AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kamaal R Khan: ‘ದೇಶದ್ರೋಹಿ’ ಸಿನಿಮಾ ನಟ ಕಮಾಲ್​ ಆರ್​. ಖಾನ್​ ಅರೆಸ್ಟ್​; ಮಾಡಿದ ತಪ್ಪೇನು?

KRK Arrest: ಸೆಲೆಬ್ರಿಟಿಗಳ ಬಗ್ಗೆ ಕೆಟ್ಟದಾಗಿ ಟ್ವೀಟ್​ ಮಾಡುವ ಚಾಳಿ ಕಮಾಲ್​ ಆರ್​. ಖಾನ್ ಅವರಿಗೆ ಇದೆ. ಇದರಿಂದ ಹತ್ತು ಹಲವು ವಿವಾದಗಳನ್ನು ಅವರು ಮೈ ಮೇಲೆ ಎಳೆದುಕೊಂಡಿದ್ದಾರೆ.

Kamaal R Khan: ‘ದೇಶದ್ರೋಹಿ’ ಸಿನಿಮಾ ನಟ ಕಮಾಲ್​ ಆರ್​. ಖಾನ್​ ಅರೆಸ್ಟ್​; ಮಾಡಿದ ತಪ್ಪೇನು?
ಕಮಾಲ್ ಆರ್. ಖಾನ್
TV9 Web
| Edited By: |

Updated on:Aug 30, 2022 | 12:31 PM

Share

ಸದಾ ಕಾಂಟ್ರವರ್ಸಿ ಮೂಲಕ ಸುದ್ದಿ ಮಾಡುವ ನಟ, ಸ್ವಯಂ ಘೋಷಿತ ವಿಮರ್ಶಕ ಕಮಾಲ್​ ಆರ್​. ಖಾನ್​ (Kamaal R Khan) ಅವರನ್ನು ಬಂಧಿಸಲಾಗಿದೆ. ಮುಂಬೈ ವಿಮಾನ ನಿಲ್ದಾಣದಲ್ಲಿ ಅವರನ್ನು ಅರೆಸ್ಟ್​ ಮಾಡಲಾಗಿದೆ. ಇಂದು (ಆಗಸ್ಟ್​ 30) ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಬಾಲಿವುಡ್​ ನಟ ರಿಷಿ ಕಪೂರ್​ (Rishi Kapoor) ಅವರ ಬಗ್ಗೆ ಕಮಾಲ್​ ಆರ್​. ಖಾನ್​ ಆಕ್ಷೇಪಾರ್ಹವಾಗಿ ಟ್ವೀಟ್​ ಮಾಡಿದ್ದನ್ನು ಖಂಡಿಸಿ ಶಿವ ಸೇನಾ ಪಕ್ಷದ ರಾಹುಲ್​ ಎನ್​. ಕನಲ್​ ಅವರು ದೂರು ನೀಡಿದ್ದರು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮಾಲ್​ ಆರ್​. ಖಾನ್(Kamaal R Khan Arrest) ಅವರ ಬಂಧನವಾಗಿದೆ. ಸದ್ಯಕ್ಕೆ ಅವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಎರಡು ವರ್ಷಗಳ ಹಿಂದೆ ಮಾಡಿದ ಒಂದು ಟ್ವೀಟ್​ನಿಂದ ಅವರೀಗ ಸಂಕಷ್ಟ ಎದುರಿಸುವಂತಾಗಿದೆ.

ಚಿತ್ರರಂಗದಲ್ಲಿ ಕಮಾಲ್​ ಆರ್​. ಖಾನ್ ಅವರಿಗೆ ಯಾವುದೇ ರೀತಿಯ ಯಶಸ್ಸು ಸಿಕ್ಕಿಲ್ಲ. ಹಾಗಾಗಿ ಅವರು ಬೇರೆಯವರ ಸಿನಿಮಾಗಳನ್ನು ತಮ್ಮದೇ ಶೈಲಿಯಲ್ಲಿ ವಿಮರ್ಶೆ ಮಾಡುವುದನ್ನೇ ಕಾಯಕ ಆಗಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ, ಅನೇಕ ಸೆಲೆಬ್ರಿಟಿಗಳ ಬಗ್ಗೆ ಕೆಟ್ಟದಾಗಿ ಟ್ವೀಟ್​ ಮಾಡುವ ಚಾಳಿಯೂ ಅವರಿಗೆ ಇದೆ. ಇದರಿಂದ ಹತ್ತು ಹಲವು ವಿವಾದಗಳನ್ನು ಅವರು ಮೈ ಮೇಲೆ ಎಳೆದುಕೊಂಡಿದ್ದಾರೆ. ಹಿಂದಿ ಚಿತ್ರರಂಗದ ಲೆಜೆಂಡರಿ ನಟ ರಿಷಿ ಕಪೂರ್​ ಬಗ್ಗೆ ಕೆಟ್ಟದಾಗಿ ಟ್ವೀಟ್​ ಮಾಡಿದ ತಪ್ಪಿಗೆ ಈಗ ಕಮಾಲ್​ ಆರ್​. ಖಾನ್​ ಬಂಧನ ಆಗಿದೆ.

ಕಮಾಲ್​ ಆರ್​. ಖಾನ್​ ಅವರು ತಮ್ಮದೇ ಯೂಟ್ಯೂಬ್​ ಚಾನೆಲ್​ ಹೊಂದಿದ್ದಾರೆ. ಹಿಂದಿ ಚಿತ್ರರಂಗದಲ್ಲಿ ಅವರು ನಟನಾಗಿ, ನಿರ್ದೇಶಕನಾಗಿ ಗುರುತಿಸಿಕೊಳ್ಳುವ ಪ್ರಯತ್ನ ಮಾಡಿದ್ದರು. ‘ದೇಶದ್ರೋಹಿ’ ಎಂಬ ಸಿನಿಮಾ ಮಾಡಿ, ಅದರಲ್ಲಿ ತಾವೇ ನಟಿಸಿದ್ದರು. ಆದರೆ ಆ ಚಿತ್ರ ಹೀನಾಯವಾಗಿ ಸೋಲು ಕಂಡಿತ್ತು. ಬಾಲಿವುಡ್​ನ ಅತಿ ಕೆಟ್ಟ ಸಿನಿಮಾ ಎಂದು ವಿಮರ್ಶಕರು ಟೀಕೆ ಮಾಡಿದ್ದರು.

ಇದನ್ನೂ ಓದಿ
Image
RRR ಕಲೆಕ್ಷನ್​ ರಿಪೋರ್ಟ್​ ಸುಳ್ಳು ಎಂದ ಕಮಾಲ್​ ಆರ್​ ಖಾನ್​; ಸಾಬೀತು ಮಾಡುವುದಾಗಿ ಘೋಷಣೆ
Image
‘ಭಕ್ತರ ಭಕ್ತ ಮಹಾಭಕ್ತ’, ‘ಕಾಶ್ಮೀರದ ಶರ್ಮಾ’: ಖಾನ್​ ಚಿತ್ರಕ್ಕೆ ಹೊಸ ಹೆಸರು ಸೂಚಿಸಿದ ಇನ್ನೊಬ್ಬ ಖಾನ್​
Image
‘ಈ ನಟರಿಗೆ ಅಹಂಕಾರ ಜಾಸ್ತಿ’; ವಿಡಿಯೋ ಮೂಲಕ ಎಳೆ ಎಳೆಯಾಗಿ ವಿವರಿಸಿದ ಕಮಾಲ್​ ಆರ್.​ ಖಾನ್​
Image
ಸಲ್ಮಾನ್​ ಖಾನ್​ ವಿರುದ್ಧ ಯಾವುದೇ ಹೇಳಿಕೆ ನೀಡಬೇಡಿ; ಕಮಾಲ್​ ಆರ್​ ಖಾನ್​ಗೆ ಕೋರ್ಟ್​ ಆದೇಶ

ಕಂಗನಾ ರಣಾವತ್​, ಅಭಿಷೇಕ್​ ಬಚ್ಚನ್​, ಆಮಿರ್​ ಖಾನ್​, ಸಲ್ಮಾನ್​ ಖಾನ್​ ಸೇರಿದಂತೆ ಅನೇಕರ ಬಗ್ಗೆ ಕಮಾಲ್​ ಆರ್. ಖಾನ್​ ಇಲ್ಲಸಲ್ಲದ ರೀತಿಯಲ್ಲಿ ಟ್ವೀಟ್​ ಮಾಡಿದ ಉದಾಹರಣೆ ಇದೆ. ಅವರನ್ನು ಕೆಆರ್​ಕೆ ಎಂದು ಕೂಡ ಕರೆಯಲಾಗುತ್ತದೆ.

ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುವ ಅವರು ಪ್ರತಿ ದಿನ ಹಲವು ಪೋಸ್ಟ್​ಗಳನ್ನು ಮಾಡುತ್ತಾರೆ. ತಮ್ಮ ಯೂಟ್ಯೂಬ್​ ಚಾನೆಲ್​ ಮೂಲಕ ಸಿನಿಮಾ ವಿಮರ್ಶೆ ಮಾಡುತ್ತಾರೆ. ‘ರಾಧೆ’ ಚಿತ್ರದ ಬಗ್ಗೆ ಕೆಟ್ಟ ವಿಮರ್ಶೆ ಮಾಡಿದ್ದಕ್ಕೆ ಕೆಆರ್​ಕೆ ವಿರುದ್ಧ ಸಲ್ಮಾನ್​ ಖಾನ್​ ಅವರು ಈ ಹಿಂದೆ ಮಾನನಷ್ಟ ಮೊಕದ್ದಮ್ಮೆ ದಾಖಲಿಸಿದ್ದರು. ಇಂಥ ಲೆಕ್ಕವಿಲ್ಲದಷ್ಟು ಕಿರಿಕ್​ಗಳನ್ನು ಕಮಾಲ್​ ಆರ್​. ಖಾನ್​ ಮಾಡಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:31 pm, Tue, 30 August 22

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ