AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಾಯಣ ಸಿನಿಮಾದಲ್ಲಿ ಯಶ್​ಗೆ ಕಾಜಲ್ ಅಗರ್​ವಾಲ್ ಜೋಡಿ; ಮಂಡೋದರಿ ಪಾತ್ರದಲ್ಲಿ ‘ಮಗಧೀರ’ ಚೆಲುವೆ

ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ ಕಾಜಲ್ ಅಗರ್​ವಾಲ್ ಅವರಿಗೆ ಈಗಲೂ ಅಷ್ಟೇ ಬೇಡಿಕೆ ಇದೆ. ‘ರಾಮಾಯಣ’ ಸಿನಿಮಾದಲ್ಲಿ ಮಂಡೋದರಿ ಪಾತ್ರಕ್ಕಾಗಿ ಅವರನ್ನು ಆಯ್ಕೆ ಮಾಡಲಾಗಿದೆ ಎಂಬ ಸುದ್ದಿ ಕೇಳಿಬಂದಿದೆ. ರಾವಣನಾಗಿ ನಟಿಸುತ್ತಿರುವ ಯಶ್ ಜೊತೆ ಕಾಜಲ್ ಅಗರ್​ವಾಲ್ ಅವರು ತೆರೆ ಹಂಚಿಕೊಳ್ಳಲಿದ್ದಾರೆ.

ರಾಮಾಯಣ ಸಿನಿಮಾದಲ್ಲಿ ಯಶ್​ಗೆ ಕಾಜಲ್ ಅಗರ್​ವಾಲ್ ಜೋಡಿ; ಮಂಡೋದರಿ ಪಾತ್ರದಲ್ಲಿ ‘ಮಗಧೀರ’ ಚೆಲುವೆ
Kajal Aggarwal, Yash
ಮದನ್​ ಕುಮಾರ್​
|

Updated on: May 16, 2025 | 5:00 PM

Share

ಬಾಲಿವುಡ್​ನಲ್ಲಿ ಸಿದ್ಧವಾಗುತ್ತಿರುವ ‘ರಾಮಾಯಣ’ (Ramayana) ಸಿನಿಮಾ ಮೇಲೆ ಇರುವ ನಿರೀಕ್ಷೆ ಅಷ್ಟಿಷ್ಟಲ್ಲ. ಪಾತ್ರವರ್ಗದ ಕಾರಣದಿಂದಲೇ ಈ ಸಿನಿಮಾ ಹೈಪ್ ಕ್ರಿಯೇಟ್ ಮಾಡಿದೆ. ಅದರಲ್ಲೂ ‘ರಾಕಿಂಗ್ ಸ್ಟಾರ್’ ಯಶ್ (Yash) ಅವರು ಈ ಸಿನಿಮಾದಲ್ಲಿ ರಾವಣನ ಪಾತ್ರ ಮಾಡುತ್ತಿರುವುದರಿಂದ ಅಭಿಮಾನಿಗಳಲ್ಲಿ ನಿರೀಕ್ಷೆ ಡಬಲ್ ಆಗಿದೆ. ರಾಮಾಯಣದಲ್ಲಿ ಹಲವು ಪ್ರಮುಖ ಪಾತ್ರಗಳು ಇವೆ. ಅವುಗಳಿಗೆ ಕಲಾವಿದರ ಆಯ್ಕೆ ನಡೆಯುತ್ತಿದೆ. ರಾವಣನ ಪತ್ನಿ ಮಂಡೋದರಿ ಪಾತ್ರದಲ್ಲಿ ನಟಿಸಲು ಕಾಜಲ್ ಅಗರ್​ವಾಲ್ (Kajal Aggarwal) ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

‘ರಾಮಾಯಣ’ ಸಿನಿಮಾದಲ್ಲಿ ರಣಬೀರ್ ಕಪೂರ್ ಅವರು ರಾಮನಾಗಿ ನಟಿಸುತ್ತಿದ್ದಾರೆ. ಸೀತೆಯ ಪಾತ್ರದಲ್ಲಿ ಸಾಯಿ ಪಲ್ಲವಿ ಅವರು ಅಭಿನಯಿಸುತ್ತಿದ್ದಾರೆ. ನಿತೇಶ್ ತಿವಾರಿ ನಿರ್ದೇಶನ ಮಾಡುತ್ತಿರುವ ಈ ಸಿನಿಮಾಗೆ ಚಿತ್ರೀಕರಣ ನಡೆಯುತ್ತಿದೆ. ಯಶ್ ಕೂಡ ಶೂಟಿಂಗ್​ನಲ್ಲಿ ಭಾಗಿಯಾಗಿದ್ದಾರೆ. ಅವರ ಜೊತೆ ಕಾಜಲ್ ಅಗರ್​ವಾಲ್​ ಕೂಡ ನಟಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

ಪಾತ್ರವರ್ಗದ ಬಗ್ಗೆ ಚಿತ್ರತಂಡದವರು ಅಧಿಕೃತವಾಗಿ ಹೇಳಿಕೆ ನೀಡಿಲ್ಲ. ಹಾಗಿದ್ದರೂ ಕೂಡ ಅನೇಕ ಮಾಹಿತಿ ಲೀಕ್ ಆಗಿದೆ. ಚಿತ್ರತಂಡದ ಆಪ್ತ ಮೂಲಗಳು ಹೇಳಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ. ರಾಮಾಯಣದಲ್ಲಿ ಮಂಡೋದರಿ ಪಾತ್ರ ಕೂಡ ಪ್ರಮುಖವಾಗಿ ಬರಲಿದೆ. ಆ ಪಾತ್ರಕ್ಕೆ ಯಾವ ನಟಿ ಸೂಕ್ತ ಎನಿಸುತ್ತಾರೆ ಎಂಬ ಚರ್ಚೆ ನಡೆದಿತ್ತು. ಅಂತಿಮವಾಗಿ ಕಾಜಲ್ ಅಗರ್ವಾಲ್ ಆಯ್ಕೆ ಆಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ
Image
‘ರಾಮಾಯಣ’ ಬಿಡುಗಡೆ ದಿನಾಂಕ ಘೋಷಣೆ: ಯಶ್ ಫಸ್ಟ್ ಲುಕ್​ಗೆ ಹೆಚ್ಚಿತು ಬೇಡಿಕೆ
Image
ಅಬ್ಬಬ್ಬಾ... ‘ರಾಮಾಯಣ’ ಸಿನಿಮಾ ಬಜೆಟ್​ ಬರೋಬ್ಬರಿ 835 ಕೋಟಿ ರೂಪಾಯಿ?
Image
‘ರಾಮಾಯಣ’ ಚಿತ್ರತಂಡದಿಂದ ಕಾಪಿರೈಟ್​ ಉಲ್ಲಂಘನೆ? ನಿರ್ಮಾಪಕರಿಗೆ ನೋಟಿಸ್​
Image
ರಾಮಾಯಣ ಸಿನಿಮಾಗಾಗಿ ಹಳ್ಳಿಗೆ ಹೋಗಿ ತರಬೇತಿ ಪಡೆಯುತ್ತಿರುವ ರಣಬೀರ್​ ಕಪೂರ್​

ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿದ್ಧವಾಗುತ್ತಿದೆ. ಹಾಗಾಗಿ ಎಲ್ಲ ಭಾಷೆಗಳಲ್ಲೂ ಪರಿಚಿತವಾಗಿರುವ ನಟಿಯನ್ನೇ ಆಯ್ಕೆ ಮಾಡಿಕೊಳ್ಳಬೇಕು ಎಂಬುದು ಚಿತ್ರತಂಡದ ಉದ್ದೇಶ. ಆದ್ದರಿಂದ ಕಾಜಲ್ ಅಗರ್​ವಾಲ್ ಅವರನ್ನು ಆಯ್ಕೆ ಮಾಡಲಾಗಿದೆ. ‘ಮಗಧೀರ’ ಸಿನಿಮಾದಲ್ಲಿ ಕಾಜಲ್ ಅವರು ರಾಣಿ ಪಾತ್ರ ಮಾಡಿ ಗಮನ ಸೆಳೆದಿದ್ದರು. ಈಗ ಅವರು ಮಂಡೋದರಿ ಪಾತ್ರದಲ್ಲಿ ಯಾವ ರೀತಿ ಕಾಣಿಸುತ್ತಾರೆ ಎಂಬುದನ್ನು ನೋಡಲು ಫ್ಯಾನ್ಸ್ ಕಾದಿದ್ದಾರೆ.

ಇದನ್ನೂ ಓದಿ: 38 ವರ್ಷ ಕಳೆದರೂ ‘ರಾಮಾಯಣ’ ಧಾರಾವಾಹಿ ದಾಖಲೆ ಯಾರೂ ಮುರಿದಿಲ್ಲ; ಇಲ್ಲಿದೆ ಲೆಕ್ಕ

ದಕ್ಷಿಣ ಭಾರತದ ಚಿತ್ರರಂಗ ಮತ್ತು ಬಾಲಿವುಡ್​ನಲ್ಲಿ ಕಾಜಲ್ ಅಗರ್​ವಾಲ್ ಅವರಿಗೆ ಬೇಡಿಕೆ ಇದೆ. ಇತ್ತೀಚೆಗೆ ಅವರು ಸಲ್ಮಾನ್ ಖಾನ್ ಅಭಿನಯದ ‘ಸಿಕಂದರ್’ ಚಿತ್ರದಲ್ಲಿ ನಟಿಸಿದ್ದರು. ಈಗ ಅವರಿಗೆ 39 ವರ್ಷ ವಯಸ್ಸು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?