Kangana Ranaut: 1947ರಲ್ಲಿ ಭಾರತಕ್ಕೆ ಸಿಕ್ಕಿದ್ದು ಭಿಕ್ಷೆ, ಸ್ವಾತಂತ್ರ್ಯ ಲಭಿಸಿದ್ದು 2014ರಲ್ಲಿ; ವಿವಾದ ಸೃಷ್ಟಿಸಿದ ಕಂಗನಾ ಹೇಳಿಕೆ

Varun Gandhi: ಬಾಲಿವುಡ್ ನಟಿ ಕಂಗನಾ ರಣಾವತ್ ಸಂದರ್ಶನವೊಂದರಲ್ಲಿ ಹೇಳಿರುವ ಮಾತು, ವಿವಾದದ ಕಿಡಿ ಹೊತ್ತಿಸಿದೆ. ಭಾರತಕ್ಕೆ ಸ್ವಾತಂತ್ರ್ಯ ಬಂದಿದ್ದು, 2014ರಲ್ಲಿ ಎಂಬ ಕಂಗನಾ ಹೇಳಿಕೆಗೆ ಬಿಜೆಪಿ ಸಂಸದ ವರುಣ್ ಗಾಂಧಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Kangana Ranaut: 1947ರಲ್ಲಿ ಭಾರತಕ್ಕೆ ಸಿಕ್ಕಿದ್ದು ಭಿಕ್ಷೆ, ಸ್ವಾತಂತ್ರ್ಯ ಲಭಿಸಿದ್ದು 2014ರಲ್ಲಿ; ವಿವಾದ ಸೃಷ್ಟಿಸಿದ ಕಂಗನಾ ಹೇಳಿಕೆ
ಕಂಗನಾ ರಣಾವತ್
Follow us
TV9 Web
| Updated By: shivaprasad.hs

Updated on:Nov 11, 2021 | 6:15 PM

ಬಾಲಿವುಡ್ ನಟಿ ಕಂಗನಾ ರಣಾವತ್ ಈಗಾಗಲೇ ಹಲವು ಭಾರಿ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಅವರು ನೀಡಿರುವ ಹೇಳಿಕೆ ಮತ್ತೆ ತೀವ್ರ ವಿವಾದ ಸೃಷ್ಟಿಸಿದೆ. ‘‘1947ರಲ್ಲಿ ದೇಶಕ್ಕೆ ಸಿಕ್ಕಿದ್ದು ಸ್ವಾತಂತ್ರ್ಯ ಅಲ್ಲ, ಅದು ಭಿಕ್ಷೆ. 2014ರಲ್ಲಿ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿತು‌’’ ಎಂದು ಕಂಗನಾ ಹೇಳಿದ್ದಾರೆ. ಅವರ ಈ ಮಾತಿಗೆ ಸಾಮಾಜಿಕ ಜಾಲತಾಣಗಳೂ ಸೇರಿದಂತೆ ಹಲವೆಡೆ ಆಕ್ಷೇಪ ವ್ಯಕ್ತವಾಗಿದೆ. ಬಿಜೆಪಿ ಸಂಸದ ವರುಣ್ ಗಾಂಧಿ ಈ ಕುರಿತು ಟ್ವೀಟ್ ಮಾಡಿದ್ದು, ‘ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನವನ್ನು ತಿರಸ್ಕರಿಸಲಾಗಿದೆ. ಈ ಆಲೋಚನೆಗೆ ಹುಚ್ಚುತನ‌ ಎಂದು ಕರೆಯಬೇಕೋ, ದೇಶದ್ರೋಹ ಎನ್ನಬೇಕೋ’ ಎಂದು ಪ್ರಶ್ನಿಸಿದ್ದಾರೆ. ಮುಂಬೈನಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತೆಯಾದ ಪ್ರೀತಿ ಮೆನನ್ ಎನ್ನುವವರು ಮುಂಬೈ ಪೊಲೀಸರಿಗೆ ಕಂಗನಾ ಹೇಳಿಕೆ ವಿರುದ್ಧ ದೂರು ನೀಡಿದ್ದಾರೆ.

ಸಂಸದ ವರುಣ್ ಗಾಂಧಿ ಹಂಚಿಕೊಂಡಿರುವ ಟ್ವೀಟ್:

ಕಂಗನಾ ಸಂದರ್ಶನದಲ್ಲಿ, ದೇಶದಲ್ಲಿ ಕಾಂಗ್ರೆಸ್ ಆಡಳಿತವು ಬ್ರಿಟಿಷ್ ಆಡಳಿತದ ಮುಂದುವರಿಕೆಯಾಗಿತ್ತು. ನಿಜವಾದ ಸ್ವಾತಂತ್ರ್ಯ 2014ರಲ್ಲಿ ಲಭಿಸಿತು ಎಂದು, ನರೇಂದ್ರ ಮೋದಿ ಸರ್ಕಾರದ ಅಧಿಕಾರ ಸ್ವೀಕಾರವನ್ನು ಪರೋಕ್ಷವಾಗಿ ಉಲ್ಲೇಖಿಸಿ ಹೇಳಿಕೆ ನೀಡಿದ್ಧಾರೆ.

ಸಂಸದ ವರುಣ್ ಗಾಂಧಿ ಆಕ್ಷೇಪಕ್ಕೆ ಇನ್ಸ್ಟಾಗ್ರಾಂನಲ್ಲಿ ಪ್ರತಿಕ್ರಿಯೆ ನೀಡಿರುವ ಕಂಗನಾ, ಮತ್ತಷ್ಟು ವಿವಾದ ಸೃಷ್ಟಿಸಿದ್ದಾರೆ. ‘ಸಂದರ್ಶನದಲ್ಲಿ ನಾನು 1857ರ ಸ್ವಾತಂತ್ರ್ಯ ಸಂಗ್ರಾಮ ಮೊದಲನೆಯ ಹೋರಾಟವಾಗಿದೆ ಎಂದು ತಿಳಿಸಿದ್ದೇನೆ. ಅದರಿಂದಾಗಿ ಬ್ರಿಟೀಷರ ದ್ವೇಷ ಹಾಗೂ ಕ್ರೂರತನ ಮತ್ತಷ್ಟು ಹೆಚ್ಚಾಯಿತು. ಸುಮಾರು ಒಂದು ಶತಮಾನದ ನಂತರ ಗಾಂಧೀಜಿಯವರ ಭಿಕ್ಷಾ ಪಾತ್ರೆಗೆ ಸ್ವಾತಂತ್ರ್ಯ ನೀಡಲಾಯಿತು’ ಎಂದು ಕಂಗನಾ ಬರೆದಿದ್ದಾರೆ. ಅಲ್ಲದೇ ವರುಣ್ ಗಾಂಧಿಯವರನ್ನು ಉದ್ದೇಶಿಸಿ, ‘ಈಗ ಹೋಗಿ ಮತ್ತಷ್ಟು ದುಃಖಿಸಿ(ಅಳಿ)’ ಎಂದು ಬರೆದಿದ್ದಾರೆ. ಇದು ಮತ್ತಷ್ಟು ವಿವಾದ ಸೃಷ್ಟಿಸಿದೆ.

ಕಂಗನಾ ಹಂಚಿಕೊಂಡ ಪೋಸ್ಟ್:

Kangana Post on Independence

ಕಂಗನಾ ಹಂಚಿಕೊಂಡಿರುವ ಪೋಸ್ಟ್

ಇದನ್ನೂ ಓದಿ:

Kangana Ranaut: ಕಂಗನಾ ಅಭಿಮಾನಿಗಳಿಗೆ ಎದುರಾಯ್ತು ಅನಿರೀಕ್ಷಿತ ಸಮಾಚಾರ; ಸಂಗಾತಿಯ ಗುಟ್ಟು ಬಿಟ್ಟುಕೊಟ್ಟ ನಟಿ

ರಾಜ್​ಕುಮಾರ್ ಅವರನ್ನು ಪುನೀತ್​ರಲ್ಲಿಯೇ ಕಂಡಿದ್ದೆವು; ಅಪ್ಪು ನೋಡಲು ಬಂದ ಮಂಗಳಮುಖಿಯರ ಕಂಬನಿ

Published On - 5:59 pm, Thu, 11 November 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ