‘ಎಮರ್ಜೆನ್ಸಿ’ ಟ್ರೇಲರ್: ಇಂದಿರಾ ಗಾಂಧಿ ಪಾತ್ರ ಮಾಡಿದ ಕಂಗನಾಗೆ ರಾಷ್ಟ್ರ ಪ್ರಶಸ್ತಿ ನಿರೀಕ್ಷಿಸಿದ ಫ್ಯಾನ್ಸ್

ಈಗಾಗಲೇ 4 ಬಾರಿ ನ್ಯಾಷನಲ್​ ಅವಾರ್ಡ್​ ಪಡೆದಿರುವುದು ನಟಿ ಕಂಗನಾ ರಣಾವತ್​ ಅವರ ಹೆಚ್ಚುಗಾರಿಕೆ. ಈಗ ‘ಎಮರ್ಜೆನ್ಸಿ’ ಸಿನಿಮಾದಲ್ಲಿ ಅವರು ಇಂದಿರಾ ಗಾಂಧಿಯ ಪಾತ್ರವನ್ನು ಮಾಡಿದ್ದು, ಈ ಬಾರಿ ಕೂಡ ಅವರಿಗೆ ರಾಷ್ಟ್ರ ಪ್ರಶಸ್ತಿ ಸಿಗಲಿದೆ ಎಂದು ಅಭಿಮಾನಿಗಳು ಊಹಿಸುತ್ತಿದ್ದಾರೆ. ಅದಕ್ಕೆ ಕಾರಣ ಆಗಿರುವುದು ‘ಎಮರ್ಜೆನ್ಸಿ’ ಸಿನಿಮಾದ ಟ್ರೇಲರ್​.

‘ಎಮರ್ಜೆನ್ಸಿ’ ಟ್ರೇಲರ್: ಇಂದಿರಾ ಗಾಂಧಿ ಪಾತ್ರ ಮಾಡಿದ ಕಂಗನಾಗೆ ರಾಷ್ಟ್ರ ಪ್ರಶಸ್ತಿ ನಿರೀಕ್ಷಿಸಿದ ಫ್ಯಾನ್ಸ್
ಕಂಗನಾ ರಣಾವತ್​
Follow us
|

Updated on: Aug 14, 2024 | 5:25 PM

ನಟಿ ಕಂಗನಾ ರಣಾವತ್​ ಅವರು ಭಾರಿ ನಿರೀಕ್ಷೆ ಇಟ್ಟುಕೊಂಡಿರುವ ‘ಎಮರ್ಜೆನ್ಸಿ’ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗುತ್ತಿದೆ. ಸೆಪ್ಟೆಂಬರ್​ 6ರಂದು ಈ ಸಿನಿಮಾ ರಿಲೀಸ್​ ಆಗಲಿದೆ. ಈಗಾಗಲೇ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಇಂದು (ಆಗಸ್ಟ್​ 14) ಟ್ರೇಲರ್​ ಬಿಡುಗಡೆ ಮಾಡಲಾಗಿದೆ. ಈ ಚಿತ್ರದಲ್ಲಿ ಇಂದಿರಾ ಗಾಂಧಿ ಪಾತ್ರಕ್ಕೆ ಕಂಗನಾ ರಣಾವತ್​ ಬಣ್ಣ ಹಚ್ಚಿದ್ದಾರೆ. ಟ್ರೇಲರ್​ನಲ್ಲಿ ಅವರ ನಟನೆಯನ್ನು ಕಂಡು ಫ್ಯಾನ್ಸ್​ ಫಿದಾ ಆಗಿದ್ದಾರೆ. ಈ ಸಿನಿಮಾದಲ್ಲಿನ ನಟನೆಗೆ ಕಂಗನಾ ರಣಾವತ್​ ಅವರಿಗೆ ಖಂಡಿತಾ ರಾಷ್ಟ್ರ ಪ್ರಶಸ್ತಿ ಸಿಗಲಿದೆ ಎಂದು ಅಭಿಮಾನಿಗಳು ಭವಿಷ್ಯ ನುಡಿಯುತ್ತಿದ್ದಾರೆ.

ಕಂಗನಾ ರಣಾವತ್​ ಅವರಿಗೆ ಈಗಾಗಲೇ ನಾಲ್ಕು ಬಾರಿ ರಾಷ್ಟ್ರ ಪ್ರಶಸ್ತಿ ಸಿಕ್ಕಿವೆ. ‘ಎಮರ್ಜೆನ್ಸಿ’ ಸಿನಿಮಾದಲ್ಲಿನ ಅವರ ಅಭಿನಯಕ್ಕೆ ಮತ್ತೊಮ್ಮೆ ನ್ಯಾಷನಲ್​ ಅವಾರ್ಡ್​ ಸಿಗಲಿದೆ ಎಂದು ಅಭಿಮಾನಿಗಳು ನಿರೀಕ್ಷಿಸಿದ್ದಾರೆ. ಈ ಸಿನಿಮಾಗೆ ಸ್ವತಃ ಕಂಗನಾ ರಣಾವತ್​ ಅವರು ಆ್ಯಕ್ಷನ್​-ಕಟ್​ ಹೇಳಿದ್ದಾರೆ. ನಿರ್ಮಾಣದಲ್ಲೂ ಕೈ ಜೋಡಿಸಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ಕಂಗನಾ ಅವರು ಈ ಸಿನಿಮಾ ಮೇಲೆ ಭಾರಿ ಭರವಸೆ ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ: ರಾಹುಲ್​ ಗಾಂಧಿಯ ತಿರುಚಿದ ಫೋಟೋ ಹಂಚಿಕೊಂಡ ಕಂಗನಾ ಮೇಲೆ 40 ಕೋಟಿ ರೂ. ಮಾನನಷ್ಟ ಕೇಸ್

ಎಲ್ಲವೂ ಪ್ಲ್ಯಾನ್​ ಪ್ರಕಾರವೇ ನಡೆದಿದ್ದರೆ ಈಗಾಗಲೇ ‘ಎಮರ್ಜೆನ್ಸಿ’ ಸಿನಿಮಾ ಬಿಡುಗಡೆ ಆಗಿರಬೇಕಿತ್ತು. ಆದರೆ ಕಾರಣಾಂತರಗಳಿಂದ ಈ ಸಿನಿಮಾದ ರಿಲೀಸ್​ ಡೇಟ್​ ಮುಂದಕ್ಕೆ ಹೋಯಿತು. ಅಂತಿಮವಾಗಿ ಸೆಪ್ಟೆಂಬರ್​ 6ರಂದು ಈ ಸಿನಿಮಾ ತೆರೆಗೆ ಬರಲಿದೆ. ಅನುಪಮ್​ ಖೇರ್​, ಶ್ರೇಯಸ್​ ತಲ್ಪಡೆ, ಮಿಲಿಂದ್​ ಸೋಮನ್​ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಕಂಗನಾ ಅಭಿಮಾನಿಗಳಿಂದ ಟ್ರೇಲರ್​ಗೆ ಪಾಸಿಟಿವ್​ ಪ್ರತಿಕ್ರಿಯೆ ಸಿಗುತ್ತಿದೆ.

ಕಂಗನಾ ರಣಾವತ್​ ಅವರು ಈಗ ಸಂಸದೆಯಾಗಿ ಫುಲ್​ಟೈಮ್​ ರಾಜಕಾರಣದಲ್ಲಿ ಸಕ್ರಿಯರಾಗಿದ್ದಾರೆ. ‘ಎಮರ್ಜೆನ್ಸಿ’ ಸಿನಿಮಾದಲ್ಲಿ ಕೂಡ ರಾಜಕೀಯದ ಕಥೆ ಇದೆ. ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯ ದಿನಗಳನ್ನು ಆಧರಿಸಿ ಈ ಸಿನಿಮಾ ತಯಾರಾಗಿದೆ. ರಾಜಕೀಯದ ಕಾರಣದಿಂದ ಈ ಸಿನಿಮಾ ಒಂದಷ್ಟು ವಿವಾದಗಳನ್ನು ಹುಟ್ಟುಹಾಕುವ ಸಾಧ್ಯತೆ ಕೂಡ ಇದೆ. ಬಿಡುಗಡೆ ಆದ ಬಳಿಕ ಜನರಿಂದ ಯಾವ ರೀತಿಯ ಪ್ರತಿಕ್ರಿಯೆ ಸಿಗಲಿದೆ ಎಂಬುದನ್ನು ಕಾದುನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.