ಹಿಂದೂ ಯುವತಿಯರ ಬಗ್ಗೆ ವಿವಾದಾತ್ಮಕ ಪೋಸ್ಟ್ ಹಂಚಿಕೊಂಡ ಕಂಗನಾ ರಣಾವತ್

ಇತ್ತೀಚೆಗೆ ‘ನೀಟ್’ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆನ್ ಜಿ ಯುವಜನರು ನಡೆಸಿದ ಪ್ರತಿಭಟನೆಯ ವೀಡಿಯೋಗಳನ್ನು ನೋಡಿದ ಕಂಗನಾ ಅವರು ‘ವಾಂತಿ ಬರಿಸುವಂತಿವೆ’ ಎಂದು ಟೀಕಿಸಿದ್ದರು. ಅದರ ಬೆನ್ನಲ್ಲೇ ಈಗ ಮತ್ತೊಂದು ಪೋಸ್ಟ್ ಹಂಚಿಕೊಳ್ಳುವ ಮೂಲಕ ಹಿಂದೂ ಯುವತಿಯರ ಜೀವನಶೈಲಿಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ಹಿಂದೂ ಯುವತಿಯರ ಬಗ್ಗೆ ವಿವಾದಾತ್ಮಕ ಪೋಸ್ಟ್ ಹಂಚಿಕೊಂಡ ಕಂಗನಾ ರಣಾವತ್
Kangana Ranaut

Updated on: Jul 28, 2026 | 5:47 PM

ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ (Kangana Ranaut) ಮತ್ತೆ ತಮ್ಮ ವಿವಾದಾತ್ಮಕ ಹೇಳಿಕೆಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದ್ದಾರೆ. ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಇಂದಿನ ಪಾಶ್ಚಿಮಾತ್ಯ ಸಂಸ್ಕೃತಿಗೆ ಮರುಳಾಗಿರುವ ಯುವ ಹಿಂದೂ (Hindu) ಮಹಿಳೆಯರನ್ನು ‘ಗಟಾರ ತಲೆಮಾರು’ ಎಂದು ಕರೆದಿದ್ದಾರೆ. ಅವರ ಈ ರೀತಿಯ ಹೇಳಿಕೆಗೆ ಜಿನ್ ಜಿ (Gen Z) ಯುವಕ-ಯುವತಿಯರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

ಜೆನ್ ಜಿ ಯುವತಿಯರ ಬಗ್ಗೆ ಕಂಗನಾ ಹೇಳಿಕೆ:

ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿರುವ ಕಂಗನಾ, ‘ಯುವ ಹಿಂದೂ ಮಹಿಳೆಯರ ನಡವಳಿಕೆ ಅತ್ಯಂತ ಆಘಾತಕಾರಿಯಾಗಿದೆ. ಸ್ವತಂತ್ರ ವೃತ್ತಿಪರ ಮಹಿಳೆಯರ ಜೀವನವನ್ನು ಅನುಕರಿಸಲು ಬಯಸುವ ಇವರು, ಆ ಸ್ವಾತಂತ್ರ್ಯವನ್ನು ಗಳಿಸಲು ಯಾವುದೇ ಶ್ರಮ ವಹಿಸುವುದಿಲ್ಲ. ನಿಜವಾದ ಸ್ವತಂತ್ರ ಮಹಿಳೆಯರು ಬಂಡಾಯದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ, ದಿಟ್ಟ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಾರೆ, ಅಸಂಪ್ರದಾಯಿಕ ವೃತ್ತಿಜೀವನವನ್ನು ಆಯ್ದುಕೊಳ್ಳುತ್ತಾರೆ ಮತ್ತು ತಮ್ಮ ಕ್ರಿಯೆಗಳಿಗೆ ತಾವೇ ಜವಾಬ್ದಾರರಾಗುತ್ತಾರೆ. ಅವರು ತಮ್ಮ ಹೆತ್ತವರ ಅಥವಾ ಕುಟುಂಬದ ವೆಚ್ಚದಲ್ಲಿ ಇದನ್ನು ಮಾಡುವುದಿಲ್ಲ’ ಎಂದು ಹೇಳಿದ್ದಾರೆ.

ಕಂಗನಾ ರಣಾವತ್ ಖಾರದ ಮಾತುಗಳು:

ಇಂದಿನ ಪಾಶ್ಚಿಮಾತ್ಯ ಸಂಸ್ಕೃತಿಗೆ ಮರುಳಾದ ಭಾರತೀಯ ಮಹಿಳೆಯರನ್ನು ‘ಜೆನೆರೇಷನ್ ಗಟಾರ್’ ಎಂದು ಕಂಗನಾ ಕರೆದಿದ್ದಾರೆ. ‘ಅವರಿಂದ ಸಮಾಜಕ್ಕೆ ಅಥವಾ ವ್ಯವಸ್ಥೆಗೆ ಯಾವುದೇ ಕೊಡುಗೆಯಿಲ್ಲ. ಅವರು ಓದಿನಲ್ಲೂ ಉತ್ತಮರಲ್ಲ, ಅಷ್ಟು ಕನಿಷ್ಠ ಮಟ್ಟದಲ್ಲಿದ್ದಾರೆ ಹಾಗೂ ಭ್ರಷ್ಟರಾಗಿದ್ದಾರೆ. ಅವರಿಗೆ ಗೃಹಿಣಿಯರಾಗಲೂ ಅರ್ಹತೆಯಿಲ್ಲ. ಆದರೂ ಡ್ರಗ್ಸ್, ಮದ್ಯಪಾನ ಮತ್ತು ಹಲವರ ಜೊತೆಗಿನ ಲೈಂಗಿಕ ಸಂಬಂಧಗಳ ಸ್ವಾತಂತ್ರ್ಯವನ್ನು ಹೆಮ್ಮೆಯಿಂದ ಪ್ರದರ್ಶಿಸುತ್ತಾರೆ. ಹೆತ್ತವರ ಗಳಿಕೆಯಲ್ಲೇ ನಾಚಿಕೆಯಿಲ್ಲದೆ ಜೀವನ ನಡೆಸುತ್ತಾ, ನಿಜವಾಗಿ ಸ್ವತಂತ್ರರಾಗದೆ ಸ್ವತಂತ್ರ ಜೀವನಕ್ಕಾಗಿ ನಿರಂತರವಾಗಿ ಜಗಳವಾಡುತ್ತಾರೆ’ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಸ್ವತಂತ್ರ ಜೀವನವನ್ನು ಕಷ್ಟಪಟ್ಟು ಗಳಿಸಿಕೊಳ್ಳಬೇಕು. ಯಾವುದೇ ಹೊಣೆಗಾರಿಕೆಯಿಲ್ಲದೆ ಸ್ವತಂತ್ರವಾಗಿ ಜೀವಿಸಲು ಯತ್ನಿಸಿದರೆ ನೀವು ಕೇವಲ ವಿಕೃತ ಜೀವಿಯಷ್ಟೇ. ಗಟಾರ್ ಚಾಪ್’ ಎಂದು ಕಂಗನಾ ರಣಾವತ್ ಅವರು ಇನ್​ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಸೋನಾಕ್ಷಿ ಸಿನ್ಹಾ ಸಂಭ್ರಮ: ವಿದ್ಯಾರ್ಥಿಗಳ ಬಳಿ ಕ್ಷಮೆ ಕೇಳಿದ ನಟಿ

ಯುವಜನರ ವಿರುದ್ಧ ಕಂಗನಾ ಟೀಕೆ:

ವಿದ್ಯಾರ್ಥಿಗಳ ಪ್ರತಿಭಟನೆಯ ವೀಡಿಯೋಗಳನ್ನು ನೋಡಿದ ನಂತರ ತಮಗೆ ಡಿಜಿಟಲ್ ಡಿಟಾಕ್ಸ್ ಬೇಕಿದೆ ಎಂದು ಕಂಗನಾ ಇತ್ತೀಚೆಗಷ್ಟೇ ಹೇಳಿದ್ದರು. ಯುವಜನರ ಭಾಷೆ ಹಾಗೂ ವರ್ತನೆ ಕುರಿತು ಆಕ್ಷೇಪ ಎತ್ತಿದ್ದ ಅವರು, ‘ನೀವು ನಿಮ್ಮನ್ನು ಜಿರಳೆಗಳು ಎಂದು ಕರೆದುಕೊಳ್ಳುತ್ತೀರಿ ಮತ್ತು ಅವುಗಳಂತೆಯೇ ವರ್ತಿಸುತ್ತೀರಿ’ ಎಂದಿದ್ದರು. ಕಂಗನಾ ಅವರ ಈ ಸರಣಿ ಪೋಸ್ಟ್‌ಗಳು ಸೋಶಿಯಲ್ ಮೀಡಿಯಾದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದ್ದು, ಅವರ ವಿರುದ್ಧ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us