್ದಾರೆ. ಇದಕ್ಕೆ ಕಾರಣವೂ ಇದೆ.

‘ಜವಾನ್’ ಸಿನಿಮಾ ಚಿತ್ರೀಕರಣದ ಸಂದರ್ಭದಲ್ಲಿಯೇ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅನ್ನು ಡ್ರಗ್ಸ್ ಪ್ರಕರಣದಲ್ಲಿ ಆಗ ಮುಂಬೈ ಎನ್​ಸಿಬಿ (ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋ) ಅಧಿಕಾರಿ ಆಗಿದ್ದ ಸಮೀರ್ ವಾಂಖೆಡೆ ಹಾಗೂ ಅವರ ತಂಡ ಬಂಧಿಸಿತ್ತು. ಆ ಪ್ರಕರಣ ಭಾರತ ಮಾತ್ರವೇ ಅಲ್ಲದೆ ವಿದೇಶದಲ್ಲಿಯೂ ಸುದ್ದಿಯಾಗಿತ್ತು. ಆದರೆ ತನಿಖೆ ಮುಂದುವರೆದಂತೆ ಎನ್​ಸಿಬಿ ಹಲವು ನಿಯಮಗಳನ್ನು ಗಾಳಿಗೆ ತೂರಿ, ಉದ್ದೇಶಪೂರ್ವಕವಾಗಿ ಆರ್ಯನ್ ಅನ್ನು ಬಂಧಿಸಲಾಗಿದೆ ಎಂಬ ಅನುಮಾನಗಳು ವ್ಯಕ್ತವಾಗಿದ್ದವು. ಆರ್ಯನ್ ಬಂಧನ ಪ್ರಕರಣದಲ್ಲಿ ಹಲವು ಖಾಸಗಿ ವ್ಯಕ್ತಿಗಳು ಭಾಗಿಯಾಗಿದ್ದಕ್ಕೆ ಸಾಕ್ಷಿಯಾಗಿ ಕೆಲವು ಚಿತ್ರ ಹಾಗೂ ವಿಡಿಯೋಗಳು ಸಹ ಹೊರಬಂದಿದ್ದವು.

ಇದನ್ನೂ ಓದಿ:‘ಜವಾನ್’ ಸಿನಿಮಾ ಆಡಿಯೋ ಲಾಂಚ್​​ಗೆ ಬರಲೇ ಇಲ್ಲ ನಯನತಾರಾ; ಅಸಲಿ ಕಾರಣ ಹುಡುಕಿದ ಫ್ಯಾನ್ಸ್

ಆರ್ಯನ್ ಬಂಧನದಲ್ಲಿ ಭಾಗಿಯಾಗಿದ್ದ ಖಾಸಗಿ ವ್ಯಕ್ತಿಯೊಬ್ಬ ಎನ್​ಸಿಬಿ ಪರವಾಗಿ ಶಾರುಖ್ ಖಾನ್​ರ ಮ್ಯಾನೇಜರ್​ ಇಂದ ಲಕ್ಷಾಂತರ ಮೊತ್ತದ ಹಣವನ್ನು ಸ್ವೀಕರಿಸಿದ್ದು ಸಹ ಬಹಿರಂಗವಾಯ್ತು. ಅಲ್ಲದೆ ಆರ್ಯನ್ ಬಂಧನ ವೇಳೆ ಎನ್​ಸಿಬಿ ಅಧಿಕಾರಿಗಳು ಹಲವು ನಿಯಮಗಳನ್ನು ಗಾಳಿಗೆ ತೂರಿದ್ದ ವಿಷಯ ನಂತರ ಕೋರ್ಟ್ ವಿಚಾರಣೆ ವೇಳೆ ಬೆಳಕಿಗೆ ಬಂದಿತ್ತು. ಪ್ರಕರಣ ಗಂಭೀರತೆ ಪಡೆದುಕೊಂಡಂತೆ ಕೇಂದ್ರ ಎನ್​ಸಿಬಿಯು ಪ್ರಕರಣದ ಬಗ್ಗೆ ಆಂತರಿಕ ತನಿಖೆ ನಡೆಸಿ, ಸಮೀರ್ ವಾಂಖೆಡೆಗೆ ವರ್ಗಾವಣೆ ಶಿಕ್ಷೆ ವಿಧಿಸಿತು.

ಈಗ ‘ಜವಾನ್’ ಸಿನಿಮಾದಲ್ಲಿ ‘ನನ್ನ ಮಗನ ಮೇಲೆ ಕೈ ಇಡೋ ಮುನ್ನ ಅಪ್ಪನೊಂದಿಗೆ ಮಾತನಾಡು’ ಎಂಬ ಸಂಭಾಷಣೆಯನ್ನು ಸಮೀರ್ ವಾಂಖೆಡೆಗೆ ಶಾರುಖ್ ಖಾನ್ ನೀಡಿರುವ ಪರೋಕ್ಷ ಎಚ್ಚರಿಕೆ ಎಂದು ಅಭಿಮಾನಿಗಳು ಸಂಭ್ರಮಿಸುತ್ತಿರುವಾಗಲೇ, ಸಮೀರ್ ವಾಂಖಡೆ ಸಹ ಟ್ವೀಟರ್ ಮೂಲಕ ಪರೋಕ್ಷ ಟಾಂಗ್ ನೀಡಿದ್ದಾರೆ. ‘ನಾನು ಬೆಂಕಿಯನ್ನು ನೆಕ್ಕಿದ್ದೇನೆ, ನಾನು ಸುಟ್ಟ ಪ್ರತಿ ಸೇತುವೆಯ ಬೂದಿಯಲ್ಲಿ ನರ್ತಿಸಿದ್ದೇನೆ. ನರಕದ ಭಯ ನನಗೆ ಇಲ್ಲ’ ಎಂಬ ನಿಕೋಲಸ್ ಲಯೋನ್​ನ ಕೋಟ್ ಒಂದನ್ನು ಹಂಚಿಕೊಂಡಿದ್ದು, ಈ ಕೋಟ್ ನನಗೆ ಸದಾ ಸ್ಪೂರ್ತಿ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:40 pm, Fri, 1 September 23

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು