Kangana Ranaut: ‘ತೇಜಸ್’ ಸಿನಿಮಾ ಫ್ಲಾಪ್ ಆದಮೇಲೆ ಅಪ್ಸೆಟ್ ಆದ ಕಂಗನಾ; ದುಃಖ ತೋಡಿಕೊಂಡ ನಟಿ

‘ತೇಜಸ್’ ಸಿನಿಮಾ ಅಕ್ಟೋಬರ್ 27ರಂದು ರಿಲೀಸ್ ಆಗಿದೆ. ಈ ಚಿತ್ರದ ಎದುರು ಯಾವುದೇ ದೊಡ್ಡ ಸಿನಿಮಾಗಳು ರಿಲೀಸ್ ಆಗಿಲ್ಲ. ಆದಾಗ್ಯೂ ಈ ಚಿತ್ರ ಮೊದಲ ದಿನ ಗಳಿಕೆ ಮಾಡಿದ್ದು ಕೇವಲ 1 ಕೋಟಿ ರೂಪಾಯಿ. ಚಿತ್ರಕ್ಕೆ ಎಲ್ಲ ಕಡೆಗಳಲ್ಲಿ ನೆಗೆಟಿವ್ ವಿಮರ್ಶೆ ಸಿಕ್ಕಿದೆ. ಈ ಸಿನಿಮಾ 10 ಕೋಟಿ ರೂಪಾಯಿಗೂ ಕಡಿಮೆ ಗಳಿಕೆ ಮಾಡುವ ಸಾಧ್ಯತೆ ಇದೆ.

Kangana Ranaut: ‘ತೇಜಸ್’ ಸಿನಿಮಾ ಫ್ಲಾಪ್ ಆದಮೇಲೆ ಅಪ್ಸೆಟ್ ಆದ ಕಂಗನಾ; ದುಃಖ ತೋಡಿಕೊಂಡ ನಟಿ
ಕಂಗನಾ
Follow us
ರಾಜೇಶ್ ದುಗ್ಗುಮನೆ
|

Updated on: Nov 03, 2023 | 7:08 AM

ನಟಿ ಕಂಗನಾ ರಣಾವತ್ (Kangana Ranaut) ಅವರಿಗೆ ಇತ್ತೀಚೆಗೆ ಯಾಕೋ ಅದೃಷ್ಟ ಕೈ ಕೊಟ್ಟಿದೆ. ಮಾಡಿದ ಸಿನಿಮಾಗಳೆಲ್ಲ ಸಾಲು ಸಾಲು ಫ್ಲಾಪ್ ಆಗುತ್ತಿವೆ. ಇತ್ತೀಚಿನ ವರ್ಷಗಳಲ್ಲಿ ಅವರಿಗೆ ಗೆಲುವು ಸಿಗಲೇ ಇಲ್ಲ ಎಂದರೂ ತಪ್ಪಾಗಲಾರದು. ಒಂದು ಗೆಲುವು ಸಿಗಬಹುದು ಎಂದು ಕಂಗನಾ ಕಾದು ಕೂತಿದ್ದರು. ಆದರೆ, ಆ ರೀತಿ ಆಗಿಲ್ಲ. ಮತ್ತಷ್ಟು ಚಿತ್ರಗಳು ಸೋಲುತ್ತಲೇ ಇವೆ. ಈ ಕಾರಣಕ್ಕೆ ಅವರು ಅಪ್ಸೆಟ್ ಆಗಿದ್ದಾರೆ. ಮನಸ್ಸನ್ನು ತಿಳಿಗೊಳಿಸಿಕೊಳ್ಳಲು ಅವರು ದೇವಾಲಯದ ಮೊರೆ ಹೋಗಿದ್ದಾರೆ. ಫೋಟೋ ಹಂಚಿಕೊಂಡು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ದ್ವಾರಕೆಗೆ ಕಂಗನಾ ಭೇಟಿ ನೀಡಿದ್ದಾರೆ. ಈ ಸಂದರ್ಭದ ಫೋಟೋ ಹಂಚಿಕೊಂಡಿರುವ ಅವರು ಅದಕ್ಕೆ ಕ್ಯಾಪ್ಶನ್ ನಿಡಿದ್ದಾರೆ. ‘ಕೆಲವು ದಿನಗಳಿಂದ ನನ್ನ ಹೃದಯವು ತುಂಬಾ ತೊಂದರೆಗೀಡಾಗಿತ್ತು. ನನಗೆ ದ್ವಾರಕಾಧೀಶನನ್ನು ಭೇಟಿ ಮಾಡಬೇಕೆಂದು ಅನಿಸಿತು. ನಾನು ಈ ಶ್ರೀ ಕೃಷ್ಣನ ನಗರ ದ್ವಾರಕಾಗೆ ಬಂದ ತಕ್ಷಣ, ಇಲ್ಲಿನ ಮಣ್ಣನ್ನು ನೋಡಿ ನನ್ನ ಚಿಂತೆಗಳೆಲ್ಲವೂ ಬಿದ್ದು ಬಿದ್ದುಹೋದಂತೆ ಭಾಸವಾಯಿತು. ನಿನ್ನ ಆಶೀರ್ವಾದ ಹೀಗೆಯೇ ಇರಲಿ’ ಎಂದು ಅವರು ಬರೆದುಕೊಂಡಿದ್ದಾರೆ.

‘ತೇಜಸ್’ ಸಿನಿಮಾ ಅಕ್ಟೋಬರ್ 27ರಂದು ರಿಲೀಸ್ ಆಗಿದೆ. ಈ ಚಿತ್ರದ ಎದುರು ಯಾವುದೇ ದೊಡ್ಡ ಸಿನಿಮಾಗಳು ರಿಲೀಸ್ ಆಗಿಲ್ಲ. ಆದಾಗ್ಯೂ ಈ ಚಿತ್ರ ಮೊದಲ ದಿನ ಗಳಿಕೆ ಮಾಡಿದ್ದು ಕೇವಲ 1 ಕೋಟಿ ರೂಪಾಯಿ. ಚಿತ್ರಕ್ಕೆ ಎಲ್ಲ ಕಡೆಗಳಲ್ಲಿ ನೆಗೆಟಿವ್ ವಿಮರ್ಶೆ ಸಿಕ್ಕಿದೆ. ಈ ಸಿನಿಮಾ 10 ಕೋಟಿ ರೂಪಾಯಿಗೂ ಕಡಿಮೆ ಗಳಿಕೆ ಮಾಡುವ ಸಾಧ್ಯತೆ ಇದೆ. ಈಗಾಗಲೇ ಪ್ರೇಕ್ಷಕರು ಇಲ್ಲದೆ ಅರ್ಧದಷ್ಟು ಶೋಗಳು ಕ್ಯಾನ್ಸಲ್ ಆಗಿವೆ. ಈ ಚಿತ್ರದ ನಿರ್ಮಾಪಕರು ಕೈ ಸುಟ್ಟುಕೊಂಡಿದ್ದಾರೆ.

ಇದನ್ನೂ ಓದಿ: ರಾವಣನ ದಹನ ಮಾಡಲು ವಿಫಲವಾದ ಕಂಗನಾ ರಣಾವತ್; ನಟಿಯ ಪರದಾಟ ನೋಡಿ   

ಕಂಗನಾ ರಣಾವತ್ ಅವರು ಸದ್ಯ ‘ಎಮರ್ಜೆನ್ಸಿ’ ಸಿನಿಮಾ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದಲ್ಲಿ ಇಂದಿರಾ ಗಾಂಧಿ ಪಾತ್ರ ಮಾಡುತ್ತಿದ್ದಾರೆ. ನಿರ್ದೇಶನ ಕೂಡ ಅವರದ್ದೇ. ಇನ್ನು ಈ ಚಿತ್ರದ ನಿರ್ಮಾಣದಲ್ಲಿ ಅವರ ಪಾಲೂ ಇದೆ. ದುಡಿದ ಎಲ್ಲಾ ಹಣವನ್ನು ಈ ಸಿನಿಮಾ ಮೇಲೆ ಹಾಕಿರುವುದಾಗಿ ಅವರು ಹೇಳಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ