AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಠಾಣ್​’ ಚಿತ್ರದ ಎರಡನೇ ಹಾಡಲ್ಲೂ ಹಾಟ್ ಆಗಿ ಕಾಣಿಸಿಕೊಂಡ ದೀಪಿಕಾ ಪಡುಕೋಣೆ

ಈ ಹಾಡು ರಿಲೀಸ್ ಆಗಿ ಕೇವಲ ಎರಡು ಗಂಟೆಯಲ್ಲಿ ಈ ಹಾಡು 25 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಈ ಹಾಡಿನಲ್ಲೂ ದೀಪಿಕಾ ಸಖತ್ ಹಾಟ್ ಆಗಿ ಮಿಂಚಿದ್ದಾರೆ. ಆದರೆ, ಎಲ್ಲಿಯೂ ಅವರು ಕೇಸರಿ ಬಣ್ಣದ ಬಟ್ಟೆ ಧರಿಸಿಲ್ಲ.

‘ಪಠಾಣ್​’ ಚಿತ್ರದ ಎರಡನೇ ಹಾಡಲ್ಲೂ ಹಾಟ್ ಆಗಿ ಕಾಣಿಸಿಕೊಂಡ ದೀಪಿಕಾ ಪಡುಕೋಣೆ
ದೀಪಿಕಾ-ಶಾರುಖ್
TV9 Web
| Edited By: |

Updated on: Dec 22, 2022 | 2:00 PM

Share

ಶಾರುಖ್ ಖಾನ್ (Shah Rukh Khan) ಹಾಗೂ ದೀಪಿಕಾ ಪಡುಕೋಣೆ ನಟನೆಯ ‘ಪಠಾಣ್​’ ಚಿತ್ರ ಸದ್ಯ ಸುದ್ದಿಯಲ್ಲಿದೆ. ಈ ಸಿನಿಮಾದ ‘ಬೇಷರಂ ರಂಗ್​..’ ಹಾಡು ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ (Deepika Padukone) ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ, ಈ ಚಿತ್ರದಲ್ಲಿ ಅವರು ಧರಿಸಿದ್ದ ಹಳದಿ ಬಣ್ಣದ ಉಡುಗೆ ಸಾಕಷ್ಟು ಚರ್ಚೆ ಹುಟ್ಟು ಹಾಕಿತ್ತು. ಈ ವಿವಾದ ತಣ್ಣಗಾಗುವ ಮೊದಲೇ ಎರಡನೇ ಹಾಡನ್ನು ರಿಲೀಸ್ ಮಾಡಲಾಗಿದೆ. ‘ಜೂಮೇ ಜೋ ಪಠಾಣ್​..’ ಹೆಸರಿನ ಸಾಂಗ್ ಇದಾಗಿದ್ದು ದೀಪಿಕಾ ಸಖತ್ ಹಾಟ್ ಆಗಿ ಮಿಂಚಿದ್ದಾರೆ.

ಶಾರುಖ್ ಖಾನ್ ಹಾಗೂ ದೀಪಿಕಾ ಅವರದ್ದು ಹಿಟ್ ಕಾಂಬಿನೇಷನ್. ಈ ಜೋಡಿ ನಟಿಸಿದ ‘ಓಂ ಶಾಂತಿ ಓಂ’, ‘ಚೆನ್ನೈ ಎಕ್ಸ್​ಪ್ರೆಸ್​’ ಹಾಗೂ ‘ಹ್ಯಾಪಿ ನ್ಯೂ ಇಯರ್’ ಗೆದ್ದಿವೆ. ಈಗ ‘ಪಠಾಣ್​’ ಚಿತ್ರ ಕೂಡ ಗೆಲ್ಲಲಿದೆ ಎಂಬ ನಿರೀಕ್ಷೆಯಲ್ಲಿ ತಂಡ ಇದೆ. ಈ ಮಧ್ಯೆ ಸಿನಿಮಾ ವಿವಾದ ಸೃಷ್ಟಿ ಮಾಡಿದೆ. ‘ಬೇಷರಂ ರಂಗ್​..’ ಹಾಡಿಗೆ ಸಂಬಂಧಿಸಿ ಶಾರುಖ್ ಹಾಗೂ ದೀಪಿಕಾ ಬೆದರಿಕೆ ಎದುರಿಸಿದ್ದಾರೆ. ಹೀಗಿರುವಾಗಲೇ ‘ಜೂಮೇ ಜೋ ಪಠಾಣ್​..’ ಹಾಡು ರಿಲೀಸ್ ಆಗಿದೆ.

ಈ ಹಾಡು ರಿಲೀಸ್ ಆಗಿ ಕೇವಲ ಎರಡು ಗಂಟೆಯಲ್ಲಿ ಈ ಹಾಡು 25 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಈ ಹಾಡಿನಲ್ಲೂ ದೀಪಿಕಾ ಸಖತ್ ಹಾಟ್ ಆಗಿ ಮಿಂಚಿದ್ದಾರೆ. ಆದರೆ, ಎಲ್ಲಿಯೂ ಅವರು ಕೇಸರಿ ಬಣ್ಣದ ಬಟ್ಟೆ ಧರಿಸಿಲ್ಲ. ಹೀಗಾಗಿ, ಈ ಹಾಡಿನಿಂದ ವಿವಾದ ಸೃಷ್ಟಿ ಆಗುವುದಿಲ್ಲ ಎಂದು ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ. ಈ ಹಾಡಿನಲ್ಲಿ ಶಾರುಖ್ ಖಾನ್ ಉದ್ದ ಕೂದಲು ಬಿಟ್ಟು ಮಿಂಚಿದ್ದಾರೆ.

ಇದನ್ನೂ ಓದಿ
Image
Vivek Agnihotri: ಶಾರುಖ್​​ ನಟನೆಯ ‘ಬೇಷರಂ ರಂಗ್​’ ಹಾಡು ನೋಡಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ವಿವೇಕ್​ ಅಗ್ನಿಹೋತ್ರಿ
Image
Deepika Padukone: ‘ಬೇಷರಂ​ ರಂಗ್​’ ಹಾಡಿನ ವಿವಾದ; ದೀಪಿಕಾ ಕೇಸರಿ ಬಿಕಿನಿ ಧರಿಸಿದ್ದಕ್ಕೂ ನೆಟ್ಟಿಗರ ತಕರಾರು
Image
Besharam Rang: ಹೊಸ ಹಾಡಿನಲ್ಲಿ ಹಾಟ್​ ಆಗಿ ಕಾಣಿಸಿಕೊಂಡ ದೀಪಿಕಾ; ‘ಪಠಾಣ್​’ ಚಿತ್ರದ ಮೇಲೆ ಹೆಚ್ಚಿತು ನಿರೀಕ್ಷೆ
Image
Besharam Rang: ಕೆಲವೇ ನಿಮಿಷಗಳಲ್ಲಿ 1 ಮಿಲಿಯನ್​ ವೀಕ್ಷಣೆ ಕಂಡ ‘ಪಠಾಣ್​’ ಸಿನಿಮಾ ಹಾಡು​

ಇದನ್ನೂ ಓದಿ: Shah Rukh Khan: ‘ಮದುವೆ ಡೇಟ್​ ಮುಂದೂಡಿಕೊಳ್ಳಿ’: ಅಭಿಮಾನಿಗೆ ಸಲಹೆ ನೀಡಿದ ‘ಪಠಾಣ್​’ ಹೀರೋ ಶಾರುಖ್​ ಖಾನ್​

ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆ ಆಗಲಿರುವ ‘ಪಠಾಣ್​’ ಚಿತ್ರಕ್ಕೆ ಸಿದ್ದಾರ್ಥ್​ ಆನಂದ್​ ನಿರ್ದೇಶನ ಮಾಡಿದ್ದಾರೆ. ಪ್ರತಿಷ್ಠಿತ ‘ಯಶ್​ ರಾಜ್​ ಫಿಲ್ಮ್ಸ್​’ ಬ್ಯಾನರ್​ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ವಿಲನ್​ ಆಗಿ ಜಾನ್​ ಅಬ್ರಾಹಂ ನಟಿಸಿದ್ದು, ಸ್ಟಾರ್​ ಮೆರುಗು ಹೆಚ್ಚಿದೆ. ಅದ್ದೂರಿ ಬಜೆಟ್​ನಲ್ಲಿ ತಯಾರಾದ ಈ ಸಿನಿಮಾವನ್ನು ವಿವಿಧ ದೇಶಗಳಲ್ಲಿ ಚಿತ್ರಿಸಲಾಗಿದೆ. ಬರೋಬ್ಬರಿ 4 ವರ್ಷಗಳ ಬಳಿಕ ಶಾರುಖ್​ ಖಾನ್​ ಅವರು ದೊಡ್ಡ ಪರದೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಆ ಕಾರಣದಿಂದಲೂ ನಿರೀಕ್ಷೆ ಹೆಚ್ಚಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ