ಬಾಲಿವುಡ್ ನಟಿ ಕಂಗನಾ ರಣಾವತ್ ಈಗಾಗಲೇ ಹಲವು ಭಾರಿ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಅವರು ನೀಡಿರುವ ಹೇಳಿಕೆ ಮತ್ತೆ ತೀವ್ರ ವಿವಾದ ಸೃಷ್ಟಿಸಿದೆ. ‘‘1947ರಲ್ಲಿ ದೇಶಕ್ಕೆ ಸಿಕ್ಕಿದ್ದು ಸ್ವಾತಂತ್ರ್ಯ ಅಲ್ಲ, ಅದು ಭಿಕ್ಷೆ. 2014ರಲ್ಲಿ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿತು’’ ಎಂದು ಕಂಗನಾ ಹೇಳಿದ್ದಾರೆ. ಅವರ ಈ ಮಾತಿಗೆ ಸಾಮಾಜಿಕ ಜಾಲತಾಣಗಳೂ ಸೇರಿದಂತೆ ಹಲವೆಡೆ ಆಕ್ಷೇಪ ವ್ಯಕ್ತವಾಗಿದೆ. ಬಿಜೆಪಿ ಸಂಸದ ವರುಣ್ ಗಾಂಧಿ ಈ ಕುರಿತು ಟ್ವೀಟ್ ಮಾಡಿದ್ದು, ‘ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನವನ್ನು ತಿರಸ್ಕರಿಸಲಾಗಿದೆ. ಈ ಆಲೋಚನೆಗೆ ಹುಚ್ಚುತನ ಎಂದು ಕರೆಯಬೇಕೋ, ದೇಶದ್ರೋಹ ಎನ್ನಬೇಕೋ’ ಎಂದು ಪ್ರಶ್ನಿಸಿದ್ದಾರೆ. ಮುಂಬೈನಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತೆಯಾದ ಪ್ರೀತಿ ಮೆನನ್ ಎನ್ನುವವರು ಮುಂಬೈ ಪೊಲೀಸರಿಗೆ ಕಂಗನಾ ಹೇಳಿಕೆ ವಿರುದ್ಧ ದೂರು ನೀಡಿದ್ದಾರೆ.
ಸಂಸದ ವರುಣ್ ಗಾಂಧಿ ಹಂಚಿಕೊಂಡಿರುವ ಟ್ವೀಟ್:
कभी महात्मा गांधी जी के त्याग और तपस्या का अपमान, कभी उनके हत्यारे का सम्मान, और अब शहीद मंगल पाण्डेय से लेकर रानी लक्ष्मीबाई, भगत सिंह, चंद्रशेखर आज़ाद, नेताजी सुभाष चंद्र बोस और लाखों स्वतंत्रता सेनानियों की कुर्बानियों का तिरस्कार।
इस सोच को मैं पागलपन कहूँ या फिर देशद्रोह? pic.twitter.com/Gxb3xXMi2Z
— Varun Gandhi (@varungandhi80) November 11, 2021
ಕಂಗನಾ ಸಂದರ್ಶನದಲ್ಲಿ, ದೇಶದಲ್ಲಿ ಕಾಂಗ್ರೆಸ್ ಆಡಳಿತವು ಬ್ರಿಟಿಷ್ ಆಡಳಿತದ ಮುಂದುವರಿಕೆಯಾಗಿತ್ತು. ನಿಜವಾದ ಸ್ವಾತಂತ್ರ್ಯ 2014ರಲ್ಲಿ ಲಭಿಸಿತು ಎಂದು, ನರೇಂದ್ರ ಮೋದಿ ಸರ್ಕಾರದ ಅಧಿಕಾರ ಸ್ವೀಕಾರವನ್ನು ಪರೋಕ್ಷವಾಗಿ ಉಲ್ಲೇಖಿಸಿ ಹೇಳಿಕೆ ನೀಡಿದ್ಧಾರೆ.
ಸಂಸದ ವರುಣ್ ಗಾಂಧಿ ಆಕ್ಷೇಪಕ್ಕೆ ಇನ್ಸ್ಟಾಗ್ರಾಂನಲ್ಲಿ ಪ್ರತಿಕ್ರಿಯೆ ನೀಡಿರುವ ಕಂಗನಾ, ಮತ್ತಷ್ಟು ವಿವಾದ ಸೃಷ್ಟಿಸಿದ್ದಾರೆ. ‘ಸಂದರ್ಶನದಲ್ಲಿ ನಾನು 1857ರ ಸ್ವಾತಂತ್ರ್ಯ ಸಂಗ್ರಾಮ ಮೊದಲನೆಯ ಹೋರಾಟವಾಗಿದೆ ಎಂದು ತಿಳಿಸಿದ್ದೇನೆ. ಅದರಿಂದಾಗಿ ಬ್ರಿಟೀಷರ ದ್ವೇಷ ಹಾಗೂ ಕ್ರೂರತನ ಮತ್ತಷ್ಟು ಹೆಚ್ಚಾಯಿತು. ಸುಮಾರು ಒಂದು ಶತಮಾನದ ನಂತರ ಗಾಂಧೀಜಿಯವರ ಭಿಕ್ಷಾ ಪಾತ್ರೆಗೆ ಸ್ವಾತಂತ್ರ್ಯ ನೀಡಲಾಯಿತು’ ಎಂದು ಕಂಗನಾ ಬರೆದಿದ್ದಾರೆ. ಅಲ್ಲದೇ ವರುಣ್ ಗಾಂಧಿಯವರನ್ನು ಉದ್ದೇಶಿಸಿ, ‘ಈಗ ಹೋಗಿ ಮತ್ತಷ್ಟು ದುಃಖಿಸಿ(ಅಳಿ)’ ಎಂದು ಬರೆದಿದ್ದಾರೆ. ಇದು ಮತ್ತಷ್ಟು ವಿವಾದ ಸೃಷ್ಟಿಸಿದೆ.
ಕಂಗನಾ ಹಂಚಿಕೊಂಡ ಪೋಸ್ಟ್:
ಇದನ್ನೂ ಓದಿ:
Kangana Ranaut: ಕಂಗನಾ ಅಭಿಮಾನಿಗಳಿಗೆ ಎದುರಾಯ್ತು ಅನಿರೀಕ್ಷಿತ ಸಮಾಚಾರ; ಸಂಗಾತಿಯ ಗುಟ್ಟು ಬಿಟ್ಟುಕೊಟ್ಟ ನಟಿ
ರಾಜ್ಕುಮಾರ್ ಅವರನ್ನು ಪುನೀತ್ರಲ್ಲಿಯೇ ಕಂಡಿದ್ದೆವು; ಅಪ್ಪು ನೋಡಲು ಬಂದ ಮಂಗಳಮುಖಿಯರ ಕಂಬನಿ
Published On - 5:59 pm, Thu, 11 November 21