ಹೀರೋ ಆಗಿ 55 ವರ್ಷಗಳಲ್ಲಿ ಮಾಡಲಾಗದ ಸಾಧನೆಯನ್ನು ‘ಕಲ್ಕಿ’ ಮೂಲಕ ಮಾಡಿದ ಅಮಿತಾಭ್

| Updated By: ರಾಜೇಶ್ ದುಗ್ಗುಮನೆ

Updated on: Jul 11, 2024 | 11:32 AM

‘ಕಲ್ಕಿ 2898 ಎಡಿ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 900+ ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಚಿತ್ರದಿಂದ ಅಮಿತಾಭ್ ಬಚ್ಚನ್ ಅವರ ವೃತ್ತಿ ಜೀವನಕ್ಕೆ ದೊಡ್ಡ ಮೈಲೇಜ್ ಸಿಕ್ಕಿದೆ. ಇದು ಅವರ ವೃತ್ತಿ ಜೀವನದ ಅತಿದೊಡ್ಡ ಗಳಿಕೆ ಮಾಡಿದ ಸಿನಿಮಾ ಇದು.

ಹೀರೋ ಆಗಿ 55 ವರ್ಷಗಳಲ್ಲಿ ಮಾಡಲಾಗದ ಸಾಧನೆಯನ್ನು ‘ಕಲ್ಕಿ’ ಮೂಲಕ ಮಾಡಿದ ಅಮಿತಾಭ್
ಅಮಿತಾಭ್
Follow us on

‘ಕಲ್ಕಿ 2898 ಎಡಿ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ದಾಖಲೆ ಮೇಲೆ ದಾಖಲೆಗಳನ್ನು ಬರೆಯುತ್ತಿದೆ. 14ನೇ ದಿನ ಈ ಚಿತ್ರ ಭಾರತದ ಬಾಕ್ಸ್ ಆಫೀಸ್​ನಲ್ಲಿ 7.5 ಕೋಟಿ ರೂಪಾಯಿ ಗಳಿಸಿದೆ. ಈ ಮೂಲಕ ಭಾರತದಲ್ಲಿ 536.75 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ವಾರದ ದಿನ ಆಗಿರುವುದರಿಂದ ಸಹಜವಾಗಿಯೇ ಚಿತ್ರದ ಗಳಿಕೆಯಲ್ಲಿ ಇಳಿಕೆ ಕಂಡಿದೆ. ವಾರಾಂತ್ಯಕ್ಕೆ ಸಿನಿಮಾದ ಕಲೆಕ್ಷನ್​ನಲ್ಲಿ ಮತ್ತೆ ಏರಿಕೆ ಕಾಣುವ ನಿರೀಕ್ಷೆ ಇದೆ.

‘ಕಲ್ಕಿ 2898 ಎಡಿ’ ತೆಲುಗು ಸಿನಿಮಾ. ಈ ಚಿತ್ರ ತೆಲುಗಿನ ಜೊತೆಗೆ ಕನ್ನಡ, ಹಿಂದಿ, ಮಲಯಾಳಂ ಹಾಗೂ ತಮಿಳು ಭಾಷೆಯಲ್ಲಿ ರಿಲೀಸ್ ಆಗಿದೆ. ಈ ಚಿತ್ರವನ್ನು ಹಿಂದಿ ಮಂದಿ ಕೂಡ ಹೆಚ್ಚು ಇಷ್ಟಪಟ್ಟಿದ್ದಾರೆ. ಇದಕ್ಕೆ ಕಾರಣ ಆಗಿರೋದು ಅಮಿತಾಭ್ ಬಚ್ಚನ್ ಅವರ ಪಾತ್ರ. ಪ್ರಭಾಸ್ ಅವರ ಪಾತ್ರಕ್ಕೆ ತೂಕ ಬರೋದು ಕೊನೆಯಲ್ಲಿ ಮಾತ್ರ. ಅಲ್ಲಿಯವರೆಗೂ ಅಮಿತಾಭ್ ಅವರೇ ಹೆಚ್ಚು ಗಮನ ಸೆಳೆಯುತ್ತಾರೆ. ಈ ಕಾರಣದಿಂದ ಹಿಂದಿ ಮಂದಿ ಚಿತ್ರವನ್ನು ಹೆಚ್ಚು ಇಷ್ಟಪಟ್ಟಿದ್ದಾರೆ. 500+ ಕೋಟಿ ರೂಪಾಯಿಯಲ್ಲಿ ಹಿಂದಿಯಿಂದ 229.05 ಕೋಟಿ ರೂಪಾಯಿ ಹಾಗೂ ತೆಲುಗಿನಿಂದ 252 ಕೋಟಿ ರೂಪಾಯಿ ಗಳಿಕೆ ಆಗಿದೆ. ಈ ಮೂಲಕ ಸಿನಿಮಾಗೆ ಹಿಂದಿಯಲ್ಲಿ ಹೆಚ್ಚು ಬೇಡಿಕೆ ಸೃಷ್ಟಿ ಆಗಿದೆ.

ವಿಶ್ವ ಬಾಕ್ಸ್ ಆಫೀಸ್​ನಲ್ಲಿ 11ನೇ ದಿನಕ್ಕೆ 900 ಕೋಟಿ ರೂಪಾಯಿ ಆಗಿದೆ ಎಂದು ನಿರ್ಮಾಣ ಸಂಸ್ಥೆ ಘೋಷಣೆ ಮಾಡಿತ್ತು. ಈಗ ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ರಣಬೀರ್ ಕಪೂರ್ ನಟನೆಯ ‘ಅನಿಮಲ್’ ಚಿತ್ರವನ್ನು ಹಿಂದಿಕ್ಕಿದೆ. ಈ ಸಿನಿಮಾ 915 ಕೋಟಿ ರೂಪಾಯಿ ಬಾಚಿಕೊಂಡಿತ್ತು. ‘ಕಲ್ಕಿ 2898 ಎಡಿ’ ಸಿನಿಮಾ ಸಾವಿರ ಕೋಟಿ ಕ್ಲಬ್ ಸೇರುವ ತವಕದಲ್ಲಿ ಇದೆ.

ಇದನ್ನೂ ಓದಿ: ರಿಜೆಕ್ಟ್ ಮಾಡಿದ ಈ ಐದು ಚಿತ್ರಗಳ ಬಗ್ಗೆ ಅಮಿತಾಭ್ ಬಚ್ಚನ್​ಗೆ ಇದೆ ವಿಷಾದ

ಅಮಿತಾಭ್ ಬಚ್ಚನ್ ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಆದರೆ, ಯಾವ ಚಿತ್ರವೂ ಇಷ್ಟು ದೊಡ್ಡ ಮೊತ್ತದ ಗಳಿಕೆ ಮಾಡಲು ಅವರ ಸಿನಿಮಾಗಳಿಗೆ ಸಾಧ್ಯವಾಗಿರಲಿಲ್ಲ. ಇದೇ ಮೊದಲ ಬಾರಿಗೆ ಅವರು ದೊಡ್ಡ ಗೆಲುವು ಕಂಡ ಖುಷಿಯಲ್ಲಿ ಇದ್ದಾರೆ. ಅಶ್ವತ್ಥಾಮನಾಗಿ ಕಾಣಿಸಿಕೊಂಡು ಅಮಿತಾಭ್ ಇಷ್ಟ ಆಗುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.