AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಬೆಡ್‌ರೂಮ್ ಬಗ್ಗೆ ಹಗಲುಗನಸು ಕಾಣಬೇಡಿ’: ಬಾಬಾ ರಾಮ್‌ದೇವ್‌ಗೆ ಕಂಗನಾ ರಣಾವತ್ ತಿರುಗೇಟು

ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ಹಾಗೂ ಯೋಗ ಗುರು ಬಾಬಾ ರಾಮ್​ದೇವ್ ನಡುವೆ ಕಿರಿಕ್ ಶುರುವಾಗಿದೆ. ಜೆನ್ ಜಿ ಬಗ್ಗೆ ಕಂಗನಾ ನೀಡಿದ್ದ ಹೇಳಿಕೆಯನ್ನು ಬಾಬಾ ರಾಮ್​ದೇವ್ ತೀವ್ರವಾಗಿ ಖಂಡಿಸಿದ್ದಾರೆ. ಅದರಿಂದ ಗರಂ ಆಗಿರುವ ಕಂಗನಾ ಅವರು ಖಾರದ ಮಾತುಗಳಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

‘ನನ್ನ ಬೆಡ್‌ರೂಮ್ ಬಗ್ಗೆ ಹಗಲುಗನಸು ಕಾಣಬೇಡಿ’: ಬಾಬಾ ರಾಮ್‌ದೇವ್‌ಗೆ ಕಂಗನಾ ರಣಾವತ್ ತಿರುಗೇಟು
Baba Ramdev, Kangana Ranaut,
ಮದನ್​ ಕುಮಾರ್​
|

Updated on: Aug 19, 2026 | 10:03 PM

Share

ಇತ್ತೀಚೆಗೆ ಯುವ ಜನತೆಯನ್ನು (Gen Z) ‘ಜನರೇಷನ್ ಗಟಾರ್’ ಎಂದು ಕರೆದು ನಟಿ ಹಾಗೂ ಸಂಸದೆ ಕಂಗನಾ ರಣಾವತ್ (Kangana Ranaut) ವಿವಾದಕ್ಕೀಡಾಗಿದ್ದರು. ಈಗ ಕಂಗನಾ ಮತ್ತು ಯೋಗ ಗುರು ಬಾಬಾ ರಾಮ್‌ದೇವ್ ನಡುವೆ ವಾಕ್ಸಮರ ತೀವ್ರಗೊಂಡಿದೆ. ಕಂಗನಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಬಾಬಾ ರಾಮ್‌ದೇವ್, ‘ಅವರ ಮಾನಸಿಕ ಸ್ಥಿತಿಯನ್ನು ಪ್ರಶ್ನಿಸಿ ಬಿಜೆಪಿ ನಾಯಕರು ಈ ಬಗ್ಗೆ ಗಮನ ಹರಿಸಬೇಕು’ ಎಂದಿದ್ದರು. ಬಾಬಾ ರಾಮ್‌ದೇವ್ (Baba Ramdev) ಅವರ ಈ ಹೇಳಿಕೆಗೆ ಕಂಗನಾ ರಣಾವತ್ ಅವರು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಅತ್ಯಂತ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ.

ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿರುವ ಕಂಗನಾ, ‘ಬಾಬಾ ಜಿ, ನನ್ನ ಯೌವನ ಅಥವಾ ಬೆಡ್‌ರೂಮ್ ಬಗ್ಗೆ ಹಗಲುಗನಸು ಕಾಣಬೇಡಿ. ವದಂತಿಗಳು ಮತ್ತು ಗಾಸಿಪ್‌ಗಳ ಆಧಾರದ ಮೇಲೆ ಮಾತ್ರ ಊಹಿಸಲು ಸಾಧ್ಯ. ಕನಿಷ್ಠ ಪಕ್ಷ ಸುಳ್ಳು ಮತ್ತು ವಂಚನೆಯ ವೈದ್ಯಕೀಯ ಜಾಹೀರಾತುಗಳಿಗಾಗಿ ನನಗೆ ಸುಪ್ರೀಂ ಕೋರ್ಟ್‌ನಿಂದ ಎಂದಿಗೂ ಛೀಮಾರಿ ಸಿಕ್ಕಿಲ್ಲ. ನನ್ನ ಮೇಲಿನ ಆರೋಪಗಳು ಸತ್ಯದ ಆಧಾರದಲ್ಲಿದೆಯೇ ಹೊರತು ಗಾಸಿಪ್‌ಗಳಲ್ಲ’ ಎಂದು ವಾಗ್ದಾಳಿ ನಡೆಸಿದ್ದಾರೆ.

‘ನನಗೆ ಚಾರಿತ್ರ್ಯದ ಪಾಠ ಹೇಳಿಕೊಡಬೇಡಿ’

ಮುಂದುವರಿದು ಬಾಬಾ ರಾಮ್‌ದೇವ್‌ಗೆ ಕಟು ಮಾತುಗಳಲ್ಲಿ ಎಚ್ಚರಿಕೆ ನೀಡಿರುವ ಕಂಗನಾ, ‘ಆದ್ದರಿಂದ ನನಗೆ ಚಾರಿತ್ರ್ಯದ ಪಾಠ ಹೇಳಿಕೊಡಲು ಬರಬೇಡಿ. ನಿಮಗಿಂತ ನನ್ನ ಚಾರಿತ್ರ್ಯ ಎಷ್ಟೋ ಪಟ್ಟು ಉತ್ತಮವಾಗಿದೆ. ಇಲ್ಲಿ ಯಾವುದೇ ವಂಚನೆ ಪತ್ತೆಯಾಗಿಲ್ಲ’ ಎಂದು ತಿರುಗೇಟು ನೀಡಿದ್ದಾರೆ. ಈ ಮಾತುಗಳಿಗೆ ಬಾಬಾ ರಾಮ್ ದೇವ್ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬ ಕೌತುಕ ಮೂಡಿದೆ.

ಕಂಗನಾ ಬಗ್ಗೆ ಬಾಬಾ ರಾಮ್‌ದೇವ್ ಹೇಳಿದ್ದೇನು?

ಇತ್ತೀಚಿನ ಸಂದರ್ಶನವೊಂದರಲ್ಲಿ ಕಂಗನಾ ಅವರ ಹೇಳಿಕೆಯ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ್ದ ಬಾಬಾ ರಾಮ್‌ದೇವ್, ‘ಆಕೆಯ ಬಾಲ್ಯ ಹೇಗಿತ್ತು? ಆಕೆಯ ಯೌವನ ಮತ್ತು ಹಿಂದಿನ ಸಾಧನೆಗಳು ಹೇಗಿದ್ದವು? ಇಂತಹ ಜನರ ಬಗ್ಗೆ ನಾನು ಮಾತನಾಡಲು ಬಯಸುವುದಿಲ್ಲ. ದೇಶದ ಯುವಕರನ್ನು ಗಟಾರ್ ಎಂದು ಕರೆಯುವುದು ಭ್ರಷ್ಟ ಮನಸ್ಸಿನ ಸಂಕೇತ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ‘ನಾನು ಸಂಘಿ ಆಗಬೇಕು’: ವಿಡಿಯೋ ನೋಡಿ ಟ್ರೋಲ್‌ ಮಾಡಿದವರಿಗೆ ಕಂಗನಾ ತಿರುಗೇಟು

2024ರಲ್ಲಿ ನಡೆದ ಪತಂಜಲಿ ಅಸಲಿ-ನಕಲಿ ಜಾಹೀರಾತು ವಿವಾದವನ್ನು ಕಂಗನಾ ಅವರು ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಜನರ ದಾರಿ ತಪ್ಪಿಸುವ ಪತಂಜಲಿ ಸಂಸ್ಥೆಯ ಜಾಹೀರಾತುಗಳು ಮತ್ತು ಆಧುನಿಕ ವೈದ್ಯಕೀಯ ಪದ್ಧತಿಯನ್ನು ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಬಾ ರಾಮ್‌ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರನ್ನು ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡು ಸಮನ್ಸ್ ಜಾರಿ ಮಾಡಿತ್ತು. ಈ ಘಟನೆಯನ್ನೇ ನೆನಪಿಸಿ ಕಂಗನಾ ಇದೀಗ ರಾಮ್‌ದೇವ್ ಅವರಿಗೆ ತಿರುಗೇಟು ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?