‘ಬ್ರಹ್ಮಾಸ್ತ್ರ’ ಚಿತ್ರದ ಕಲೆಕ್ಷನ್ ಲೆಕ್ಕ ಫೇಕ್​? ಅನುಮಾನ ವ್ಯಕ್ತಪಡಿಸಿದ ನಟಿ ಕಂಗನಾ ರಣಾವತ್​

| Updated By: ಮದನ್​ ಕುಮಾರ್​

Updated on: Sep 12, 2022 | 7:15 AM

Brahmastra Box Office Collection: ಕರಣ್ ಜೋಹರ್​​ ಮಾಡುವ ಪ್ರತಿ ಸಿನಿಮಾವನ್ನು ಕಂಗನಾ ರಣಾವತ್​ ವಿರೋಧಿಸುತ್ತಾರೆ. ಈಗ ‘ಬ್ರಹ್ಮಾಸ್ತ್ರ’ ಚಿತ್ರದ ವಿಚಾರದಲ್ಲಿಯೂ ಹಾಗೆಯೇ ಆಗುತ್ತಿದೆ.

‘ಬ್ರಹ್ಮಾಸ್ತ್ರ’ ಚಿತ್ರದ ಕಲೆಕ್ಷನ್ ಲೆಕ್ಕ ಫೇಕ್​? ಅನುಮಾನ ವ್ಯಕ್ತಪಡಿಸಿದ ನಟಿ ಕಂಗನಾ ರಣಾವತ್​
ಕಂಗನಾ ರಣಾವತ್, ರಣಬೀರ್ ಕಪೂರ್
Follow us on

ಬರಡಾಗಿದ್ದ ಬಾಲಿವುಡ್​ ಗಲ್ಲಾಪೆಟ್ಟಿಗೆಗೆ ‘ಬ್ರಹ್ಮಾಸ್ತ್ರ’ (Brahmastra) ಚಿತ್ರದಿಂದ ಹೊಸ ಜೀವ ಬಂದಂತೆ ಆಗಿದೆ. ಮೊದಲ ಎರಡು ದಿನದಲ್ಲೇ ಈ ಸಿನಿಮಾ ವಿಶ್ವಾದ್ಯಂತ 160 ಕೋಟಿ ರೂಪಾಯಿ ಕಮಾಯಿ ಮಾಡಿದೆ. ಈ ಕುರಿತು ಸ್ವತಃ ನಿರ್ಮಾಪಕ ಕರಣ್​ ಜೋಹರ್​ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಆದರೆ ನಟಿ ಕಂಗನಾ ರಣಾವತ್​ (Kangana Ranaut) ಅವರು ಈ ಲೆಕ್ಕದ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ರಣಬೀರ್​ ಕಪೂರ್​, ಆಲಿಯಾ ಭಟ್​ ಮುಖ್ಯಭೂಮಿಕೆ ನಿಭಾಯಿಸಿರುವ ಈ ಚಿತ್ರಕ್ಕೆ ಉತ್ತಮ ಓಪನಿಂಗ್​ ಸಿಕ್ಕಿದೆ. ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ಬಿಡುಗಡೆ ಆಗಿದೆ. ಅದೇನೇ ಇದ್ದರೂ ‘ಬ್ರಹ್ಮಾಸ್ತ್ರ’ ಸಿನಿಮಾದ ಬಾಕ್ಸ್​ ಆಫೀಸ್​ (Box Office Collection) ಲೆಕ್ಕಾಚಾರ ಶೇಕಡ 70ರಷ್ಟು ನಕಲಿ ಎಂದು ಕೆಲವರು ಆರೋಪಿಸುತ್ತಿದ್ದಾರೆ.

ಕಂಗನಾ ರಣಾವತ್​ ಅವರು ಬಾಲಿವುಡ್​ನ ಅನೇಕರನ್ನು ಎದುರು ಹಾಕಿಕೊಂಡಿದ್ದಾರೆ. ಕರಣ್​ ಜೋಹರ್​ ಅವರನ್ನು ಕಂಡರೆ ಕಂಗನಾಗೆ ಆಗುವುದೇ ಇಲ್ಲ. ಕರಣ್​ ಮಾಡುವ ಪ್ರತಿ ಸಿನಿಮಾ ಮತ್ತು ಶೋಗಳನ್ನು ಕಂಗನಾ ವಿರೋಧಿಸುತ್ತಾರೆ. ಈಗ ‘ಬ್ರಹ್ಮಾಸ್ತ್ರ’ ವಿಚಾರದಲ್ಲಿಯೂ ಹಾಗೆಯೇ ಆಗುತ್ತಿದೆ. ಈ ಚಿತ್ರದ ಬಾಕ್ಸ್​ ಆಫೀಸ್​ ಲೆಕ್ಕ ಸಂಪೂರ್ಣ ನಿಜವಲ್ಲ ಎಂದು ಕೆಲವರು ವಾದಿಸುತ್ತಿದ್ದಾರೆ. ಅಂಥ ಪೋಸ್ಟ್​ಗಳನ್ನು ಕಂಗನಾ ಅವರು ತಮ್ಮ ಇನ್​ಸ್ಟಾಗ್ರಾಮ್ ಖಾತೆಯ ಸ್ಟೋರಿಗಳಲ್ಲಿ ಶೇರ್​ ಮಾಡಿಕೊಳ್ಳುತ್ತಿದ್ದಾರೆ.

ಎರಡು ದಿನಕ್ಕೆ ವಿಶ್ವಾದ್ಯಂತ 160 ಕೋಟಿ ಕಮಾಯಿ:

ಇದನ್ನೂ ಓದಿ
ಬೈಕಾಟ್ ಟ್ರೆಂಡ್​ಗೆ ಸೆಡ್ಡು ಹೊಡೆದ ‘ಬ್ರಹ್ಮಾಸ್ತ್ರ’; ಬಾಕ್ಸ್ ಆಫೀಸ್ ಉಡೀಸ್​ ಮಾಡಿದ ರಣಬೀರ್​-ಆಲಿಯಾ ಚಿತ್ರ
‘ಇದು ಎಕ್ಸ್​​ಟ್ರಾ ಬಜೆಟ್​​ನ ನಾಗಿಣಿ ಧಾರಾವಾಹಿ’; ‘ಬ್ರಹ್ಮಾಸ್ತ್ರ’ ಸಿನಿಮಾ ನೋಡಿದವರು ಹೀಗಂದ್ರು
KRK ಬಂಧನಕ್ಕೆ ‘ಬ್ರಹ್ಮಾಸ್ತ್ರ’ ಟೀಮ್​ ಕಾರಣ ಎಂದು ಆರೋಪಿಸಿದ ನೆಟ್ಟಿಗರು; ಏನಿದು ಹುನ್ನಾರ?
ಸೆ.9ಕ್ಕೆ ‘ಲಕ್ಕಿ ಮ್ಯಾನ್​’ ವರ್ಸಸ್​ ‘ಬ್ರಹ್ಮಾಸ್ತ್ರ’: ಬುಕ್​ ಮೈ ಶೋನಲ್ಲಿ ಹೇಗಿದೆ ಬಲಾಬಲ?

ಸೆಪ್ಟೆಂಬರ್​ 9ರಂದು ರಿಲೀಸ್​ ಆದ ‘ಬ್ರಹ್ಮಾಸ್ತ್ರ’ ಚಿತ್ರ ವಿಶ್ರ ಪ್ರತಿಕ್ರಿಯೆ ಪಡೆದುಕೊಂಡಿದೆ. ವಿಮರ್ಶಕರು ಈ ಸಿನಿಮಾವನ್ನು ತೆಗಳಿದ್ದಾರೆ. ಆದರೆ ಬಾಕ್ಸ್​ ಆಫೀಸ್​ ಕಲೆಕ್ಷನ್ ವಿಚಾರದಲ್ಲಿ ‘ಬ್ರಹ್ಮಾಸ್ತ್ರ’ ಸಿನಿಮಾ ಹಿಂದೆ ಬಿದ್ದಿಲ್ಲ. 2 ದಿನಕ್ಕೆ ಈ ಸಿನಿಮಾ ವಿಶ್ವಾದ್ಯಂತ ಬರೋಬ್ಬರಿ 160 ಕೋಟಿ ರೂಪಾಯಿ ಬಾಚಿಕೊಂಡಿದೆ. ಮೂರನೇ ದಿನದ ಕಲೆಕ್ಷನ್​ ಸೇರಿದರೆ ಅನಾಯಾಸವಾಗಿ 200 ಕೋಟಿ ರೂಪಾಯಿ ದಾಟಲಿದೆ ಎಂದು ಅಂದಾಜಿಸಲಾಗಿದೆ. ಈ ಸಿನಿಮಾದಿಂದ ಆಲಿಯಾ ಭಟ್ ಮತ್ತು ರಣಬೀರ್​ ಕಪೂರ್​ ಅವರ ಡಿಮ್ಯಾಂಡ್​ ಹೆಚ್ಚಿದೆ.

ಈ ಚಿತ್ರದಲ್ಲಿ ಅಮಿತಾಭ್​ ಬಚ್ಚನ್​, ಅಕ್ಕಿನೇನಿ ನಾಗಾರ್ಜುನ ಮುಂತಾದ ಸ್ಟಾರ್​ ಕಲಾವಿದರು ಅಭಿನಯಿಸಿದ್ದಾರೆ. ಶಾರುಖ್​ ಖಾನ್​ ಅವರು ಒಂದು ಅತಿಥಿ ಪಾತ್ರ ಮಾಡಿರುವುದು ವಿಶೇಷ. ವೀಕೆಂಡ್​ನಲ್ಲಿ ‘ಬ್ರಹ್ಮಾಸ್ತ್ರ’ ಚಿತ್ರವನ್ನು ಪ್ರೇಕ್ಷಕರು ಮುಗಿಬಿದ್ದು ನೋಡಿದ್ದಾರೆ. ಅದರ ಪರಿಣಾಮವಾಗಿ ದೊಡ್ಡ ಮೊತ್ತದ ಕಲೆಕ್ಷನ್​ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.