Emergency: ಇಂದಿರಾ ಗಾಂಧಿ ಕುರಿತು ಸಿನಿಮಾ ಮಾಡಲು ಆಸ್ತಿ ಅಡವಿಟ್ಟ ಕಂಗನಾ ರಣಾವತ್​

Kangana Ranaut | Emergency Movie: ‘ಎಮರ್ಜೆನ್ಸಿ’ ಸಿನಿಮಾ ನಿರ್ಮಾಣ ಮಾಡುವಲ್ಲಿ ಕಂಗನಾ ರಣಾವತ್​ ಸಾಕಷ್ಟು ಕಷ್ಟಪಡುತ್ತಿದ್ದಾರೆ. ಇರುವ ಆಸ್ತಿಯನ್ನೆಲ್ಲ ಅಡಿವಿಟ್ಟು, ಅದರಿಂದ ತಂದ ಸಾಲದಲ್ಲಿ ಅವರು ಈ ಚಿತ್ರದ ಶೂಟಿಂಗ್​ ಮುಗಿಸಿದ್ದಾರೆ.

Emergency: ಇಂದಿರಾ ಗಾಂಧಿ ಕುರಿತು ಸಿನಿಮಾ ಮಾಡಲು ಆಸ್ತಿ ಅಡವಿಟ್ಟ ಕಂಗನಾ ರಣಾವತ್​
ಕಂಗನಾ ರಣಾವತ್
Follow us
ಮದನ್​ ಕುಮಾರ್​
|

Updated on:Jan 21, 2023 | 4:35 PM

ನಟಿ ಕಂಗನಾ ರಣಾವತ್​ (Kangana Ranaut) ಅವರದ್ದು ಡಿಫರೆಂಟ್​ ವ್ಯಕ್ತಿತ್ವ. ಬಾಲಿವುಡ್​ನ ಇತರೆ ಹೀರೋಯಿನ್​ಗಳ ರೀತಿ ಕೇವಲ ಹೀರೋ ಜೊತೆ ಮರ ಸುತ್ತುವ ಪಾತ್ರಕ್ಕೆ ಅವರು ಸೀಮಿತವಾಗಿಲ್ಲ. ಸೋಲು-ಗೆಲುವು ಏನೇ ಇದ್ದರೂ ತಮಗೆ ಅನಿಸಿದ್ದನ್ನೇ ದಿಟ್ಟತನದಿಂದ ಮಾಡುವುದು ಕಂಗನಾ ರಣಾವತ್​ ಸ್ವಭಾವ. ಈಗ ಅವರು ‘ಎಮರ್ಜೆನ್ಸಿ’ ಸಿನಿಮಾ (Emergency Movie) ಮಾಡುತ್ತಿದ್ದಾರೆ. ಈ ಚಿತ್ರದ ಮೇಲೆ ಅವರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಮುಖ್ಯ ಪಾತ್ರ ನಿಭಾಯಿಸುವುದರ ಜೊತೆಗೆ ನಿರ್ದೇಶನ ಮತ್ತು ನಿರ್ಮಾಣದ ಹೊಣೆಯನ್ನೂ ಅವರು ಹೊತ್ತುಕೊಂಡಿದ್ದಾರೆ. ಮಾಜಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿ (Indira Gandhi) ಕುರಿತು ‘ಎಮರ್ಜೆನ್ಸಿ’ ಸಿನಿಮಾ ಮೂಡಿಬರುತ್ತಿದೆ. ಈ ಚಿತ್ರದ ಶೂಟಿಂಗ್​ ಪೂರ್ಣಗೊಳಿಸಲು ಕಂಗನಾ ರಣಾವತ್​ ಅವರು ತಮ್ಮ ಆಸ್ತಿ ಅಡವಿಟ್ಟಿದ್ದಾರೆ!

ಕಂಗನಾ ರಣಾವತ್​ ನಟಿಸಿದ್ದ ‘ಧಾಕಡ್​’ ಸಿನಿಮಾ ಕಳೆದ ವರ್ಷ ಹೀನಾಯವಾಗಿ ಸೋತಿತು. ಆದರೂ ಅವರು ಧೃತಿಗೆಟ್ಟಿಲ್ಲ. ‘ಎಮರ್ಜೆನ್ಸಿ’ ಸಿನಿಮಾದ ಮೇಲೆ ಸಂಪೂರ್ಣ ನಂಬಿಕೆ ಇಟ್ಟು ಕೆಲಸ ಮುಂದುವರಿಸಿದ್ದಾರೆ. ಈ ಸಿನಿಮಾವನ್ನು ನಿರ್ಮಾಣ ಮಾಡುವಲ್ಲಿ ಅವರು ಸಾಕಷ್ಟು ಕಷ್ಟಪಡುತ್ತಿದ್ದಾರೆ. ಇರುವ ಆಸ್ತಿಯನ್ನೆಲ್ಲ ಅಡಿವಿಟ್ಟು, ಅದರಿಂದ ತಂದ ಸಾಲದಲ್ಲಿ ಸಿನಿಮಾದ ಶೂಟಿಂಗ್​ ಮುಗಿಸಿದ್ದಾರೆ.

ಇದನ್ನೂ ಓದಿ
Image
Kangana Ranaut: ಉಗ್ರರಿಂದ ಹತ್ಯೆಯಾದ ಕಾಶ್ಮೀರಿ ಹುಡುಗಿ ಪಾತ್ರದಲ್ಲಿ ಕಂಗನಾ? ಸೆನ್ಸೇಷನ್​ ಸೃಷ್ಟಿಸಿದೆ ಹೊಸ ಸಿನಿಮಾ ಸುದ್ದಿ
Image
Emergency: ‘ಇಂದಿರಾ ಗಾಂಧಿ ಈ ವಿಡಿಯೋದಲ್ಲಿ ಕಂಗನಾ ರೀತಿ ಮಾಡ್ತಿದ್ದಾರೆ’: ರಾಮ್​ ಗೋಪಾಲ್​ ವರ್ಮಾ
Image
Emergency: ಇದು ಇಂದಿರಾ ಗಾಂಧಿ ಅಲ್ಲ, ಕಂಗನಾ ರಣಾವತ್! ಗಮನ ಸೆಳೆದ ‘ಎಮರ್ಜೆನ್ಸಿ’ ಫಸ್ಟ್​ ಲುಕ್​
Image
Kangana Ranaut: ‘ಶಿವಸೇನೆ ಹನುಮಾನ್​ ಚಾಲೀಸ ಬ್ಯಾನ್​ ಮಾಡಿದ್ರೆ ಅವರನ್ನು ಶಿವ ಕೂಡ ಕಾಪಾಡಲ್ಲ’: ಕಂಗನಾ ರಣಾವತ್​

ಇದನ್ನೂ ಓದಿ: ‘ಸಿನಿಮಾ ಅಂದ್ರೆ ಇದು’; ‘ಕಾಂತಾರ’ ನೋಡಿ ಹ್ಯಾಂಗೋವರ್​ಗೆ ಹೋದ ನಟಿ ಕಂಗನಾ ರಣಾವತ್  

‘ಎಮರ್ಜೆನ್ಸಿ’ ಚಿತ್ರದ ಚಿತ್ರೀಕರಣ ಮುಕ್ತಾಯವಾದ ಖುಷಿಯಲ್ಲಿ ಕಂಗನಾ ರಣಾವತ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಈ ವಿಚಾರ ಹಂಚಿಕೊಂಡಿದ್ದಾರೆ. ಶೂಟಿಂಗ್​ ವೇಳೆ ಡೆಂಗ್ಯೂ ಬಂದಿದ್ದರಿಂದ ತುಂಬ ಕಷ್ಟ ಆಗಿತ್ತು ಎಂಬುದನ್ನು ಕೂಡ ಅವರ ತಿಳಿಸಿದ್ದಾರೆ. ಎಷ್ಟೇ ಅಡೆತಡೆಗಳು ಬಂದರೂ ಕೂಡ ಅದನ್ನೆಲ್ಲ ಧೈರ್ಯವಾಗಿ ಎದುರಿಸಿ ಅವರು ಮುನ್ನುಗ್ಗುತ್ತಿದ್ದಾರೆ.

ಇದನ್ನೂ ಓದಿ: Kangana Ranaut: ಕಂಗನಾ ರಣಾವತ್​ ಬಿಜೆಪಿ ಸೇರ್ಪಡೆ ಆಗ್ತಾರಾ? ರಾಜಕೀಯದ ಆಸಕ್ತಿ ಬಗ್ಗೆ ಬಾಯ್ಬಿಟ್ಟ ನಟಿ

ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿ ಕುರಿತು ‘ಎಮರ್ಜೆನ್ಸಿ’ ಸಿನಿಮಾ ತಯಾರಾಗುತ್ತಿದೆ. ಕೆಲವು ತಿಂಗಳ ಹಿಂದೆ ಈ ಚಿತ್ರದ ಫಸ್ಟ್​ ಲುಕ್​ ಟೀಸರ್​ ಬಿಡುಗಡೆ ಆಗಿತ್ತು. ಅದರಲ್ಲಿ ಕಂಗನಾ ರಣಾವತ್​ ಅವರ ಲುಕ್​ ನೋಡಿ ಎಲ್ಲರಿಗೂ ಅಚ್ಚರಿ ಆಗಿತ್ತು. ಪಕ್ಕಾ ಇಂದಿರಾ ಗಾಂಧಿ ರೀತಿ ಕಾಣುವಂತೆ ಕಂಗನಾಗೆ ಮೇಕಪ್​ ಮಾಡಲಾಗಿದೆ. ಆದಷ್ಟು ಬೇಗ ಈ ಚಿತ್ರ ಬಿಡುಗಡೆ ಆಗಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

‘ಎಮರ್ಜೆನ್ಸಿ’ ಚಿತ್ರಕ್ಕೆ ಶೂಟಿಂಗ್​ ಮುಗಿದಿದೆ ಎಂಬುದನ್ನು ಅಭಿಮಾನಿಗಳಿಗೆ ತಿಳಿಸಲು ಕೆಲವು ಮೇಕಿಂಗ್​ ಸ್ಟಿಲ್​ಗಳನ್ನು ಕಂಗನಾ ರಣಾವತ್​ ಅವರು ಹಂಚಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಶ್ರೇಯಸ್​ ತಲ್ಪಡೆ, ಅನುಪಮ್​ ಖೇರ್​, ಮಿಲಿಂದ್​ ಸೋಮನ್​, ಸತೀಶ್​ ಕೌಶಿಕ್​, ಮಹಿಮಾ ಚೌಧರಿ ಮುಂತಾದವರು ನಟಿಸುತ್ತಿದ್ದಾರೆ. 1975ರ ಕಾಲಘಟದ ನೈಜ ಘಟನೆಗಳನ್ನು ಆಧರಿಸಿ ‘ಎಮರ್ಜೆನ್ಸಿ’ ಚಿತ್ರ ಮೂಡಿಬರುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:10 pm, Sat, 21 January 23

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ