AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ‘ಸಿದ್ದಾರ್ಥ್​ ಮಲ್ಹೋತ್ರಾ-ಕಿಯಾರಾ ಅಡ್ವಾಣಿ ಅವರದ್ದು ನಿಜವಾದ ಪ್ರೀತಿ’: ಕಂಗನಾ ರಣಾವತ್​

Sidharth Malhotra Kiara Advani Marriage: ತುಂಬ ಖಾಸಗಿಯಾಗಿ ಸಿದ್ದಾರ್ಥ್​ ಮಲ್ಹೋತ್ರಾ ಹಾಗೂ ಕಿಯಾರಾ ಅಡ್ವಾಣಿ ಅವರ ಮದುವೆ ನಡೆಯುತ್ತಿದೆ. ಬಾಲಿವುಡ್​ನಿಂದ ಅಂದಾಜು 100 ಜನರು ಈ ವಿವಾಹದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.

Kangana Ranaut: ‘ಸಿದ್ದಾರ್ಥ್​ ಮಲ್ಹೋತ್ರಾ-ಕಿಯಾರಾ ಅಡ್ವಾಣಿ ಅವರದ್ದು ನಿಜವಾದ ಪ್ರೀತಿ’: ಕಂಗನಾ ರಣಾವತ್​
ಕಂಗನಾ ರಣಾವತ್, ಕಿಯಾರಾ ಅಡ್ವಾಣಿ, ಸಿದ್ದಾರ್ಥ್ ಮಲ್ಹೋತ್ರಾ
ಮದನ್​ ಕುಮಾರ್​
|

Updated on: Feb 04, 2023 | 9:30 AM

Share

ಹಿಂದಿ ಚಿತ್ರರಂಗದ ಖ್ಯಾತ ಕಲಾವಿದರಾದ ಸಿದ್ದಾರ್ಥ್​ ಮಲ್ಹೋತ್ರಾ ಹಾಗೂ ಕಿಯಾರಾ ಅಡ್ವಾಣಿ (Kiara Advani) ಅವರು ಹಸೆಮಣೆ ಏರುತ್ತಿದ್ದಾರೆ. ರಾಜಸ್ಥಾನದಲ್ಲಿ ಈ ಜೋಡಿಯ ಮದುವೆಗೆ ಸಕಲ ತಯಾರಿ ನಡೆಯುತ್ತಿದೆ. ಅನೇಕ ಅತಿಥಿಗಳು ಮುಂಬೈನಿಂದ ರಾಜಸ್ಥಾನಕ್ಕೆ ಬರುತ್ತಿದ್ದಾರೆ. ಸೂರ್ಯಗಡ ಪ್ಯಾಲೇಸ್​ನಲ್ಲಿ ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್​ ಮಲ್ಹೋತ್ರಾ (Sidharth Malhotra) ಅವರು ಸಪ್ತಪದಿ ತುಳಿಯಲಿದ್ದಾರೆ. ಇಷ್ಟೆಲ್ಲ ಸುದ್ದಿ ಹರಿದಾಡುತ್ತಿದ್ದರೂ ಕೂಡ ಈ ಜೋಡಿಯ ಕಡೆಯಿಂದ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಈ ನಡುವೆ ನಟಿ ಕಂಗನಾ ರಣಾವತ್​ (Kangana Ranaut) ಅವರು ‘ಇವರಿಬ್ಬರದ್ದು ನಿಜವಾದ ಪ್ರೀತಿ’ ಎಂದು ಹೊಗಳಿದ್ದಾರೆ. ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಈ ಜೋಡಿಗೆ ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

ಸಿದ್ದಾರ್ಥ್​ ಮಲ್ಹೋತ್ರಾ ಹಾಗೂ ಕಿಯಾರಾ ಅಡ್ವಾಣಿ ಅವರು ಜೊತೆಯಾಗಿ ಇರುವ ಅಪರೂಪದ ವಿಡಿಯೋವನ್ನು ಕಂಗನಾ ರಣಾವತ್​ ಅವರು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ‘ಈ ಜೋಡಿ ಎಷ್ಟು ಚೆನ್ನಾಗಿ ಕಾಣುತ್ತಿದೆ. ಚಿತ್ರರಂಗದಲ್ಲಿ ನಾವು ನಿಜವಾದ ಪ್ರೀತಿಯನ್ನು ನೋಡುವುದು ತುಂಬ ವಿರಳ’ ಎಂದು ಕಂಗನಾ ಅವರು ಕ್ಯಾಪ್ಷನ್​ ನೀಡಿದ್ದಾರೆ. ಜೊತೆಗೆ ಕಿಯಾರಾ ಅಡ್ವಾಣಿ ಮತ್ತು ಸಿದ್ದಾರ್ಥ್​ ಮಲ್ಹೋತ್ರಾ ಅವರನ್ನು ಟ್ಯಾಗ್​ ಮಾಡಿದ್ದಾರೆ.

ಇದನ್ನೂ ಓದಿ: Kangana Ranaut: ‘ನನ್ನ ಧಾಕಡ್​ ಚಿತ್ರದ್ದು ಐತಿಹಾಸಿಕ ಸೋಲು ನಿಜ’: ಕಂಗನಾ ರಣಾವತ್​ ಬಹಿರಂಗ ಹೇಳಿಕೆ

ಇದನ್ನೂ ಓದಿ
Image
ಖ್ಯಾತ ನಿರ್ಮಾಪಕನ ಜತೆ ಮದುವೆ ಆದ ಕಿರುತೆರೆ ನಟಿ ಮಹಾಲಕ್ಷ್ಮೀ; ‘ನಿಜವಾದ ವಿವಾಹವೇ?’ ಎಂದ ಫ್ಯಾನ್ಸ್
Image
ಯಾಕೆ ನೀನಿನ್ನೂ ಮದುವೆ ಆಗಿಲ್ಲ…ವಿಡಿಯೋ ಮೂಲಕ ಉತ್ತರ ಕೊಟ್ಟ ನಟಿ ರಮ್ಯಾ
Image
Priya Anand: ನಿತ್ಯಾನಂದ ಜತೆ ಮದುವೆ ಆಗ್ತೀನಿ ಅಂತ ‘ಜೇಮ್ಸ್​’ ನಟಿ ಪ್ರಿಯಾ ಆನಂದ್​ ಹೇಳಿದ್ದೇಕೆ?
Image
Pavitra Lokesh: ‘ಸುಚೇಂದ್ರ ಪ್ರಸಾದ್​ ಜತೆ ನನ್ನ ಮದುವೆ ಆಗಿಲ್ಲ, 11 ವರ್ಷ ಒಟ್ಟಿಗೆ ಇದ್ದೆ ಅಷ್ಟೇ’: ನಟಿ ಪವಿತ್ರಾ ಲೋಕೇಶ್​

ತುಂಬ ಖಾಸಗಿಯಾಗಿ ಈ ಜೋಡಿಯ ಮದುವೆ ನಡೆಯುತ್ತಿದೆ. ಬಾಲಿವುಡ್​ನಿಂದ ಅಂದಾಜು 100 ಜನರು ಈ ವಿವಾಹದಲ್ಲಿ ಭಾಗಿ ಆಗುವ ಸಾಧ್ಯತೆ ಇದೆ. ಕರಣ್​ ಜೋಹರ್​, ಮನೀಶ್​ ಮಲ್ಹೋತ್ರಾ, ಶಾಹಿದ್​ ಕಪೂರ್​ ಮುಂತಾದವರು ಹಾಜರಿ ಹಾಕಲಿದ್ದಾರೆ ಎಂದು ಹೇಳಲಾಗುತ್ತಿದೆ. ಮದುವೆ ಬಗ್ಗೆ ಯಾರೂ ಕೂಡ ಬಾಯಿ ಬಿಡುತ್ತಿಲ್ಲ. ಹೀಗಿರುವಾಗ ಕಂಗನಾ ರಣಾವತ್​ ಅವರು ವಿಡಿಯೋ ಹಂಚಿಕೊಂಡು ಮೆಚ್ಚುಗೆ ಸೂಚಿಸಿದ್ದು ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ: Kangana Ranaut: ‘ಪಠಾಣ್​’ ಸೂಪರ್​ ಹಿಟ್​; ‘ಚಿತ್ರರಂಗ ಇರೋದು ಹಣ ಮಾಡೋಕಲ್ಲ’ ಅಂತ ಕೊಂಕು ನುಡಿದ ಕಂಗನಾ

ಬಾಲಿವುಡ್​ನಲ್ಲಿ ಸಿದ್ದಾರ್ಥ್​ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಅವರಿಗೆ ಸಖತ್ ಬೇಡಿಕೆ ಇದೆ. ಇಬ್ಬರೂ ‘ಶೇರ್ಷಾ’ ಸಿನಿಮಾದಲ್ಲಿ ಜೊತೆಯಾಗಿ ನಟಿಸಿದ್ದರು. ಅವರ ಕೆಮಿಸ್ಟ್ರಿ ಜನರಿಗೆ ಇಷ್ಟ ಆಗಿದೆ. ರಿಯಲ್​ ಲೈಫ್​ನಲ್ಲಿಯೂ ಸಿದ್ದಾರ್ಥ್​ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಒಂದಾಗುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ. ಇಬ್ಬರ ಲವ್​ ಸ್ಟೋರಿ ಬಗ್ಗೆ ಹಲವು ಬಗೆಯ ಅಂತೆ-ಕಂತೆಗಳು ಹರಿದಾಡುತ್ತಿವೆ. ಆದರೆ ಆ ಕುರಿತು ಇವರಿಬ್ಬರು ಬಹಿರಂಗವಾಗಿ ಮಾತನಾಡಿಲ್ಲ.

ಸಿದ್ದಾರ್ಥ್​ ಮಲ್ಹೋತ್ರಾ ಅವರಿಗೆ ಈ ವರ್ಷದ ಆರಂಭದಲ್ಲೇ ಗೆಲುವು ಸಿಕ್ಕಿದೆ. ಅವರು ನಟಿಸಿದ ‘ಮಿಷನ್​ ಮಜ್ನು’ ಸಿನಿಮಾ ನೇರವಾಗಿ ಒಟಿಟಿಯಲ್ಲಿ ರಿಲೀಸ್​ ಆಗಿ ಸೂಪರ್​ ಹಿಟ್​ ಆಗಿದೆ. ಈ ಖುಷಿಯ ಬೆನ್ನಲ್ಲೇ ಅವರು ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್