AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃತಿ ಸನನ್ ಮಾಡಿದರೆ ತಪ್ಪು, ಕಂಗನಾ ಮಾಡಿದರೆ ಸರಿಯೇ? ನೆಟ್ಟಿಗರ ಪ್ರಶ್ನೆ

ನಟಿ ಕಂಗನಾ ರಣಾವತ್ ಅವರು ತಮಗೆ ಸಂಬಂಧವೇ ಇಲ್ಲದ ವಿಚಾರಗಳಿಗೆ ತಲೆ ಹಾಕುತ್ತಾರೆ. ಇದರಿಂದ ಅವರು ಟ್ರೋಲ್ ಆಗುತ್ತಾರೆ. ಇತ್ತೀಚೆಗೆ ನಟಿ ಕೃತಿ ಸನನ್ ಅವರ ಜಾಹೀರಾತಿಗೆ ವಿರೋಧ ವ್ಯಕ್ತವಾಗಿತ್ತು. ಆ ಜಾಹೀರಾತನ್ನು ಕಂಗನಾ ಕೂಡ ಖಂಡಿಸಿದ್ದರು. ಅದರ ಬೆನ್ನಲ್ಲೇ ಕಂಗನಾ ಅವರ ಹಳೇ ವಿಡಿಯೋಗಳನ್ನು ವೈರಲ್ ಮಾಡಲಾಗುತ್ತಿದೆ.

ಕೃತಿ ಸನನ್ ಮಾಡಿದರೆ ತಪ್ಪು, ಕಂಗನಾ ಮಾಡಿದರೆ ಸರಿಯೇ? ನೆಟ್ಟಿಗರ ಪ್ರಶ್ನೆ
Kangana Ranaut, Kriti Sanon
ಮದನ್​ ಕುಮಾರ್​
|

Updated on: Aug 28, 2026 | 6:36 PM

Share

ನಟಿ ಕೃತಿ ಸನನ್ (Kriti Sanon) ಅಭಿನಯದ ಪ್ರಸಿದ್ಧ ಆಭರಣ ಬ್ರ್ಯಾಂಡ್‌ನ ರಕ್ಷಾ ಬಂಧನ ಜಾಹೀರಾತು ಇತ್ತೀಚೆಗೆ ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿತ್ತು. ಈ ಜಾಹೀರಾತಿನಲ್ಲಿ ಕೃತಿ ಸನನ್ ಬ್ರಾಲೆಟ್ ಮಾದರಿಯ ಉಡುಪು ಧರಿಸಿ ರಕ್ಷಾ ಬಂಧನ ಆಚರಿಸುವ ದೃಶ್ಯಗಳಿದ್ದವು. ಸಾಂಪ್ರದಾಯಿಕ ಹಬ್ಬಕ್ಕೆ ಇಂತಹ ಉಡುಪು ತೊಟ್ಟಿರುವುದು ಸಂಸ್ಕೃತಿಗೆ ಸೂಕ್ತವಲ್ಲ ಎಂದು ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಬ್ರ್ಯಾಂಡ್ ಆ ಜಾಹೀರಾತನ್ನು ಹಿಂಪಡೆದಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಕಂಗನಾ ರಣಾವತ್ (Kangana Ranaut) ಟೀಕೆ ಮಾಡಿದ್ದರು. ಹಾಗಾಗಿ ಜನರು ಅವರ ಹಳೇ ವಿಡಿಯೋ ಬಗ್ಗೆ ಮಾತನಾಡಲು ಆರಂಭಿಸಿದ್ದಾರೆ.

ರಕ್ಷಾ ಬಂಧನ ಜಾಹೀರಾತು ವಿವಾದದ ನಡುವೆ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಅವರು ಕೃತಿ ಸನನ್ ಹೆಸರನ್ನು ನೇರವಾಗಿ ಉಲ್ಲೇಖಿಸದೆ, ಹಬ್ಬದ ಆಚರಣೆಯ ವೇಳೆ ಇಂತಹ ಉಡುಪು ಧರಿಸುವುದು ಮತ್ತು ಪ್ರಸ್ತುತಪಡಿಸುವುದು ಸರಿ ಅಲ್ಲ ಎಂದು ಕಟುವಾಗಿ ಟೀಕಿಸಿದ್ದರು. ಕಂಗನಾ ಅವರ ಈ ಹೇಳಿಕೆಗಳ ಬೆನ್ನಲ್ಲೇ, ಇದೀಗ ನೆಟ್ಟಿಗರು ಕಂಗನಾ ರಣಾವತ್ ಅವರ ಹಳೆಯ ವಿಡಿಯೋಗಳು ಮತ್ತು ಜಾಹೀರಾತುಗಳನ್ನು ಜಾಲಾಡಿ ಅವರ ವಿರುದ್ಧ ತಿರುಗಿಬಿದ್ದಿದ್ದಾರೆ.

63ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯ ವಿಡಿಯೋ ವೈರಲ್:

ಕಂಗನಾ ರಣಾವತ್ ‘ತನು ವೆಡ್ಸ್ ಮನು ರಿಟರ್ನ್ಸ್’ ಸಿನಿಮಾಗಾಗಿ 63ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಅತ್ಯುತ್ತಮ ನಟಿ ಪ್ರಶಸ್ತಿ ಸ್ವೀಕರಿಸಿದ್ದ ಹಳೆಯ ವಿಡಿಯೋವನ್ನು ನೆಟ್ಟಿಗರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಅಂದಿನ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಂದ ಪ್ರಶಸ್ತಿ ಸ್ವೀಕರಿಸುವಾಗ ಕಂಗನಾ ಅವರು ಆಫ್-ಶೋಲ್ಡರ್ ಗೌನ್ ಧರಿಸಿದ್ದರು.

ಹಳೆಯ ಜಾಹೀರಾತಿನ ಬಗ್ಗೆಯೂ ಜನರು ಪ್ರಶ್ನೆ:

ರಾಷ್ಟ್ರಪತಿ ಭವನದಂತಹ ಅತ್ಯುನ್ನತ ಮತ್ತು ಸಾಂಪ್ರದಾಯಿಕ ವೇದಿಕೆಯಲ್ಲಿ ಕಂಗನಾ ಅವರು ಪಾಶ್ಚಿಮಾತ್ಯ ಉಡುಪು ಧರಿಸಿದ್ದನ್ನು ಉಲ್ಲೇಖಿಸಿರುವ ನೆಟ್ಟಿಗರು, ‘ಇತರರಿಗೆ ಸಂಸ್ಕೃತಿ ಮತ್ತು ಉಡುಪಿನ ಬಗ್ಗೆ ಪಾಠ ಮಾಡುವ ಕಂಗನಾಗೆ ತಮ್ಮ ಹಳೆಯ ಉಡುಪು ನೆನಪಿಲ್ಲವೇ?’ ಎಂದು ಪ್ರಶ್ನಿಸುತ್ತಿದ್ದಾರೆ. ಅಷ್ಟೇ ಅಲ್ಲದೇ, ಕಂಗನಾ ಅವರ ಒಂದು ಹಳೆಯ ಜಾಹೀರಾತಿನ ಬಗ್ಗೆಯೂ ಜನರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ‘ಬಿಕಿನಿ, ಒಳಉಡುಪು ಧರಿಸಿ ಸಹೋದರನಿಗೆ ರಾಖಿ ಕಟ್ಟುತ್ತಾರಾ?’: ಕೃತಿ ಸನನ್​ ವಿರುದ್ಧ ಕಂಗನಾ ಗರಂ

ಕಂಗನಾ ರಣಾವತ್ ಅವರು ಈ ಹಿಂದೆ ರಕ್ಷಾ ಬಂಧನ ಹಬ್ಬದ ಆಭರಣ ಪ್ರಚಾರದ ಜಾಹೀರಾತೊಂದರಲ್ಲಿ ಪಾಶ್ಚಿಮಾತ್ಯ ಮಾದರಿಯ ಸ್ಟ್ರ್ಯಾಪ್‌ಲೆಸ್ (ಆಫ್-ಶೋಲ್ಡರ್) ಉಡುಪು ಧರಿಸಿ ಕಾಣಿಸಿಕೊಂಡಿದ್ದ ಹಳೆಯ ಫೋಟೋಗಳು ಹಾಗೂ ವಿಡಿಯೋಗಳು ಈಗ ವೈರಲ್ ಆಗುತ್ತಿವೆ. ಸೋಷಿಯಲ್ ಮೀಡಿಯಾದಲ್ಲಿ ಕಂಗನಾ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ನೆಟ್ಟಿಗರು, ‘ಕೃತಿ ಸನನ್ ಧರಿಸಿದರೆ ಸಂಸ್ಕೃತಿಗೆ ಧಕ್ಕೆ, ಕಂಗನಾ ಧರಿಸಿದರೆ ಸಾಂಪ್ರದಾಯಿಕವೇ’ ಎಂದು ಪ್ರಶ್ನಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ