Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನ್ಮದಿನದ ಸಂಭ್ರಮದಲ್ಲಿ ಕಾಜೋಲ್​; ‘ಡಿಡಿಎಲ್​ಜೆ’ ಸುಂದರಿಗೆ ಈಗ ವಯಸ್ಸೆಷ್ಟು? ಗಳಿಸಿದ ಆಸ್ತಿ ಎಷ್ಟು?

Kajol Birthday: ಪ್ರತಿ ವರ್ಷ ಕಾಜೋಲ್​ ಅವರು 12 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ ಎನ್ನಲಾಗಿದೆ. ನೂರಾರು ಕೋಟಿ ರೂಪಾಯಿ ಮೌಲ್ಯದ ಆಸ್ತಿಗೆ ಅವರು ಒಡತಿ ಆಗಿದ್ದಾರೆ.

ಜನ್ಮದಿನದ ಸಂಭ್ರಮದಲ್ಲಿ ಕಾಜೋಲ್​; ‘ಡಿಡಿಎಲ್​ಜೆ’ ಸುಂದರಿಗೆ ಈಗ ವಯಸ್ಸೆಷ್ಟು? ಗಳಿಸಿದ ಆಸ್ತಿ ಎಷ್ಟು?
ಕಾಜೋಲ್​
Follow us
ಮದನ್​ ಕುಮಾರ್​
|

Updated on:Aug 05, 2023 | 9:53 AM

ಖ್ಯಾತ ನಟಿ ಕಾಜೋಲ್​ (Kajol) ಅವರು ಬಾಲಿವುಡ್​ನಲ್ಲಿ ಸಕ್ರಿಯರಾಗಿದ್ದಾರೆ. ಇಂದು (ಆಗಸ್ಟ್​ 5) ಅವರಿಗೆ ಜನ್ಮದಿನದ (Kajol Birthday) ಸಂಭ್ರಮ. ಆ ಪ್ರಯುಕ್ತ ಎಲ್ಲರೂ ಶುಭ ಕೋರುತ್ತಿದ್ದಾರೆ. ಅಭಿಮಾನಿಗಳು ತಮ್ಮ ನೆಚ್ಚಿನ ನಟಿಯ ಹುಟ್ಟುಹಬ್ಬವನ್ನು ಸೆಲೆಬ್ರೇಟ್​ ಮಾಡುತ್ತಿದ್ದಾರೆ. ಹಲವು ವರ್ಷಗಳಿಂದ ಆ್ಯಕ್ಟೀವ್​ ಆಗಿರುವ ಕಾಜೋಲ್​ ಅವರು ಇತ್ತೀಚೆಗೆ ಚ್ಯೂಸಿ ಆಗಿದ್ದಾರೆ. ತಮಗೆ ಸರಿಹೊಂದುವ ಪ್ರಾಜೆಕ್ಟ್​ಗಳನ್ನು ಮಾತ್ರ ಆಯ್ಕೆ ಮಾಡಿಕೊಳ್ಳುತ್ತಾರೆ. ಡಿಫರೆಂಟ್​ ಆದಂತಹ ಪಾತ್ರಗಳಿಗೆ ಅವರು ಬಣ್ಣ ಹಚ್ಚುತ್ತಿದ್ದಾರೆ. ಅಂದಹಾಗೆ, ಈಗ ಕಾಜೋಲ್​ ಅವರಿಗೆ ವಯಸ್ಸು (Kajol Age) ಎಷ್ಟು? 49 ವರ್ಷ. ಈಗಲೂ ಕೂಡ ಕಾಜೋಲ್​ ಅವರು ಹದಿಹರೆಯದ ಯುವತಿಯರಂತೆ ಮಿಂಚುತ್ತಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ನೂರಾರು ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಅವರು ಹೊಂದಿದ್ದಾರೆ.

ಕಾಜೋಲ್​ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು 1992ರಲ್ಲಿ. ಶಾರುಖ್​ ಖಾನ್​ ಜೊತೆ ಅವರು ತೆರೆ ಹಂಚಿಕೊಂಡ ಸಿನಿಮಾಗಳು ಎಂದರೆ ಅಭಿಮಾನಿಗಳಿಗೆ ಸಖತ್​ ಇಷ್ಟ. ‘ಬಾಜಿಗರ್​’, ‘ಡಿಡಿಎಲ್​ಜೆ’ ಮುಂತಾದ ಸಿನಿಮಾಗಳ ಮೂಲಕ ಕಾಜೋಲ್​ ಮನೆಮಾತಾದರು. ಇಂದಿಗೂ ಬಾಲಿವುಡ್​ನಲ್ಲಿ ಕಾಜೋಲ್​ ಅವರಿಗೆ ಅಷ್ಟೇ ಬೇಡಿಕೆ ಇದೆ. ಈ ವರ್ಷ ಬಿಡುಗಡೆ ಆದ ‘ಲಸ್ಟ್​ ಸ್ಟೋರೀಸ್​ 2’ ಸಿನಿಮಾದಲ್ಲಿ ಅವರು ನಟಿಸಿ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: Kajol: ‘ಪಠಾಣ್​’ ಕಲೆಕ್ಷನ್​ ಬಗ್ಗೆ ಬಹಿರಂಗವಾಗಿ ಅನುಮಾನ ವ್ಯಕ್ತಪಡಿಸಿದ ಕಾಜೋಲ್​; ಶಾರುಖ್​ ಅಭಿಮಾನಿಗಳು ಗರಂ

ಪ್ರತಿ ಸಿನಿಮಾಗಳಿಗೂ ಕಾಜೋಲ್​ ಅವರು ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಹಲವು ಕ್ಷೇತ್ರಗಳಲ್ಲಿ ಅವರು ಹೂಡಿಕೆ ಮಾಡಿದ್ದಾರೆ. ಪ್ರತಿ ವರ್ಷ ಅವರು ಸಿನಿಮಾ, ಜಾಹೀರಾತು ಮುಂತಾದ ಕೆಲಸಗಳಿಗೆ ಅಂದಾಜು 12 ಕೋಟಿ ರೂಪಾಯಿ ಸಂಬಳ ಪಡೆಯುತ್ತಾರೆ. 2023ರಲ್ಲಿ ಅವರ ಒಟ್ಟು ಆಸ್ತಿ ಮೊತ್ತ ಅಂದಾಜು 200 ಕೋಟಿ ರೂಪಾಯಿ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: Nysa Devgan: ಪಾಪರಾಜಿಗಳ ಜೊತೆ ನಿಸಾ ದೇವಗನ್ ನಡೆದುಕೊಂಡಿದ್ದು ಹೇಗೆ? ಮಗಳ ವರ್ತನೆ ಬಗ್ಗೆ ಕಾಜೋಲ್​ ಪ್ರತಿಕ್ರಿಯೆ

ಇತ್ತೀಚೆಗೆ ಕಾಜೋಲ್​ ಅವರು ಒಂದಷ್ಟು ವಿವಾದಗಳ ಮೂಲಕ ಸುದ್ದಿಯಾದರು. ತಾವು ನಟಿಸಿದ ‘ದಿ ಟ್ರಯಲ್​’ ವೆಬ್​ ಸರಣಿಯ ಪ್ರಚಾರಕ್ಕಾಗಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಗಿಮಿಕ್​ ಮಾಡಿದ್ದು ಜನರಿಗೆ ಇಷ್ಟ ಆಗಲಿಲ್ಲ. ‘ಶಿಕ್ಷಣ ಪಡೆಯದ ರಾಜಕಾರಣಿಗಳು ನಮ್ಮನ್ನು ಆಳುತ್ತಿದ್ದಾರೆ’ ಎಂದು ಕಾಜೋಲ್​ ಹೇಳಿಕೆ ನೀಡಿದ್ದು ಕೂಡ ವಿವಾದಕ್ಕೆ ಕಾರಣ ಆಗಿತ್ತು. ಹಳೆಯ ವಿಡಿಯೋವೊಂದರಲ್ಲಿ ಅವರು ಜನಾಂಗೀಯ ನಿಂದನೆ ಮಾಡುವಂತಹ ಪದ ಬಳಸಿದ್ದು, ಆ ವಿಡಿಯೋ ಮತ್ತೆ ವೈರಲ್​ ಆಗಿದ್ದರಿಂದ ಭಾರಿ ಆಕ್ಷೇಪ ವ್ಯಕ್ತವಾಗಿತ್ತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:57 am, Sat, 5 August 23

ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್