AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಲಾಜಿಲ್ಲದೇ ‘ಏಕ್ ದಿನ್’ ಸಿನಿಮಾದ ಸೋಲು ಒಪ್ಪಿಕೊಂಡ ಆಮಿರ್ ಖಾನ್ ಪುತ್ರ ಜುನೈದ್ ಖಾನ್

ಮಗನಿಗಾಗಿ ಆಮಿರ್ ಖಾನ್ ನಿರ್ಮಾಣ ಮಾಡಿದ ‘ಏಕ್ ದಿನ್’ ಸಿನಿಮಾ ಸೋತಿದೆ. ಸಾಯಿ ಪಲ್ಲವಿ ಹಾಗೂ ಜುನೈದ್ ಖಾನ್ ಅಭಿನಯದ ಈ ಸಿನಿಮಾ 11 ದಿನಗಳಲ್ಲಿ ಗಳಿಸಿದ್ದ ಅಂದಾಜು 5.44 ಕೋಟಿ ರೂಪಾಯಿ ಮಾತ್ರ. ಈ ಸೋಲಿನಿಂದಾಗಿ ಆಮಿರ್ ಖಾನ್ ಅವರಿಗೆ ಬಹಳ ಬೇಸರ ಆಗಿದೆ.

ಮುಲಾಜಿಲ್ಲದೇ ‘ಏಕ್ ದಿನ್’ ಸಿನಿಮಾದ ಸೋಲು ಒಪ್ಪಿಕೊಂಡ ಆಮಿರ್ ಖಾನ್ ಪುತ್ರ ಜುನೈದ್ ಖಾನ್
Aamir Khan, Sai Pallavi, Junaid Khan
ಮದನ್​ ಕುಮಾರ್​
|

Updated on: May 12, 2026 | 3:50 PM

Share

ಬಾಲಿವುಡ್ ನಟ ಆಮಿರ್ ಖಾನ್ (Aamir Khan) ಪುತ್ರ ಜುನೈದ್ ಖಾನ್ ನಟನೆಯ ಎರಡನೇ ಸಿನಿಮಾ ‘ಏಕ್ ದಿನ್’ (Ek Din) ಇತ್ತೀಚೆಗೆ ಬಿಡುಗಡೆ ಆಯಿತು. ಈ ಸಿನಿಮಾ ಮೇಲೆ ಅವರಿಗೆ ಬಹಳ ನಿರೀಕ್ಷೆ ಇತ್ತು. ಆದರೆ ಬಾಕ್ಸ್ ಆಫೀಸ್‌ನಲ್ಲಿ ಈ ಸಿನಿಮಾ ಮಕಾಡೆ ಮಲಗಿದೆ. ‘ಏಕ್ ದಿನ್’ ಚಿತ್ರದ ಸೋಲು ಸ್ವತಃ ಜುನೈದ್‌ ಖಾನ್​ ಅವರಿಗಿಂತಲೂ ಅಮೀರ್ ಖಾನ್ ಅವರನ್ನೇ ಹೆಚ್ಚು ಕಾಡುತ್ತಿದೆ ಎಂಬ ವಿಷಯ ಈಗ ಹೊರಬಿದ್ದಿದೆ. ಇತ್ತೀಚೆಗೆ ಯೂಟ್ಯೂಬ್ ಚಾನೆಲ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಜುನೈದ್ ಖಾನ್ (Junaid Khan) ಅವರು ಚಿತ್ರದ ವೈಫಲ್ಯದ ಬಗ್ಗೆ ಮಾತನಾಡಿದ್ದಾರೆ.

‘ಏಕ್ ದಿನ’ ಚಿತ್ರವು ವಿಮರ್ಶಕರು ಮತ್ತು ಪ್ರೇಕ್ಷಕರಿಂದ ಮಿಶ್ರ ಹಾಗೂ ನಕಾರಾತ್ಮಕ ವಿಮರ್ಶೆಗಳನ್ನು ಪಡೆಯಿತು. ಮೇ 1ರಂದು ಬಿಡುಗಡೆಯಾದ ಈ ಸಿನಿಮಾ ಮೊದಲ ದಿನ ಕೇವಲ 1 ಕೋಟಿ ರೂಪಾಯಿ ಗಳಿಸಿತು. ನಂತರದ ದಿನಗಳಲ್ಲಿ ಗಳಿಕೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿತು. ವರದಿಗಳ ಪ್ರಕಾರ, 11 ದಿನಗಳಲ್ಲಿ ಈ ಚಿತ್ರವು ವಿಶ್ವದಾದ್ಯಂತ ಕೇವಲ 5.44 ಕೋಟಿ ರೂಪಾಯಿ ಮತ್ತು ಭಾರತದಲ್ಲಿ 4.25 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ.

ಸಿನಿಮಾವನ್ನು ನಿರ್ಮಾಣ ಮಾಡಿದ್ದ ಆಮಿರ್ ಖಾನ್ ಅವರಿಗೆ ಚಿತ್ರದ ಮೇಲೆ ಅಪಾರ ನಂಬಿಕೆ ಇತ್ತು. ಆದರೆ ಸಿನಿಮಾ ಸೋತಾಗ ಅವರು ತುಂಬಾ ಭಾವುಕರಾಗಿದ್ದಾರೆ ಎಂದು ಜುನೈದ್ ಹೇಳಿದ್ದಾರೆ. ಇದು ಸಾಯಿ ಪಲ್ಲವಿ ಅವರು ಬಾಲಿವುಡ್​ನಲ್ಲಿ ನಟಿಸಿದ ಮೊದಲ ಸಿನಿಮಾ ಆಗಿದ್ದರೂ ಕೂಡ ಅಭಿಮಾನಿಗಳನ್ನು ಸೆಳೆಯುವಲ್ಲಿ ವಿಫಲ ಆಯಿತು. ಬಾಕ್ಸ್ ಆಫೀಸ್​​ನಲ್ಲಿ ಹೀನಾಯ ಕಲೆಕ್ಷನ್ ಆಯಿತು.

‘ನನ್ನ ತಂದೆ ಇನ್ನೂ ಆ ಸೋಲಿನ ನೋವಿನಲ್ಲಿದ್ದಾರೆ. ಇಷ್ಟು ವರ್ಷಗಳ ಅನುಭವದ ನಂತರವೂ ಚಿತ್ರದ ವೈಫಲ್ಯ ಅವರನ್ನು ತುಂಬಾ ಕಾಡುತ್ತದೆ. ಅವರು ಸಿನಿಮಾವನ್ನು ತುಂಬಾ ವೈಯಕ್ತಿಕವಾಗಿ ತೆಗೆದುಕೊಳ್ಳುತ್ತಾರೆ. ವಿಶೇಷವಾಗಿ ಆ ಸಿನಿಮಾ ಅವರಿಗೆ ಇಷ್ಟವಾಗಿದ್ದರೆ ಅದರ ಸೋಲು ಅವರಿಗೆ ಅತಿಯಾಗಿ ನೋವು ನೀಡುತ್ತದೆ’ ಎಂದು ಜುನೈದ್ ವಿವರಿಸಿದ್ದಾರೆ.

ಇದನ್ನೂ ಓದಿ: ಮಗನ ಸಿನಿಮಾ ಕಾರ್ಯಕ್ರಮದಲ್ಲಿ ಕಣ್ಣೀರು ಹಾಕಿದ ಆಮಿರ್ ಖಾನ್; ವಿಡಿಯೋ ವೈರಲ್

ಜುನೈದ್ ಖಾನ್ ಅವರ ಮೊದಲ ಚಿತ್ರ ‘ಮಹಾರಾಜ್’ ಒಟಿಟಿಯಲ್ಲಿ ಬಿಡುಗಡೆಯಾಗಿ ಮೆಚ್ಚುಗೆ ಪಡೆದಿತ್ತು. ಆದರೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಅವರ ‘ಲವ್ಯಪ’ ಮತ್ತು ‘ಏಕ್ ದಿನ್’ ಸಿನಿಮಾಗಳು ಸತತವಾಗಿ ಸೋಲು ಕಂಡಿವೆ. ಮುಂದಿನ ದಿನಗಳಲ್ಲಿ ಜುನೈದ್ ‘ರಾಗಿಣಿ MMS 3’ ಸಿನಿಮಾದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ ಎಂಬ ವದಂತಿಗಳಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು