AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ‘ಪಠಾಣ್​’ ಸೂಪರ್​ ಹಿಟ್​; ‘ಚಿತ್ರರಂಗ ಇರೋದು ಹಣ ಮಾಡೋಕಲ್ಲ’ ಅಂತ ಕೊಂಕು ನುಡಿದ ಕಂಗನಾ

Shah Rukh Khan | Pathaan Movie: ಸಿನಿಮಾ ಗೆಲುವಿನಲ್ಲಿ ಬಾಕ್ಸ್ ಆಫೀಸ್​ ಮಾನದಂಡವನ್ನು ಬಹುತೇಕರು ಒಪ್ಪಿಕೊಳ್ಳುತ್ತಾರೆ. ಆದರೆ ಕಂಗನಾ ರಣಾವತ್​ ಅವರು ಈಗ ಬೇರೆಯದೇ ವಾದ ಮಂಡಿಸುತ್ತಿದ್ದಾರೆ.

Kangana Ranaut: ‘ಪಠಾಣ್​’ ಸೂಪರ್​ ಹಿಟ್​; ‘ಚಿತ್ರರಂಗ ಇರೋದು ಹಣ ಮಾಡೋಕಲ್ಲ’ ಅಂತ ಕೊಂಕು ನುಡಿದ ಕಂಗನಾ
ಕಂಗನಾ ರಣಾವತ್, ಶಾರುಖ್ ಖಾನ್
ಮದನ್​ ಕುಮಾರ್​
|

Updated on:Jan 25, 2023 | 2:29 PM

Share

ಬಾಲಿವುಡ್​ ಬಾದ್​ಷಾ ಶಾರುಖ್​ ಖಾನ್​ (Shah Rukh Khan) ಅವರಿಗೆ ಬಹುವರ್ಷಗಳ ಬಳಿಕ ದೊಡ್ಡ ಗೆಲುವು ಸಿಕ್ಕಿದೆ. ಅವರು ನಟಿಸಿರುವ ‘ಪಠಾಣ್​’ ಸಿನಿಮಾ (Pathaan Movie) ಇಂದು (ಜ.25) ಗ್ರ್ಯಾಂಡ್​ ಆಗಿ ರಿಲೀಸ್​ ಆಗಿದ್ದು, ಎಲ್ಲ ಕಡೆಗಳಲ್ಲಿ ಹೌಸ್​ ಫುಲ್​ ಪ್ರದರ್ಶನ ಕಾಣುತ್ತಿದೆ. ಮೊದಲ ದಿನ ಈ ಸಿನಿಮಾಗೆ 50 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಆಗುವ ನಿರೀಕ್ಷೆ ಇದೆ. ಒಟ್ಟಿನಲ್ಲಿ ಈ ಗೆಲುವಿನಿಂದಾಗಿ ಶಾರುಖ್​ ಖಾನ್​ ಅವರು ಖುಷಿ ಆಗಿದ್ದಾರೆ. ಆದರೆ ಈ ಸಂದರ್ಭಕ್ಕೆ ಸರಿಯಾಗಿ ನಟಿ ಕಂಗನಾ ರಣಾವತ್​ (Kangana Ranaut) ಅವರು ಕೊಂಕು ನುಡಿದಿದ್ದಾರೆ. ‘ಚಿತ್ರರಂಗ ಇರುವುದು ಹಣ ಮಾಡೋಕಲ್ಲ’ ಎಂದು ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ನಿನ್ನೆಯಷ್ಟೇ (ಜ.24) ಟ್ವಿಟರ್​ಗೆ ಮರಳಿರುವ ಕಂಗನಾ ರಣಾವತ್​ ಅವರು ತಮ್ಮ ಟ್ವೀಟ್​ಗಳ ಮೂಲಕ ಮತ್ತೆ ಕಿರಿಕ್​ ಶುರು ಮಾಡಿಕೊಂಡಿದ್ದಾರೆ.

ಒಂದು ಸಿನಿಮಾ ಎಷ್ಟು ಕಲೆಕ್ಷನ್​ ಮಾಡಿತು? ಆ ಚಿತ್ರಕ್ಕೆ ಯಾವೆಲ್ಲ ಪ್ರಶಸ್ತಿಗಳು ಬಂದವು ಅಥವಾ ವಿಮರ್ಶಕರಿಂದ ಎಂತಹ ಪ್ರತಿಕ್ರಿಯೆ ಬಂತು ಎಂಬುದರ ಆಧಾರದ ಮೇಲೆ ಚಿತ್ರದ ಯಶಸ್ಸನ್ನು ಅಳೆಯಲಾಗುತ್ತದೆ. ಬಾಕ್ಸ್ ಆಫೀಸ್​ ಮಾನದಂಡವನ್ನು ಬಹುತೇಕರು ಒಪ್ಪಿಕೊಳ್ಳುತ್ತಾರೆ. ಆದರೆ ನಟಿ ಕಂಗನಾ ರಣಾವತ್​ ಅವರು ಈಗ ಬೇರೆಯದೇ ವಾದ ಮಂಡಿಸುತ್ತಿದ್ದಾರೆ. ಅದು ಕೂಡ ‘ಪಠಾಣ್​’ ಚಿತ್ರ ರಿಲೀಸ್​ ಆದ ದಿನವೇ ಅವರು ಈ ರೀತಿ ಟ್ವೀಟ್​ ಮಾಡಿರುವುದು ಚರ್ಚೆಗೆ ಕಾರಣ ಆಗಿದೆ.

ಇದನ್ನೂ ಓದಿ
Image
Kangana Ranaut: ಉಗ್ರರಿಂದ ಹತ್ಯೆಯಾದ ಕಾಶ್ಮೀರಿ ಹುಡುಗಿ ಪಾತ್ರದಲ್ಲಿ ಕಂಗನಾ? ಸೆನ್ಸೇಷನ್​ ಸೃಷ್ಟಿಸಿದೆ ಹೊಸ ಸಿನಿಮಾ ಸುದ್ದಿ
Image
Emergency: ‘ಇಂದಿರಾ ಗಾಂಧಿ ಈ ವಿಡಿಯೋದಲ್ಲಿ ಕಂಗನಾ ರೀತಿ ಮಾಡ್ತಿದ್ದಾರೆ’: ರಾಮ್​ ಗೋಪಾಲ್​ ವರ್ಮಾ
Image
Emergency: ಇದು ಇಂದಿರಾ ಗಾಂಧಿ ಅಲ್ಲ, ಕಂಗನಾ ರಣಾವತ್! ಗಮನ ಸೆಳೆದ ‘ಎಮರ್ಜೆನ್ಸಿ’ ಫಸ್ಟ್​ ಲುಕ್​
Image
Kangana Ranaut: ‘ಶಿವಸೇನೆ ಹನುಮಾನ್​ ಚಾಲೀಸ ಬ್ಯಾನ್​ ಮಾಡಿದ್ರೆ ಅವರನ್ನು ಶಿವ ಕೂಡ ಕಾಪಾಡಲ್ಲ’: ಕಂಗನಾ ರಣಾವತ್​

ಇದನ್ನೂ ಓದಿ: Kangana Ranaut Twitter: ಟ್ವಿಟರ್​ಗೆ ಮರಳಿದ ಕಂಗನಾ ರಣಾವತ್​; ಖಾತೆ ಪುನಃ ಸಿಕ್ಕ ಬಳಿಕ ಖುಷಿ ಹಂಚಿಕೊಂಡ ನಟಿ

ಕಳೆದ ವರ್ಷ ಕಂಗನಾ ರಣಾವತ್​ ನಟನೆಯ ‘ಧಾಕಡ್​’ ಸಿನಿಮಾ ಹೀನಾಯವಾಗಿ ಸೋತಿತ್ತು. ಆ ಸೋಲಿನ ಸುಳಿಯಿಂದ ಅವರು ಇನ್ನೂ ಹೊರಬಂದಿಲ್ಲ. ಈಗ ಶಾರುಖ್​ ಖಾನ್​ ಚಿತ್ರದ ಗೆಲುವಿನ ಬಗ್ಗೆ ಅವರು ಪರೋಕ್ಷವಾಗಿ ಕೊಂಕು ನುಡಿದಿದ್ದಾರೆ. ತಮ್ಮ ಪೋಸ್ಟ್​ನಲ್ಲಿ ಅವರು ಎಲ್ಲಿಯೂ ‘ಪಠಾಣ್​’ ಹೆಸರನ್ನು ಪ್ರಸ್ತಾಪಿಸಿಲ್ಲ. ಆದರೆ ಅವರು ಈ ಚಿತ್ರವನ್ನೇ ಟಾರ್ಗೆಟ್​ ಮಾಡಿಕೊಂಡು ಟ್ವೀಟ್​ ಮಾಡಿದ್ದಾರೆ ಎಂಬುದು ನೆಟ್ಟಿಗರಿಗೆ ಸ್ಪಷ್ಟವಾಗಿದೆ.

ಇದನ್ನೂ ಓದಿ: Pathaan Review: ದೇಶಭಕ್ತಿಯಲ್ಲಿ ಮಿಂದೆದ್ದ ‘ಪಠಾಣ್​’; ಶಾರುಖ್​ ಫ್ಯಾನ್ಸ್​ಗೆ ಹಬ್ಬ, ಆ್ಯಕ್ಷನ್ ಪ್ರಿಯರಿಗೆ ಮಸ್ತ್ ಮನರಂಜನೆ

‘ಯಶಸ್ಸನ್ನು ತೋರಿಸಬೇಕು ಎಂದಾಗಲೆಲ್ಲ ದುಡ್ಡಿನ ಅಂಕಿ-ಅಂಶವನ್ನು ಮುಖಕ್ಕೆ ಹೊಡೆದಂತೆ ತೋರಿಸುವ ಮಟ್ಟಕ್ಕೆ ಚಿತ್ರರಂಗದವರು ಇಳಿದಿದ್ದಾರೆ. ಕಲೆಗೆ ಬೇರೆ ಯಾವುದೇ ಉದ್ದೇಶವೇನೂ ಇಲ್ಲ ಎಂಬಂತೆ ವರ್ತಿಸುತ್ತಾರೆ. ಇದು ಅವರ ಕೀಳು ಜೀವನವನ್ನು ತೋರಿಸುತ್ತದೆ. ಚಿತ್ರರಂಗ ಒಂದು ಉದ್ಯಮ ಹೌದು. ಆದರೆ ಇದು ಬೇರೆ ಬಿಸ್ನೆಸ್​ ರೀತಿ ಕೋಟಿಗಟ್ಟಲೆ ದುಡ್ಡು ಮಾಡೋಕೆ ಇರುವುದಲ್ಲ’ ಎಂದು ಕಂಗನಾ ಪೋಸ್ಟ್​ ಮಾಡಿದ್ದಾರೆ.

20 ತಿಂಗಳ ಹಿಂದೆ ಆಕ್ಷೇಪಾರ್ಹ ಟ್ವೀಟ್​ ಮಾಡಿದ್ದಕ್ಕಾಗಿ ಕಂಗನಾ ರಣಾವತ್​ ಅವರ ಟ್ವಿಟರ್​ ಖಾತೆಯನ್ನು ಸಸ್ಪೆಂಡ್​ ಮಾಡಲಾಗಿತ್ತು. ಅದೀಗ ಮತ್ತೆ ಆ್ಯಕ್ಟೀವ್ ಆಗಿದೆ. ಟ್ವಿಟರ್​ ಅಂಗಳಕ್ಕೆ ಮರಳುತ್ತಿದ್ದಂತೆಯೇ ಕಂಗನಾ ಅವರು ಆಕ್ರಮಣಕಾರಿಯಾಗಿ ಟ್ವೀಟ್​ ಮಾಡಲಾರಂಭಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:29 pm, Wed, 25 January 23

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?