ಸಂಸದೆ ಕಂಗನಾ ರಣಾವತ್​ಗೆ ಕಪಾಳಮೋಕ್ಷ; ದೆಹಲಿಗೆ ತೆರಳುವಾಗ ವಿಮಾನ ನಿಲ್ದಾಣದಲ್ಲಿ ಘಟನೆ

ಬಿಜೆಪಿ ಅಭ್ಯರ್ಥಿಯಾಗಿ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಸಂಸದೆ ಆಗಿರುವ ಕಂಗನಾ ರಣಾವತ್​ ಅವರು ದೆಹಲಿಗೆ ಹೊರಟ್ಟಿದ್ದರು. ಈ ವೇಳೆ ಸಿಐಎಸ್​ಎಫ್​ ಸಿಬ್ಬಂದಿಯು ಕಂಗನಾ ರಣಾವತ್​ ಅವರ ಕೆನ್ನೆಗೆ ಹೊಡೆದಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಈ ಘಟನೆಯ ಹಿಂದಿರುವ ಅಸಲಿ ಕಾರಣ ಏನು ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ.

ಸಂಸದೆ ಕಂಗನಾ ರಣಾವತ್​ಗೆ ಕಪಾಳಮೋಕ್ಷ; ದೆಹಲಿಗೆ ತೆರಳುವಾಗ ವಿಮಾನ ನಿಲ್ದಾಣದಲ್ಲಿ ಘಟನೆ
ಕಂಗನಾ ರಣಾವತ್​

Updated on: Jun 06, 2024 | 6:20 PM

ಬಾಲಿವುಡ್​ ನಟಿ ಕಂಗನಾ ರಣಾವತ್​ (Kangana Ranaut) ಅವರ ಬಗ್ಗೆ ಒಂದು ಶಾಕಿಂಗ್ ಸುದ್ದಿ ಕೇಳಿಬಂದಿದೆ. ನೂತನ ಸಂಸದೆ ಆಗಿರುವ ಅವರು ದೆಹಲಿಗೆ ತೆರಳುವಾಗ ವಿಮಾನ ನಿಲ್ದಾಣದಲ್ಲಿ ಅವರಿಗೆ ಕಪಾಳಮೋಕ್ಷ ಮಾಡಲಾಗಿದೆ! ಚಂಡಿಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿಯೊಬ್ಬರು ಕಂಗನಾರ ಕೆನ್ನೆಗೆ ಬಾರಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಬಿಜೆಪಿ (BJP) ಅಭ್ಯರ್ಥಿಯಾಗಿ ಚುನಾವಣೆಗೆ (Lok Sabha Election) ಸ್ಪರ್ಧಿಸಿದ್ದ ಕಂಗನಾ ಜಯ ಸಾಧಿಸಿದ್ದಾರೆ. ಸಂಸದೆ ಆಗಿರುವ ಖುಷಿಯಲ್ಲಿ ಅವರು ದೆಹಲಿಗೆ ಹೊರಟ್ಟಿದ್ದರು. ಈ ವೇಳೆ ಸಿಐಎಸ್​ಎಫ್​ ಸಿಬ್ಬಂದಿಯು ಕಂಗನಾ ರಣಾವತ್​ ಅವರ ಕೆನ್ನೆಗೆ ಹೊಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ದೆಹಲಿ ತಲುಪಿದ ಕೂಡಲೇ ಕಂಗನಾ ರಣಾವತ್​ ಅವರು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮಹಾ ನಿರ್ದೇಶಕರಾದ ನೀನಾ ಸಿಂಗ್​ ಅವರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಚಂಡಿಗಢ ವಿಮಾನ ನಿಲ್ದಾಣದ ನಿರ್ಬಂಧಿತ ಸ್ಥಳದಲ್ಲಿ ತಾವು ನಿಂತಿದ್ದಾಗ ಸಿಐಎಸ್​ಎಫ್​ ಮಹಿಳಾ ಕಾನ್ಸ್​ಟೇಬಲ್​ ಬಂದು ಕಪಾಳಕ್ಕೆ ಹೊಡೆದರು ಎಂದು ಕಂಗನಾ ರಣಾವತ್ ಆರೋಪಿಸಿದ್ದಾರೆ.

ಇದನ್ನೂ ಓದಿ: ನಟಿ ಕಂಗನಾಗೆ ಗೆಲುವು; ಮೊದಲ ಪ್ರಯತ್ನದಲ್ಲಿ ಪಡೆದ ಮತಗಳು ಎಷ್ಟು?

ಕಂಗನಾ ರಣಾವತ್​ ಅವರ ಕೆನ್ನೆಗೆ ಬಾರಿಸಿದ್ದಾರೆ ಎನ್ನಲಾದ ಮಹಿಳಾ ಸಿಬ್ಬಂದಿ ಕುಲ್ವಿಂದರ್​ ಕೌರ್​ ಅವರನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದೆ. ಘಟನೆಯ ಕುರಿತು ವಿಚಾರಣೆ ನಡೆಯುತ್ತಿದೆ. ಸ್ಥಳದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ.

ಹಿಂದಿ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ ಕಂಗನಾ ರಣಾವತ್​ ಅವರು ಈ ವರ್ಷ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ ಆದರು. ಮೂಲತಃ ಹಿಮಾಚಲ ಪ್ರದೇಶದವರಾದ ಅವರು ಮಂಡಿ ಕ್ಷೇತ್ರದಿಂದ ಟಿಕೆಟ್​ ಪಡೆದರು. ಮೊದಲ ಪ್ರಯತ್ನದಲ್ಲೇ ಅವರು ಸಂಸದೆ ಆಗಿದ್ದಾರೆ. ಕಂಗನಾ ಎದುರು ಚುನಾವಣೆಗೆ ನಿಂತಿದ್ದ ಕಾಂಗ್ರೆಸ್​ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್​ ಅವರು 4,62,267 ಮತಗಳನ್ನು ಪಡೆದರು. 5,37,022 ಮತಗಳನ್ನು ಪಡೆದ ಕಂಗನಾ ಅವರಿಗೆ ಗೆಲುವಿನ ನಗೆ ಬೀರಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 5:52 pm, Thu, 6 June 24

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us