ಮತ್ತೆ ಮುಂದೂಡಿಕೆ ಆಯ್ತು ಕಂಗನಾ ರಣಾವತ್ ನಟನೆಯ ‘ಎಮರ್ಜೆನ್ಸಿ’ ಸಿನಿಮಾ

ಬಾಲಿವುಡ್​ ನಟಿ ಕಂಗನಾ ರಣಾವತ್​ ಅವರು ರಾಜಕೀಯದಲ್ಲಿ ಬ್ಯುಸಿ ಆಗಿದ್ದಾರೆ. ಹಾಗಾಗಿ ಸಿನಿಮಾ ಮೇಲೆ ಗಮನ ಹರಿಸಲು ಅವರಿಗೆ ಸಮಯ ಸಿಗುತ್ತಿಲ್ಲ. ಆ ಕಾರಣದಿಂದ ‘ಎಮರ್ಜೆನ್ಸಿ’ ಸಿನಿಮಾ ಬಿಡುಗಡೆ ಆಗುವುದು ಇನ್ನಷ್ಟು ತಡವಾಗಲಿದೆ. ಈಗಾಗಲೇ ಈ ಚಿತ್ರದ ರಿಲೀಸ್​ ಡೇಟ್​ ಎರಡು ಬಾರಿ ಮುಂದೂಡಿಕೆ ಆಗಿತ್ತು.

ಮತ್ತೆ ಮುಂದೂಡಿಕೆ ಆಯ್ತು ಕಂಗನಾ ರಣಾವತ್ ನಟನೆಯ ‘ಎಮರ್ಜೆನ್ಸಿ’ ಸಿನಿಮಾ
ಕಂಗನಾ ರಣಾವತ್
Follow us
ಮದನ್​ ಕುಮಾರ್​
|

Updated on: May 16, 2024 | 9:48 PM

ನಟಿ ಕಂಗನಾ ರಣಾವತ್​ ಅಭಿನಯದ ‘ಎಮರ್ಜೆನ್ಸಿ’ ಸಿನಿಮಾ (Emergency Movie) ಮೇಲೆ ನಿರೀಕ್ಷೆ ಇದೆ. ಆದರೆ ಈ ಚಿತ್ರವನ್ನು ಆದಷ್ಟು ಬೇಗ ನೋಡಬೇಕು ಎಂದು ಕಾದಿರುವ ಅಭಿಮಾನಿಗಳಿಗೆ ಒಂದು ಬೇಸರದ ಸುದ್ದಿ ಕೇಳಿಬಂದಿದೆ. ಈ ಸಿನಿಮಾದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಈ ಸುದ್ದಿಯನ್ನು ಚಿತ್ರತಂಡದವರು ಅಧಿಕೃತವಾಗಿ ತಿಳಿಸಿದ್ದಾರೆ. ಕಂಗನಾ ರಣಾವತ್​ (Kangana Ranaut) ಅವರು ಬಿಜೆಪಿ ಸೇರಿ ರಾಜಕೀಯಕ್ಕೆ ಇಳಿದಿದ್ದಾರೆ. ಆ ಕಾರಣದಿಂದ ‘ಎಮರ್ಜೆನ್ಸಿ’ ಸಿನಿಮಾದ ಬಿಡುಗಡೆ (Emergency Release Date) ದಿನಾಂಕವನ್ನು ಮುಂದೂಡಲಾಗಿದೆ. ಹೊಸ ಡೇಟ್​ ತಿಳಿಯಲು ಕಂಗನಾ ಅಭಿಮಾನಿಗಳು ಕಾಯುತ್ತಿದ್ದಾರೆ.

ಕಂಗನಾ ರಣಾವತ್​ ಅವರು ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಭಾರತೀಯ ಜನತಾ ಪಕ್ಷದ ಪರವಾಗಿ ಅವರು ಅನೇಕ ಕಡೆಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಆದ್ದರಿಂದ ಸಿನಿಮಾ ಕೆಲಸಗಳ ಕಡೆಗೆ ಗಮನ ಕೊಡಲು ಅವರಿಗೆ ಸಾಧ್ಯವಾಗುತ್ತಿಲ್ಲ. ಹಾಗಾಗಿ ಅವರು ತಮ್ಮ ಸಿನಿಮಾದ ರಿಲೀಸ್​ ಡೇಟ್​ ಪೋಸ್ಟ್​ಪೋನ್​ ಮಾಡಿದ್ದಾರೆ.

ನಟಿಯಾಗಿ ಮಾತ್ರವಲ್ಲದೇ ನಿರ್ದೇಶಕಿ ಆಗಿಯೂ ಕಂಗನಾ ರಣಾವತ್​ ಅವರು ಸಕ್ರಿಯರಾಗಿದ್ದಾರೆ. ‘ಎಮರ್ಜೆನ್ಸಿ’ ಸಿನಿಮಾಗೆ ಕಂಗನಾ ಅವರೇ ನಿರ್ದೇಶನ ಮಾಡಿದ್ದಾರೆ. ಅಲ್ಲದೇ ಈ ಸಿನಿಮಾದ ನಿರ್ಮಾಣದಲ್ಲೂ ಅವರು ಪಾಲುದಾರಿಕೆ ಹೊಂದಿದ್ದಾರೆ. ಈ ಸಿನಿಮಾದ ನಿರ್ಮಾಣಕ್ಕಾಗಿ ಆಸ್ತಿ ಮಾರಿದ್ದೇನೆ ಎಂದು ಕೂಡ ಅವರು ಈ ಹಿಂದೆ ಹೇಳಿಕೊಂಡಿದ್ದರು.

ಇದನ್ನೂ ಓದಿ: ಕಂಗನಾ ರನೌತ್ ಆಸ್ತಿ ವಿವರ ಬಹಿರಂಗ, ನಟಿಯ ಬಳಿ ಇರುವ ಚಿನ್ನ ಎಷ್ಟು ಕೆಜಿ?

‘ಎಮರ್ಜೆನ್ಸಿ’ ಸಿನಿಮಾದಲ್ಲಿ ಇತಿಹಾಸದ ಕಹಾನಿ ಇರಲಿದೆ. ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ ಕುರಿತು ಈ ಸಿನಿಮಾ ನಿರ್ಮಾಣ ಆಗಿದೆ. ಭಾರತದ ರಾಜಕೀಯದಲ್ಲಿ ಬಂದು ಹೋದ ಕೆಲವು ಪ್ರಮುಖ ವ್ಯಕ್ತಿಗಳ ಪಾತ್ರಗಳು ಈ ಸಿನಿಮಾದಲ್ಲಿ ಕಾಣಿಸಲಿವೆ. ಇಂದಿರಾ ಗಾಂಧಿಯ ಪಾತ್ರದಲ್ಲಿ ಕಂಗನಾ ರಣಾವತ್​ ಅವರೇ ನಟಿಸಿದ್ದಾರೆ. ಟೀಸರ್​ನಲ್ಲಿ ಆ ಪಾತ್ರದ ಝಲಕ್​ ಕಾಣಿಸಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಜೂನ್​ 14ರಂದು ಈ ಸಿನಿಮಾ ತೆರೆಕಾಣಬೇಕಿತ್ತು. ಈಗ ಹೊಸ ರಿಲೀಸ್​ ದಿನಾಂಕ ಘೋಷಣೆ ಆಗುವುದು ಬಾಕಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ
ಡಿಸೆಂಬರ್ 5 ರಂದು ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜನೆ: ರಾಜಣ್ಣ
ಡಿಸೆಂಬರ್ 5 ರಂದು ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜನೆ: ರಾಜಣ್ಣ
ಗ್ಯಾರಂಟಿ ಯೋಜನೆಗಳಿಗಾಗಿ ಹಣವನ್ನು ಪ್ರತ್ಯೇಕವಾಗಿರಿಸಲಾಗಿದೆ: ಸತೀಶ್
ಗ್ಯಾರಂಟಿ ಯೋಜನೆಗಳಿಗಾಗಿ ಹಣವನ್ನು ಪ್ರತ್ಯೇಕವಾಗಿರಿಸಲಾಗಿದೆ: ಸತೀಶ್
ಡಿಕೆ ಶಿವಕುಮಾರ್ ನೀಡಿದ ಎಚ್ಚರಿಕೆಯಿಂದ ಭಯಗೊಂಡರೇ ಗವಿಯಪ್ಪ?
ಡಿಕೆ ಶಿವಕುಮಾರ್ ನೀಡಿದ ಎಚ್ಚರಿಕೆಯಿಂದ ಭಯಗೊಂಡರೇ ಗವಿಯಪ್ಪ?
ಆಶಯಗಳಿಗೆ ವಿರುದ್ಧವಾಗಿ ಪೇಜಾವರ ಶ್ರೀ ಸಂವಿಧಾನ ಬದಲಿಸಬೇಕೆನ್ನುತ್ತಾರೆ:ಸಿಎಂ
ಆಶಯಗಳಿಗೆ ವಿರುದ್ಧವಾಗಿ ಪೇಜಾವರ ಶ್ರೀ ಸಂವಿಧಾನ ಬದಲಿಸಬೇಕೆನ್ನುತ್ತಾರೆ:ಸಿಎಂ
ಬಸನಗೌಡ ಯತ್ನಾಳ್ ಸ್ವಪ್ರತಿಷ್ಠೆಗಾಗಿ ಹೋರಾಟ ಮಾಡುತ್ತಿದ್ದಾರೆ: ಯಡಿಯೂರಪ್ಪ
ಬಸನಗೌಡ ಯತ್ನಾಳ್ ಸ್ವಪ್ರತಿಷ್ಠೆಗಾಗಿ ಹೋರಾಟ ಮಾಡುತ್ತಿದ್ದಾರೆ: ಯಡಿಯೂರಪ್ಪ
ಭಾರತದ ಅತಿದೊಡ್ಡ ಸಕ್ಕರೆ ಕಾರ್ಖಾನೆ ಚಿಂಚೋಳಿಯಲ್ಲಿ ಸ್ಥಾಪಿಸಿರುವೆ: ಯತ್ನಾಳ್
ಭಾರತದ ಅತಿದೊಡ್ಡ ಸಕ್ಕರೆ ಕಾರ್ಖಾನೆ ಚಿಂಚೋಳಿಯಲ್ಲಿ ಸ್ಥಾಪಿಸಿರುವೆ: ಯತ್ನಾಳ್