AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ‘ನನ್ನ ಧಾಕಡ್​ ಚಿತ್ರದ್ದು ಐತಿಹಾಸಿಕ ಸೋಲು ನಿಜ’: ಕಂಗನಾ ರಣಾವತ್​ ಬಹಿರಂಗ ಹೇಳಿಕೆ

Kangana Ranaut | Dhaakad Movie: ಕಂಗನಾ ರಣಾವತ್​ ನಟಿಸಿದ್ದ ‘ಧಾಕಡ್’​ ಸಿನಿಮಾ ಮೊದಲ ದಿನ ಗಳಿಸಿದ್ದು 55 ಲಕ್ಷ ರೂಪಾಯಿ ಮಾತ್ರ. ಒಟ್ಟಾರೆಯಾಗಿ ಅದರ ಕಲೆಕ್ಷನ್​ ಕೇವಲ 2.58 ಕೋಟಿ ರೂಪಾಯಿ.

Kangana Ranaut: ‘ನನ್ನ ಧಾಕಡ್​ ಚಿತ್ರದ್ದು ಐತಿಹಾಸಿಕ ಸೋಲು ನಿಜ’: ಕಂಗನಾ ರಣಾವತ್​ ಬಹಿರಂಗ ಹೇಳಿಕೆ
ಕಂಗನಾ ರಣಾವತ್, ಶಾರುಖ್ ಖಾನ್
ಮದನ್​ ಕುಮಾರ್​
|

Updated on:Jan 27, 2023 | 10:54 PM

Share

ಬಾಲಿವುಡ್​ನಲ್ಲಿ ಒಗ್ಗಟ್ಟು ಕಾಣಿಸುತ್ತಿಲ್ಲ. ನಟಿ ಕಂಗನಾ ರಣಾವತ್​ (Kangana Ranaut) ಅವರು ಹಲವು ಸ್ಟಾರ್​ ಕಲಾವಿದರ ವಿರುದ್ಧ ಗುಡುಗುತ್ತಿದ್ದಾರೆ. ಒಂದು ವರ್ಗವನ್ನು ಅವರು ಯಾವಾಗಲೂ ವಿರೋಧಿಸುತ್ತಲೇ ಬಂದಿದ್ದಾರೆ. ಈಗ ಶಾರುಖ್​ ಖಾನ್​ (Shah Rukh Khan) ನಟನೆಯ ‘ಪಠಾಣ್​’ ಸಿನಿಮಾ ಅಭೂತಪೂರ್ವ ಯಶಸ್ಸು ಕಂಡಿದೆ. ಈ ಸಂದರ್ಭದಲ್ಲಿ ಕಂಗನಾ ರಣಾವತ್​ ಅವರು ಶಾರುಖ್​ ಖಾನ್​ ಬಗ್ಗೆ ಇಲ್ಲಸಲ್ಲದ ಕಮೆಂಟ್​ಗಳನ್ನು ಮಾಡುತ್ತಿದ್ದಾರೆ. ‘ಪಠಾಣ್​’ ಚಿತ್ರದ (Pathaan Movie) ಗೆಲುವನ್ನು ಅವರು ಸಹಿಸಿದಂತೆ ಕಾಣುತ್ತಿಲ್ಲ. ಹಾಗಾಗಿ ಪ್ರತಿದಿನ ಒಂದಿಲ್ಲೊಂದು ಕೊಂಕು ತೆಗೆಯುತ್ತಿದ್ದಾರೆ. ಈ ನಡುವೆ ತಮ್ಮದೇ ಸೋಲಿನ ಬಗ್ಗೆಯೂ ಕಂಗನಾ ರಣಾವತ್​ ಪ್ರತಿಕ್ರಿಯೆ ನೀಡಿದ್ದಾರೆ.

20 ತಿಂಗಳ ಹಿಂದೆ ಸಸ್ಪೆಂಡ್​ ಆಗಿದ್ದ ಕಂಗನಾ ರಣಾವತ್​ ಅವರ ಟ್ವಿಟರ್​ ಖಾತೆ ಈಗ ಮರಳಿ ಬಂದಿದೆ. ಹಾಗಾಗಿ ಅವರು ಟ್ವಿಟರ್​ನಲ್ಲಿ ಸಿಕ್ಕಾಪಟ್ಟೆ ಆ್ಯಕ್ಟೀವ್​ ಆಗಿದ್ದಾರೆ. ಪರೋಕ್ಷವಾಗಿ ಮತ್ತು ಕೆಲವೊಮ್ಮೆ ನೇರವಾಗಿ ಕೂಡ ‘ಪಠಾಣ್​’ ಚಿತ್ರವನ್ನು ಅವರು ಕುಟುಕುತ್ತಿದ್ದಾರೆ. ಇದರಿಂದ ಶಾರುಖ್​ ಖಾನ್​ ಅಭಿಮಾನಿಗಳಿಗೆ ಸಿಟ್ಟು ಬಂದಿದೆ. ಹಾಗಾಗಿ ಕಂಗನಾ ನಟನೆಯ ‘ಧಾಕಡ್​’ ಚಿತ್ರದ ಸೋಲನ್ನು ಮತ್ತೆ ನೆನಪಿಸಿದ್ದಾರೆ ನೆಟ್ಟಿಗರು.

ಇದನ್ನೂ ಓದಿ
Image
Siddharth Anand: ಬಾಲಿವುಡ್​ಗೆ 2023ರ ಮೊದಲ ಬ್ಲಾಕ್​ ಬಸ್ಟರ್​​ ನೀಡಿದ ‘ಪಠಾಣ್​’ ನಿರ್ದೇಶಕ ಸಿದ್ದಾರ್ಥ್​ ಆನಂದ್​
Image
Kangana Ranaut: ‘ಪಠಾಣ್​’ ಸೂಪರ್​ ಹಿಟ್​; ‘ಚಿತ್ರರಂಗ ಇರೋದು ಹಣ ಮಾಡೋಕಲ್ಲ’ ಅಂತ ಕೊಂಕು ನುಡಿದ ಕಂಗನಾ
Image
Pathaan Review: ದೇಶಭಕ್ತಿಯಲ್ಲಿ ಮಿಂದೆದ್ದ ‘ಪಠಾಣ್​’; ಶಾರುಖ್​ ಫ್ಯಾನ್ಸ್​ಗೆ ಹಬ್ಬ, ಆ್ಯಕ್ಷನ್ ಪ್ರಿಯರಿಗೆ ಮಸ್ತ್ ಮನರಂಜನೆ
Image
Pathaan Movie Twitter Review: ‘ಹೈ ವೋಲ್ಟೇಜ್ ಆ್ಯಕ್ಷನ್ ಸಿನಿಮಾ’; ‘ಪಠಾಣ್​’ ನೋಡಿ ವಿಮರ್ಶೆ ತಿಳಿಸಿದ ನೆಟ್ಟಿಗರು

ಇದನ್ನೂ ಓದಿ: Kangana Ranaut Twitter: ಟ್ವಿಟರ್​ಗೆ ಮರಳಿದ ಕಂಗನಾ ರಣಾವತ್​; ಖಾತೆ ಪುನಃ ಸಿಕ್ಕ ಬಳಿಕ ಖುಷಿ ಹಂಚಿಕೊಂಡ ನಟಿ

‘ಕಂಗನಾ ಅವರ ಧಾಕಡ್​ ಸಿನಿಮಾ ಮೊದಲ ದಿನ ಗಳಿಸಿದ್ದು 55 ಲಕ್ಷ ರೂಪಾಯಿ ಮಾತ್ರ. ಒಟ್ಟಾರೆಯಾಗಿ ಅದು ಗಳಿಸಿದ್ದು ಕೇವಲ 2.58 ಕೋಟಿ ರೂಪಾಯಿ. ಆದರೆ ಪಠಾಣ್​ ಸಿನಿಮಾ ಮೊದಲ ದಿನವೇ 100 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿದೆ. ಹಾಗಾಗಿ ಕಂಗನಾ ಅವರು ಹತಾಶೆಯಿಂದ ಈ ರೀತಿ ವರ್ತಿಸುತ್ತಿದ್ದಾರೆ’ ಎಂದು ನೆಟ್ಟಿಗರೊಬ್ಬರು ಟ್ವೀಟ್​ ಮಾಡಿದ್ದಾರೆ.

ಈ ಟ್ವೀಟ್​ಗೆ ಕಂಗನಾ ರಣಾವತ್​ ಪ್ರತಿಕ್ರಿಯೆ ನೀಡಿದ್ದಾರೆ. ‘ಹೌದು, ಧಾಕಡ್​ ಸಿನಿಮಾದ್ದು ಐತಿಹಾಸಿಕ ಸೋಲು. ಅದನ್ನು ನಾನು ಯಾವತ್ತು ತಳ್ಳಿ ಹಾಕಿದ್ದೇನೆ? ಈಗ ಶಾರುಖ್​ ಖಾನ್​ಗೆ ಸಿಕ್ಕಿರುವುದು ಕಳೆದ ಹತ್ತು ವರ್ಷಗಳಲ್ಲಿ ಮೊದಲ ಗೆಲುವು. ಅವರಿಗೆ ಸಿಕ್ಕಂತೆಯೇ ನಮಗೂ ಭಾರತ ಒಂದು ಅವಕಾಶ ನೀಡುತ್ತೆ ಎಂಬ ಭರವಸೆ ಇದೆ’ ಎಂದು ಕಂಗನಾ ರಣಾವತ್​ ಟ್ವೀಟ್​ ಮಾಡಿದ್ದಾರೆ.

ಏನಾಗಲಿದೆ ‘ಎಮರ್ಜೆನ್ಸಿ’ ಚಿತ್ರದ ಭವಿಷ್ಯ?

ನಟಿ ಕಂಗನಾ ರಣಾವತ್​ ಅವರು ‘ಎಮರ್ಜೆನ್ಸಿ’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾವನ್ನು ಅವರೇ ನಿರ್ದೇಶಿಸುತ್ತಿದ್ದಾರೆ. ಅಲ್ಲದೇ ನಿರ್ಮಾಣದಲ್ಲೂ ಕೈ ಜೋಡಿಸಿದ್ದಾರೆ. ಹಾಗಾಗಿ ತಮ್ಮ ಆಸ್ತಿಯನ್ನೆಲ್ಲ ಅಡವಿಟ್ಟು ಈ ಚಿತ್ರಕ್ಕೆ ಅವರು ಹಣ ಹಾಕಿದ್ದಾರೆ. ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ ಕುರಿತು ‘ಎಮರ್ಜೆನ್ಸಿ’ ಸಿನಿಮಾ ಮೂಡಿಬರುತ್ತಿದೆ. ಈ ಚಿತ್ರದ ಬಾಕ್ಸ್​ ಆಫೀಸ್​ ಭವಿಷ್ಯ ಏನಾಗಲಿದೆ ಎಂಬುದನ್ನು ತಿಳಿಯಲು ಸಿನಿಪ್ರಿಯರು ಕಾದಿ​ದ್ದಾರೆ. ಅಕ್ಟೋಬರ್​ನಲ್ಲಿ ಈ ಸಿನಿಮಾ ರಿಲೀಸ್​ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:54 pm, Fri, 27 January 23

ಅಡಿಕೆಗೆ ಬಂಪರ್ ಬೆಲೆ: ತೋಟಕ್ಕೆ ಹೈ ಸೆಕ್ಯುರಿಟಿ ನೀಡಿದ ರೈತ
ಅಡಿಕೆಗೆ ಬಂಪರ್ ಬೆಲೆ: ತೋಟಕ್ಕೆ ಹೈ ಸೆಕ್ಯುರಿಟಿ ನೀಡಿದ ರೈತ
ಕೊಲಂಬಿಯಾದಲ್ಲಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು
ಕೊಲಂಬಿಯಾದಲ್ಲಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು
ಯತೀಂದ್ರ ಹಸ್ತಕ್ಷೇಪ ವಿಚಾರ ಸದನದಲ್ಲಿ ಚರ್ಚೆ: ಕೆಜೆ ಜಾರ್ಜ್ ಹೇಳಿದ್ದೇನು?
ಯತೀಂದ್ರ ಹಸ್ತಕ್ಷೇಪ ವಿಚಾರ ಸದನದಲ್ಲಿ ಚರ್ಚೆ: ಕೆಜೆ ಜಾರ್ಜ್ ಹೇಳಿದ್ದೇನು?
ಟ್ರಕ್​ನಲ್ಲಿ ಪ್ಲಾಸ್ಟಿಕ್​ ಬಾಟಲಿಗಳ ನಡುವೆ ಹಸುಗಳನ್ನು ತುಂಬಿ ಕಳ್ಳಸಾಗಣೆ
ಟ್ರಕ್​ನಲ್ಲಿ ಪ್ಲಾಸ್ಟಿಕ್​ ಬಾಟಲಿಗಳ ನಡುವೆ ಹಸುಗಳನ್ನು ತುಂಬಿ ಕಳ್ಳಸಾಗಣೆ
ನಾವು ಈಗ ಸುಧಾರಣಾ ಎಕ್ಸ್​​ಪ್ರೆಸ್​ನಲ್ಲಿದ್ದೇವೆ: ಪ್ರಧಾನಿ ಮೋದಿ
ನಾವು ಈಗ ಸುಧಾರಣಾ ಎಕ್ಸ್​​ಪ್ರೆಸ್​ನಲ್ಲಿದ್ದೇವೆ: ಪ್ರಧಾನಿ ಮೋದಿ
‘ಟಾಕ್ಸಿಕ್’ ವಿಷಯದಲ್ಲಿ ಯಶ್ ಬೆಂಬಲಕ್ಕೆ ನಿಂತ ಮಹಿಳಾ ನಿರ್ದೇಶಕಿ
‘ಟಾಕ್ಸಿಕ್’ ವಿಷಯದಲ್ಲಿ ಯಶ್ ಬೆಂಬಲಕ್ಕೆ ನಿಂತ ಮಹಿಳಾ ನಿರ್ದೇಶಕಿ
ಟ್ರಕ್​ಗಳ ನಡುವೆ ಅಪಘಾತ, ಹೊತ್ತಿಕೊಂಡ ಬೆಂಕಿ, ಚಾಲಕ ಸಜೀವದಹನ
ಟ್ರಕ್​ಗಳ ನಡುವೆ ಅಪಘಾತ, ಹೊತ್ತಿಕೊಂಡ ಬೆಂಕಿ, ಚಾಲಕ ಸಜೀವದಹನ
400 ಕೋಟಿ ದರೋಡೆ ಪ್ರಕರಣಕ್ಕೆ ಸಿಗುತ್ತಾ ಮತ್ತೊಂದು ಟ್ವಿಸ್ಟ್?
400 ಕೋಟಿ ದರೋಡೆ ಪ್ರಕರಣಕ್ಕೆ ಸಿಗುತ್ತಾ ಮತ್ತೊಂದು ಟ್ವಿಸ್ಟ್?
ಮೊದಲ ಎಸೆತಗಳಲ್ಲೇ ವಿಶ್ವ ದಾಖಲೆ ಬರೆದ ಮ್ಯಾಟ್ ಹೆನ್ರಿ
ಮೊದಲ ಎಸೆತಗಳಲ್ಲೇ ವಿಶ್ವ ದಾಖಲೆ ಬರೆದ ಮ್ಯಾಟ್ ಹೆನ್ರಿ
ಸಾರ್ವಜನಿಕ ಸಾಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ಮಹಿಳೆಗೆ ಒದ್ದ ವ್ಯಕ್ತಿ
ಸಾರ್ವಜನಿಕ ಸಾಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ಮಹಿಳೆಗೆ ಒದ್ದ ವ್ಯಕ್ತಿ