AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಕಮಾಲ್​ ಖಾನ್​ಗೆ ಜಾಮೀನು; ಆದರೂ ಇಲ್ಲ ಬಿಡುಗಡೆಗೆ ಅವಕಾಶ

ಕಮಾಲ್​ ಖಾನ್ ವಿರುದ್ಧ ಎರಡೆರಡು ಕೇಸ್ ದಾಖಲಾಗಿದೆ. ಅಕ್ಷಯ್ ಕುಮಾರ್ ಹಾಗೂ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಬಗ್ಗೆ ವಿವಾದಾತ್ಮಕ ಟ್ವೀಟ್​ಅನ್ನು ಕಮಾಲ್ ಆರ್. ಖಾನ್ ಮಾಡಿದ್ದರು. ಈ ಕೇಸ್​ನಲ್ಲಿ ಅವರು ನ್ಯಾಯಾಂಗ ಬಂಧನಕ್ಕೆ ಒಳಗಾದರು.

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಕಮಾಲ್​ ಖಾನ್​ಗೆ ಜಾಮೀನು; ಆದರೂ ಇಲ್ಲ ಬಿಡುಗಡೆಗೆ ಅವಕಾಶ
ಕಮಾಲ್ ಖಾನ್
TV9 Web
| Edited By: |

Updated on: Sep 07, 2022 | 4:35 PM

Share

ಸೆಲೆಬ್ರಿಟಿಗಳು ಹಾಗೂ ಸಿನಿಮಾಗಳ ಬಗ್ಗೆ ಬಾಯಿಗೆ ಬಂದಂತೆ ಹೇಳಿಕೆ ನೀಡುತ್ತಿದ್ದ ಕಮಾಲ್​ ಆರ್​. ಖಾನ್ (Kamaal R. Khan) ನಾನಾ ಕೇಸ್​​ಗಳಲ್ಲಿ ಜೈಲು ಪಾಲಾಗಿದ್ದಾರೆ. ವಿವಾದಾತ್ಮಕ ಹೇಳಿಕೆ, ಲೈಂಗಿಕ ಕಿರುಕುಳ ಪ್ರಕರಣಗಳು ಕಮಾಲ್ ವಿರುದ್ಧ ದಾಖಲಾಗಿದೆ. ಈಗ ಅವರಿಗೆ ಒಂದು ಪ್ರಕರಣದಲ್ಲಿ ಮಾತ್ರ ಜಾಮೀನು ದೊರೆತಿದ್ದು, ಮತ್ತೊಂದು ಪ್ರಕರಣದಲ್ಲಿ ಅವರು ಜೈಲಿನಲ್ಲೇ ಉಳಿದುಕೊಂಡಿದ್ದಾರೆ. ವಿವಾದಾತ್ಮಕ ಟ್ವೀಟ್​ ಪ್ರಕರಣಕ್ಕೆ ಸಂಬಂಧಿಸಿ ಅವರು ಸಲ್ಲಿಕೆ ಮಾಡಿರುವ ಜಾಮೀನು ಅರ್ಜಿ ಇನ್ನೂ ವಿಚಾರಣೆಗೆ ಬಂದಿಲ್ಲ. ಹೀಗಾಗಿ ಅವರು ಜೈಲಿನಲ್ಲೇ ಮುಂದುವರಿಯುತ್ತಿದ್ದಾರೆ.

ಕಮಾಲ್​ ಖಾನ್ ವಿರುದ್ಧ ಎರಡೆರಡು ಕೇಸ್ ದಾಖಲಾಗಿದೆ. ಅಕ್ಷಯ್ ಕುಮಾರ್ ಹಾಗೂ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಬಗ್ಗೆ ವಿವಾದಾತ್ಮಕ ಟ್ವೀಟ್​ಅನ್ನು ಕಮಾಲ್ ಆರ್. ಖಾನ್ ಮಾಡಿದ್ದರು. ಈ ಕೇಸ್​ನಲ್ಲಿ ಅವರು ನ್ಯಾಯಾಂಗ ಬಂಧನಕ್ಕೆ ಒಳಗಾದರು. ಇದಾದ ಬೆನ್ನಲ್ಲೇ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಕೂಡ ಬೆಳಕಿಗೆ ಬಂದಿದ್ದು ಈ ಸಂಬಂಧ ಕೇಸ್ ದಾಖಲಾಗಿದೆ.

ಎರಡೂ ಪ್ರಕರಣದಲ್ಲಿ ಜಾಮೀನು ನೀಡುವಂತೆ ಕಮಾಲ್ ಆರ್. ಖಾನ್ ಬೋರಿವಲ್ಲಿ ಮ್ಯಾಜಿಸ್ಟ್ರೇಟ್ ಕೋರ್ಟ್​ನಲ್ಲಿ ಕೋರಿದ್ದರು. ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಮಾತ್ರ ಕಮಾಲ್​ಗೆ ಜಾಮೀನು ಸಿಕ್ಕಿದೆ. ವಿವಾದಾತ್ಮಕ ಟ್ವೀಟ್ ಪ್ರಕರಣ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಹೀಗಾಗಿ, ಅವರು ಜೈಲಿನಲ್ಲಿ ಇರುವುದು ಅನಿವಾರ್ಯ ಆಗಿದೆ. ಕಮಾಲ್ ಖಾನ್ ಆಗಸ್ಟ್ 30ರಂದು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧನಕ್ಕೆ ಒಳಗಾದರು. ದುಬೈನಿಂದ ಅವರು ಹಿಂದಿರುವಾಗ ಅರೆಸ್ಟ್ ಆದರು.

ಇದನ್ನೂ ಓದಿ
Image
RRR ಕಲೆಕ್ಷನ್​ ರಿಪೋರ್ಟ್​ ಸುಳ್ಳು ಎಂದ ಕಮಾಲ್​ ಆರ್​ ಖಾನ್​; ಸಾಬೀತು ಮಾಡುವುದಾಗಿ ಘೋಷಣೆ
Image
‘ಭಕ್ತರ ಭಕ್ತ ಮಹಾಭಕ್ತ’, ‘ಕಾಶ್ಮೀರದ ಶರ್ಮಾ’: ಖಾನ್​ ಚಿತ್ರಕ್ಕೆ ಹೊಸ ಹೆಸರು ಸೂಚಿಸಿದ ಇನ್ನೊಬ್ಬ ಖಾನ್​
Image
‘ಈ ನಟರಿಗೆ ಅಹಂಕಾರ ಜಾಸ್ತಿ’; ವಿಡಿಯೋ ಮೂಲಕ ಎಳೆ ಎಳೆಯಾಗಿ ವಿವರಿಸಿದ ಕಮಾಲ್​ ಆರ್.​ ಖಾನ್​
Image
ಸಲ್ಮಾನ್​ ಖಾನ್​ ವಿರುದ್ಧ ಯಾವುದೇ ಹೇಳಿಕೆ ನೀಡಬೇಡಿ; ಕಮಾಲ್​ ಆರ್​ ಖಾನ್​ಗೆ ಕೋರ್ಟ್​ ಆದೇಶ

ಇದನ್ನೂ ಓದಿ: KRK: ಲೈಂಗಿಕ ಕಿರುಕುಳ ಆರೋಪದಲ್ಲಿ ಕಮಾಲ್​ ಆರ್​. ಖಾನ್​ ಅರೆಸ್ಟ್​; ಒಂದೇ ವಾರದಲ್ಲಿ ಡಬಲ್​ ಸಂಕಟ

ಹೀರೋ ಆಗಬೇಕು ಎಂದು ಕನಸು ಕಂಡು ಚಿತ್ರರಂಗಕ್ಕೆ ಕಮಾಲ್ ಎಂಟ್ರಿ ಕೊಟ್ಟರು. ಆದರೆ, ಯಶಸ್ಸು ಅವರನ್ನು ಕೈ ಹಿಡಿಯಲಿಲ್ಲ. ಮಾಡಿದ ಸಿನಿಮಾಗಳು ಸೋಲು ಕಂಡವು. ಆ ಬಳಿಕ ಅವರು ತಮ್ಮನ್ನು ತಾವು ವಿಮರ್ಶಕ ಎಂದು ಘೋಷಿಸಿಕೊಂಡರು. ಹೈಪ್ ಪಡೆದ ಸಿನಿಮಾಗಳನ್ನು ನೋಡಿ ಕೆಟ್ಟ ಕಮೆಂಟ್ ಮಾಡುವ ಚಾಳಿಯನ್ನು ಅವರು ಬೆಳೆಸಿಕೊಂಡರು. ಸಲ್ಮಾನ್ ಖಾನ್ ಮೊದಲಾದ ಸ್ಟಾರ್ ಹೀರೋಗಳ ಬಗ್ಗೆ ಅವರು ಕೀಳಾಗಿ ಮಾತನಾಡಿದ್ದಿದೆ. ಈ ಮೊದಲು ಸಲ್ಮಾನ್ ಖಾನ್ ಅವರು ಕಮಾಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.

Follow Us
TV9 Web
TV9 Web

TV9 Kannada

Read More
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ