Jehangir: ಎರಡನೇ ಮಗುವಿಗೆ ಜಹಾಂಗೀರ್ ಎಂದು ನಾಮಕರಣ ಮಾಡಿದ ಕರೀನಾ-ಸೈಫ್ 

ಈ ವರ್ಷ ಫೆಬ್ರವರಿಯಲ್ಲಿ ಎರಡನೇ ಪುತ್ರನಿಗೆ ಕರೀನಾ ಜನ್ಮ ನೀಡಿದ್ದರು. ಆದರೆ ಈವರೆಗೂ ಒಮ್ಮೆಯೂ ಅವರು ಮಗನ ಮುಖ ತೋರಿಸಿರಲಿಲ್ಲ. ಏನು ಹೆಸರು ಇಟ್ಟಿದ್ದಾರೆ ಎಂಬುದು ಕೂಡ ಬಹಿರಂಗ ಆಗಿರಲಿಲ್ಲ.

Jehangir: ಎರಡನೇ ಮಗುವಿಗೆ ಜಹಾಂಗೀರ್ ಎಂದು ನಾಮಕರಣ ಮಾಡಿದ ಕರೀನಾ-ಸೈಫ್ 
ಕರೀನಾ ಕಡೆಯಿಂದ ಸೈಫ್​ಗೆ ಬಂತು ಕಟ್ಟುನಿಟ್ಟಿನ ಆದೇಶ; ಇದನ್ನು ಅವರು ಪಾಲಿಸಲೇಬೇಕು
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Aug 09, 2021 | 8:29 PM

ಸೈಫ್​ ಅಲಿ ಖಾನ್ ಮತ್ತು ಕರೀನಾ ಕಪೂರ್​ ಖಾನ್​ ಮೊದಲ ಮಗುವಿಗೆ ತೈಮೂರ್​ ಅಲಿ ಖಾನ್​ ಎಂದು ನಾಮಕರಣ ಮಾಡಿದ್ದು ಬಹಳ ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಅನೇಕರು ವಿರೋಧ ಕೂಡ ವ್ಯಕ್ತಪಡಿಸಿದ್ದರು. ಈಗ ಸೈಫ್​-ಕರೀನಾ ಎರಡನೇ ಮಗುವಿಗೆ ಜಹಾಂಗೀರ್​ ಎಂದು ನಾಮಕರಣ ಮಾಡಲಾಗಿದೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ.

ಈ ವರ್ಷ ಫೆಬ್ರವರಿಯಲ್ಲಿ ಎರಡನೇ ಪುತ್ರನಿಗೆ ಕರೀನಾ ಜನ್ಮ ನೀಡಿದ್ದರು. ಆದರೆ ಈವರೆಗೂ ಒಮ್ಮೆಯೂ ಅವರು ಮಗನ ಮುಖ ತೋರಿಸಿರಲಿಲ್ಲ. ಏನು ಹೆಸರು ಇಟ್ಟಿದ್ದಾರೆ ಎಂಬುದು ಕೂಡ ಬಹಿರಂಗ ಆಗಿರಲಿಲ್ಲ. ಇತ್ತೀಚೆಗೆ ಅವರ ಎರಡನೇ ಪುತ್ರನಿಗೆ ಅವರು ‘ಜೇ’ (Jeh) ಎಂದು ಹೆಸರು ಇಟ್ಟಿದ್ದಾರೆ ಎನ್ನುವ ಸುದ್ದಿ ವೈರಲ್​ ಆಗಿತ್ತು. ಈಗ Jeh ಶಬ್ದದ ಅರ್ಥ ಸಿಕ್ಕಿದೆ.

ಕರೀನಾ ಅವರು ‘ಪ್ರಗ್ನೆನ್ಸಿ ಬೈಬಲ್​’ ಎಂಬ ಪುಸ್ತಕವನ್ನು ಬಿಡುಗಡೆ ಮಾಡಿದ್ದಾರೆ. ಈ ಪುಸ್ತಕದಲ್ಲಿ ಎರಡನೇ ಮಗುವಿನ ಬಗ್ಗೆ ಕರೀನಾ ವಿವರಿಸಿದ್ದಾರೆ. ಈ ಪುಸ್ತಕದಲ್ಲಿ ಕರೀನಾ ಎರಡನೇ ಮಗುವಿಗೆ ಜಹಾಂಗೀರ್​ ಎಂದು ಹೆಸರಿಟ್ಟಿರುವುದಾಗಿ ಹೇಳಿಕೊಂಡಿದ್ದಾರೆ. ಅಲ್ಲದೆ, ಮಗುವಿನ ಫೋಟೋವನ್ನು ಕೂಡ ಹಂಚಿಕೊಂಡಿದ್ದಾರೆ.

ಮೊದಲ ಪುತ್ರನಿಗೆ ಅವರು ತೈಮೂರ್​ ಅಲಿ ಖಾನ್​ ಎಂದು ಹೆಸರು ಇಟ್ಟಿದ್ದರು. ಅದು ದಾಳಿಕೋರ, ಕ್ರೂರ ರಾಜನ ಹೆಸರು ಎಂಬ ಕಾರಣಕ್ಕೆ ಅನೇಕರು ವಿರೋಧ ವ್ಯಕ್ತಪಡಿಸಿದ್ದರು. ಅದೇ ಕಾರಣಕ್ಕೆ ತಮ್ಮ ಎರಡನೇ ಮಗನಿಗೆ ಹೆಸರು ಇಡುವಾಗ ಸೈಫ್​-ಕರೀನಾ ತುಂಬ ಎಚ್ಚರಿಕೆ ವಹಿಸಲಿದ್ದಾರೆ ಎಂಬ ಮಾತು ಕೇಳಿಬಂದಿತ್ತು.

ಇದನ್ನೂ ಓದಿ: ‘ಕೂದಲು ಮುಟ್ಟಿದ್ರೆ ಕರೀನಾ ನನ್ನ ಕೊಂದುಬಿಡ್ತಾಳೆ’; ಸಂಸಾರದ ಗುಟ್ಟು ತೆರೆದಿಟ್ಟ ಸೈಫ್​ ಅಲಿ ಖಾನ್​

ಕರೀನಾ ಕಪೂರ್​ 12 ಕೋಟಿ ಸಂಭಾವನೆ ಕೇಳಿದ ವಿಚಾರ; ಬೆಬೊ ಬೆಂಬಲಕ್ಕೆ ನಿಂತ ಕರಾವಳಿ ನಟಿ

Published On - 8:28 pm, Mon, 9 August 21

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್