Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿರಾ ಗಾಂಧಿ ವಿರುದ್ಧವಾಗಿದೆಯಾ ‘ಎಮರ್ಜೆನ್ಸಿ’ ಸಿನಿಮಾ? ಉತ್ತರಿಸಿದ ನಿರ್ದೇಶಕಿ, ನಟಿ ಕಂಗನಾ

ಕಂಗನಾ ರಣಾವತ್​ ಅವರು ‘ಎಮರ್ಜೆನ್ಸಿ’ ಸಿನಿಮಾದಲ್ಲಿ ಇಂದಿರಾ ಗಾಂಧಿ ಮತ್ತು ಕಾಂಗ್ರೆಸ್​ ಪಕ್ಷವನ್ನು ಯಾವ ರೀತಿ ತೋರಿಸುತ್ತಾರೆ ಎಂಬ ಕುತೂಹಲ ಎಲ್ಲರಿಗೂ ಇದೆ. ಸಿನಿಮಾದ ಬಿಡುಗಡೆಗೂ ಮುನ್ನವೇ ಕಂಗನಾ ಅವರು ಆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಆ ಮೂಲಕ ಸಿನಿಮಾ ಬಗ್ಗೆ ಅವರು ಇನ್ನಷ್ಟು ಕುತೂಹಲ ಹೆಚ್ಚುವಂತೆ ಮಾಡಿದ್ದಾರೆ.

ಇಂದಿರಾ ಗಾಂಧಿ ವಿರುದ್ಧವಾಗಿದೆಯಾ ‘ಎಮರ್ಜೆನ್ಸಿ’ ಸಿನಿಮಾ? ಉತ್ತರಿಸಿದ ನಿರ್ದೇಶಕಿ, ನಟಿ ಕಂಗನಾ
ಕಂಗನಾ ರಣಾವತ್​
Follow us
ಮದನ್​ ಕುಮಾರ್​
|

Updated on: Sep 20, 2023 | 8:01 AM

ನಟಿ ಕಂಗನಾ ರಣಾವತ್​ (Kangana Ranaut) ಅವರು ನಿರ್ದೇಶನದಲ್ಲೂ ಸಕ್ರಿಯರಾಗಿದ್ದಾರೆ. ಅವರ ನಿರ್ದೇಶನದಲ್ಲಿ ‘ಎಮರ್ಜೆನ್ಸಿ’ ಸಿನಿಮಾ (Emergency Movie) ಮೂಡಿಬರುತ್ತಿದೆ. ಈ ಸಿನಿಮಾದಲ್ಲಿ ಅವರು ಇಂದಿರಾ ಗಾಂಧಿ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಈ ಚಿತ್ರಕ್ಕೆ ಕೊನೇ ಹಂತದ ಕೆಲಸಗಳು ನಡೆಯುತ್ತಿವೆ. ಚಿತ್ರದ ಬಿಡುಗಡೆ ದಿನಾಂಕ ಹತ್ತಿರ ಆಗುತ್ತಿರುವ ಈ ಸಮಯದಲ್ಲಿ ಕೆಲವು ಪ್ರಶ್ನೆಗಳು ಉದ್ಭವ ಆಗಿವೆ. ‘ಎಮರ್ಜೆನ್ಸಿ’ ಸಿನಿಮಾದಲ್ಲಿ ಇಂದಿರಾ ಗಾಂಧಿ (Indira Gandhi) ಹಾಗೂ ಕಾಂಗ್ರೆಸ್​ ಪಕ್ಷವನ್ನು ಕೆಟ್ಟದಾಗಿ ಬಿಂಬಿಸಲಾಗಿದೆಯೇ ಎಂಬ ಅನುಮಾನ ಕೆಲವರಲ್ಲಿ ಮೂಡಿದೆ. ಅದಕ್ಕೆ ಕಂಗನಾ ರಣಾವತ್​ ಅವರು ನೇರವಾಗಿ ಉತ್ತರಿಸಿದ್ದಾರೆ. ಯಾವುದೇ ರಾಜಕೀಯ ಪಕ್ಷದ ಪರವಾಗಿ ಈ ಸಿನಿಮಾವನ್ನು ಮಾಡಲಾಗಿಲ್ಲ ಎಂದು ಕಂಗನಾ ಹೇಳಿದ್ದಾರೆ.

ಕಂಗನಾ ರಣಾವತ್​ ಅವರು ಮೊದಲಿನಿಂದಲೂ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಬೆಂಬಲಿಸುತ್ತಾ ಬಂದಿದ್ದಾರೆ. ಹಲವು ಸಂದರ್ಭದಲ್ಲಿ ಅವರು ಮೋದಿಯನ್ನು ಹೊಗಳಿದ್ದುಂಟು. ಹಾಗಾಗಿ ಅವರು ‘ಎಮರ್ಜೆನ್ಸಿ’ ಸಿನಿಮಾದಲ್ಲಿ ಇಂದಿರಾ ಗಾಂಧಿ ಮತ್ತು ಕಾಂಗ್ರೆಸ್​ ಪಕ್ಷವನ್ನು ಯಾವ ರೀತಿ ತೋರಿಸುತ್ತಾರೆ ಎಂಬ ಕುತೂಹಲ ಎಲ್ಲರಿಗೂ ಇದೆ. ಸಿನಿಮಾದ ಬಿಡುಗಡೆಗೂ ಮುನ್ನವೇ ಕಂಗನಾ ಅವರು ಆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಆ ಮೂಲಕ ಸಿನಿಮಾ ಬಗ್ಗೆ ಅವರು ಇನ್ನಷ್ಟು ಕುತೂಹಲ ಹೆಚ್ಚುವಂತೆ ಮಾಡಿದ್ದಾರೆ.

ಇದನ್ನೂ ಓದಿ: ಪದೇಪದೇ ಕಿಡಿಕಾರುವ ಕಂಗನಾಗೂ ಪ್ರೀತಿ ತೋರಿದ ಕರಣ್​ ಜೋಹರ್​; ‘ಎಮರ್ಜೆನ್ಸಿ’ ನೋಡಲು ಕಾತರ

ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿ ಕಂಗನಾ ರಣಾವತ್​ ಅವರು ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ‘ಸಿನಿಮಾ ಹೇಗಿದೆ ಅಂತ ನೀವೇ ನೋಡಿ ಹೇಳಿ. ಈ ಚಿತ್ರ ಎಲೆಕ್ಷನ್​ ಸಂದರ್ಭದಲ್ಲಿ ಬಿಡುಗಡೆ ಆಗುತ್ತೋ ಇಲ್ಲವೋ ಎಂಬ ಬಗ್ಗೆ ಖಚಿತತೆ ಇಲ್ಲ. ಯಾವುದೇ ಚುನಾವಣೆ ಮತ್ತು ರಾಜಕೀಯ ಪಕ್ಷಕ್ಕೆ ಈ ಸಿನಿಮಾ ಸಂಬಂಧಿಸಿಲ್ಲ. ಇಂದಿರಾ ಗಾಂಧಿ ಅವರಿಗೆ ಈ ಸಿನಿಮಾ ಗೌರವ ಸಲ್ಲಿಸುತ್ತದೆ. ಇದು ಅವರ ಜೀವನದ ಕಥೆ. ಅವರು ಮಾಡಿದ ಒಳ್ಳೆಯದು, ಕೆಟ್ಟದ್ದು ಎಲ್ಲವೂ ಇದರಲ್ಲಿ ಇದೆ. ಈ ಚಿತ್ರದಲ್ಲಿ ನಾನು ಯಾವುದೋ ಪಕ್ಷದ ಪರವಾಗಿ ತೋರಿಸುತ್ತೇನೆ ಎಂದು ಈಗಲೇ ಊಹಿಸಿಕೊಳ್ಳುವುದು ಸರಿಯಲ್ಲ’ ಎಂದು ಕಂಗನಾ ರಣಾವತ್​ ಹೇಳಿದ್ದಾರೆ.

ಇದನ್ನೂ ಓದಿ: ಕಂಗನಾ ‘ಎಮರ್ಜೆನ್ಸಿ’ ಚಿತ್ರ ಬಿಡುಗಡೆ ಮಾಡುವುದಕ್ಕೂ ಮುನ್ನ ಬರ್ತಿದೆ ತುರ್ತು ಪರಿಸ್ಥಿತಿ ಕುರಿತ ಮತ್ತೊಂದು ಸಿನಿಮಾ

ಎಲ್ಲವೂ ಅಂದುಕೊಂಡಂತೆ ನಡೆದರೆ, ನವೆಂಬರ್​ 24ರಂದು ‘ಎಮರ್ಜೆನ್ಸಿ’ ಸಿನಿಮಾ ಬಿಡುಗಡೆ ಆಗಲಿದೆ. ನಟನೆ ಮತ್ತು ನಿರ್ದೇಶನದ ಜೊತೆಯಲ್ಲಿ ಈ ಸಿನಿಮಾದ ನಿರ್ಮಾಣದಲ್ಲೂ ಕಂಗನಾ ರಣಾವತ್​ ಅವರು ಪಾಲುದಾರಿಕೆ ಹೊಂದಿದ್ದಾರೆ. ಅನುಪಮ್​ ಖೇರ್​, ಮಿಲಿಂದ್​ ಸೋಮನ್​, ಮಹಿಮಾ ಚೌಧರಿ, ಶ್ರೇಯಸ್​ ತಲ್ಪಡೆ, ಸತೀಶ್​ ಕೌಶಿಕ್​ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಮೊದಲು ಬಿಡುಗಡೆ ಆದ ಟೀಸರ್​ಗೆ ಭರ್ಜರಿ ಮೆಚ್ಚುಗೆ ವ್ಯಕ್ತವಾಗಿತ್ತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಯಡಿಯೂರಪ್ಪ ಕುಟುಂಬ ಮುಕ್ತ ಬಿಜೆಪಿಗಾಗಿ ನಾವು ಹೋರಾಡುತ್ತಿದ್ದೇವೆ: ಯತ್ನಾಳ್
ಯಡಿಯೂರಪ್ಪ ಕುಟುಂಬ ಮುಕ್ತ ಬಿಜೆಪಿಗಾಗಿ ನಾವು ಹೋರಾಡುತ್ತಿದ್ದೇವೆ: ಯತ್ನಾಳ್
ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ
ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ
ವಿಜಯೇಂದ್ರ ಫೋರ್ಜರಿ ಮಾಡಿದ್ದು ಸತ್ಯ ಅಂತ ಈಗಲೂ ಹೇಳುತ್ತೇನೆ: ಯತ್ನಾಳ್
ವಿಜಯೇಂದ್ರ ಫೋರ್ಜರಿ ಮಾಡಿದ್ದು ಸತ್ಯ ಅಂತ ಈಗಲೂ ಹೇಳುತ್ತೇನೆ: ಯತ್ನಾಳ್
ಮಗಳಿಗೆ ಹೊಟ್ಟೆನೋವಿನ ಸಮಸ್ಯೆ ಇತ್ತೆಂದ ತಂದೆ ಶಿವಕುಮಾರ್
ಮಗಳಿಗೆ ಹೊಟ್ಟೆನೋವಿನ ಸಮಸ್ಯೆ ಇತ್ತೆಂದ ತಂದೆ ಶಿವಕುಮಾರ್
ಅಮೆರಿಕದ ಏರ್​ಪೋರ್ಟ್​ನಲ್ಲಿ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ
ಅಮೆರಿಕದ ಏರ್​ಪೋರ್ಟ್​ನಲ್ಲಿ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ
ಪುನೀತ್ ಪೋಸ್ಟರ್​ಗೆ ಹಾಲಿನ ಅಭಿಷೇಕ; ‘ಅಪ್ಪು’ ಸಿನಿಮಾ ಭರ್ಜರಿ ಪ್ರದರ್ಶನ
ಪುನೀತ್ ಪೋಸ್ಟರ್​ಗೆ ಹಾಲಿನ ಅಭಿಷೇಕ; ‘ಅಪ್ಪು’ ಸಿನಿಮಾ ಭರ್ಜರಿ ಪ್ರದರ್ಶನ
ಹರಪನಹಳ್ಳಿ: ಒಂದೇ ಫಾರಂನಲ್ಲಿನ ಮೂರು ಸಾವಿರ ಕೋಳಿಗಳ ಸಾವು
ಹರಪನಹಳ್ಳಿ: ಒಂದೇ ಫಾರಂನಲ್ಲಿನ ಮೂರು ಸಾವಿರ ಕೋಳಿಗಳ ಸಾವು