ಸಂಸದೆ, ನಟಿ ಕಂಗನಾ ರಣಾವತ್​ ಮನೆ ಮಾರಿಕೊಳ್ಳುವ ಸ್ಥಿತಿ ಬಂತಾ? ಎಲ್ಲರಿಗೂ ಅಚ್ಚರಿ

ನಟಿ ಕಂಗನಾ ರಣಾವತ್​ ಅವರು ಈಗ ಪೂರ್ಣ ಪ್ರಮಾಣದಲ್ಲಿ ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ. ನಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಅವರೀಗ ಮನೆ ಮಾರಾಟ ಮಾಡುತ್ತಾರೆ ಎಂದು ಕೂಡ ಹೇಳಲಾಗುತ್ತಿದೆ. ಸೋಶಿಯಲ್​ ಮೀಡಿಯಾದಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ನಟಿಗೆ ಮನೆ ಮಾರಿಕೊಳ್ಳುವ ಸ್ಥಿತಿ ಯಾಕೆ ಬಂದಿದೆ ಎಂಬುದು ನೆಟ್ಟಿಗರ ಪ್ರಶ್ನೆ.

ಸಂಸದೆ, ನಟಿ ಕಂಗನಾ ರಣಾವತ್​ ಮನೆ ಮಾರಿಕೊಳ್ಳುವ ಸ್ಥಿತಿ ಬಂತಾ? ಎಲ್ಲರಿಗೂ ಅಚ್ಚರಿ
ಕಂಗನಾ ರಣಾವತ್​
Follow us
|

Updated on: Aug 04, 2024 | 11:01 PM

ನಟಿಯಾಗಿ ಯಶಸ್ವಿ ಆದ ಬಳಿಕ ಕಂಗನಾ ರಣಾವತ್​ ಅವರು ರಾಜಕೀಯದಲ್ಲೂ ಗೆಲುವು ಕಂಡಿದ್ದಾರೆ. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಅವರು ಸಂಸದೆ ಆಗಿದ್ದು, ಸಂಪೂರ್ಣ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ರಾಜಕೀಯಕ್ಕೆ ಸೇರಿದ ಮೇಲೆ ಸಿಕ್ಕಾಪಟ್ಟೆ ಆಸ್ತಿ ಮಾಡಿದವರು ಅನೇಕರಿದ್ದಾರೆ. ಆದರೆ ಕಂಗನಾ ರಣಾವತ್​ ಅವರು ಮನೆ ಮಾರಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಮುಂಬೈನಲ್ಲಿ ಇರುವ ಕಟ್ಟಡವನ್ನು ಕಂಗನಾ ರಣಾವತ್​ ಮಾರಲಿದ್ದಾರೆ ಎಂದು ಗಾಸಿಪ್​ ಹಬ್ಬಿದೆ. ಈ ವಿಷಯ ಕೇಳಿ ಎಲ್ಲರಿಗೂ ಅಚ್ಚರಿ ಆಗಿದೆ.

ಹಲವು ವರ್ಷಗಳಿಂದ ಕಂಗನಾ ರಣಾವತ್​ ಅವರು ಬಾಲಿವುಡ್​ನಲ್ಲಿ ಸಕ್ರಿಯರಾಗಿದ್ದು ಕೋಟ್ಯಂತರ ರೂಪಾಯಿ ಸಂಪಾದನೆ ಮಾಡಿದ್ದಾರೆ. ಬೇಡಿಕೆಯ ನಟಿಯಾಗಿ ಅವರು ಗುರುತಿಸಿಕೊಂಡಿದ್ದಾರೆ. ಮುಂಬೈನಲ್ಲಿ ಅವರು ಆಸ್ತಿ ಹೊಂದಿದ್ದರು. ಅದನ್ನು ಅವರೀಗ 40 ಕೋಟಿ ರೂಪಾಯಿಗೆ ಮಾರಾಟ ಮಾಡಲು ಮುಂದಾಗಿದ್ದಾರೆ ಎಂದು ಯೂಟ್ಯೂಬ್​ ಚಾನೆಲ್​ವೊಂದರಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ.

ವೈರಲ್​ ಆಗಿರುವ ವಿಡಿಯೋದಲ್ಲಿ ಕೇವಲ ಕಟ್ಟಡವನ್ನು ಮಾತ್ರ ತೋರಿಸಲಾಗಿದೆ. ಆದರೆ ನಟಿಯ ಹೆಸರನ್ನು ಪ್ರಸ್ತಾಪಿಸಿಲ್ಲ. ಕಟ್ಟಡ ನೋಡಿದರೆ ಅದು ಕಂಗನಾ ರಣಾವತ್​ ಅವರದ್ದೇ ಬಿಲ್ಡಿಂಗ್​ ಎಂಬುದು ಗೊತ್ತಾಗುತ್ತದೆ. ಅನೇಕರು ನಟಿಯ ಹೆಸರನ್ನು ಕಮೆಂಟ್​ ಮಾಡಿದ್ದಾರೆ. ನಿಜಕ್ಕೂ ಕಂಗನಾ ರಣಾವತ್​ ಅವರಿಗೆ ಆಸ್ತಿ ಮಾರಿಕೊಳ್ಳುವ ಸ್ಥಿತಿ ಬಂದಿದೆಯಾ ಎಂಬುದರ ಬಗ್ಗೆ ಅವರಿಂದಲೇ ಸ್ಪಷ್ಟನೆ ಸಿಗಬೇಕಿದೆ.

ಇದನ್ನೂ ಓದಿ: ‘ಕಂಗನಾ ಅಂದ್ರೆ ಯಾರು? ಸುಂದರಿಯೇ?’: ಖ್ಯಾತ ನಟ ಅನ್ನು ಕಪೂರ್ ಪ್ರಶ್ನೆ

ಕಂಗನಾ ರಣಾವತ್​ ಅವರ ಇದೇ ಕಟ್ಟಡ ಈ ಮೊದಲು ಕೂಡ ಸುದ್ದಿ ಆಗಿತ್ತು. ನಿಯಮಗಳನ್ನು ಉಲ್ಲಂಘಿಸಿ, ಅಕ್ರಮವಾಗಿ ಕಟ್ಟಡವನ್ನು ವಿಸ್ತರಿಸಲಾಗಿತ್ತು ಎಂಬ ಕಾರಣಕ್ಕೆ ಮುಂಬೈ ಪಾಲಿಕೆ ಅಧಿಕಾರಿಗಳು ಕ್ರಮ ತೆಗೆದುಕೊಂಡಿದ್ದರು. ಅದರ ವಿರುದ್ಧ ಕಂಗನಾ ಗರಂ ಆಗಿದ್ದರು. ಆ ಕಾರಣದಿಂದ ಸಿಕ್ಕಾಪಟ್ಟೆ ಸುದ್ದಿಯಾಗಿದ್ದ ಕಟ್ಟಡ ಈಗ ಮಾರಾಟಕ್ಕೆ ಇದೆ ಎಂಬುದು ತಿಳಿದು ಅಭಿಮಾನಿಗಳಿಗೆ ಶಾಕ್​ ಆಗಿದೆ. ಸಿನಿಮಾ ವಿಚಾರಕ್ಕೆ ಬರುವುದಾದರೆ ಕಂಗನಾ ಅವರು ‘ಎಮರ್ಜೆಸ್ಸಿ’ ಚಿತ್ರದ ಕೆಲಸಗಳನ್ನು ಪೂರ್ಣಗೊಳಿಸಿದ್ದು, ಬಿಡುಗಡೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ