ಬುರ್ಜ್ ಖಲೀಫಾದಲ್ಲಿ ರಿಲೀಸ್ ಆಗಲಿದೆ ‘ಜವಾನ್’ ಟ್ರೇಲರ್? ದಿನಾಂಕ ತಿಳಿಸಿದ ಶಾರುಖ್ ಖಾನ್

Jawan Trailer: ಶಾರುಖ್ ಖಾನ್​ಗೂ ದುಬೈಗೂ ಒಳ್ಳೆಯ ನಂಟಿದೆ. ಅಲ್ಲಿ ಶಾರುಖ್​​ ಖಾನ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಈ ಕಾರಣಕ್ಕೆ ಶಾರುಖ್ ಖಾನ್ ಅವರು ಆಗಾಗ ದುಬೈಗೆ ತೆರಳುತ್ತಾರೆ. ಅಲ್ಲಿಯೂ ಸಿನಿಮಾ ಪ್ರಚಾರ ಮಾಡುತ್ತಾರೆ. ಈಗ ದುಬೈನ ಬುರ್ಜ್ ಖಲೀಫಾದಲ್ಲಿ ಟ್ರೇಲರ್ ರಿಲೀಸ್ ಮಾಡುವ ಕುರಿತು ಮಾಹಿತಿ ನೀಡಿದ್ದಾರೆ.

ಬುರ್ಜ್ ಖಲೀಫಾದಲ್ಲಿ ರಿಲೀಸ್ ಆಗಲಿದೆ ‘ಜವಾನ್’ ಟ್ರೇಲರ್? ದಿನಾಂಕ ತಿಳಿಸಿದ ಶಾರುಖ್ ಖಾನ್
ಶಾರುಖ್ ಖಾನ್
Follow us
ರಾಜೇಶ್ ದುಗ್ಗುಮನೆ
|

Updated on: Aug 29, 2023 | 7:48 AM

ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾದ (Jawan Movie) ಕ್ರೇಜ್ ದಿನಕಳೆದಂತೆ ಹೆಚ್ಚುತ್ತಲೇ ಇದೆ. ಹಲವು ಕಲಾವಿದರು ಈ ಚಿತ್ರದಲ್ಲಿ ನಟಿಸಿರುವುದರಿಂದ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚುತ್ತಿದೆ. ಈ ಚಿತ್ರದ ಪ್ರಿವ್ಯೂ ವಿಡಿಯೋ ಇತ್ತೀಚೆಗೆ ರಿಲೀಸ್ ಆಗಿ ಸದ್ದು ಮಾಡಿತ್ತು. ಈಗ ಸಿನಿಮಾದ ಟ್ರೇಲರ್ ರಿಲೀಸ್​ಗೆ ದಿನಾಂಕ ನಿಗದಿ ಆಗಿದೆ. ಈ ಬಗ್ಗೆ ಶಾರುಖ್ ಖಾನ್ ಅವರು ಮಾಹಿತಿ ನೀಡಿದ್ದಾರೆ. ದುಬೈನ ಬುರ್ಜ್ ಖಲೀಫಾದಲ್ಲಿ (Burj Khalifa) ಟ್ರೇಲರ್ ರಿಲೀಸ್ ಮಾಡಲು ಪ್ಲ್ಯಾನ್ ನಡೆದಿದೆ. ಈ ವಿಚಾರ ಅಭಿಮಾನಿಗಳ ಖುಷಿ ಹೆಚ್ಚಿಸಿದೆ.

ಶಾರುಖ್ ಖಾನ್​ಗೂ ದುಬೈಗೂ ಒಳ್ಳೆಯ ನಂಟಿದೆ. ಅವರು ದುಬೈ ಪ್ರವಾಸೋದ್ಯಮದ ಪ್ರಚಾರ ರಾಯಭಾರಿಗಳಲ್ಲಿ ಒಬ್ಬರು. ಅಲ್ಲಿ ಶಾರುಖ್​​ ಖಾನ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಈ ಕಾರಣಕ್ಕೆ ಶಾರುಖ್ ಖಾನ್ ಅವರು ಆಗಾಗ ದುಬೈಗೆ ತೆರಳುತ್ತಾರೆ. ಅಲ್ಲಿಯೂ ಸಿನಿಮಾ ಪ್ರಚಾರ ಮಾಡುತ್ತಾರೆ. ಈಗ ದುಬೈನ ಬುರ್ಜ್ ಖಲೀಫಾದಲ್ಲಿ ಟ್ರೇಲರ್ ರಿಲೀಸ್ ಮಾಡುವ ಕುರಿತು ಮಾಹಿತಿ ನೀಡಿದ್ದಾರೆ.

ಬುರ್ಜ್ ಖಲೀಫಾದ ಮೇಲೆ ಜವಾನ್ ಪೋಸ್ಟರ್ ಪ್ರದರ್ಶನ ಕಂಡ ಫೋಟೋವನ್ನು ಶಾರುಖ್ ಖಾನ್  ಹಂಚಿಕೊಂಡಿದ್ದಾರೆ. ‘ಜವಾನ್ ಆಚರಣೆ ನಿಮ್ಮೊಂದಿಗೆ ಮಾಡಿಲ್ಲ ಅಂದರೆ ಹೇಗೆ? ನಿಮ್ಮ ಜೊತೆ ಜವಾನ್ ಸೆಲೆಬ್ರೇಷನ್​ಗೆ ಬುರ್ಜ ಖಲೀಫಾಗೆ ಆಗಸ್ಟ್ 31ರ ರಾತ್ರಿ 9 ಗಂಟೆಗೆ ಬರುತ್ತಿದ್ದೇನೆ. ಪ್ರೀತಿ ಎಂಬುದು ಒಂದು ಸುಂದರ ಭಾವನೆ. ಪ್ರೀತಿಯ ಬಣ್ಣ ಕೆಂಪನ್ನು ಧರಿಸಿ ಬನ್ನಿ. ಏನು ಹೇಳುತ್ತೀರಿ?’ ಎಂದು ಶಾರುಖ್ ಖಾನ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಮನಿ ಹೈಸ್ಟ್’ ಸೀರಿಸ್​ ಆಧರಿಸಿ ಸಿದ್ಧಗೊಂಡಿತಾ ‘ಜವಾನ್’? ಹೊರಬಿತ್ತು ಅಸಲಿ ವಿಚಾರ

‘ಜವಾನ್’ ಟ್ರೇಲರ್ ರಿಲೀಸ್ ಆಗಲಿದೆ ಎಂದು ಶಾರುಖ್ ಖಾನ್ ಎಲ್ಲಿಯೂ ಹೇಳಿಕೊಂಡಿಲ್ಲ. ಆದಾಗ್ಯೂ ಅನೇಕರು ‘ಬುರ್ಜ್ ಖಲೀಫಾ’ ಮೇಲೆ ಜವಾನ್ ಟ್ರೇಲರ್ ರಿಲೀಸ್ ಆಗಲಿದೆ ಎಂದು ಊಹಿಸಿದ್ದಾರೆ. ಶಾರುಖ್ ಖಾನ್ ನಟನೆಯ ಅನೇಕ ಸಿನಿಮಾಗಳ ಟ್ರೇಲರ್ ಈ ಮೊದಲು ‘ಬುರ್ಜ್ ಖಲೀಫಾ’ ಮೇಲೆ ರಿಲೀಸ್ ಆಗಿತ್ತು.

‘ಜವಾನ್’ ಚಿತ್ರಕ್ಕೆ ಅಟ್ಲಿ ನಿರ್ದೇಶನ ಇದೆ. ಶಾರುಖ್ ಖಾನ್ ಜೊತೆ ನಯನತಾರಾ, ವಿಜಯ್ ಸೇತುಪತಿ, ದೀಪಿಕಾ ಪಡುಕೋಣೆ ಸೇರಿ ಅನೇಕರು ನಟಿಸಿದ್ದಾರೆ. ಶಾರುಖ್ ಪತ್ನಿ ಗೌರಿ ಖಾನ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ