AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮೋಜಿ ಫಿಲ್ಮ್ ಸಿಟಿಯಲ್ಲಿ ದೆವ್ವದ ಅನುಭವ; ನಟಿ ಕಾಜೋಲ್ ಶಾಕಿಂಗ್ ಹೇಳಿಕೆ

ಅನೇಕ ಸೂಪರ್ ಹಿಟ್ ಸಿನಿಮಾಗಳ ಶೂಟಿಂಗ್ ಆಗಿರುವುದೇ ರಾಮೋಜಿ ಫಿಲ್ಮ್ ಸಿಟಿಯಲ್ಲಿ. ಆದರೆ ಈ ಜಾಗದಲ್ಲಿ ದೆವ್ವದ ಅನುಭವ ಆಗಿದೆ ಎಂದು ನಟಿ ಕಾಜೋಲ್ ಅವರು ಹೇಳಿದ್ದಾರೆ. ಅವರ ಹೇಳಿಕೆಯನ್ನು ಕೆಲವರು ವಿರೋಧಿಸುತ್ತಿದ್ದಾರೆ. ಕಾಜೋಲ್ ನೀಡಿರುವ ಹೇಳಿಕೆ ಬಗ್ಗೆ ಇಲ್ಲಿದೆ ಇನ್ನಷ್ಟು ವಿವರ..

ರಾಮೋಜಿ ಫಿಲ್ಮ್ ಸಿಟಿಯಲ್ಲಿ ದೆವ್ವದ ಅನುಭವ; ನಟಿ ಕಾಜೋಲ್ ಶಾಕಿಂಗ್ ಹೇಳಿಕೆ
Ramoji Film City, Kajol
ಮದನ್​ ಕುಮಾರ್​
|

Updated on:Jun 18, 2025 | 6:46 PM

Share

ಬಾಲಿವುಡ್ ನಟಿ ಕಾಜೋಲ್ (Kajol) ಅವರು ‘ಮಾ’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈ ಸಿನಿಮಾ ಜೂನ್ 27ರಂದು ಬಿಡುಗಡೆ ಆಗಲಿದೆ. ಈ ಚಿತ್ರದ ಪ್ರಚಾರ ಕಾರ್ಯದಲ್ಲಿ ಕಾಜೋಲ್ ಬ್ಯುಸಿ ಆಗಿದ್ದಾರೆ. ಹಲವು ಮಾಧ್ಯಮಗಳಿಗೆ ಅವರು ಸಂದರ್ಶನ ನೀಡುತ್ತಿದ್ದಾರೆ. ಈ ವೇಳೆ ಅವರು ತಮಗೆ ಆದ ಹಾರ್​ ಅನುಭವದ ಬಗ್ಗೆ ಮಾತನಾಡಿದ್ದಾರೆ. ಯಾಕೆಂದರೆ, ‘ಮಾ’ (Maa) ಸಿನಿಮಾದಲ್ಲಿ ಕೂಡ ಹಾರರ್ ಕಹಾನಿ ಇದೆ. ದೆವ್ವ-ಭೂತದ ಸಿನಿಮಾ ನೋಡಿ ಎಂಜಾಯ್ ಮಾಡಬೇಕು ಎನ್ನುವವರು ‘ಮಾ’ ಸಿನಿಮಾಗಾಗಿ ಕಾದಿದ್ದಾರೆ. ರಾಮೋಜಿ ಫಿಲ್ಮ್ ಸಿಟಿಯಲ್ಲಿ (Ramoji Film City) ದೆವ್ವದ ಅನುಭವ ಆಗಿದೆ ಎಂದು ಕಾಜೋಲ್ ಅವರು ಹೇಳಿದ್ದಾರೆ.

ಹೈದರಾಬಾದ್​ನಲ್ಲಿ ರಾಮೋಜಿ ಫಿಲ್ಮ್ ಸಿಟಿ ಇದೆ. ತೆಲುಗು ಸಿನಿಮಾ ಮಾತ್ರವಲ್ಲದೇ ಹಿಂದಿ, ತಮಿಳು, ಕನ್ನಡ ಸೇರಿ ಹಲವು ಭಾಷೆಯ ಸಿನಿಮಾಗಳು ಇಲ್ಲಿ ಚಿತ್ರೀಕರಣ ಆಗುತ್ತವೆ. ಕಾಜೋಲ್ ಕೂಡ ಅನೇಕ ಸಿನಿಮಾಗಳ ಚಿತ್ರೀಕರಣವನ್ನು ರಾಮೋಜಿ ಫಿಲ್ಮ್ ಸಿಟಿಯಲ್ಲಿ ಮಾಡಿದ್ದಾರೆ. ಅಲ್ಲಿ ತಮಗೆ ಆದ ಅನುಭವ ಹೇಗಿತ್ತು ಎಂಬುದನ್ನು ಅವರು ಹೇಳಿದ್ದಾರೆ.

ಇದನ್ನೂ ಓದಿ
Image
ಸಿನಿಮಾಗಳನ್ನು ಬಿಟ್ಟು ವಾಚ್‌ಮ್ಯಾನ್ ಆದ ನಟ; ಈ ಪರಿಸ್ಥಿತಿ ಯಾರಿಗೂ ಬರಬಾರದು
Image
ದಕ್ಷಿಣದ ನಿರ್ಮಾಪಕರ ನೋಡಿ ಕಲಿಯಿರಿ: ಸ್ಟಾರ್ ನಟ ಟಾಂಗ್
Image
ಬಾಲಿವುಡ್ ಹೀರೋಗಳ ಬಣ್ಣ ಬಯಲು ಮಾಡಿದ ಸೋನು ಸೂದ್
Image
‘ಬಾಲಿವುಡ್ ಸಿನಿಮಾಗಳು ಭಾರತವನ್ನು ಕೆಟ್ಟದಾಗಿ ತೋರಿಸಿವೆ’; ರಿಷಬ್ ಶೆಟ್ಟಿ

ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಕಾಜೋಲ್ ಅವರು ಈ ಬಗ್ಗೆ ಮಾತಾಡಿದ್ದಾರೆ. ‘ಭಯ ಆಗುವಂತಹ ಅನೇಕ ಸ್ಥಳಗಳು ಇವೆ. ಹೈದರಾಬಾದ್​ನ ರಾಮೋಜಿ ಫಿಲ್ಮ್ ಸಿಟಿ ಅದಕ್ಕೆ ಪ್ರಮುಖ ಉದಾಹರಣೆ. ಜಗತ್ತಿನಲ್ಲಿ ಹೆಚ್ಚು ಭಯಬೀಳಿಸುವ ಸ್ಥಳಗಳಲ್ಲಿ ಇದು ಕೂಡ ಒಂದು ಎಂದು ಪರಿಗಣಿಸಲಾಗುತ್ತದೆ. ದೇವರು ನನ್ನನ್ನು ಕಾಪಾಡಿದ್ದಾನೆ ಎನಿಸುತ್ತದೆ. ನಾನು ಏನನ್ನೂ ನೋಡಿಲ್ಲ’ ಎಂದು ಕಾಜೋಲ್ ಹೇಳಿದ್ದಾರೆ.

ಕಾಜೋಲ್ ಅವರ ಈ ಹೇಳಿಕೆಗೆ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಸರಿಯಾಗಿ ಏನನ್ನೂ ಸ್ಪಷ್ಟಪಡಿಸದೇ ಈ ರೀತಿ ಹೇಳಿಕೆ ನೀಡಿದ್ದ ಸರಿಯಲ್ಲ ಎಂದು ನೆಟ್ಟಿಗರು ಟೀಕಿಸಿದ್ದಾರೆ. ರಾಮೋಜಿ ಫಿಲ್ಮ್ ಸಿಟಿ ಒಂದು ಪ್ರವಾಸಿ ತಾಣ ಕೂಡ ಹೌದು. ಕಾಜೋಲ್ ಇಂಥ ಹೇಳಿಕೆ ನೀಡಿದರೆ ಆ ಸ್ಥಳದ ಪ್ರತಿಷ್ಠೆಗೆ ಧಕ್ಕೆ ಆಗುತ್ತದೆ ಎಂದು ಕೆಲವರು ಟೀಕೆ ಮಾಡಿದ್ದಾರೆ.

ಇದನ್ನೂ ಓದಿ: ಕಾಜೋಲ್ ಪುತ್ರಿ ನಿಸಾಗೆ 22 ವರ್ಷ; ಚಿತ್ರರಂಗಕ್ಕೆ ಬರೋದು ಅನುಮಾನ

ಕಾಜೋಲ್ ಅವರಿಗೆ ಈಗ 50 ವರ್ಷ ವಯಸ್ಸು. ಇಂದಿಗೂ ಅವರು ಬಾಲಿವುಡ್​ನಲ್ಲಿ ಬೇಡಿಕೆ ಹೊಂದಿದ್ದಾರೆ. ತಮ್ಮ ವಯಸ್ಸಿಗೆ ಒಪ್ಪುವಂತಹ ಪಾತ್ರಗಳನ್ನು ಅವರು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ‘ಮಾ’ ಸಿನಿಮಾದ ಟ್ರೇಲರ್ ಗಮನ ಸೆಳೆಯುತ್ತಿದೆ. ಈ ಸಿನಿಮಾ ಎಷ್ಟು ಕಲೆಕ್ಷನ್ ಮಾಡಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:44 pm, Wed, 18 June 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ