ಕಂಗನಾಗೆ ತೀವ್ರ ನಿರಾಶೆ; ಮೊದಲ ವಾರದಲ್ಲಿ ‘ಭಾರತ್ ಭಾಗ್ಯ ವಿಧಾತ’ ಗಳಿಕೆ ಕೇವಲ 6 ಕೋಟಿ ರೂ.

‘ಭಾರತ್ ಭಾಗ್ಯ ವಿಧಾತ’ ಸಿನಿಮಾದಲ್ಲಿ ಉತ್ತಮವಾದ ಕಥಾವಸ್ತು ಇದೆ ಎಂಬ ಕಾರಣಕ್ಕೆ ಈ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಲಾಯಿತು. ಹಾಗಿದ್ದರೂ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಸೆಳೆಯುವಲ್ಲಿ ಈ ಚಿತ್ರ ವಿಫಲವಾಗಿದೆ. ಈ ಮೂಲಕ ನಟಿ ಕಂಗನಾ ರಣಾವತ್ ಅವರ ಫ್ಲಾಪ್ ಸಿನಿಮಾಗಳ ಪಟ್ಟಿಗೆ ಈ ಚಿತ್ರ ಕೂಡ ಸೇರ್ಪಡೆ ಆಗಿದೆ.

ಕಂಗನಾಗೆ ತೀವ್ರ ನಿರಾಶೆ; ಮೊದಲ ವಾರದಲ್ಲಿ ‘ಭಾರತ್ ಭಾಗ್ಯ ವಿಧಾತ’ ಗಳಿಕೆ ಕೇವಲ 6 ಕೋಟಿ ರೂ.
Bharat Bhhagya Viddhaata Poster

Updated on: Jun 19, 2026 | 4:10 PM

ಬಾಲಿವುಡ್‌ನ ವಿವಾದಿತ ಹಾಗೂ ಖ್ಯಾತ ನಟಿ ಕಂಗನಾ ರಣಾವತ್ (Kangana Ranaut) ಪ್ರಮುಖ ಪಾತ್ರದಲ್ಲಿ ನಟಿಸಿರುವ ಬಹುನಿರೀಕ್ಷಿತ ‘ಭಾರತ್ ಭಾಗ್ಯ ವಿಧಾತ’ (Bharat Bhhagya Viddhaata) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ತೀವ್ರ ಹಿನ್ನಡೆ ಅನುಭವಿಸಿದೆ. ಜೂನ್ 12ರಂದು ಬಿಡುಗಡೆಯಾಗಿದ್ದ ಈ ಸಿನಿಮಾ ಮೊದಲ ವಾರದಲ್ಲಿ ಕೇವಲ 6.55 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ಅತ್ಯಂತ ನೀರಸ ಪ್ರತಿಕ್ರಿಯೆ ಪಡೆದಿದೆ.

ಮೂಲಗಳ ಪ್ರಕಾರ, ಈ ಸಿನಿಮಾ ಸುಮಾರು 35 ಕೋಟಿಯಿಂದ 40 ಕೋಟಿ ರೂಪಾಯಿ ಬಜೆಟ್‌ನಲ್ಲಿ ನಿರ್ಮಾಣಗೊಂಡಿದೆ. ಆದರೆ ಚಿತ್ರದ ಮೊದಲ ವಾರದ ಕಲೆಕ್ಷನ್ ನೋಡಿದರೆ ಚಿತ್ರಕ್ಕೆ ಹೂಡಿಕೆ ಮಾಡಿದ ಬಜೆಟ್ ಕೈಸೇರುವುದು ಕೂಡ ಅನುಮಾನ ಎನ್ನುವಂತಾಗಿದೆ. ಮೊದಲ ವಾರದಲ್ಲೇ ಚಿತ್ರದ ಗಳಿಕೆ ಕೇವಲ ಲಕ್ಷಗಳಿಗೆ ಕುಸಿದಿರುವುದು ಚಿತ್ರತಂಡಕ್ಕೆ ದೊಡ್ಡ ಆಘಾತ ತಂದಿದೆ.

ಬಾಕ್ಸ್ ಆಫೀಸ್ ಟ್ರ್ಯಾಕರ್ ‘ಸ್ಯಾಕ್ನಿಲ್ಕ್’ ವರದಿಯ ಪ್ರಕಾರ, ಸಿನಿಮಾ ಮೊದಲ ವಾರಾಂತ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡಿತ್ತು. ಆದರೆ ಸೋಮವಾರದಿಂದ ಕಲೆಕ್ಷನ್ ಸಂಪೂರ್ಣವಾಗಿ ಕುಸಿದಿದೆ. ಸೋಮವಾರ ಮತ್ತು ಮಂಗಳವಾರ ತಲಾ 65 ಲಕ್ಷ ರೂಪಾಯಿ ಗಳಿಸಿದರೆ, ಬುಧವಾರ 55 ಲಕ್ಷ ಹಾಗೂ ಶುಕ್ರವಾರ ಕೇವಲ 45 ಲಕ್ಷ ರೂಪಾಯಿಗೆ ಕಲೆಕ್ಷನ್ ಕುಸಿದಿದೆ.

ಇದರೊಂದಿಗೆ ದೇಶೀಯ ಮಾರುಕಟ್ಟೆಯಲ್ಲಿ ಚಿತ್ರದ ಒಟ್ಟು ಗಳಿಕೆ 6.55 ಕೋಟಿ ರೂಪಾಯಿಗೆ ಬಂದು ನಿಂತಿದೆ. ಈ ವಾರ ಶಾಹಿದ್ ಕಪೂರ್, ರಶ್ಮಿಕಾ ಮಂದಣ್ಣ, ಕೃತಿ ಸನನ್ ನಟನೆಯ ‘ಕಾಕ್‌ಟೇಲ್ 2’ ಸಿನಿಮಾ ಬಿಡುಗಡೆ ಆಗಿರುವುದರಿಂದ ಕಂಗನಾ ಚಿತ್ರದ ಮುಂದಿನ ಹಾದಿ ಇನ್ನಷ್ಟು ಕಠಿಣವಾಗಲಿದೆ. ಸದ್ಯಕ್ಕಂತೂ ಈ ಸಿನಿಮಾ ಚೇತರಿಸಿಕೊಳ್ಳುವ ಯಾವುದೇ ಲಕ್ಷಣ ಕಾಣುತ್ತಿಲ್ಲ.

ಇದನ್ನೂ ಓದಿ: ‘ಬಾಲಿವುಡ್‌ನಲ್ಲಿ ಪಾಕಿಸ್ತಾನ ಪ್ರೇಮ ಹೆಚ್ಚಿದೆ’: ರಣವೀರ್ ಸಿಂಗ್ ಪರ ಬ್ಯಾಟ್ ಬೀಸಿದ ಕಂಗನಾ ರಣಾವತ್

2008ರಲ್ಲಿ ಮುಂಬೈನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ಸಂದರ್ಭದಲ್ಲಿ 20 ಗರ್ಭಿಣಿಯರ ಪ್ರಾಣ ಉಳಿಸಿದ ನರ್ಸ್ ಅಂಜಲಿ ಕುಲ್ತೆ ಅವರ ನೈಜ ಘಟನೆಯನ್ನು ಆಧರಿಸಿ ಈ ಚಿತ್ರವನ್ನು ಮಾಡಲಾಗಿದೆ. ಚಿತ್ರ ಬಿಡುಗಡೆಯಾದ ಬೆನ್ನಲ್ಲೇ ಹರಿಯಾಣ ಮುಖ್ಯಮಂತ್ರಿ ನಾಯಬ್ ಸಿಂಗ್ ಸೈನಿ ಚಿತ್ರವನ್ನು ವೀಕ್ಷಿಸಿ, ಇದು ಪ್ರತಿಯೊಬ್ಬ ಭಾರತೀಯನಲ್ಲೂ ಧೈರ್ಯ ಮತ್ತು ಮಾನವೀಯತೆಯನ್ನು ಜಾಗೃತಗೊಳಿಸುವ ಸಿನಿಮಾ ಎಂದು ಶ್ಲಾಘಿಸಿ ಹರಿಯಾಣದಲ್ಲಿ ತೆರಿಗೆ ಮುಕ್ತ ಎಂದು ಘೋಷಿಸಿದ್ದರು. ಆದರೂ ಸಿನಿಮಾ ಗೆದ್ದಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us