Pushpaka Vimana: ‘ಪುಷ್ಪಕ ವಿಮಾನ’ ಚಿತ್ರಕ್ಕೆ 35 ವರ್ಷ; ಭಾವನಾತ್ಮಕ ಪತ್ರ ಬರೆದ ಕಮಲ್ ಹಾಸನ್

ಹಲವು ಕಲಾವಿದರು ಚಾಲೆಂಜಿಂಗ್ ಪಾತ್ರಗಳನ್ನು ಮಾಡಲು ಇಷ್ಟಪಡುತ್ತಾರೆ. ಕಮಲ್ ಹಾಸನ್ ಕೂಡ ಇದಕ್ಕೆ ಹೊರತಾಗಿಲ್ಲ. ಅವರು ವೃತ್ತಿ ಜೀವನದಲ್ಲಿ ಹಲವು ಚಾಲೆಂಜಿಂಗ್ ಪಾತ್ರಗಳನ್ನು ಮಾಡಿ ತೋರಿಸಿದ್ದಾರೆ. ಆ ಪೈಕಿ ‘ಪುಷ್ಪಕ ವಿಮಾನ’ ಚಿತ್ರ ಕೂಡ ಒಂದು.

Pushpaka Vimana: ‘ಪುಷ್ಪಕ ವಿಮಾನ’ ಚಿತ್ರಕ್ಕೆ 35 ವರ್ಷ; ಭಾವನಾತ್ಮಕ ಪತ್ರ ಬರೆದ ಕಮಲ್ ಹಾಸನ್
ಪುಷ್ಪಕ ವಿಮಾನ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 28, 2022 | 12:44 PM

ನಟ ಕಮಲ್ ಹಾಸನ್ (Kamal Haasan) ನಟನೆಯ ‘ಪುಷ್ಪಕ ವಿಮಾನ’ ಹೊಸ ದಾಖಲೆ ಬರೆದಿತ್ತು. 1987ರಲ್ಲಿ ಮೂಡಿ ಬಂದ ಈ ಚಿತ್ರ ಹಲವು ಪ್ರಶಸ್ತಿಗಳನ್ನು ಗೆದ್ದಿತ್ತು. ಈ ಸಿನಿಮಾ ಮಾಡಿದ ದಾಖಲೆಗಳು ಹಲವು. ‘ಪುಷ್ಪಕ ವಿಮಾನ’ ಸಿನಿಮಾ (Pushpaka Vimana Movie) ಮೂಕಿ ಚಿತ್ರ. ಇಡೀ ಚಿತ್ರದಲ್ಲಿ ಒಂದೇ ಒಂದು ಮಾತು ಕೂಡ ಇರಲಿಲ್ಲ. ಈ ಸಿನಿಮಾ ತೆರೆಗೆ ಬಂದು ನವೆಂಬರ್ 27ಕ್ಕೆ 35 ವರ್ಷಗಳು ಕಳೆದಿವೆ. ಇದನ್ನು ಕಮಲ್ ಹಾಸನ್ ನೆನಪಿಸಿಕೊಂಡಿದ್ದಾರೆ. ಅವರ ವೃತ್ತಿ ಬದುಕನ್ನು ಮತ್ತೊಂದು ಎತ್ತರಕ್ಕೆ ಕರೆದುಕೊಂಡ ಹೋದ ಖ್ಯಾತಿ ಈ ಚಿತ್ರಕ್ಕೆ ಸಿಗುತ್ತದೆ.

ಹಲವು ಕಲಾವಿದರು ಚಾಲೆಂಜಿಂಗ್ ಪಾತ್ರಗಳನ್ನು ಮಾಡಲು ಇಷ್ಟಪಡುತ್ತಾರೆ. ಕಮಲ್ ಹಾಸನ್ ಕೂಡ ಇದಕ್ಕೆ ಹೊರತಾಗಿಲ್ಲ. ಅವರು ವೃತ್ತಿ ಜೀವನದಲ್ಲಿ ಹಲವು ಚಾಲೆಂಜಿಂಗ್ ಪಾತ್ರಗಳನ್ನು ಮಾಡಿ ತೋರಿಸಿದ್ದಾರೆ. ಆ ಪೈಕಿ ‘ಪುಷ್ಪಕ ವಿಮಾನ’ ಚಿತ್ರ ಕೂಡ ಒಂದು. ಈ ಸಿನಿಮಾ 1987ರ ನವೆಂಬರ್ 27ರಂದು ರಿಲೀಸ್ ಆಯಿತು. 35 ಲಕ್ಷ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ 1 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿತ್ತು.

ಇದನ್ನೂ ಓದಿ
Image
Bigg Boss Elimination: ಬಿಗ್​ ಬಾಸ್​ನಲ್ಲಿ ದರ್ಶ್​ ಆಟ ಅಂತ್ಯ; 3ನೇ ವಾರದ ಎಲಿಮಿನೇಷನ್​ನಲ್ಲಿ ಮಯೂರಿ ಸೇಫ್​
Image
BBK9: ಬಿಗ್​ ಬಾಸ್​ ಮೇಲೆ ಮ್ಯಾಚ್​ ಫಿಕ್ಸಿಂಗ್​ ಆರೋಪ; ಗುರೂಜಿ ವಿರುದ್ಧ ಗುಡುಗಿದ ಸುದೀಪ್​
Image
BBK9: ಬಿಗ್​ ಬಾಸ್​ 2ನೇ ವಾರ ನವಾಜ್​ ಎಲಿಮಿನೇಟ್​; ದೊಡ್ಮನೆಯಲ್ಲಿ ನಡೆಯಲಿಲ್ಲ ಪ್ರಾಸದ ಆಟ
Image
BBK9: ಬಿಗ್​ ಬಾಸ್​ನಿಂದ ಐಶ್ವರ್ಯಾ ಪಿಸ್ಸೆ ಎಲಿಮಿನೇಟ್​; ಒಂದೇ ವಾರಕ್ಕೆ ಮುಗಿಯಿತು ದೊಡ್ಮನೆ ಆಟ

ಈ ಸಿನಿಮಾ ಕನ್ನಡದಲ್ಲಿ ‘ಪುಷ್ಪಕ ವಿಮಾನ’ ಹೆಸರಿನಲ್ಲಿ ರಿಲೀಸ್ ಆಯಿತು. ಉತ್ತರ ಭಾರತದಲ್ಲಿ ‘ಪುಷ್ಪಕ್’ ಹೆಸರಿನಲ್ಲಿ ಚಿತ್ರ ಬಿಡುಗಡೆ ಕಂಡಿತ್ತು. ಅಲ್ಲಿಯೂ ಸಿನಿಮಾ ಮೆಚ್ಚುಗೆ ಪಡೆದಿದೆ. ಅಮಲಾ ಅಕ್ಕಿನೇನಿ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದರು. ಕಮಲ್ ಹಾಸನ್ ಅವರು ಸಿನಿಮಾ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಈ ಚಿತ್ರವನ್ನು ನಿರ್ದೇಶನ ಮಾಡಿದ ಸಿಂಗೀತಂ ಶ್ರೀನಿವಾಸ ರಾವ್ ಅವರ ಕೆಲಸಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಸದ್ಯಕ್ಕಂತೂ ಸೆಟ್ಟೇರಲ್ಲ ಯಶ್​-ಶಂಕರ್ ಸಿನಿಮಾ; ಕಮಲ್ ಹಾಸನ್ ಟ್ವೀಟ್​ನಲ್ಲೇ ಅಡಗಿದೆ ಉತ್ತರ

ಕಮಲ್ ಹಾಸನ್ ಅವರು ಇತ್ತೀಚೆಗೆ ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಸಾಮಾನ್ಯ ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ತೆರಳಿದ್ದರು ಎನ್ನಲಾಗಿದೆ. ನಂತರ ಒಂದೇ ದಿನದಲ್ಲಿ ಅವರು ಆಸ್ಪತ್ರೆಯಿಂದ ಮರಳಿದ್ದರು. ‘ಇಂಡಿಯನ್ 2’ ಸಿನಿಮಾ ಕೆಲಸಗಳಲ್ಲಿ ಕಮಲ್ ಹಾಸನ್ ಬ್ಯುಸಿ ಆಗಿದ್ದಾರೆ. ಶಂಕರ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ತೆರೆಗೆ ಬಂದಿದ್ದ ‘ಇಂಡಿಯನ್’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಹಲವು ವರ್ಷಗಳ ಬಳಿಕ ‘ಇಂಡಿಯನ್ 2’ ಸಿನಿಮಾ ಸಿದ್ಧಗೊಳ್ಳುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ