ಲಾಭಿ ಮಾಡಿ ರಾಷ್ಟ್ರ ಪ್ರಶಸ್ತಿ ಪಡೆದ್ರಾ ಆಲಿಯಾ? ಮನಬಂದಂತೆ ಟೀಕಿಸಿದ ಕಂಗನಾ ರಣಾವತ್

ಆಲಿಯಾ ಭಟ್ ಅವರು ಸ್ಟಾರ್ ಕಿಡ್ ಆದರೂ ಚಿತ್ರರಂಗದಲ್ಲಿ ತಮ್ಮನ್ನು ತಾವು ಸಾಬೀತು ಮಾಡಿಕೊಂಡಿದ್ದಾರೆ. ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾದ ನಟನೆಗೆ ಅವರಿಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. ಇದನ್ನು ಅವರು ಲಾಭಿ ಮಾಡಿ ಪಡೆದಿದ್ದಾರೆ ಎಂದು ಕಂಗನಾ ರಣಾವತ್ ಅವರು ಪರೋಕ್ಷವಾಗಿ ಆರೋಪಿಸಿದ್ದಾರೆ.

ಲಾಭಿ ಮಾಡಿ ರಾಷ್ಟ್ರ ಪ್ರಶಸ್ತಿ ಪಡೆದ್ರಾ ಆಲಿಯಾ? ಮನಬಂದಂತೆ ಟೀಕಿಸಿದ ಕಂಗನಾ ರಣಾವತ್
ಆಲಿಯಾ-ಕಂಗನಾ
Follow us
ರಾಜೇಶ್ ದುಗ್ಗುಮನೆ
|

Updated on: Apr 09, 2024 | 8:38 AM

ನಟಿ ಕಂಗನಾ ರಣಾವತ್ (Kangana Ranaut) ಅವರಿಗೆ ಬಾಲಿವುಡ್​ನ ಅನೇಕರನ್ನು ಕಂಡರೆ ಸಿಟ್ಟಿದೆ. ಅದರಲ್ಲೂ ನೆಪೋ ಕಿಡ್​ಗಳ ಮೇಲೆ ಅವರಿಗೆ ಕೋಪ ಜಾಸ್ತಿಯೇ ಇದೆ. ಅವರು ಆಲಿಯಾ ಭಟ್, ರಣಬೀರ್ ಕಪೂರ್ ಸೇರಿ ಅನೇಕರನ್ನು ಟೀಕೆ ಮಾಡುತ್ತಲೇ ಇರುತ್ತಾರೆ. ಈಗ ಅವರ ಹೊಸ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಆಲಿಯಾ ಭಟ್​ನ ಪರೋಕ್ಷವಾಗಿ ಟೀಕೆ ಮಾಡಿದ್ದಾರೆ. ರಾಷ್ಟ್ರ ಪ್ರಶಸ್ತಿ ವಿಚಾರದಲ್ಲಿ ಈ ಟೀಕೆ ನಡೆದಿದೆ ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.

ಆಲಿಯಾ ಭಟ್ ಅವರು ಸ್ಟಾರ್ ಕಿಡ್ ಆದರೂ ಚಿತ್ರರಂಗದಲ್ಲಿ ತಮ್ಮನ್ನು ತಾವು ಸಾಬೀತು ಮಾಡಿಕೊಂಡಿದ್ದಾರೆ. ಅವರು ಹಲವು ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾದ ನಟನೆಗೆ ಅವರಿಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. ಇದನ್ನು ಅವರು ಲಾಭಿ ಮಾಡಿ ಪಡೆದಿದ್ದಾರೆ ಎಂದು ಕಂಗನಾ ರಣಾವತ್ ಅವರು ಪರೋಕ್ಷವಾಗಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಸೇರಿದ ಬಳಿಕ 2.46 ಕೋಟಿ ರೂಪಾಯಿ ಬೆಲೆಯ ಕಾರು ಖರೀದಿಸಿದ ಕಂಗನಾ

ಕಂಗನಾ ರಣಾವತ್ ಅವರು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಸ್ಪರ್ಧೆ ಮಾಡುತ್ತಿದ್ದಾರೆ. ಅವರ ಹುಟ್ಟೂರಾದ ಹಿಮಾಚಲ ಪ್ರದೇಶದ ಮಂಡಿಯಿಂದ ಅವರು ಸ್ಪರ್ಧೆ ಮಾಡುತ್ತಿದ್ದಾರೆ. ಅವರು ಚುನಾವಣಾ ಪ್ರಚಾರದಲ್ಲಿ ಭಾಗಿ ಆಗುತ್ತಿದ್ದಾರೆ. ರಾಹುಲ್ ಗಾಂಧಿ ಅವರನ್ನು ಯಾವ ರೀತಿಯಲ್ಲಿ ನೋಡುತ್ತೀರಿ ಎಂದು ಅವರಿಗೆ ಕೇಳಲಾಯಿತು. ಇದಕ್ಕೆ ಕಂಗನಾ ಉತ್ತರಿಸಿದ್ದಾರೆ. ‘ನಾನು ಅವರನ್ನು ಇಂಡಸ್ಟ್ರಿಯ ಸ್ಟಾರ್​ ಕಿಡ್ ರೀತಿಯೇ ನೋಡುತ್ತೇನೆ. ಕಂಗನಾಗೆ ಎಲ್ಲಾ ಅವಾರ್ಡ್ ಸಿಕ್ಕಿದೆ ನನಗೂ ಬೇಕು ಎಂದು ಅವರು (ಆಲಿಯಾ?) ಹಠ ಹಿಡಿದಿರುತ್ತಾರೆ. ಹೀಗಾಗಿ ಎಲ್ಲಾ ಪ್ರಶಸ್ತಿಗಳನ್ನು ಅವರಿಗೆ ಸಿಕ್ಕಿದೆ’ ಎಂದಿದ್ದಾರೆ ಕಂಗನಾ.

She is still talking about Alia… National Awards? byu/Legitimate-Display27 inBollyBlindsNGossip

ರಾಜಕೀಯ ಜರ್ನಿ ಆರಂಭಿಸಿದ್ದಕ್ಕೆ ಬಾಲಿವುಡ್​ನ ಯಾರಾದರೂ ವಿಶ್ ಮಾಡಿದರೇ ಎಂದು ಅವರಿಗೆ ಕೇಳಲಾಯಿತು. ಇದಕ್ಕೆ ಉತ್ತರಿಸಿದ ಅವರು, ‘ಬಾಲಿವುಡ್ ಮಂದಿಗೂ ನನ್ನ ಬಗ್ಗೆ ಖುಷಿ ಇದೆ. ನಾವು ರಾಷ್ಟ್ರೀಯತಾ ವಾದಿಗಳು. ನಾವು ಸಿನಿಮಾ ರಂಗದಲ್ಲಿ 10-15 ವರ್ಷ ಕಳೆದಿದ್ದೇವೆ. ನೆಪೋ ಮಾಫಿಯಾ ನಮ್ಮನ್ನು ಕುಗ್ಗಿಸುವ ಪ್ರಯತ್ನ ಮಾಡುತ್ತಲೇ ಇದೆ’ ಎಂದಿದ್ದಾರೆ ಕಂಗನಾ. ಕಂಗನಾ ನಿರ್ದೇಶನದ ‘ಎಮರ್ಜೆನ್ಸಿ’ ಸಿನಿಮಾ ಶೀಘ್ರದಲ್ಲೇ ಬಿಡುಗಡೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ