AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಪುಂಸಕರು’ ಪಹಲ್ಗಾಮ್ ದಾಳಿಯನ್ನು ತೀವ್ರವಾಗಿ ಖಂಡಿಸಿದ ಕಂಗನಾ

Kangana Ranaut: ನಿನ್ನೆ ನಡೆದಿರುವ ಪಹಲ್ಗಾಮ್ ದಾಳಿಯನ್ನು ಇಡೀ ದೇಶವೇ ಖಂಡಿಸಿದೆ. ಸಿನಿಮಾ ಸೆಲೆಬ್ರಿಟಿಗಳು, ಉದ್ಯಮಿಗಳು ಸಹ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಳ್ಳುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಟಿ, ಬಿಜೆಪಿ ಸಂಸದೆಯೂ ಆಗಿರುವ ಕಂಗನಾ ರನೌತ್, ಸಾಮಾಜಿಕ ಜಾಲತಾಣದಲ್ಲಿ ತಮ್ಮ ತೀವ್ರ ಖಂಡನೆಯನ್ನು ವ್ಯಕ್ತಪಡಿಸಿದ್ದಾರೆ.

‘ನಪುಂಸಕರು’ ಪಹಲ್ಗಾಮ್ ದಾಳಿಯನ್ನು ತೀವ್ರವಾಗಿ ಖಂಡಿಸಿದ ಕಂಗನಾ
Kangana Ranaut
ಮಂಜುನಾಥ ಸಿ.
|

Updated on:Apr 23, 2025 | 4:13 PM

Share

ನಟಿ, ಬಿಜೆಪಿ ಸಂಸದೆ ಕಂಗನಾ ರನೌತ್ (Kangana Ranaut), ನಿನ್ನೆ ನಡೆದ ಪಹಲ್ಗಾಮ್ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಸರಣಿ ಪೋಸ್ಟ್​ಗಳನ್ನು ಹಂಚಿಕೊಂಡಿರುವ ನಟಿ ಕಂಗನಾ, ತೀವ್ರ ಸಂಕಟ, ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. 28 ಮಂದಿ ಪ್ರವಾಸಿಗರ ಸಾವಿಗೆ ಕಾರಣರಾದ ಭಯೋತ್ಪಾದಕರನ್ನು ನಪುಂಸಕರು ಎಂದು ನಟಿ ಕಂಗನಾ ಕರೆದಿದ್ದು, ಉಗ್ರರಿಗೆ ಧರ್ಮವಿದೆ, ಸಂತ್ರಸ್ತರಿಗೂ ಧರ್ಮವಿದೆ ಎಂದಿದ್ದಾರೆ.

‘ಆ ದುರುಳರು ನಾಗರೀಕರ ಮೇಲೆ ದಾಳಿ ಮಾಡಿದ್ದಾರೆ. ಅವರನ್ನು ಕಾಪಾಡಿಕೊಳ್ಳಲು ಏನನ್ನೂ ಹೊಂದಿರದವರ ಮೇಲೆ ದಾಳಿ ಮಾಡಿ ನಪುಂಸಕತನ ಮೆರೆದಿದ್ದಾರೆ. ಇತಿಹಾಸದಲ್ಲಿ ಪ್ರತಿ ಯುದ್ಧವೂ ಸಹ ಯುದ್ಧಭೂಮಿಯಲ್ಲೇ ನಡೆದಿದೆ. ಆದರೆ ಈ ನಪುಂಸಕರು ಅಮಾಯಕರ ಮೇಲೆ ನಿರಸ್ತ್ರರಾಗಿರುವವರ ಮೇಲೆ ದಾಳಿ ಮಾಡಿದ್ದಾರೆ. ಯುದ್ಧಭೂಮಿಯ ಹೊರಗೆ ಕಾದಾಟ ಮಾಡುತ್ತಿರುವ ಈ ನಪುಂಸಕರ ಮೇಲೆ ಯುದ್ಧವಾದರೂ ಮಾಡುವುದು ಹೇಗೆ?’ ಎಂದು ಪ್ರಶ್ನೆ ಮಾಡಿದ್ದಾರೆ ಕಂಗನಾ.

ಮತ್ತೊಂದು ಪೋಸ್ಟ್​ನಲ್ಲಿ ‘ಭಯೋತ್ಪಾದಕರಿಗೆ ಧರ್ಮ ಇದೆ, ಸಂತ್ರಸ್ತರಿಗೂ ಧರ್ಮ ಇದೆ’ ಎಂದಿದ್ದಾರೆ. ಭಯೋತ್ಪಾದಕರ ಧರ್ಮದ ಬಗ್ಗೆ ಬಹಿರಂಗವಾಗಿ ಹೇಳದೆ, ಮುಸ್ಲೀಂ ಭಯೋತ್ಪಾದಕರಿಂದ ಹಿಂದುಗಳು ದಶಕಗಳಿಂದಲೂ ಜೀವ ಕಳೆದುಕೊಳ್ಳುತ್ತಿದ್ದಾರೆ ಎಂದಿದ್ದಾರೆ. ಕಂಗನಾ ಮಾತ್ರವೇ ಅಲ್ಲದೆ ಹಲವಾರು ಬಾಲಿವುಡ್, ಟಾಲಿವುಡ್, ಸ್ಯಾಂಡಲ್​ವುಡ್ ಸೆಲೆಬ್ರಿಟಿಗಳು ಪಹಲ್ಗಾಮ್ ದಾಳಿಯನ್ನು ಖಂಡಿಸಿದ್ದಾರೆ.

ಇದನ್ನೂ ಓದಿ:ಕಂಗನಾ ರನೌತ್​ ಸಿನಿಮಾ ನೋಡಿ ಫಿದಾ ಆದ ನಟಿ ಮೃಣಾಲ್ ಠಾಕೂರ್

ಶಾರುಖ್ ಖಾನ್, ರವೀನಾ ಟಂಡನ್, ಜಾವೇದ್ ಅಖ್ತರ್ ಇನ್ನೂ ಹಲವಾರು ಮಂದಿ ಬಾಲಿವುಡ್ ನಟ, ನಟಿಯರು ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಕನ್ನಡದ ನಟರಾದ ಸುದೀಪ್, ಧ್ರುವ ಸರ್ಜಾ, ಯಶ್ ಮತ್ತು ರಾಧಿಕಾ ಪಂಡಿತ್ ಅವರುಗಳು ಸಹ ಪಹಲ್ಗಾಮ್ ದಾಳಿಯನ್ನು ಖಂಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಹಂಚಿಕೊಂಡಿದ್ದಾರೆ.

ಜಮ್ಮು ಕಾಶ್ಮೀರದ ಜನಪ್ರಿಯ ಪ್ರವಾಸಿ ತಾಣವಾದ ಪಹಲ್ಗಾಮ್​ನ ಬೈಸರನ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ 28 ಮಂದಿ ಮೃತಪಟ್ಟಿದ್ದಾರೆ. ದಾಳಿಕೋರರು ಪ್ರವಾಸಿಗರ ಹೆಸರು, ಧರ್ಮ ಕೇಳಿ ಕೊಂದಿದ್ದಾರೆ ಎನ್ನಲಾಗುತ್ತಿದೆ. ದಾಳಿಯಲ್ಲಿ ಕರ್ನಾಟಕದ ಒಬ್ಬ ವ್ಯಕ್ತಿಯೂ ಸಹ ಮೃತಪಟ್ಟಿದ್ದಾರೆ. ದಾಳಿಯ ಜವಾಬ್ದಾರಿಯನ್ನು ಟಿಆರ್​ಎಫ್ (ದಿ ರೆಸಿಟೆಂಟ್ ಫ್ರಂಟ್) ಹೊತ್ತುಕೊಂಡಿದೆ. ಈಗಾಗಲೇ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಕೇಂದ್ರದ ಇನ್ನೂ ಕೆಲವು ಪ್ರಮುಖ ಸಚಿವರು ಸಭೆ ನಡೆಸಿದ್ದು ಸರ್ಕಾರದ ಮುಂದಿನ ಹೆಜ್ಜೆ ಏನಾಗಿರಲಿದೆ ಎಂಬುದು ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:12 pm, Wed, 23 April 25

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​